ರೂ.12 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿದೆ ಫೋರ್ಡ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ
ಫೋರ್ಡ್ ಮತ್ತು ಮಹೀಂದ್ರಾ ಕಂಪನಿಗಳು ಈಗಾಗಲೇ ಸಹಭಾಗಿತ್ವದ ಯೋಜನೆ ಅಡಿ ಹೊಸ ಕಾರುಗಳ ಅಭಿವೃದ್ದಿ ಯೋಜನೆಗೆ ಚಾಲನೆ ನೀಡಿದ್ದು, ಮೊದಲ ಹಂತದಲ್ಲಿ ಬಿಡುಗಡೆಯಾಗಲಿರುವ ಕಾರು ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲಿ ರಸ್ತೆಗಿಳಿಯಲಿದೆ.

ಸಹಭಾಗಿತ್ವದ ಯೋಜನೆ ಅಡಿ ಹಲವು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿರುವ ಫೋರ್ಡ್ ಮತ್ತು ಮಹೀಂದ್ರಾ ಕಂಪನಿಗಳು ಕಾರು ಉತ್ಪಾದನೆಯಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿದ್ದು, ಭವಿಷ್ಯದಲ್ಲಿ ಫೋರ್ಡ್ ಉತ್ಪಾದನೆ ಮಾಡಲಿರುವ ಹೊಸ ಕಾರುಗಳಿಗೆ ಮಹೀಂದ್ರಾ ಕಂಪನಿಯು ಮಾರುಕಟ್ಟೆ ಮತ್ತು ತಂತ್ರಜ್ಞಾನ ಸೌಲಭ್ಯಗಳ ಸಹಕಾರ ನೀಡಲಿದೆ.

ಜೊತೆಗೆ ಹೊಸ ಕಾರುಗಳ ಉತ್ಪಾದನೆಯ ವೆಚ್ಚ ಇಳಿಕೆಗಾಗಿ ಬಜೆಟ್ ಬೆಲೆಯ ಬಿಡಿಭಾಗಗಳನ್ನು ಒದಗಿಸಲಿರುವ ಮಹೀಂದ್ರಾ ಕಂಪನಿಯು ಕಾರು ಮಾರಾಟದಲ್ಲಿ ಮತ್ತೊಂದು ಹಂತದ ಬೆಳವಣಿಗೆ ಕಾರಣವಾಗಲಿದ್ದು, ಸಹಭಾಗಿತ್ವದ ಯೋಜನೆ ಅಡಿ ಗ್ರಾಹಕರ ಬೇಡಿಕೆಯೆಂತೆ ಹಲವು ಹೊಸ ಕಾರುಗಳು ಮಾರುಕಟ್ಟೆ ಪ್ರವೇಶಿಸಲಿವೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ರೂ.15 ಲಕ್ಷದಿಂದ ರೂ.19 ಲಕ್ಷ ಬೆಲೆ ಅಂತರದಲ್ಲಿ ಬಲಿಷ್ಠವಾದ ಸಿ-ಸೆಗ್ಮೆಂಟ್ ಎಸ್‌ಯುವಿ ಹೆಚ್ಚಿನ ಬೇಡಿಕೆಯಿದ್ದು, ಮಹೀಂದ್ರಾ ಎಕ್ಸ್‌ಯುವಿ500, ಟಾಟಾ ಹ್ಯಾರಿಯರ್ ಮತ್ತು ಜೀಪ್ ಕಂಪಾಸ್ ಕಾರುಗಳು ಉತ್ತಮ ಬೇಡಿಕೆ ಪಡೆದುಕೊಂಡಿರುವುದು ಫೋರ್ಡ್-ಮಹೀಂದ್ರಾ ಸಹಭಾಗಿತ್ವದ ಹೊಸ ಕಾರುಗಳಿಗೆ ಪ್ರಮುಖ ಪ್ರೇರಣೆಯಾಗಿದೆ.

ಹಾಗೆಯೇ ಬಿ-ಸೆಗ್ಮೆಂಟ್‌ನಲ್ಲಿ ಬಿಡುಗಡೆಯಾಗಲಿರುವ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳು ರೂ. 12 ಲಕ್ಷದಿಂದ ರೂ. 16 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿದ್ದು, ಸಹಭಾಗಿತ್ವದ ಆಧಾರದ ಮೇಲೆ ಹೊಸ ಕಾರುಗಳ ನಿರ್ಮಾಣ, ಎಂಜಿನ್ ಅಭಿವೃದ್ದಿಗಾಗಿ ಪರಸ್ಪರ ಸಹಕರಿಸುವ ಮೂಲಕ ಎಸ್‌ಯುವಿ ಕಾರುಗಳ ಮೇಲೆ ಹೆಚ್ಚಿನ ಒತ್ತು ನೀಡಲು ನಿರ್ಧರಿಸಲಾಗಿದೆ.
MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಗ್ರಾಹಕರ ಬೇಡಿಕೆಯೆಂತೆ ಒಟ್ಟು ಮೂರು ಹೊಸ ಕಾರುಗಳನ್ನು ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ಬಿಡುಗಡೆಗೊಳಿಸಲು ನಿರ್ಧರಿಸಲಾಗಿದ್ದು, ಫೋರ್ಡ್ ಎಕ್ಸ್‌ಪ್ಲೊರರ್ ಮಾದರಿಯಲ್ಲಿ ನಿರ್ಮಾಣಗೊಳ್ಳಲಿರುವ ಹೊಸ ಕಾರು ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ.

ಹೊಸ ಕಾರು 163-ಬಿಎಚ್‌ಪಿ ಪ್ರೇರಿತ 1.5-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಪಡೆದುಕೊಳ್ಳಲಿದ್ದು, ಹೊಸ ಕಾರಿನಲ್ಲಿ ಡೀಸೆಲ್ ಎಂಜಿನ್ ಪರಿಚಯಿಸುವ ಸಾಧ್ಯತೆಗಳು ಕಡಿಮೆ ಎನ್ನಲಾಗುತ್ತಿದೆ.
MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಪೆಟ್ರೋಲ್ ಎಂಜಿನ್ ಮಾದರಿಯಲ್ಲೇ ಎರಡು ಆಯ್ಕೆಗಳನ್ನು ನೀಡಬಹುದಾದ ಸಾಧ್ಯತೆಗಳಿದ್ದು, ಹೊಸ ಕಾರಿನ ರೋಡ್ ಟೆಸ್ಟಿಂಗ್ ಪ್ರಕ್ರಿಯೆಯನ್ನು ಮುಂದಿನ ಕೆಲವೇ ದಿನಗಳಲ್ಲಿ ಆರಂಭಿಸಲಿದೆ.

ಮಾಹಿತಿಗಳ ಪ್ರಕಾರ, ಮಹೀಂದ್ರಾ ಮತ್ತು ಫೋರ್ಡ್ ಕಂಪನಿಗಳ ಜಂಟಿ ಯೋಜನೆ ಅಡಿ ನಿರ್ಮಾಣಗೊಳ್ಳಲಿರುವ ಹೊಸ ಕಾರು ಆವೃತ್ತಿಗಳು 2021-22ರ ಆರ್ಥಿಕ ವರ್ಷದಲ್ಲಿ ಬಿಡುಗಡೆಯಾಗಲಿದ್ದು, ತದನಂತರ ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ಒಟ್ಟು 7 ವಿವಿಧ ನಮೂನೆಯ ಹೊಸ ಎಸ್‌ಯುವಿ, ಎಂಪಿವಿ ಮತ್ತು ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲಿವೆ.
MOST READ: ಹೊಸ ಪೊಲೊ ಕಾರು ವಿತರಣೆ ಮಾಡಿದ ಎರಡೇ ನಿಮಿಷದಲ್ಲಿ ನಡೆಯಿತು ಅಪಘಾತ..!

ಬಿಡುಗಡೆಯಾಗಲಿರುವ ಹೊಸ ಕಾರುಗಳಲ್ಲಿ ಕೆಲವು ಕಾರು ಮಾದರಿಗಳು ಫೋರ್ಡ್ ಹೆಸರಿನಲ್ಲಿ ಬಿಡುಗಡೆಯಾಗಲಿದ್ದರೆ ಇನ್ನು ಕೆಲವು ಕಾರುಗಳು ಮಹೀಂದ್ರಾ ಹೆಸರಿನಲ್ಲಿ ಬಿಡುಗಡೆಯಾಗಲಿದ್ದು, ಒಟ್ಟಿನಲ್ಲಿ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟ ವಿಭಾಗದಲ್ಲಿ ಭರ್ಜರಿ ಪೈಪೋಟಿ ಏರ್ಪಡಲಿದೆ.
Note: Images Are Representative Purpose Only.


Click it and Unblock the Notifications








