ಬಹುನೀರಿಕ್ಷಿತ ನ್ಯೂ ಜನರೇಷನ್ ಹೋಂಡಾ ಸಿಟಿ ಸೆಡಾನ್ ಬಿಡುಗಡೆ
ಹೋಂಡಾ ಕಾರ್ಸ್ ಕಂಪನಿಯು ತನ್ನ ಜನಪ್ರಿಯ ಸೆಡಾನ್ ಮಾದರಿಯಾದ ಸಿಟಿ ಕಾರನ್ನು 5ನೇ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಭಾರತದಲ್ಲಿ ಬಿಡುಗಡೆಗೊಳಿಸಿದ್ದು, ಹೊಸ ಸೆಡಾನ್ ಕಾರು ಹಲವಾರು ಹೊಸ ವೈಶಿಷ್ಟ್ಯತೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದೆ.

ಹೊಸ ಸಿಟಿ ಕಾರು ವಿ, ವಿಎಕ್ಸ್, ಜೆಡ್ಎಕ್ಸ್ ಆವೃತ್ತಿಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದ್ದು, ಹೊಸ ಕಾರು ಸಿ ಸೆಗ್ಮೆಂಟ್ ಸೆಡಾನ್ ಕಾರುಗಳಲ್ಲೇ ಅತ್ಯುತ್ತಮ ಫೀಚರ್ಸ್‌ಗಳನ್ನು ಪಡೆದುಕೊಂಡಿದೆ. ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 10.90 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 14.65 ಲಕ್ಷದೊಂದಿಗೆ ಸೆಡಾನ್ ಪ್ರಿಯರ ಆಕರ್ಷಣೆಗೆ ಕಾರಣವಾಗಿದ್ದು, ಕಾರಿನ ವಿನ್ಯಾಸದಲ್ಲಿ ಈ ಬಾರಿ ಸಾಕಷ್ಟು ಬದಲಾವಣೆಗೊಳಿಸಲಾಗಿದೆ.

ಹೊಸ ಕಾರಿನಲ್ಲಿ ಕಟಿಂಗ್ ಎಡ್ಜ್ ಎಲ್ಇಡಿ ಹೆಡ್‍ಲ್ಯಾಂಪ್, ಎಲ್ಇಡಿ ಟೈಲ್ ಲ್ಯಾಂಪ್, ಎಲ್‌ಇಡಿ ಡಿಆರ್‌ಎಲ್, ಎಲ್ ಶೇಪ್ಡ್ ಎಲ್ಇಡಿ ಟರ್ನ್ ಸಿಗ್ನಲ್, ಡೈನಾಮಿಕ್ ಇಂಡಿಕೇಟರ್ ನೀಡಲಾಗಿದ್ದು, ಹೊಸ ಕಾರು 10ನೇ ತಲೆಮಾರಿನ ಸಿವಿಕ್ ಸೆಡಾನ್ ಮಾದರಿಯಿಂದಲೂ ಹಲವಾರು ಫೀಚರ್ಸ್‌ಗಳನ್ನು ಎರವಲು ಪಡೆದುಕೊಂಡಿದೆ.

4,549 ಎಂಎಂ ಉದ್ದ, 1,748 ಎಂಎಂ ಅಗಲ, 1,489 ಎಂಎಂ ಎತ್ತರ ಮತ್ತು 2,600 ಎಂಎಂ ವ್ಹೀಲ್ ಬೇಸ್ ಮೂಲಕ ಆಕರ್ಷಕ ಲುಕ್ ಹೊಂದಿರುವ ಸಿಟಿ ಹೊಸ ಕಾರು ಸಿ ಸೆಗ್ಮೆಂಟ್‌ನಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಎರಡು ಮಾದರಿಯಲ್ಲೂ ಖರೀದಿಗೆ ಲಭ್ಯವಿದೆ.

ಎಂಜಿನ್ ಮತ್ತು ಪರ್ಫಾಮೆನ್ಸ್
ಹೊಸ ಸಿಟಿ ಕಾರಿನಲ್ಲಿ ಈ ಬಾರಿ ಡಬಲ್ ಓವರ್‌ಹೆಡ್ ಕ್ಯಾಮ್ ಸೆಟಪ್‌ನೊಂದಿಗೆ ಹೊಸದಾಗಿ 1.5-ಲೀಟರ್ ಪೆಟ್ರೋಲ್ ಎಂಜಿನ್(ಎಲ್15ಬಿ) ನೀಡಲಾಗುತ್ತಿದ್ದು, ಈ ಹೊಸ ಎಂಜಿನ್ 120-ಬಿಎಚ್‌ಪಿ ಮತ್ತು 145-ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ.

ಹಾಗೆಯೇ ಡೀಸೆಲ್ ಮಾದರಿಯು 1.5-ಲೀಟರ್ 100-ಬಿಎಚ್‌ಪಿ, 200-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದು, ಸ್ಟ್ಯಾಂಡರ್ಡ್ ಆಗಿ ಎರಡು ಮಾದರಿಯಲ್ಲೂ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ನೀಡಲಾಗಿದೆ.

ಪರ್ಫಾಮೆನ್ಸ್ ಪ್ರಿಯರಿಗಾಗಿ ಪೆಟ್ರೋಲ್ ಹೈ ಎಂಡ್ ಮಾದರಿಯಲ್ಲಿ ಮಾತ್ರ 7-ಸ್ಪೀಡ್ ಸಿವಿಟಿ ಗೇರ್‌ಬಾಕ್ಸ್ ಆಯ್ಕೆ ನೀಡಲಾಗಿದ್ದು, ಪೆಟ್ರೋಲ್ ಮಾದರಿಯು ಪ್ರತಿ ಲೀಟರ್‌ಗೆ 17ರಿಂದ 18 ಕಿ.ಮೀ ಮತ್ತು ಡೀಸೆಲ್ ಮಾದರಿಯು ಪ್ರತಿ ಲೀಟರ್‌ಗೆ 22ರಿಂದ 23 ಕಿ.ಮೀ ಇಂಧನ ದಕ್ಷತೆಯನ್ನು ಹೊಂದಿರಲಿದೆ.

ಇನ್ನು ಹೊಸ ಸಿಟಿ ಕಾರಿನ ಇಂಟಿರಿಯರ್ ಕೂಡಾ ಸಾಕಷ್ಟು ಹೊಸತನದೊಂದಿಗೆ ಅಭಿವೃದ್ದಿಗೊಂಡಿದ್ದು, ಸಾಫ್ಟ್ ಟಚ್ ಮಟಿರಿಯಲ್‌ನೊಂದಿಗೆ ಸಾಫ್ಟ್ ಟಚ್ ಡ್ಯುಯಲ್ ಟೋನ್ ಡ್ಯಾಶ್‌ಬೋರ್ಡ್, ಇನ್‌ಟೈನ್‌ಮೆಂಟ್ ಸಿಸ್ಟಂ, ಹೊಂದಾಣಿಕೆ ಮಾಡಬಹುದಾದ ಹಿಂಭಾಗದ ಹೆಡ್‍ರೆಸ್ಟ್, ಡಿಜಿಟಲ್ ಇನ್ಸ್ ಟ್ರೂಮೆಂಟ್ ಕನ್ಸೋಲ್, ಹೊಸ ಟಚ್‍ಸ್ಕ್ರೀನ್ ಇನ್ಪೋಟೈನ್‍ಮೆಂಟ್ ಸಿಸ್ಟಂ ಅನ್ನು ಅಳವಡಿಸಲಾಗಿದೆ.

ಜೊತೆಗೆ ಸ್ಪೋರ್ಟಿ ವಿನ್ಯಾಸದ ಲೆದರ್ ಸೀಟುಗಳು, ಮ್ಯಾನುವಲ್ ಸನ್‌ರೂಫ್, ಹಿಂಭಾಗದ ಎಸಿ ವೆಂಟ್ಸ್, ಹಿಂಭಾಗದ ಆಸನದಲ್ಲೂ ಸೆಂಟರ್ ಆರ್ಮ್ ರೆಸ್ಟ್‌ನೊಂದಿಗೆ ಕಪ್ ಹೋಲ್ಡರ್ ನೀಡಲಾಗಿದ್ದು, ಹೊಸ ಕಾರು ಹಲವಾರು ಕನೆಕ್ವಿಟಿ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದೆ.

ಸುರಕ್ಷಾ ಸೌಲಭ್ಯಗಳು
ಸಿ-ಸೆಗ್ಮೆಂಟ್ ಸೆಡಾನ್ ಕಾರಿನಲ್ಲೇ ಅತಿಹೆಚ್ಚು ಸುರಕ್ಷಾ ಸೌಲಭ್ಯಗಳನ್ನು ಹೊಂದಿರುವ ಸಿಟಿ ಕಾರಿನಲ್ಲಿ ಈ ಬಾರಿ ಮತ್ತಷ್ಟು ಸುಧಾರಿತ ಸುರಕ್ಷಾ ಅಂಶಗಳನ್ನು ಹೊಂದಿದ್ದು, ಹೊಸ ಕಾರಿನಲ್ಲಿ ಹ್ಯಾಂಡ್‌ಲಿಂಗ್ ಅಸಿಸ್ಟ್, ಹಿಲ್ ಸ್ಟಾರ್ಟ್, 6-ಏರ್‌ಬ್ಯಾಗ್‌ಗಳು, ಎಬಿಎಸ್ ಜೊತೆಗೆ ಇಬಿಡಿ, ವೆಹಿಕಲ್ ಸ್ಟ್ಯಾಬಿಲಿಟಿ ಅಸಿಸ್ಟ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ಫ್ರಂಟ್ ಆ್ಯಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್, ರಿಯರ್ ವ್ಯೂ ಕ್ಯಾಮೆರಾ ಮತ್ತು 16-ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್ಹ್ ಸೇರಿದಂತೆ ಹಲವಾರು ಹೊಸ ಸೌಲಭ್ಯಗಳಿವೆ.

ಹೈ ಎಂಡ್ ಮಾದರಿಯಾದ ಸಿಟಿ ಝೆಡ್ಎಕ್ಸ್ ನಲ್ಲಿ ಲೇನ್ ವಾಚ್ ಕ್ಯಾಮೆರಾ ಸಿಸ್ಟಂ ಇದ್ದು, ಇದನ್ನು ಎಡ ಭಾಗದ ರಿಯರ್ ವ್ಯೂ ಮಿರರ್‌ನಲ್ಲಿ ಅಳವಡಿಸಲಾಗಿರುವ ಕ್ಯಾಮೆರಾ ಮೂಲಕ ಗರಿಷ್ಠ ಸುರಕ್ಷತೆ ಪಡೆದುಕೊಳ್ಳಬಹುದಾಗಿದೆ.

ಖರೀದಿಗೆ ಲಭ್ಯವಿರುವ ಬಣ್ಣಗಳು
ನ್ಯೂ ಜನರೇಷನ್ ಸಿಟಿ ಕಾರು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಐದು ಬಣ್ಣಗಳ ಆಯ್ಕೆ ಹೊಂದಿದ್ದು, ರೆಡಿಯೆಂಟ್ ರೆಡ್ ಮೆಟಾಲಿಕ್, ಪ್ಲ್ಯಾಟಿನಂ ವೈಟ್ ಪರ್ಲ್, ಮಾರ್ಡನ್ ಸ್ಟೀಲ್ ಮೆಟಾಲಿಕ್, ಲೂನಾರ್ ಸಿಲ್ವರ್ ಮೆಟಾಲಿಕ್ ಮತ್ತು ಗೋಲ್ಡನ್ ಬ್ರೌನ್ ಮೆಟಾಲಿಕ್ ಬಣ್ಣಗಳನ್ನು ಪಡೆದುಕೊಂಡಿದೆ.


Click it and Unblock the Notifications








