Just In
- 11 min ago Vande Bharat: ವಂದೇ ಭಾರತ್ ಸ್ಲೀಪರ್ ವಿಶೇಷತೆಗಳು: ಇಂಟೀರಿಯರ್ಗೆ ಫಿದಾ ಆಗ್ತೀರ!
- 28 min ago ಎಲೆಕ್ಟ್ರಿಕ್ ಲೋಕಕ್ಕೆ ಎಸ್ಯುವಿ ದೈತ್ಯನ ಎಂಟ್ರಿ: ಇನ್ನು ಉಳಿದ ಕಾರುಗಳನ್ನು ದೇವರೇ ಕಾಪಾಡಬೇಕು!
- 1 hr ago Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
- 2 hrs ago Jonty Rhodes: ರಾಯಲ್ ಎನ್ಫೀಲ್ಡ್ ಬೈಕ್ಗಳಿಗೆ ಮನಸೋತ ದ.ಆಫ್ರಿಕಾ ಕ್ರಿಕೆಟರ್!
Don't Miss!
- News Karnataka Lok Sabha: 28 ಕ್ಷೇತ್ರಗಳ ಜಾತಿವಾರು ಅಭ್ಯರ್ಥಿಗಳು ಯಾರು? ಮಾಹಿತಿ ಇಲ್ಲಿದೆ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Finance ಬೆಂಗಳೂರು-ತುಮಕೂರು ನಮ್ಮ ಮೆಟ್ರೋ ಯೋಜನೆ: ಬರಲಿವೆ 19 ಎತ್ತರದ ನಿಲ್ದಾಣಗಳು
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Movies "ಇವರು ಆಡೋ ಮಾತುಗಳಿಂದ ನಮ್ಮ ತಾಯಿ ಊಟ ಮಾಡ್ತಿಲ್ಲ"; ಕಣ್ಣೀರಿಟ್ಟ ವರ್ತೂರು ಸಂತೋಷ್
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಡುಗಡೆಗೆ ಮುನ್ನ ಸ್ಪಾಟ್ ಟೆಸ್ಟ್ನಲ್ಲಿ ಕಾಣಿಸಿಕೊಂಡ ಹೊಸ ಹುಂಡೈ ಐ20 ಕಾರು
ಹ್ಯುಂಡೈ ಕಂಪನಿಯು ತನ್ನ ಮೂರನೇ ತಲೆಮಾರಿನ ಐ20 ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಹೊಸ ಹ್ಯುಂಡೈ ಐ20 ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಕಾರುಗಳಲ್ಲಿ ಒಂದಾಗಿದೆ.
ಹೊಸ ತಲೆಮಾರಿನ ಐ20 ಕಾರು ಭಾರತದಲ್ಲಿ ಬಿಡುಗಡೆಗೂ ಮುನ್ನ ಸ್ಪಾಟ್ ಟೆಸ್ಟ್ ನಡೆಸಿದೆ. ಈ ಹೊಸ ಹ್ಯುಂಡೈ ಐ20 ಕಾರು ಬಾಡಿಯನ್ನು ಮರೆಮಾಚಿ ಸ್ಪಾಟ್ ಟೆಸ್ಟ್ ನಡೆಸುತ್ತಿರುವುದನ್ನು ಟೀಂ ಬಿಹೆಚ್ಪಿ ಬಹಿರಂಗಪಡಿಸಿದೆ. ಈ ಹ್ಯುಂಡೈ ಕಾರಿನ ಮುಂಭಾಗದಲ್ಲಿರು ಕ್ಯಾಸ್ಕೇಡಿಂಗ್ ಗ್ರಿಲ್ ಅನ್ನು ಹೊಂದಿದೆ. ಹಿಂದಿನ ಐ20 ಮಾದರಿಗೆ ಹೋಲಿಸಿದರೆ ಹೆಡ್ ಲ್ಯಾಂಪ್ ಮತ್ತು ಸೈಡ್ ಫ್ರೋಪೈಲ್ ವಿನ್ಯಾಸವನ್ನು ನವೀಕರಿಸಲಾಗಿದೆ ದೊಡ್ಡ ಕ್ರೀಸ್ ಲೈನ್ ಗಳನ್ನು ಒಳಗೊಂಡಿದೆ. ಈ ಹೊಸ ಐ20 ಕಾರು ಸಾಕಷ್ಟು ಸ್ಪೋರ್ಟಿಯರ್ ಮತ್ತು ಸ್ಟೈಲಿಶ್ ಲುಕ್ ಅನ್ನು ಹೊಂದಿದೆ. ಈ ಐ20 ಕಾರಿನ ಹೊಸ ಲುಕ್ ಭಾರತದಲ್ಲಿ ಮತ್ತಷ್ಟು ಗ್ರಾಹಕರನ್ನು ಸೆಳೆಯಲು ನೆರವಾಗುತ್ತದೆ.
ಹೊಸ ಹ್ಯುಂಡೈ ಐ20 ಕಾರು ಈ ವರ್ಷದ ಹಬ್ಬದ ಸೀಸನ್ ನಲ್ಲಿ ಬಿಡುಗಡೆಯಾಗಲಿದೆ ಎಂದು ನಿರೀಕ್ಷಿಸುತ್ತೇವೆ. ಆದರೆ ಹ್ಯುಂಡೈ ಕಂಪನಿಯು ಈ ಹೊಸ ಕಾರಿನ ಬಿಡುಗಡೆಯ ದಿನಾಂಕವನ್ನು ಬಹಿರಂಗಪಡಿಸಿಲ್ಲ. ಇನ್ನು ಕೆಲವು ಡೀಲರುಗಳು ಅನಧಿಕೃತವಾಗಿ ಬುಕ್ಕಿಂಗ್ ಅನ್ನು ಪ್ರಾರಂಭಿಸಿದ್ದಾರೆ ಎಂದು ಕೆಲವು ವರದಿಗಳು ಪ್ರಕಟವಾಗಿದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್
ಹೊಸ ಹುಂಡೈ ಐ20 ಕಾರಿನ ಪಿಲ್ಲರ್ಗಳು ಬ್ಲ್ಯಾಕ್ ಬಣ್ಣವನ್ನು ಹೊಂದಿದೆ. ಇನ್ನು ಈ ಹೊಸ ಕಾರಿನಲ್ಲಿ ಎರಡು ಟೇಲ್ ಲ್ಯಾಂಪ್ಗಳನ್ನು ಅಳವಡಿಸಲಾಗಿದೆ. ವಿಡಬ್ಲ್ಯೂ ಟೈಗನ್ನಲ್ಲಿ ಇರುವಂತಹ ಕೆಂಪು ಇಲ್ಇಡಿ ಡಿಆರ್ಎಲ್ ಸ್ಟಾಪ್ ಲೈಟ್ ಹಿಂಭಾಗದಲ್ಲಿ ಟೇಲ್ಲೈಟ್ ಹೊಂದಿದೆ.
ಹೊಸ ಹ್ಯುಂಡೈ ಕಾರಿನ ಇಂಟಿರಿಯರ್ನಲ್ಲಿ 4 ಸ್ಫೋಕ್ ಸ್ಟೀಟಿಯರಿಂಗ್ ವ್ಹೀಲ್ ಅನ್ನು ಅಳವಡಿಸಲಾಗಿದೆ. ಇದು ಹೊಸ ಹ್ಯುಂಡೈ ಕ್ರೆಟಾ ಕಾರಿನಲ್ಲಿರುವ ಸ್ಟಿಟಿಯರಿಂಗ್ ಮಾದರಿಯಲ್ಲಿದೆ. ಹೊಸ ಹ್ಯುಂಡೈ ಐ20 ಕಾರಿನಲ್ಲಿ ಬೋಸ್ ಸೌಂಡ್ ಸಿಸ್ಟಂ, ಕ್ರೂಸ್ ಕಂಟ್ರೋಲ್ ಮತ್ತು ಫುಲ್-ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಒಳಗೊಂಡಿದೆ. ಇದರೊಂದಿಗೆ ಬ್ಲೂ ಲಿಂಕ್ ಟೆಕ್ನಾಲಜಿಯನ್ನು ಕೂಡ ಹೊಂದಿರಲಿದೆ.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ
ಈ ಹೊಸ ಕಾರಿನಲ್ಲಿ 8.0 ಇಂಚಿನ ಡಿಜಿಟಲ್ ಕ್ಲಸ್ಟರ್ ಅನ್ನು ಅಳವಡಿಸಲಾಗಿದೆ. ಈ ಕಾರಿನ ಇಂಟಿರಿಯರ್ನಲ್ಲಿ ಆ್ಯಪಲ್ ಕಾರ್ಪ್ಲೇ ಮತ್ತು ಆಂಡ್ರಾಯ್ಡ್ ಆಟೋ, ಹ್ಯುಂಡೈನ ಕನೆಕ್ಟಿವಿಟಿ ಸೂಟ್ ಮತ್ತು ಇತರ ಹಲವಾರು ಫೀಚರ್ಗಳನ್ನು ಹೊಂದಿದೆ. ಯುಎಸ್ಬಿ ಪೋರ್ಟ್ ಮತ್ತು ವೈರ್ಲೆಸ್ ಚಾರ್ಜಿಂಗ್ ಪ್ಯಾಡ್ ಅನ್ನು ಸಹ ಹೊಂದಿರಲಿದೆ.
ಹೊಸ ಹ್ಯುಂಡೈ ಐ20 ಕಾರಿನಲ್ಲಿ ಹೊಸ 16 ಡ್ಯುಯಲ್ ಟೋನ್ ಅಲಾಯ್ ವ್ಹೀಲ್ಗಳು, ಇಂಟಿಗ್ರೇಟೆಡ್ ಟರ್ನ್ ಇಂಡಿಕೇಟರ್ಗಳೊಂದಿಗೆ ಸ್ಲಿಕ್ ಒಆರ್ವಿಎಂಗಳು ಮತ್ತು ಶಾರ್ಕ್ ಫಿನ್ ಆಂಟೆನಾವನ್ನು ಕೂಡ ಆಳವಡಿಸಲಾಗಿದೆ.
MOST READ: ಸ್ಪಾಟ್ ಟೆಸ್ಟ್ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್ಲಿಫ್ಟ್
ಗ್ರ್ಯಾಂಡ್ ಐ10 ನಿಯೋಸ್ ಕಾರಿನಲ್ಲಿರುವಂತಹ 1.0 ಲೀಟರ್ ಪೆಟ್ರೋಲ್ ಟರ್ಬೊ ಎಂಜಿನ್ ಅನ್ನು ಅಳವಡಿಸುವ ಸಾಧ್ಯತೆಗಳಿದೆ. ಈ ಎಂಜಿನ್ 100 ಬಿಹೆಚ್ಪಿ ಪವರ್ ಮತ್ತು 172 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ನೊಂದಿಗೆ 6-ಸ್ಪೀಡ್ ಐಎಂಟಿಯನ್ನು ಜೋಡಿಸುವ ಸಾಧ್ಯತೆಗಳಿದೆ. ಇನ್ನು 7-ಸ್ಪೀಡ್ ಡಿಸಿಟಿ ಗೇರ್ ಬಾಕ್ಸ್ ಅನ್ನು ಆಯ್ಕೆಯಾಗಿ ನೀಡಬಹುದು.
ಇದರೊಂದಿಗೆ ಪ್ರಸ್ತುತ ಮಾರುಕಟ್ಟೆಯಲ್ಲಿ ಇರುವ ಮಾದರಿಯಂತೆ 1.2-ಲೀಟರ್ ಪೆಟ್ರೋಲ್ ಎಂಜಿನ್ ಮತ್ತು ಕಿಯಾ ಸೆಲ್ಟೋಸ್ನಿಂದ ಎರವಲು ಪಡೆದ 1.5-ಲೀಟರ್ ಡಿಟೂನ್ಡ್ ಡೀಸೆಲ್ ಎಂಜಿನ್ ಅನ್ನು ಕೂಡ ಅಳವಡಿಸಬಹುದು.
ಮೂರನೇ ತಲೆಮಾರಿನ ಹ್ಯುಂಡೈ ಐ20 ಹಲವಾರು ಹೊಸ ಫೀಚರ್ ಗಳೊಂದಿಗೆ ನಯ ಲುಕ್ ನಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಹೊಸ ಹ್ಯುಂಡೈ ಐ20 ಕಾರು ಭಾರತೀಯ ಮಾರುಕಟ್ಟೆಯಲ್ಲಿ ಗ್ರಾಹಕರನ್ನು ಸೆಳೆಯುವಲ್ಲಿ ಯಶ್ವಸಿಯಾಗಬಹುದೆಂದು ನಿರೀಕ್ಷಿಸುತ್ತೇವೆ.