ಬಹುನಿರೀಕ್ಷಿತ 2020ರ ಹ್ಯುಂಡೈ ಎಲೈಟ್ ಐ20 ಕಾರಿನ ಮಾಹಿತಿ ಬಹಿರಂಗ

ಜನಪ್ರಿಯ ಕಾರು ಉತ್ಪಾದನಾ ಕಂಪನಿಯಾದ ಹ್ಯುಂಡೈ ತನ್ನ ಬಹುನಿರೀಕ್ಷಿತ ಹೊಸ ತಲೆಮಾರಿನ ಎಲೈಟ್ ಐ20 ಕಾರನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಹೊಸ ಹ್ಯುಂಡೈ ಎಲೈಟ್ ಐ20 ಕಾರಿನಲ್ಲಿ ಹಲವಾರು ಹೊಸ ಫೀಚರ್‌ಗಳನ್ನು ಹೊಂದಿರಲಿದೆ.

ಬಹುನಿರೀಕ್ಷಿತ 2020ರ ಹ್ಯುಂಡೈ ಎಲೈಟ್ ಐ20 ಕಾರಿನ ಮಾಹಿತಿ ಬಹಿರಂಗ

ಹೊಸ ತಲೆಮಾರಿನ ಎಲೈಟ್ ಐ20 ಕಾರುನ್ನು ಸ್ಪಾಟ್ ಟೆಸ್ಟ್ ನಡೆಸಲಾಗಿದೆ. ಈ ಹ್ಯುಂಡೈ ಕಾರಿನ ಮುಂಭಾಗದಲ್ಲಿರು ಕ್ಯಾಸ್ಕೇಡಿಂಗ್ ಗ್ರಿಲ್ ಅನ್ನು ಹೊಂದಿದೆ. ಹಿಂದಿನ ಐ20 ಮಾದರಿಗೆ ಹೋಲಿಸಿದರೆ ಹೆಡ್ ಲ್ಯಾಂಪ್ ಮತ್ತು ಸೈಡ್ ಫ್ರೋಪೈಲ್ ವಿನ್ಯಾಸವನ್ನು ನವೀಕರಿಸಲಾಗಿದೆ ದೊಡ್ಡ ಕ್ರೀಸ್ ಲೈನ್ ಗಳನ್ನು ಒಳಗೊಂಡಿದೆ. ಈ ಹೊಸ ಐ20 ಕಾರು ಸಾಕಷ್ಟು ಸ್ಪೋರ್ಟಿಯರ್ ಮತ್ತು ಸ್ಟೈಲಿಶ್ ಲುಕ್ ಅನ್ನು ಹೊಂದಿದೆ.

ಬಹುನಿರೀಕ್ಷಿತ 2020ರ ಹ್ಯುಂಡೈ ಎಲೈಟ್ ಐ20 ಕಾರಿನ ಮಾಹಿತಿ ಬಹಿರಂಗ

ಹೊಸ ಹ್ಯುಂಡೈ ಎಲೈಟ್ ಐ20 ಕಾರು ಈ ವರ್ಷದ ಹಬ್ಬದ ಸೀಸನ್ ನಲ್ಲಿ ಬಿಡುಗಡೆಯಾಗಲಿದೆ ಎಂದು ನಿರೀಕ್ಷಿಸುತ್ತೇವೆ. ಆದರೆ ಹ್ಯುಂಡೈ ಕಂಪನಿಯು ಈ ಹೊಸ ಕಾರಿನ ಬಿಡುಗಡೆಯ ದಿನಾಂಕವನ್ನು ಬಹಿರಂಗಪಡಿಸಿಲ್ಲ. ಹೊಸ ಹುಂಡೈ ಐ20 ಕಾರಿನ ಬದಿಯ ಪಿಲ್ಲರ್‍‍ಗಳು ಕಪ್ಪು ಬಣ್ಣವನ್ನು ಹೊಂದಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಬಹುನಿರೀಕ್ಷಿತ 2020ರ ಹ್ಯುಂಡೈ ಎಲೈಟ್ ಐ20 ಕಾರಿನ ಮಾಹಿತಿ ಬಹಿರಂಗ

ಇನ್ನು ಈ ಹೊಸ ಕಾರಿನಲ್ಲಿ ಎರಡು ಟೇಲ್‍ ಲ್ಯಾಂಪ್‍‍ಗಳನ್ನು ಅಳವಡಿಸಲಾಗಿದೆ. ವಿಡಬ್ಲ್ಯೂ ಟೈಗನ್‍‍‍ನಲ್ಲಿ ಇರುವಂತಹ ಕೆಂಪು ಇ‍ಲ್‍ಇಡಿ ಡಿಆರ್‍ಎಲ್ ಸ್ಟಾಪ್ ಲೈಟ್ ಹಿಂಭಾಗದಲ್ಲಿ ಟೇಲ್‍‍ಲೈಟ್ ಹೊಂದಿದೆ.

ಬಹುನಿರೀಕ್ಷಿತ 2020ರ ಹ್ಯುಂಡೈ ಎಲೈಟ್ ಐ20 ಕಾರಿನ ಮಾಹಿತಿ ಬಹಿರಂಗ

ಹೊಸ ಹ್ಯುಂಡೈ ಎಲೈಟ್ ಕಾರಿನ ಇಂಟಿರಿಯರ್‍‍ನಲ್ಲಿ 4 ಸ್ಫೋಕ್ ಸ್ಟೀಟಿಯರಿಂಗ್ ವ್ಹೀಲ್ ಅನ್ನು ಅಳವಡಿಸಲಾಗಿದೆ. ಇದು ಹೊಸ ಹ್ಯುಂಡೈ ಕ್ರೆಟಾ ಕಾರಿನಲ್ಲಿರುವ ಸ್ಟಿಟಿಯರಿಂಗ್ ಮಾದರಿಯಲ್ಲಿದೆ. ಹೊಸ ಹ್ಯುಂಡೈ ಐ20 ಕಾರಿನಲ್ಲಿ ಬೋಸ್ ಸೌಂಡ್ ಸಿಸ್ಟಂ, ಕ್ರೂಸ್ ಕಂಟ್ರೋಲ್ ಮತ್ತು ಫುಲ್-ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್‌ ಅನ್ನು ಒಳಗೊಂಡಿದೆ. ಜೊತೆಗೆ ಬ್ಲೂ ಲಿಂಕ್ ಟೆಕ್ನಾಲಜಿಯನ್ನು ಕೂಡ ಹೊಂದಿರಲಿದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಬಹುನಿರೀಕ್ಷಿತ 2020ರ ಹ್ಯುಂಡೈ ಎಲೈಟ್ ಐ20 ಕಾರಿನ ಮಾಹಿತಿ ಬಹಿರಂಗ

ಈ ಹೊಸ ಕಾರಿನಲ್ಲಿ 8.0 ಇಂಚಿನ ಡಿಜಿಟಲ್ ಕ್ಲಸ್ಟರ್ ಅನ್ನು ಅಳವಡಿಸಲಾಗಿದೆ. ಈ ಕಾರಿನ ಇಂಟಿರಿಯರ್‍‍ನಲ್ಲಿ ಆ್ಯಪಲ್ ಕಾರ್‍‍ಪ್ಲೇ ಮತ್ತು ಆಂಡ್ರಾಯ್ಡ್ ಆಟೋ, ಹ್ಯುಂಡೈನ ಕನೆಕ್ಟಿವಿಟಿ ಸೂಟ್ ಮತ್ತು ಇತರ ಹಲವಾರು ಫೀಚರ್‍‍ಗಳನ್ನು ಹೊಂದಿದೆ. ಯುಎಸ್‌ಬಿ ಪೋರ್ಟ್‌ ಮತ್ತು ವೈರ್‌ಲೆಸ್ ಚಾರ್ಜಿಂಗ್ ಪ್ಯಾಡ್ ಅನ್ನು ಸಹ ಹೊಂದಿರಲಿದೆ.

ಬಹುನಿರೀಕ್ಷಿತ 2020ರ ಹ್ಯುಂಡೈ ಎಲೈಟ್ ಐ20 ಕಾರಿನ ಮಾಹಿತಿ ಬಹಿರಂಗ

ಹೊಸ ಹ್ಯುಂಡೈ ಎಲೈಟ್ ಐ20 ಕಾರಿನಲ್ಲಿ ಹೊಸ 16 ಡ್ಯುಯಲ್ ಟೋನ್ ಅಲಾಯ್ ವ್ಹೀಲ್‍‍ಗಳು, ಇಂಟಿಗ್ರೇಟೆಡ್ ಟರ್ನ್ ಇಂಡಿಕೇಟರ್‍‍ಗಳೊಂದಿಗೆ ಸ್ಲಿಕ್ ಒಆರ್‍‍ವಿಎಂಗಳು ಮತ್ತು ಶಾರ್ಕ್ ಫಿನ್ ಆಂಟೆನಾವನ್ನು ಕೂಡ ಆಳವಡಿಸಲಾಗಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಬಹುನಿರೀಕ್ಷಿತ 2020ರ ಹ್ಯುಂಡೈ ಎಲೈಟ್ ಐ20 ಕಾರಿನ ಮಾಹಿತಿ ಬಹಿರಂಗ

ಗ್ರ್ಯಾಂಡ್ ಐ10 ನಿಯೋಸ್ ಕಾರಿನಲ್ಲಿರುವಂತಹ 1.0 ಲೀಟರ್ ಪೆಟ್ರೋಲ್ ಟರ್ಬೊ ಎಂಜಿನ್ ಅನ್ನು ಅಳವಡಿಸುವ ಸಾಧ್ಯತೆಗಳಿದೆ. ಈ ಎಂಜಿನ್ 100 ಬಿ‍‍ಹೆಚ್‍‍ಪಿ ಪವರ್ ಮತ್ತು 172 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍‍ನೊಂದಿಗೆ 6-ಸ್ಪೀಡ್ ಐಎಂಟಿಯನ್ನು ಜೋಡಿಸುವ ಸಾಧ್ಯತೆಗಳಿದೆ. ಇನ್ನು 7-ಸ್ಪೀಡ್ ಡಿಸಿಟಿ ಗೇರ್ ಬಾಕ್ಸ್ ಅನ್ನು ಆಯ್ಕೆಯಾಗಿ ನೀಡಬಹುದು.

ಬಹುನಿರೀಕ್ಷಿತ 2020ರ ಹ್ಯುಂಡೈ ಎಲೈಟ್ ಐ20 ಕಾರಿನ ಮಾಹಿತಿ ಬಹಿರಂಗ

ಇದರೊಂದಿಗೆ ಪ್ರಸ್ತುತ ಮಾರುಕಟ್ಟೆಯಲ್ಲಿ ಇರುವ ಮಾದರಿಯಂತೆ 1.2-ಲೀಟರ್ ಪೆಟ್ರೋಲ್ ಎಂಜಿನ್ ಮತ್ತು ಕಿಯಾ ಸೆಲ್ಟೋಸ್‌ನಿಂದ ಎರವಲು ಪಡೆದ 1.5-ಲೀಟರ್ ಡಿಟೂನ್ಡ್ ಡೀಸೆಲ್ ಎಂಜಿನ್ ಅನ್ನು ಹೊಂದಿರಲಿದೆ. ಹೊಸ ಹ್ಯುಂಡೈ ಐ20 ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಕಾರುಗಳಲ್ಲಿ ಇದು ಕೂಡ ಒಂದಾಗಿದೆ.

Article Published On: Thursday, September 10, 2020, 13:31 [IST]
English summary
2020 Hyundai Elite i20 Could Get IMT Transmission; Launch Nears. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+