ಸಿ ಸೆಗ್ಮೆಂಟ್ ಸೆಡಾನ್ ಕಾರುಗಳ ಮಾರಾಟದಲ್ಲಿ ಮೊದಲ ಸ್ಥಾನಕ್ಕೇರಿದ ಹೋಂಡಾ ಸಿಟಿ

ಆರ್ಥಿಕ ಹಿಂಜರಿತದ ಜೊತೆಗೆ ಕರೋನಾ ವೈರಸ್‌ ಪರಿಣಾಮ ಸಾಕಷ್ಟು ಇಳಿಕೆ ಕಂಡಿದ್ದ ಹೊಸ ವಾಹನಗಳು ಮಾರಾಟವು ಬಹುದಿನಗಳ ನಂತರ ಚೇತರಿಕೆಯ ಹಾದಿಯಲ್ಲಿದ್ದು, ಹೋಂಡಾ ಕಾರ್ಸ್ ಇಂಡಿಯಾ ಕಂಪನಿಯು ಕೂಡಾ ದಸರಾ ಸಂಭ್ರಮಾಚರಣೆಯಲ್ಲಿ ಅತ್ಯಧಿಕ ಬೇಡಿಕೆ ಪಡೆದುಕೊಂಡಿದೆ.

ಸಿ ಸೆಗ್ಮೆಂಟ್ ಸೆಡಾನ್ ಕಾರುಗಳ ಮಾರಾಟದಲ್ಲಿ ಮೊದಲ ಸ್ಥಾನಕ್ಕೇರಿದ ಹೋಂಡಾ ಸಿಟಿ

ಕಳೆದ ಆರು ತಿಂಗಳಿನಿಂದ ಸತತವಾಗಿ ಹೊಸ ವಾಹನಗಳ ಮಾರಾಟದಲ್ಲಿ ಕನಿಷ್ಠ ಬೆಳವಣಿಗೆಗೂ ಪರದಾಡಿದ್ದ ಆಟೋ ಕಂಪನಿಗಳು ಇದೀಗ ನೀರಿಕ್ಷೆಗೂ ಮೀರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಮುಂಬರುವ ದೀಪಾವಳಿ ಹೊತ್ತಿಗೆ ವಾಹನ ಮಾರಾಟವು ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆಗಳಿವೆ. ಹೀಗಾಗಿ ಗ್ರಾಹಕರ ಸೆಳೆಯಲು ಹಲವಾರು ಆಫರ್‌ಗಳನ್ನು ಘೋಷಣೆ ಮಾಡುತ್ತಿರುವ ವಾಹನ ಕಂಪನಿಗಳು ಈ ಹಿಂದಿನ ನಷ್ಟ ಸರಿದೂಗಿಸುವ ಯೋಜನೆಯಲ್ಲಿವೆ.

ಸಿ ಸೆಗ್ಮೆಂಟ್ ಸೆಡಾನ್ ಕಾರುಗಳ ಮಾರಾಟದಲ್ಲಿ ಮೊದಲ ಸ್ಥಾನಕ್ಕೇರಿದ ಹೋಂಡಾ ಸಿಟಿ

ಹೋಂಡಾ ಕಾರ್ಸ್ ಇಂಡಿಯಾ ಕಂಪನಿಯು ಕೂಡಾ ಮೊದಲ ಬಾರಿಗೆ ಅಕ್ಟೋಬರ್ ಅವಧಿಯಲ್ಲಿ ಅತ್ಯಧಿಕ ಬೇಡಿಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಸಿ ಸೆಗ್ಮೆಂಟ್ ಸೆಡಾನ್ ಮಾದರಿಯಾಗಿರುವ ಸಿಟಿ ಕಾರು ಕೂಡಾ ಹೆಚ್ಚಿನ ಮಟ್ಟದಲ್ಲಿ ಮಾರಾಟಗೊಂಡಿದೆ.

ಸಿ ಸೆಗ್ಮೆಂಟ್ ಸೆಡಾನ್ ಕಾರುಗಳ ಮಾರಾಟದಲ್ಲಿ ಮೊದಲ ಸ್ಥಾನಕ್ಕೇರಿದ ಹೋಂಡಾ ಸಿಟಿ

ಸದ್ಯ ಐದನೇ ತಲೆಮಾರಿನ ವೈಶಿಷ್ಟ್ಯತೆಯೊಂದಿಗೆ ಮಾರಾಟವಾಗುತ್ತಿರುವ ಸಿಟಿ ಸೆಡಾನ್ ಕಾರು ಮಾದರಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಾದ ಹ್ಯುಂಡೈ ವೆರ್ನಾ, ಮಾರುತಿ ಸುಜುಕಿ ಸಿಯಾಜ್, ಸ್ಕೋಡಾ ರ‍್ಯಾಪಿಡ್, ಟೊಯೊಟಾ ಯಾರಿಸ್, ಫೋಕ್ಸ್‌ವ್ಯಾಗನ್ ವೆಂಟೊ ಮಾದರಿಗಳ ಮಾರಾಟಕ್ಕಿಂತಲೂ ಹೆಚ್ಚು ಬೇಡಿಕೆ ಪಡೆದುಕೊಂಡಿದೆ.

ಸಿ ಸೆಗ್ಮೆಂಟ್ ಸೆಡಾನ್ ಕಾರುಗಳ ಮಾರಾಟದಲ್ಲಿ ಮೊದಲ ಸ್ಥಾನಕ್ಕೇರಿದ ಹೋಂಡಾ ಸಿಟಿ

ನ್ಯೂ ಜನರೇಷನ್ ಸಿಟಿ ಸೆಡಾನ್ ಕಾರು ಮಾದರಿಗಳು ಅಕ್ಟೋಬರ್ ಅವಧಿಯಲ್ಲಿ ಒಟ್ಟು 4,124 ಯುನಿಟ್ ಮಾರಾಟದೊಂದಿಗೆ ಕಳೆದ ವರ್ಷದ ಅಕ್ಟೋಬರ್ ಅವಧಿಗಿಂತ ಶೇ. 119 ರಷ್ಟು ಬೆಳವಣಿಗೆ ಸಾಧಿಸಿದ್ದು, ಹ್ಯುಂಡೈ ವೆರ್ನಾ ಕಾರು ಮಾದರಿಯು 2,166 ಯುನಿಟ್, ಮಾರುತಿ ಸಿಯಾಜ್ ಕಾರು ಮಾದರಿಯು 1,422 ಯುನಿಟ್, ಸ್ಕೋಡಾ ರ‍್ಯಾಪಿಡ್ 1,024 ಯುನಿಟ್, ಟೊಯೊಟಾ ಯಾರಿಸ್ 373 ಯನಿಟ್ ಮತ್ತು ಫೋಕ್ಸ್‌ವ್ಯಾಗನ್ ವೆಂಟೋ ಕಾರು 231 ಯುನಿಟ್ ಮಾರಾಟಗೊಂಡಿದೆ.

ಸಿ ಸೆಗ್ಮೆಂಟ್ ಸೆಡಾನ್ ಕಾರುಗಳ ಮಾರಾಟದಲ್ಲಿ ಮೊದಲ ಸ್ಥಾನಕ್ಕೇರಿದ ಹೋಂಡಾ ಸಿಟಿ

2020ರ ಜುಲೈ ಆರಂಭದಲ್ಲಿ ಸಿಟಿ ಸೆಡಾನ್ ಮಾದರಿಯನ್ನು ಹೊಸ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಗೊಳಿಸಿದ ನಂತರ ಇದೀಗ ಅತಿಹೆಚ್ಚು ಗ್ರಾಹಕರ ಬೇಡಿಕೆ ಪಡೆದುಕೊಂಡಿದ್ದು, ಅಕ್ಟೋಬರ್ ಅವಧಿಯಲ್ಲಿ ಒಟ್ಟು 9,340 ಯುನಿಟ್ ಮಾರಾಟಗೊಳ್ಳುವ ಮೂಲಕ ಸೆಡಾನ್ ಕಾರು ಮಾರಾಟವು ಕಳೆದ ವರ್ಷಕ್ಕಿಂತ ಶೇ.11 ರಷ್ಟು ಏರಿಕೆಯಾಗಿದೆ.

ಸಿ ಸೆಗ್ಮೆಂಟ್ ಸೆಡಾನ್ ಕಾರುಗಳ ಮಾರಾಟದಲ್ಲಿ ಮೊದಲ ಸ್ಥಾನಕ್ಕೇರಿದ ಹೋಂಡಾ ಸಿಟಿ

ಇನ್ನು ನ್ಯೂ ಜನರೇಷನ್ ಸಿಟಿ ಕಾರು ವಿ, ವಿಎಕ್ಸ್, ಜೆಡ್ಎಕ್ಸ್ ಆವೃತ್ತಿಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದ್ದು, ಹೊಸ ಕಾರು ಸಿ ಸೆಗ್ಮೆಂಟ್ ಸೆಡಾನ್ ಕಾರುಗಳಲ್ಲೇ ಅತ್ಯುತ್ತಮ ಫೀಚರ್ಸ್‌ಗಳನ್ನು ಪಡೆದುಕೊಂಡಿದೆ. ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 10.90 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 14.65 ಲಕ್ಷದೊಂದಿಗೆ ಸೆಡಾನ್ ಪ್ರಿಯರ ಆಕರ್ಷಣೆಗೆ ಕಾರಣವಾಗಿದೆ.

ಸಿ ಸೆಗ್ಮೆಂಟ್ ಸೆಡಾನ್ ಕಾರುಗಳ ಮಾರಾಟದಲ್ಲಿ ಮೊದಲ ಸ್ಥಾನಕ್ಕೇರಿದ ಹೋಂಡಾ ಸಿಟಿ

ಹೊಸ ಕಾರಿನಲ್ಲಿ ಕಟಿಂಗ್ ಎಡ್ಜ್ ಎಲ್ಇಡಿ ಹೆಡ್‍‌ಲ್ಯಾಂಪ್, ಎಲ್ಇಡಿ ಟೈಲ್ ಲ್ಯಾಂಪ್, ಎಲ್‌ಇಡಿ ಡಿಆರ್‌ಎಲ್, ಎಲ್ ಶೇಪ್ಡ್ ಎಲ್ಇಡಿ ಟರ್ನ್ ಸಿಗ್ನಲ್, ಡೈನಾಮಿಕ್ ಇಂಡಿಕೇಟರ್ ನೀಡಲಾಗಿದ್ದು, ಹೊಸ ಕಾರು 10ನೇ ತಲೆಮಾರಿನ ಸಿವಿಕ್ ಸೆಡಾನ್ ಮಾದರಿಯಿಂದಲೂ ಹಲವಾರು ಫೀಚರ್ಸ್‌ಗಳನ್ನು ಎರವಲು ಪಡೆದುಕೊಂಡಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಸಿ ಸೆಗ್ಮೆಂಟ್ ಸೆಡಾನ್ ಕಾರುಗಳ ಮಾರಾಟದಲ್ಲಿ ಮೊದಲ ಸ್ಥಾನಕ್ಕೇರಿದ ಹೋಂಡಾ ಸಿಟಿ

ಹೊಸ ಸಿಟಿ ಕಾರಿನಲ್ಲಿ ಈ ಬಾರಿ ಡಬಲ್ ಓವರ್‌ಹೆಡ್ ಕ್ಯಾಮ್ ಸೆಟಪ್‌ನೊಂದಿಗೆ ಹೊಸದಾಗಿ 1.5-ಲೀಟರ್ ಪೆಟ್ರೋಲ್ ಎಂಜಿನ್(ಎಲ್15ಬಿ) ನೀಡಲಾಗುತ್ತಿದ್ದು, ಈ ಹೊಸ ಎಂಜಿನ್ 120-ಬಿಎಚ್‌ಪಿ ಮತ್ತು 145-ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ.

ಸಿ ಸೆಗ್ಮೆಂಟ್ ಸೆಡಾನ್ ಕಾರುಗಳ ಮಾರಾಟದಲ್ಲಿ ಮೊದಲ ಸ್ಥಾನಕ್ಕೇರಿದ ಹೋಂಡಾ ಸಿಟಿ

ಹಾಗೆಯೇ ಡೀಸೆಲ್ ಮಾದರಿಯು 1.5-ಲೀಟರ್ 100-ಬಿಎಚ್‌ಪಿ, 200-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದು, ಸ್ಟ್ಯಾಂಡರ್ಡ್ ಆಗಿ ಎರಡು ಮಾದರಿಯಲ್ಲೂ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ನೀಡಲಾಗಿದೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಸಿ ಸೆಗ್ಮೆಂಟ್ ಸೆಡಾನ್ ಕಾರುಗಳ ಮಾರಾಟದಲ್ಲಿ ಮೊದಲ ಸ್ಥಾನಕ್ಕೇರಿದ ಹೋಂಡಾ ಸಿಟಿ

ಪರ್ಫಾಮೆನ್ಸ್ ಪ್ರಿಯರಿಗಾಗಿ ಪೆಟ್ರೋಲ್ ಹೈ ಎಂಡ್ ಮಾದರಿಯಲ್ಲಿ ಮಾತ್ರ 7-ಸ್ಪೀಡ್ ಸಿವಿಟಿ ಗೇರ್‌ಬಾಕ್ಸ್ ಆಯ್ಕೆ ನೀಡಲಾಗಿದ್ದು, ಪೆಟ್ರೋಲ್ ಮಾದರಿಯು ಪ್ರತಿ ಲೀಟರ್‌ಗೆ 17ರಿಂದ 18 ಕಿ.ಮೀ ಮತ್ತು ಡೀಸೆಲ್ ಮಾದರಿಯು ಪ್ರತಿ ಲೀಟರ್‌ಗೆ 22ರಿಂದ 23 ಕಿ.ಮೀ ಇಂಧನ ದಕ್ಷತೆಯನ್ನು ಹೊಂದಿರಲಿದೆ.

More from DriveSpark

Article Published On: Wednesday, November 4, 2020, 20:44 [IST]
English summary
New-Gen Honda City Has Become The Best-Selling C-segment Sedan. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+