ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಹೋಂಡಾ ಹೆಚ್‌ಆರ್-ವಿ ಕ್ರಾಸ್‌ಒವರ್

ಜಪಾನ್ ಮೂಲದ ಹೋಂಡಾ ಕಂಪನಿಯು ಹೆಚ್‌ಆರ್-ವಿ ಕಾಂಪ್ಯಾಕ್ಟ್ ಕ್ರಾಸ್‌ಒವರ್ ಅನ್ನು 2013ರಲ್ಲಿ ಮೊದಲ ಬಾರಿಗೆ ಜಪಾನ್‌ನಲ್ಲಿ ಬಿಡುಗಡೆಗೊಳಿಸಿತ್ತು. ಅದೇ ವರ್ಷದಲ್ಲಿ ಈ ಹೆಚ್‌ಆರ್-ವಿ ಕ್ರಾಸ್‌ಒವರ್ ಅನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಹೋಂಡಾ ಕಂಪನಿಯು ಯೋಜನೆ ರೂಪಿಸಿತು.

ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಹೋಂಡಾ ಹೆಚ್‌ಆರ್-ವಿ ಕ್ರಾಸ್‌ಒವರ್

ಆದರೆ ಹೋಂಡಾ ಕಂಪನಿಯು ಹೆಚ್‌ಆರ್-ವಿ ಕ್ರಾಸ್‌ಒವರ್ ಭಾರತದಲ್ಲಿ ಬಿಡುಗಡೆಗೊಳಿಸುವುದು ತುಂಬಾ ದುಬಾರಿ ಎಂದು ಪರಿಗಣಿಸಿದ್ದರು. ಇದೇ ಕಾರಣದಿಂದ ಅಂದು ಹೋಂಡಾ ಕಂಪನಿಯು ಹೆಚ್‌ಆರ್-ವಿ ಕ್ರಾಸ್‌ಒವರ್ ಅನ್ನು ಭಾರತದಲ್ಲಿ ಬಿಡುಗಡೆಗೊಳಿಸುವ ನಿರ್ಧಾರದಿಂದ ಹಿಂದೆ ಸರಿದರು. ಆದರೆ ಇಂದು ಭಾರತೀಯ ಮಾರುಕಟ್ಟೆಯು ಭಾರೀ ಬೆಳವಣಿಗೆಯನ್ನು ಕಂಡಿದೆ.

ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಹೋಂಡಾ ಹೆಚ್‌ಆರ್-ವಿ ಕ್ರಾಸ್‌ಒವರ್

ಭಾರತೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೋಸ್ ನಂತಹ ಕ್ರಾಸ್‌ಒವರ್‌ಗಳು ಉತ್ತಮ ಯಶಸ್ವಿಯನ್ನು ಸಾಧಿಸಿದೆ. ಇದರಿಂದ ಹೋಂಡಾ ಕಂಪನಿಯು ಭಾರತದಲ್ಲಿ ಹೊಸ ಹೆಚ್‌ಆರ್-ವಿ ಎಸ್‍ಯುವಿಯನ್ನು ಬಿಡುಗಡೆಗೊಳಿಸಲು ಮುಂದಾಗಿದೆ ಎಂದು ವರದಿಗಳಾಗಿತ್ತು. ಆದರೆ ಭಾರತದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳು ಕಡಿಮೆಯಾಗಿದೆ.

MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಹೋಂಡಾ ಹೆಚ್‌ಆರ್-ವಿ ಕ್ರಾಸ್‌ಒವರ್

ನ್ಯೂ ಜನರೇಷನ್ ಹೆಚ್‌ಆರ್-ವಿ ಮಾದರಿಯು ಅಸ್ತಿತ್ವದಲ್ಲಿರುವ ಪ್ಲಾಟ್‌ಫಾರ್ಮ್‌ನ ನವೀಕರಿಸಿದ ಆವೃತ್ತಿಯನ್ನು ಆಧರಿಸಿದೆ. ಇದು ಹೊಸ-ಜನ್ ಫಿಟ್ ಹ್ಯಾಚ್‌ಬ್ಯಾಕ್‌ಗೆ ಸಹ ಆಧಾರವಾಗಿದೆ. ತೂಕವನ್ನು ಕಡಿಮೆ ಮಾಡಲು ಪ್ಲಾಟ್‌ಫಾರ್ಮ್‌ ಅನ್ನು ನವೀಕರಿಸಿದ್ದಾರೆ.

ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಹೋಂಡಾ ಹೆಚ್‌ಆರ್-ವಿ ಕ್ರಾಸ್‌ಒವರ್

ಇದೀಗ ಹೋಂಡಾ ಕಂಪನಿಯು ತನ್ನ ಹೊಸ ತಲೆಮಾರಿನ ಹೆಚ್‌ಆರ್-ವಿ ಕ್ರಾಸ್‌ಒವರ್ ಅನ್ನು ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಹೋಂಡಾ ಕಂಪನಿಯು ಹೆಚ್‌ಆರ್-ವಿ ಎಸ್‍ಯುವಿಯ ಬಿಡುಗಡೆಯ ದಿನಾಂಕವನ್ನು ಅಧಿಕೃತವಾಗಿ ಬಹಿರಂಗಪಡಿಸಿಲ್ಲ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಹೋಂಡಾ ಹೆಚ್‌ಆರ್-ವಿ ಕ್ರಾಸ್‌ಒವರ್

ಈ ಹೊಸ ಹೆಚ್‌ಆರ್-ವಿ ಕ್ರಾಸ್‌ಒವರ್ 4,400 ಎಂಎಂ ಉದ್ದ, 1,790 ಎಂಎಂ ಅಗಲ ಮತ್ತು 1,590 ಎಂಎಂ ಎತ್ತರವನ್ನು ಹೊಂದಿರಲಿದೆ. ಇನ್ನು 2,660 ಎಂಎಂ ವ್ಹೀಲ್ ಬೇಸ್ ಅನ್ನು ಹೊಂದಿರಲಿದೆ, ಈ ಹೊಸ ಹೆಚ್‌ಆರ್-ವಿ ಮಾದರಿಯು ಸುಮಾರು 4.4 ಮೀಟರ್ ಉದ್ದವನ್ನು ಹೊಂದಿರಲಿದೆ.

ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಹೋಂಡಾ ಹೆಚ್‌ಆರ್-ವಿ ಕ್ರಾಸ್‌ಒವರ್

ಹೊಸ ಹೆಚ್‌ಆರ್-ವಿ ಕ್ರಾಸ್‌ಒವರ್ 1.5 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರಲಿದೆ. ಇದರೊಂದಿಗೆ ಎರಡು ಎಲೆಕ್ಟ್ರಿಕ್ ಮೋಟಾರ್ ಗಳನ್ನು ಹೊಂದಿರಲಿದೆ. ಹೋಂಡಾ ಕಾರುಗಳ ಸರಣಿಯಲ್ಲಿ ಹೆಚ್‌ಆರ್-ವಿ ಕ್ರಾಸ್‌ಒವರ್ ಸಿಆರ್-ವಿ ಗಿಂತ ಕೆಳಗಿನ ಸ್ಥಾನದಲ್ಲಿರುತ್ತದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಹೋಂಡಾ ಹೆಚ್‌ಆರ್-ವಿ ಕ್ರಾಸ್‌ಒವರ್

ಈ ಕ್ರಾಸ್‌ಒವರ್ ಜಪಾನ್ ಮಾರುಕಟ್ಟೆಯಲ್ಲಿ ವೆಝೆಲ್ ಎನ್ನುವ ಹೆಸರಿನಲ್ಲಿ ಮಾರಾಟವಾಗುತ್ತಿದೆ. ಇತರ ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಹೆಚ್‌ಆರ್-ವಿ ಎಂಬ ಹೆಸರಿನಲ್ಲಿ ಮಾರಟ ಮಾಡಲಾಗುತ್ತದೆ.

ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಹೋಂಡಾ ಹೆಚ್‌ಆರ್-ವಿ ಕ್ರಾಸ್‌ಒವರ್

ಹಲವಾರು ಪ್ರೀಮಿಯಂ ಫೀಚರುಗಳನ್ನು ಹೊಂದಿರುವ ಹೋಂಡಾ ಹೆಚ್‍ಆರ್-ವಿ ಕ್ರಾಸ್‌ಒವರ್ ಒಂದು ವೇಳೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದರೆ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್, ರೆನಾಲ್ಟ್ ಕ್ಯಾಪ್ಚರ್ ಮತ್ತು ಜೀಪ್ ಕಂಪಾಸ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
Read more on ಹೋಂಡಾ honda
English summary
2021 Honda HR-V To Be Based On New Fit Platform. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X