Just In
- 11 hrs ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 12 hrs ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 13 hrs ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 13 hrs ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- News Karnataka LS Election 2024 LIVE: ಇಂದು ಮೊದಲ ಹಂತದ ಮತದಾನಕ್ಕೆ ಸಿದ್ಧವಾದ ರಾಜ್ಯದ 14 ಕ್ಷೇತ್ರಗಳು
- Movies Shobha Shetty ; ನಿಶ್ಚಿತಾರ್ಥದ ಬಗ್ಗೆ ಮಾಹಿತಿ ನೀಡಿದ ನಟಿ ಶೋಭಾ ಶೆಟ್ಟಿ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೊಸ ಐ20 ಕಾರಿನ ಸ್ಪಾಟ್ ಟೆಸ್ಟ್ ನಡೆಸಲು ಪುನಾರಂಭಿಸಿದ ಹ್ಯುಂಡೈ
ಜನಪ್ರಿಯ ಕಾರು ಉತ್ಪಾದನಾ ಕಂಪನಿಯಾದ ಹ್ಯುಂಡೈ ತನ್ನ ಹೊಸ ತಲೆಮಾರಿನ ಐ20 ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಹ್ಯುಂಡೈ ಕಂಪನಿಯು ಇದೀಗ ಹೊಸ ಐ20 ಕಾರಿನ ಸ್ಪಾಟ್ ಟೆಸ್ಟ್ ಪುನಾರಂಭಿಸಲಾಗಿದೆ.
ಹೊಸ ತಲೆಮಾರಿನ ಐ20 ಕಾರನ್ನು ದೆಹಲಿಯಲ್ಲಿ ಸ್ಪಾಟ್ ಟೆಸ್ಟ್ ನಡೆಸಲಾಗಿದೆ. ಹೊಸ ಐ20 ಕಾರು ಸ್ಪಾಟ್ ಟೆಸ್ಟ್ ನಡೆಸುತ್ತಿರುವ ಸ್ಪೈ ಚಿತ್ರಗಳನ್ನು ರಶ್ಲೇನ್ ಬಹಿರಂಗಪಡಿಸಿದೆ. ಈ ಹ್ಯುಂಡೈ ಕಾರಿನ ಮುಂಭಾಗದಲ್ಲಿರು ಕ್ಯಾಸ್ಕೇಡಿಂಗ್ ಗ್ರಿಲ್ ಅನ್ನು ಹೊಂದಿದೆ. ಹಿಂದಿನ ಐ20 ಮಾದರಿಗೆ ಹೋಲಿಸಿದರೆ ಹೆಡ್ ಲ್ಯಾಂಪ್ ಮತ್ತು ಸೈಡ್ ಫ್ರೋಪೈಲ್ ವಿನ್ಯಾಸವನ್ನು ನವೀಕರಿಸಲಾಗಿದೆ ದೊಡ್ಡ ಕ್ರೀಸ್ ಲೈನ್ ಗಳನ್ನು ಒಳಗೊಂಡಿದೆ. ಈ ಹೊಸ ಐ20 ಕಾರು ಸಾಕಷ್ಟು ಸ್ಪೋರ್ಟಿಯರ್ ಮತ್ತು ಸ್ಟೈಲಿಶ್ ಲುಕ್ ಅನ್ನು ಹೊಂದಿದೆ.
ಹೊಸ ಹ್ಯುಂಡೈ ಐ20 ಕಾರು ಈ ವರ್ಷದ ಹಬ್ಬದ ಸೀಸನ್ ನಲ್ಲಿ ಬಿಡುಗಡೆಯಾಗಲಿದೆ. ಆದರೆ ಹ್ಯುಂಡೈ ಕಂಪನಿಯು ಈ ಕಾರಿನ ಬಿಡುಗಡೆಯ ದಿನಾಂಕವನ್ನು ಬಹಿರಂಗಪಡಿಸಿಲ್ಲ. ಹೊಸ ಹುಂಡೈ ಐ20 ಕಾರಿನ ಬದಿಯ ಪಿಲ್ಲರ್ಗಳು ಕಪ್ಪು ಬಣ್ಣವನ್ನು ಹೊಂದಿದೆ.
MOST READ: ಹೊಸ ಐ30 ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಲು ಸಜ್ಜಾದ ಹ್ಯುಂಡೈ
ಇನ್ನು ಈ ಹೊಸ ಕಾರಿನಲ್ಲಿ ಎರಡು ಟೇಲ್ ಲ್ಯಾಂಪ್ಗಳನ್ನು ಅಳವಡಿಸಲಾಗಿದೆ. ವಿಡಬ್ಲ್ಯೂ ಟೈಗನ್ನಲ್ಲಿ ಇರುವಂತಹ ಕೆಂಪು ಇಲ್ಇಡಿ ಡಿಆರ್ಎಲ್ ಸ್ಟಾಪ್ ಲೈಟ್ ಹಿಂಭಾಗದಲ್ಲಿ ಟೇಲ್ಲೈಟ್ ಹೊಂದಿದೆ.
ಹೊಸ ಹ್ಯುಂಡೈ ಕಾರಿನ ಇಂಟಿರಿಯರ್ನಲ್ಲಿ 4 ಸ್ಫೋಕ್ ಸ್ಟೀಟಿಯರಿಂಗ್ ವ್ಹೀಲ್ ಅನ್ನು ಅಳವಡಿಸಲಾಗಿದೆ. ಇದು ಹೊಸ ಹ್ಯುಂಡೈ ಕ್ರೆಟಾ ಕಾರಿನಲ್ಲಿರುವ ಸ್ಟಿಟಿಯರಿಂಗ್ ಮಾದರಿಯಲ್ಲಿದೆ. ಹೊಸ ಹ್ಯುಂಡೈ ಐ20 ಕಾರಿನಲ್ಲಿ ಆಡಿಯೊ ಸಿಸ್ಟಂ, ಕ್ರೂಸ್ ಕಂಟ್ರೋಲ್ ಮತ್ತು ಫುಲ್-ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಒಳಗೊಂಡಿದೆ. ಜೊತೆಗೆ ಬ್ಲೂ ಲಿಂಕ್ ಟೆಕ್ನಾಲಜಿಯನ್ನು ಕೂಡ ಹೊಂದಿರಲಿದೆ.
MOST READ: ಭರ್ಜರಿಯಾಗಿ ಮಾರಾಟವಾಯ್ತು ಫೋಕ್ಸ್ವ್ಯಾಗನ್ ಟಿ-ರಾಕ್ ಎಸ್ಯುವಿ
ಈ ಹೊಸ ಕಾರಿನಲ್ಲಿ 10.25 ಇಂಚಿನ ಡಿಜಿಟಲ್ ಕ್ಲಸ್ಟರ್ ಅನ್ನು ಅಳವಡಿಸಲಾಗಿದೆ. ಈ ಕಾರಿನ ಇಂಟಿರಿಯರ್ನಲ್ಲಿ ಆ್ಯಪಲ್ ಕಾರ್ಪ್ಲೇ ಮತ್ತು ಆಂಡ್ರಾಯ್ಡ್ ಆಟೋ, ಹ್ಯುಂಡೈನ ಕನೆಕ್ಟಿವಿಟಿ ಸೂಟ್ ಮತ್ತು ಇತರ ಹಲವಾರು ಫೀಚರ್ಗಳನ್ನು ಹೊಂದಿದೆ. ಯುಎಸ್ಬಿ ಪೋರ್ಟ್ ಮತ್ತು ವೈರ್ಲೆಸ್ ಚಾರ್ಜಿಂಗ್ ಪ್ಯಾಡ್ ಅನ್ನು ಸಹ ಹೊಂದಿದೆ.
ಹೊಸ ಹ್ಯುಂಡೈ ಐ20 ಕಾರಿನಲ್ಲಿ ಹೊಸ 16 ಡ್ಯುಯಲ್ ಟೋನ್ ಅಲಾಯ್ ವ್ಹೀಲ್ಗಳು, ಇಂಟಿಗ್ರೇಟೆಡ್ ಟರ್ನ್ ಇಂಡಿಕೇಟರ್ಗಳೊಂದಿಗೆ ಸ್ಲಿಕ್ ಒಆರ್ವಿಎಂಗಳು ಮತ್ತು ಶಾರ್ಕ್ ಫಿನ್ ಆಂಟೆನಾವನ್ನು ಕೂಡ ಆಳವಡಿಸಲಾಗಿದೆ.
MOST READ: ಕರೋನಾ ಭೀತಿಯಿಂದ ಪಾತಾಳಕ್ಕೆ ಕುಸಿತ ಮಾರುತಿ ಸುಜುಕಿ ಕಾರುಗಳ ಮಾರಾಟ
ಗ್ರ್ಯಾಂಡ್ ಐ10 ನಿಯೋಸ್ ಕಾರಿನಲ್ಲಿರುವಂತಹ 1.0 ಲೀಟರ್ ಪೆಟ್ರೋಲ್ ಟರ್ಬೊ ಎಂಜಿನ್ ಅನ್ನು ಅಳವಡಿಸುವ ಸಾಧ್ಯತೆಗಳಿದೆ. ಈ ಎಂಜಿನ್ 100 ಬಿಹೆಚ್ಪಿ ಪವರ್ ಮತ್ತು 172 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ನೊಂದಿಗೆ 5 ಸ್ಫೀಡ್ ಮ್ಯಾನುವಲ್ ಗೇರ್ಬಾಕ್ಸ್ ಅನ್ನು ಅಳವಡಿಸಲಿದೆ.
ಇದರೊಂದಿಗೆ ಪ್ರಸ್ತುತ ಮಾರುಕಟ್ಟೆಯಲ್ಲಿ ಇರುವ ಮಾದರಿಯಂತೆ 1.2-ಲೀಟರ್ ಪೆಟ್ರೋಲ್ ಎಂಜಿನ್ ಮತ್ತು ಕಿಯಾ ಸೆಲ್ಟೋಸ್ನಿಂದ ಎರವಲು ಪಡೆದ 1.5-ಲೀಟರ್ ಡಿಟೂನ್ಡ್ ಡೀಸೆಲ್ ಎಂಜಿನ್ ಅನ್ನು ಹೊಂದಿರಲಿದೆ. ಜನಪ್ರಿಯ ಬಿಎಸ್-6 ಹ್ಯುಂಡೈ ಐ20 ಕಾರು ಬಿಡುಗಡೆಯಾದ ನಂತರ ಮಾರುತಿ ಸುಜುಕಿ ಕಂಪನಿಯ ಬಲೆನೊ, ಫೋರ್ಡ್ ಫ್ರೀಸ್ಟೈಲ್, ಟಾಟಾ ಆಲ್ಟ್ರೋಜ್ ಹಾಗೂ ಹೋಂಡಾ ಜಾಜ್ ಕಾರುಗಳಿಗೆ ಪೈಪೋಟಿ ನೀಡಲಿದೆ.