2021ಕ್ಕೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಹ್ಯುಂಡೈ ಎಲಾಂಟ್ರಾ ಕಾರು

ಹ್ಯುಂಡೈ ಕಂಪನಿಯು ತನ್ನ ನ್ಯೂ ಜನರೇಷನ್ ಎಲಾಂಟ್ರಾ ಕಾರನ್ನು ಅಮೇರಿಕಾದಲ್ಲಿ ಈಗಾಗಲೇ ಪರಿಚಯಿಸಲಾಗಿದೆ. ಇನ್ನು ಹ್ಯುಂಡೈ ಕಂಪನಿಯು ಈ ಹೊಸ ಎಲಾಂಟ್ರಾ ಕಾರನ್ನು ಭಾರತದಲ್ಲಿ ಮುಂದಿನ ವರ್ಷ ಬಿಡುಗಡೆಗೊಳಿಸಲಿದೆ.

2021ಕ್ಕೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಹ್ಯುಂಡೈ ಎಲಾಂಟ್ರಾ ಕಾರು

ಹೊಸ ತಲೆಮಾರಿನ ಹೊಸ ಹ್ಯುಂಡೈ ಎಲಾಂಟ್ರಾ ಕಾರನ್ನು ಹೊಸ ಕೆ3 ಪ್ಲಾಟ್‌ಫಾರಂನಲ್ಲಿ ತಯಾರಿಸಲಾಗುತ್ತದೆ. ಈ ಹೊಸ ಕಾರು ಹಳೆಯ ಕಾರಿಗಿಂತ 56 ಎಂಎಂ ಹೆಚ್ಚು ಅಗಲ ಹಾಗೂ 26 ಎಂಎಂ ಹೆಚ್ಚು ಎತ್ತರವನ್ನು ಹೊಂದಿದೆ. ಕಡಿಮೆ ತೂಕದ ಬಿಡಿ ಭಾಗಗಳನ್ನು ಅಳವಡಿಸಿರುವುದರಿಂದ ತೂಕವೂ ಸಹ ಕಡಿಮೆಯಾಗಿದೆ. ಎಕ್ಸಿಕ್ಯೂಟಿವ್ ಸೆಡಾನ್ ಕಾರು ಸೆಗ್ ಮೆಂಟಿನಲ್ಲಿ ಹ್ಯುಂಡೈ ಕಂಪನಿಯ ಎಲಾಂಟ್ರಾ ಕಾರು ಪ್ರಪಂಚದಾದ್ಯಂತ ಹೆಚ್ಚು ಜನಪ್ರಿಯತೆಯನ್ನು ಹೊಂದಿದೆ.

2021ಕ್ಕೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಹ್ಯುಂಡೈ ಎಲಾಂಟ್ರಾ ಕಾರು

ಬಾನೆಟ್, ಗ್ರಿಲ್ ಸಿಸ್ಟಂ, ಬಂಪರ್ ಸಿಸ್ಟಂ, ಹಿಂಭಾಗದ ವಿನ್ಯಾಸಗಳಿಂದ ಈ ಕಾರು ಸಂಪೂರ್ಣವಾಗಿ ಹೊಸ ಮಾದರಿಯ ವಿನ್ಯಾಸವನ್ನು ಹೊಂದಿದೆ. ಈ ಕಾರಿನಲ್ಲಿ ಎಲ್‌ಇಡಿ ಹೆಡ್‌ಲೈಟ್‌, ದೊಡ್ಡ ಗಾತ್ರದ ಗ್ರಿಲ್ ಸಿಸ್ಟಂ, 17 ಇಂಚಿನ ಡ್ಯುಯಲ್ ಟೋನ್ ಅಲಾಯ್ ವ್ಹೀಲ್ ಹಾಗೂ ಎಲ್‌ಇಡಿ ಲೈಟ್ ಬಾರ್ ಗಳನ್ನು ಅಳವಡಿಸಲಾಗಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

2021ಕ್ಕೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಹ್ಯುಂಡೈ ಎಲಾಂಟ್ರಾ ಕಾರು

ಹೊಸ ಹ್ಯುಂಡೈ ಎಲಾಂಟ್ರಾ ಕಾರಿನ ಇಂಟಿರಿಯರ್ ಅನ್ನು ಹೆಚ್ಚಿಸಲಾಗಿದೆ. ಈ ಕಾರು ಡ್ಯಾಶ್‌ಬೋರ್ಡ್‌ನಲ್ಲಿ ಎರಡು 10.25 ಇಂಚಿನ ಸ್ಕ್ರೀನ್ ಗಳನ್ನು ಹೊಂದಿದೆ. ಅವುಗಳಲ್ಲಿ ಒಂದು ಟಚ್-ಸ್ಕ್ರೀನ್ ಇನ್ಫೋಟೈನ್ಮೆಂಟ್, ಆದರೆ ಮತ್ತೊಂದು ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಆಗಿದೆ.

2021ಕ್ಕೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಹ್ಯುಂಡೈ ಎಲಾಂಟ್ರಾ ಕಾರು

ಈ ಕಾರಿನ ಪ್ರಮುಖವಾದ ಫೀಚರ್ ಗಳೆಂದರೆ 4-ಸ್ಪೋಕ್ ಸ್ಟೀಯರಿಂಗ್ ವ್ಹೀಲ್, ನಾಲ್ಕು ಎಸಿ ವೆಂಟ್ಸ್, ಡ್ರೈವರ್ ಸೀಟ್ ಹಾಗೂ ಫ್ರಂಟ್ ಸೀಟ್ ಪ್ಯಾಸೆಂಜರ್. ಈ ಕಾರಿನಲ್ಲಿ ಅಳವಡಿಸಿರುವ ಬಿಡಿಭಾಗಗಳು ಅತ್ಯುತ್ತಮ ಗುಣಮಟ್ಟವನ್ನು ಹೊಂದಿವೆ. ಈ ಹೊಸ ಹ್ಯುಂಡೈ ಕಾರಿನಲ್ಲಿ ಹಲವಾರು ಫೀಚರ್ ಗಳಿದ್ದು, ಇವುಗಳನ್ನು ಬ್ಲೂಲಿಂಕ್ ಪ್ರೊಸೆಸರ್ ಮೂಲಕ ಆಕ್ಸೆಸ್ ಮಾಡಬಹುದು.

MOST READ: ಕ್ರ್ಯಾಶ್ ಟೆಸ್ಟ್‌ನಲ್ಲಿ ಶೂನ್ಯ ಸ್ಟಾರ್ ರೇಟಿಂಗ್ ಪಡೆದ ಜನಪ್ರಿಯ ಮಾರುತಿ ಎಸ್-ಪ್ರೆಸ್ಸೊ ಕಾರು

2021ಕ್ಕೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಹ್ಯುಂಡೈ ಎಲಾಂಟ್ರಾ ಕಾರು

ಇನ್ನು ಈ ಸಿಸ್ಟಂ, ವಾಯ್ಸ್ ಕಮಾಂಡ್ ಫೀಚರ್ ಅನ್ನು ಹೊಂದಿದೆ. ಇದರಲ್ಲಿರುವ ಇನ್ಫೋಟೇನ್ ಮೆಂಟ್ ಸಿಸ್ಟಂ ಆಪಲ್ ಕಾರ್ ಪ್ಲೇ ಹಾಗೂ ಆಂಡ್ರಾಯ್ಡ್ ಆಟೋಗಳನ್ನು ಬೆಂಬಲಿಸುತ್ತದೆ. ಹೊಸ ಕಾರಿನಲ್ಲಿ ವೈರ್‌ಲೆಸ್ ಫೋನ್ ಚಾರ್ಜರ್, ಆಂಬಿಯೆಂಟ್ ಲೈಟ್ ಸಿಸ್ಟಂ, ಡಿಜಿಟಲ್ ಕೀ ಸ್ಮಾರ್ಟ್‌ಫೋನ್ ಪ್ರೊಸೆಸರ್, 8 ಸ್ಪೀಕರ್‌ಗಳ ಸೌಂಡ್ ಸಿಸ್ಟಂ, ಎಲೆಕ್ಟ್ರಿಕ್ ಸನ್‌ರೂಫ್ ಗಳಿವೆ.

2021ಕ್ಕೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಹ್ಯುಂಡೈ ಎಲಾಂಟ್ರಾ ಕಾರು

ಹೊಸ ಹ್ಯುಂಡೈ ಎಲಾಂಟ್ರಾದಲ್ಲಿ ಮೊದಲ ಬಾರಿಗೆ ಹೈಬ್ರಿಡ್ ಟೆಕ್ನಾಲಜಿಯನ್ನು ನೀಡಲಾಗುತ್ತಿದೆ. 1.6-ಲೀಟರ್ ಜಿಟಿಐ ಪೆಟ್ರೋಲ್ ಎಂಜಿನ್ ಅನ್ನು 32 ಕಿ.ವ್ಯಾಟ್ ಎಲೆಕ್ಟ್ರಿಕ್ ಮೋಟರ್ ನೊಂದಿಗೆ ಜೋಡಿಸಲಾಗಿದೆ. ಎಲೆಕ್ಟ್ರಿಕ್ ಮೋಟರ್ 1.32 ಕಿ.ವ್ಯಾನ ಲಿಥಿಯಂ-ಐಯಾನ್ ಬ್ಯಾಟರಿಯಲ್ಲಿ ಚಲಿಸುತ್ತದೆ.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

2021ಕ್ಕೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಹ್ಯುಂಡೈ ಎಲಾಂಟ್ರಾ ಕಾರು

ಈ ಹೈಬ್ರಿಡ್ ಮಾದರಿಯು 139 ಬಿಹೆಚ್‌ಪಿ ಪವರ್ ಹಾಗೂ 264 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ. 6-ಸ್ಪೀಡಿನ ಡ್ಯುಯಲ್-ಕ್ಲಚ್ ಗೇರ್ ಬಾಕ್ಸ್ ಅನ್ನು ನೀಡಲಾಗಿದೆ. ಈ ಕಾರು ಎಲೆಕ್ಟ್ರಿಕ್ ಮೋಟರ್ ನಲ್ಲಿ ಕೆಲ ದೂರದವರೆಗೆ ಮಾತ್ರ ಚಲಿಸುತ್ತದೆ. ಭಾರತದಲ್ಲಿ ಬಿಡುಗಡೆಯಾಗುವಾಗ, ಕಿಯಾ ಸೆಲ್ಟೋಸ್ ಕಾರಿನಲ್ಲಿರುವ 1.5 ಲೀಟರ್ ಡೀಸೆಲ್ ಎಂಜಿನ್ ಅನ್ನು ಅಳವಡಿಸಬಹುದು.

2021ಕ್ಕೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಹ್ಯುಂಡೈ ಎಲಾಂಟ್ರಾ ಕಾರು

ಈ ಹೊಸ ಹ್ಯುಂಡೈ ಹ್ಯುಂಡೈ ಎಲಾಂಟ್ರಾ ಕಾರು ಮುಂದಿನ ವರ್ಷದ ಭಾರತದಲ್ಲಿ ಬಿಡುಗಡೆಯಾಗಲಿದೆ. ಹೊಸ ಹ್ಯುಂಡೈ ಎಲಾಂಟ್ರಾ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬಿಡಗಡೆಯಾದ ಬಳಿಕ ಹೊಂಡಾ ಸಿವಿಕ್, ಟೊಯೊಟಾ ಕೊರೊಲಾ ಹಾಗೂ ಅಟ್ಲೆಸ್ ಕಾರುಗಳಿಗೆ ಪೈಪೋಟಿ ನೀಡುತ್ತದೆ.

Article Published On: Tuesday, November 17, 2020, 14:24 [IST]
English summary
Next-generation Hyundai Elantra To Come To India In 2021. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+