ಸಂಕಷ್ಟದ ಸಮಯದಲ್ಲೂ ಅತ್ಯುತ್ತಮ ಬೇಡಿಕೆ ಪಡೆದುಕೊಂಡ ನ್ಯೂ ಜನರೇಷನ್ ಕ್ರೆಟಾ

ಕಳೆದ ತಿಂಗಳು 16ರಂದು ಬಿಡುಗಡೆಗೊಂಡಿದ್ದ ಹ್ಯುಂಡೈ ನ್ಯೂ ಜನರೇಷನ್ ಕ್ರೆಟಾ ಕಾರು ಮಾದರಿಯು ಮೊದಲ ತಿಂಗಳ ಅವಧಿಯಲ್ಲೇ ಅತ್ಯುತ್ತಮ ಮಾರಾಟ ದಾಖಲೆಯನ್ನು ಕಂಡಿದ್ದು, ಲಾಕ್ ಡೌನ್ ಮಧ್ಯದಲ್ಲೂ ಹೊಸ ಕಾರು ಮಾರ್ಚ್ ಕೊನೆಯಲ್ಲಿ 6,700 ಯುನಿಟ್ ಮಾರಾಟಗೊಂಡಿದೆ.

ಸಂಕಷ್ಟದ ಸಮಯದಲ್ಲೂ ಅತ್ಯುತ್ತಮ ಬೇಡಿಕೆ ಪಡೆದುಕೊಂಡ ನ್ಯೂ ಜನರೇಷನ್ ಕ್ರೆಟಾ

ಕರೋನಾ ವೈರಸ್ ಹರಡದಂತೆ ಲಾಕ್ ಡೌನ್ ವಿಧಿಸಿದ್ದರಿಂದ ಬಹುತೇಕ ಕಾರು ಕಂಪನಿಗಳು ಸದ್ಯ ಹೊಸ ಕಾರುಗಳ ಮಾರಾಟವನ್ನು ಸಂಪೂರ್ಣವಾಗಿ ಬಂದ್ ಮಾಡಿದ್ದರೂ ಕೂಡಾ ಕಳೆದ ತಿಂಗಳ ಮೂರನೇ ವಾರದಲ್ಲಿ ಕಾರು ಮಾರಾಟ ಪ್ರಕ್ರಿಯೆಯನ್ನು ನಡೆಸಿದ್ದವು. ಇದೇ ಅವಧಿಯಲ್ಲಿ ನ್ಯೂ ಜನರೇಷನ್ ಕ್ರೆಟಾ ಮಾದರಿಯನ್ನು ಬಿಡುಗಡೆ ಮಾಡಿದ್ದ ಹ್ಯುಂಡೈ ಕಂಪನಿಯು ಕಾರು ಬಿಡುಗಡೆಗೂ ಮೊದಲೇ ಬುಕ್ಕಿಂಗ್ ಮಾಡಲಾಗಿದ್ದ ಗ್ರಾಹಕರಿಗೆ ವಿತರಣೆ ಮಾಡುವಲ್ಲಿ ಯಶಸ್ವಿಯಾಗಿದೆ.

ಸಂಕಷ್ಟದ ಸಮಯದಲ್ಲೂ ಅತ್ಯುತ್ತಮ ಬೇಡಿಕೆ ಪಡೆದುಕೊಂಡ ನ್ಯೂ ಜನರೇಷನ್ ಕ್ರೆಟಾ

ಕಳೆದ ಕೆಲ ತಿಂಗಳಿನಿಂದ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಅಗ್ರಸ್ಥಾನದಲ್ಲಿದ್ದ ಕಿಯಾ ಸೆಲ್ಟೊಸ್ ಹಿಂದಿಕ್ಕಿರುವ ಹ್ಯುಂಡೈ ಕ್ರೆಟಾ ಮಾದರಿಯು ಮೊದಲ ತಿಂಗಳಿನಲ್ಲಿಯೇ 6,700 ಯುನಿಟ್ ಮಾರಾಟಗೊಂಡಿದ್ದು, ಹೊಸ ಕಾರು ಖರೀದಿಗಾಗಿ ಈಗಾಗಲೇ ಸುಮಾರು 15 ಸಾವಿರ ಬುಕ್ಕಿಂಗ್ ಸಲ್ಲಿಕೆಯಾಗಿದೆ.

ಸಂಕಷ್ಟದ ಸಮಯದಲ್ಲೂ ಅತ್ಯುತ್ತಮ ಬೇಡಿಕೆ ಪಡೆದುಕೊಂಡ ನ್ಯೂ ಜನರೇಷನ್ ಕ್ರೆಟಾ

ಇನ್ನು ಹೊಸ ಕ್ರೆಟಾ ಕಾರು ಗ್ರಾಹಕರ ಬೇಡಿಕೆಯೆಂತೆ ಒಟ್ಟು 5 ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಬಿಎಸ್-6 ವೈಶಿಷ್ಟ್ಯತೆಯ 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಬಿಡುಗಡೆ ಮಾಡಲಾಗಿದೆ.

ಸಂಕಷ್ಟದ ಸಮಯದಲ್ಲೂ ಅತ್ಯುತ್ತಮ ಬೇಡಿಕೆ ಪಡೆದುಕೊಂಡ ನ್ಯೂ ಜನರೇಷನ್ ಕ್ರೆಟಾ

ಹೊಸ ಕ್ರೆಟಾ ಕಾರು ದೆಹಲಿ ಎಕ್ಸ್‌ಶೋರೂಂ ಆರಂಭಿಕವಾಗಿ ರೂ. 9.99 ಲಕ್ಷ ಬೆಲೆ ಪಡೆದುಕೊಂಡಿದ್ದು, ಟಾಪ್ ಎಂಡ್ ಮಾದರಿಯು ರೂ. 17.20 ಲಕ್ಷ ಬೆಲೆ ಪಡೆದುಕೊಳ್ಳುವ ಮೂಲಕ ಕಿಯಾ ಸೆಲ್ಟೊಸ್‌ಗೆ ಸರಿಸಮನಾಗಿ ಮಾರುಕಟ್ಟೆ ಪ್ರವೇಶಿಸಿದೆ. ಹೊಸ ಎಂಜಿನ್ ಆಯ್ಕೆಯನ್ನು ಸಹೋದರ ಸಂಸ್ಥೆಯಾದ ಕಿಯಾ ಮೋಟಾರ್ಸ್‌ನಿಂದ ಎರವಲು ಪಡೆಯಲಾಗಿದ್ದು, ಸೆಲ್ಟೊಸ್ ಕಾರಿನಂತೆಯೇ ಕ್ರೆಟಾ ಬಲಿಷ್ಠ ಎಂಜಿನ್ ಹೊಂದಿರುವ ಕಂಪ್ಯಾಕ್ಟ್ ಎಸ್‌ಯುವಿ ಆವೃತ್ತಿಯಾಗಿದೆ.

ಸಂಕಷ್ಟದ ಸಮಯದಲ್ಲೂ ಅತ್ಯುತ್ತಮ ಬೇಡಿಕೆ ಪಡೆದುಕೊಂಡ ನ್ಯೂ ಜನರೇಷನ್ ಕ್ರೆಟಾ

ಇದರಿಂದ ಕ್ರೆಟಾ ಆವೃತ್ತಿಯಲ್ಲಿ ಈ ಹಿಂದೆ ನೀಡಲಾಗುತ್ತಿದ್ದ 1.6-ಲೀಟರ್ ಮತ್ತು 1.4-ಲೀಟರ್ ಡೀಸೆಲ್ ಎಂಜಿನ್ ಅನ್ನು ತೆಗೆದುಹಾಕಲಾಗಿದ್ದು, ಸಾಮಾನ್ಯ ಮಾದರಿಯಲ್ಲಿ 1.5-ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಹಾಗೂ ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಖರೀದಿಸಬಹುದಾಗಿದೆ.

ಸಂಕಷ್ಟದ ಸಮಯದಲ್ಲೂ ಅತ್ಯುತ್ತಮ ಬೇಡಿಕೆ ಪಡೆದುಕೊಂಡ ನ್ಯೂ ಜನರೇಷನ್ ಕ್ರೆಟಾ

1.5-ಲೀಟರ್ ಪೆಟ್ರೋಲ್ ಆವೃತ್ತಿಯು 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 115-ಬಿಎಚ್‌ಪಿ, 144-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.5-ಲೀಟರ್ ಡೀಸೆಲ್ ಮಾದರಿಯು ಸಹ 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 115-ಬಿಎಚ್‌ಪಿ, 250-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

ಸಂಕಷ್ಟದ ಸಮಯದಲ್ಲೂ ಅತ್ಯುತ್ತಮ ಬೇಡಿಕೆ ಪಡೆದುಕೊಂಡ ನ್ಯೂ ಜನರೇಷನ್ ಕ್ರೆಟಾ

ಇದರಲ್ಲಿ 1.4-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯು 7-ಸ್ಪೀಡ್ ಡ್ಯುಯಲ್ ಕ್ಲಚ್ ಟ್ರಾನ್ಸ್‌ಮಿಷನ್‌ನೊಂದಿಗೆ 140-ಬಿಎಚ್‌ಪಿ ಉತ್ಪಾದನೆ ಮಾಡಲಿದ್ದು, ಕ್ರೆಟಾ ಆವೃತ್ತಿಯಲ್ಲೇ ಇದು ಹೈ ಎಂಡ್ ಆವೃತ್ತಿಯಾಗಿ ಮಾರಾಟಗೊಳ್ಳಲಿದೆ.

ಸಂಕಷ್ಟದ ಸಮಯದಲ್ಲೂ ಅತ್ಯುತ್ತಮ ಬೇಡಿಕೆ ಪಡೆದುಕೊಂಡ ನ್ಯೂ ಜನರೇಷನ್ ಕ್ರೆಟಾ

ಇದರೊಂದಿಗೆ ಹೊಸ ಕ್ರೆಟಾ ಕಾರಿನಲ್ಲಿ ಈ ಬಾರಿ ಹಲವಾರು ತಾಂತ್ರಿಕ ಸೌಲಭ್ಯಗಳನ್ನು ಬದಲಾವಣೆಗೊಳಿಸಲಾಗಿದ್ದು, ಹೊಸದಾಗಿ ವಿನ್ಯಾಸಗೊಳಿಸಲಾದ ಕಾಸ್‌ಕ್ಲಾಡಿಂಗ್ ಗ್ರಿಲ್, ಮರುವಿನ್ಯಾಸಗೊಳಿಸಿದ ಎಲ್ಇಡಿ ಪ್ರೋಜೆಕ್ಟರ್ ಹೆಡ್‌ಲ್ಯಾಂಪ್ಸ್ ಜೊತೆ ಎಲ್ಇಡಿ ಡಿಆರ್‌ಎಲ್ಎಸ್, ಎಲ್ಇಡಿ ಫಾಗ್ ಲ್ಯಾಂಪ್ ಒಳಗೊಂಡಿರುವ ಫ್ರಂಟ್ ಬಂಪರ್ ಮತ್ತು ಬಂಪರ್ ಸುರಕ್ಷತೆಗಾಗಿ ಸಿಲ್ವರ್ ಸ್ಕಫ್ ಪ್ಲೇಟ್ ಜೋಡಿಸಲಾಗಿದೆ.

ಸಂಕಷ್ಟದ ಸಮಯದಲ್ಲೂ ಅತ್ಯುತ್ತಮ ಬೇಡಿಕೆ ಪಡೆದುಕೊಂಡ ನ್ಯೂ ಜನರೇಷನ್ ಕ್ರೆಟಾ

ಹ್ಯುಂಡೈ ಸಂಸ್ಥೆಯು ಹೊಸ ಕಾರಿನಲ್ಲಿ 35ಕ್ಕೂ ಹೆಚ್ಚು ಫೀಚರ್ಸ್ ಒಂದೇ ಸೂರಿನಡಿ ನಿಯಂತ್ರಿಸಬಲ್ಲ ಬ್ಲ್ಯೂ ಲಿಂಕ್ ತಂತ್ರಜ್ಞಾನವನ್ನು ಜೋಡಿಸಲಾಗಿದ್ದು, ವೈರ್‌ಲೆಸ್ ಚಾರ್ಜರ್, ವೆಂಟಿಲೆಟೆಡ್ ಫ್ರಂಟ್ ಸೀಟುಗಳು, ಕೀ ಲೆಸ್ ಎಂಟ್ರಿ, ಫುಶ್ ಬಟನ್ ಸ್ಟಾರ್ಟ್/ಸ್ಟಾಪ್, ಪನಾರೊಮಿಕ್ ಸನ್‌ರೂಫ್, ಆ್ಯಂಬಿಯೆಂಟ್ ಲೈಟಿಂಗ್ಸ್ ನೀಡಲಾಗಿದೆ.

ಸಂಕಷ್ಟದ ಸಮಯದಲ್ಲೂ ಅತ್ಯುತ್ತಮ ಬೇಡಿಕೆ ಪಡೆದುಕೊಂಡ ನ್ಯೂ ಜನರೇಷನ್ ಕ್ರೆಟಾ

ಕ್ರೆಟಾ ಹೊಸ ಆವೃತ್ತಿಯಲ್ಲಿ ಪ್ರೀಮಿಯಂ ಫೀಚರ್ಸ್‌ಗಳ ಜೊತೆಗೆ ಪ್ರಯಾಣಿಕ ಸುರಕ್ಷತೆ ಹೆಚ್ಚಿನ ಒತ್ತು ನೀಡಲಾಗಿದ್ದು, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, 4 ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಪೆಡಲ್ ಶಿಫ್ಟರ್, ಎಲೆಕ್ಟ್ರಿಕ್ ಪಾರ್ಕಿಂಗ್ ಬ್ರೇಕ್, ರಿಯರ್ ಪಾರ್ಕಿಂಗ್ ಕ್ಯಾಮೆರಾ ಮತ್ತು ಸೆನ್ಸಾರ್, ಹಿಲ್ ಸ್ಟಾರ್ಟ್ ಅಸಿಸ್ಟ್, ಹಿಲ್ ಡಿಸೆಂಟ್ ಕಂಟ್ರೋಲ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್ ಸೌಲಭ್ಯವಿದೆ.

Most Read Articles

Kannada
English summary
The all-new Hyundai Creta which was introduced in the Indian market recently. The Creta did manage to come close to the Seltos sales figures, however, fell short of less than 100 units. The 2020 Hyundai Creta registered 6,706 units of sales in March 2020, which also saw it enter the top-10 best-selling car list in India after quite a while — here is the entire list.
Story first published: Saturday, April 4, 2020, 17:38 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Drivespark sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Drivespark website. However, you can change your cookie settings at any time. Learn more