ವಿನೂತನ ವಿನ್ಯಾಸದೊಂದಿಗೆ ಅನಾವರಣಗೊಂಡ ನ್ಯೂ ಜನರೇಷನ್ ಕಿಯಾ ಕಾರ್ನಿವಾಲ್

ಕಿಯಾ ಮೋಟಾರ್ಸ್ ಕಂಪನಿಯು ತನ್ನ ಜನಪ್ರಿಯ ಎಂಪಿವಿ ಆವೃತ್ತಿಯಾದ ಕಾರ್ನಿವಾಲ್ ಕಾರಿನ ನ್ಯೂ ಜನರೇಷನ್ ಮಾದರಿಯನ್ನು ಬಿಡುಗಡೆಗೆ ಸಿದ್ದವಾಗಿದ್ದು, ಹೊಸ ಕಾರು ವಿನೂತನ ವಿನ್ಯಾಸದೊಂದಿಗೆ ಅನಾವರಣಗೊಂಡಿದೆ.

ಅನಾವರಣಗೊಂಡ ನ್ಯೂ ಜನರೇಷನ್ ಕಿಯಾ ಕಾರ್ನಿವಾಲ್

ಭಾರತದಲ್ಲಿ ಮಾರಾಟವಾಗುತ್ತಿರುವ ಕಾರ್ನಿವಾಲ್ ಕಾರು ವಿದೇಶಿ ಮಾರುಕಟ್ಟೆಗಳಲ್ಲಿ ಮೊಡೆನಾ ಹೆಸರಿನಲ್ಲಿ ಮಾರಾಟವಾಗುತ್ತಿದ್ದು, ನ್ಯೂ ಜನರೇಷನ್ ಮಾದರಿಯು 2021ರ ಆರಂಭದಲ್ಲಿ ಅಂತರ್‌ರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಬಿಡುಗಡೆಯಾಗಲಿದ್ದು, 2021ರ ಕೊನೆಯಲ್ಲಿ ಭಾರತದಲ್ಲಿ ಬಿಡುಗಡೆಯಾಗಲಿದೆ. ನ್ಯೂ ಜನರೇಷನ್ ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಕಾರ್ನಿವಾಲ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ತುಸು ದುಬಾರಿಯಾಗಿರಲಿದೆ.

ಅನಾವರಣಗೊಂಡ ನ್ಯೂ ಜನರೇಷನ್ ಕಿಯಾ ಕಾರ್ನಿವಾಲ್

ನ್ಯೂ ಜನರೇಷನ್ ಕಾರ್ನಿವಾಲ್ ಮಾದರಿಯು ಮುಂಭಾಗದ ವಿನ್ಯಾಸದಲ್ಲಿ ಭಾರೀ ಬದಲಾವಣೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದ್ದು, ಮಾರ್ಡನ್ ಡಿಸೈನ್‌ನೊಂದಿಗೆ ಸ್ಲಿಕ್ ಎಲ್‌ಇಡಿ ಹೆಡ್‌ಲ್ಯಾಂಪ್, ಇಂಟ್ರಾಗ್ರೆಟೆಡ್ ಎಲ್ಇಡಿ ಡಿಆರ್‌ಎಲ್ಎಸ್‌ಗಳನ್ನು ನೀಡಲಾಗಿದೆ.

ಅನಾವರಣಗೊಂಡ ನ್ಯೂ ಜನರೇಷನ್ ಕಿಯಾ ಕಾರ್ನಿವಾಲ್

ಆದರೆ ಕಾರಿನ ಒಳಭಾಗದಲ್ಲಿ ಬದಲಾವಣೆಗೊಂಡಿರುವ ವಿನ್ಯಾಸದ ಕುರಿತಾಗಿ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲವಾದರೂ ಹೊಸ ಕಾರು ಕೆಲವು ಬದಲಾವಣೆಗಳನ್ನು ಪಡೆದುಕೊಳ್ಳಬಹುದಾಗಿದ್ದು, ಪ್ರಸ್ತುತ ಮಾದರಿಗಿಂತಲೂ ಹೆಚ್ಚಿನ ಗುಣಮಟ್ಟದ ಫೀಚರ್ಸ್‌ಗಳೊಂದಿಗೆ ಗ್ರಾಹಕರನ್ನು ಸೆಳೆಯಲಿದೆ.

ಅನಾವರಣಗೊಂಡ ನ್ಯೂ ಜನರೇಷನ್ ಕಿಯಾ ಕಾರ್ನಿವಾಲ್

ಹಾಗೆಯೇ ನ್ಯೂ ಜನರೇಷನ್ ಮಾದರಿಯಲ್ಲಿ ಪ್ರಸ್ತುತ ಮಾರುಕಟ್ಟೆಯಲ್ಲಿರುವ 2.2-ಲೀಟರ್ ಟರ್ಬೋ ಡೀಸೆಲ್ ಎಂಜಿನ್ ಅನ್ನು ತೆಗೆದುಹಾಕಿ ಹೊಸ ಡೀಸೆಲ್ ಎಂಜಿನ್ ಜೊತೆಗೆ ಪೆಟ್ರೋಲ್ ಹೈಬ್ರಿಡ್ ಎಂಜಿನ್ ಆಯ್ಕೆಯನ್ನು ಸಹ ನೀಡಬಹುದಾದ ಸಾಧ್ಯತೆಗಳಿವೆ.

ಅನಾವರಣಗೊಂಡ ನ್ಯೂ ಜನರೇಷನ್ ಕಿಯಾ ಕಾರ್ನಿವಾಲ್

ಒಟ್ಟಿನಲ್ಲಿ ಹೊಸ ತಲೆಮಾರಿನ ಕಾರ್ನಿವಾಲ್ ಮಾದರಿಯೊಂದಿಗೆ ಎಂಪಿವಿ ಕಾರುಗಳ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿರುವ ಕಿಯಾ ಮೋಟಾರ್ಸ್ ಕಂಪನಿಯು ಭಾರತದಲ್ಲೂ ಸದ್ಯಕ್ಕೆ ಹೊಸ ಬದಲಾವಣೆಗೆ ಕಾರಣವಾಗಿದೆ.

ಅನಾವರಣಗೊಂಡ ನ್ಯೂ ಜನರೇಷನ್ ಕಿಯಾ ಕಾರ್ನಿವಾಲ್

ಪ್ರತಿಸ್ಪರ್ಧಿ ಕಾರು ಮಾದರಿಯಾದ ಟೊಯೊಟಾ ಇನೋವಾ ಕ್ರಿಸ್ಟಾ ಕಾರಿಗಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ ಮತ್ತು ಬೆಲೆ ಹೊಂದಿದ್ದರು ಎಂಪಿವಿ ಕಾರುಗಳ ಮಾರಾಟದಲ್ಲಿ ಉತ್ತಮ ಬೇಡಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.24.95 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು ರೂ. 33.95 ಲಕ್ಷ ಬೆಲೆ ಹೊಂದಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಅನಾವರಣಗೊಂಡ ನ್ಯೂ ಜನರೇಷನ್ ಕಿಯಾ ಕಾರ್ನಿವಾಲ್

ಕಾರ್ನಿವಾಲ್ ಕಾರಿನಲ್ಲಿ ಸದ್ಯಕ್ಕೆ ಕೇವಲ ಒಂದೇ ಎಂಜಿನ್ ಆಯ್ಕೆಯನ್ನು ನೀಡಲಾಗಿದ್ದು, 2.2-ಲೀಟರ್ ಫೋರ್ ಸಿಲಿಂಡರ್ ಡೀಸೆಲ್ ಎಂಜಿನ್ ಜೋಡಣೆ ಹೊಂದಿದೆ. ಪ್ರತಿ ವೆರಿಯೆಂಟ್‌ನಲ್ಲೂ 8-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಟ್ರಾನ್ಸ್‌ಮಿಷನ್ ನೀಡಲಾಗಿದ್ದು, 200-ಬಿಎಚ್‌ಪಿ, 440-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

ಅನಾವರಣಗೊಂಡ ನ್ಯೂ ಜನರೇಷನ್ ಕಿಯಾ ಕಾರ್ನಿವಾಲ್

ಈ ಮೂಲಕ ಮೈಲೇಜ್‌ನಲ್ಲೂ ಗಮನಸೆಳೆಯುವ ಕಾರ್ನಿವಾಲ್ ಕಾರು 2,200 ಕೆಜಿ ತೂಕ ಹೊಂದಿದ್ದು, ಎಆರ್‌ಎಐ ಸಂಸ್ಥೆಯು ಪ್ರಮಾಣಿಕರಿಸಿದಂತೆ ಪ್ರತಿ ಲೀಟರ್ ಡೀಸೆಲ್‌ಗೆ ಗರಿಷ್ಠ 13.9 ಕಿ.ಮೀ ಮೈಲೇಜ್ ನೀಡಲಿದೆ.

MOST READ: ಹೊಸ ಪೊಲೊ ಕಾರು ವಿತರಣೆ ಮಾಡಿದ ಎರಡೇ ನಿಮಿಷದಲ್ಲಿ ನಡೆಯಿತು ಅಪಘಾತ..!

ಅನಾವರಣಗೊಂಡ ನ್ಯೂ ಜನರೇಷನ್ ಕಿಯಾ ಕಾರ್ನಿವಾಲ್

ಹೊಸ ಕಾರಿನಲ್ಲಿರುವ ಪ್ರೀಮಿಯಂ ತಾಂತ್ರಿಕ ಸೌಲಭ್ಯಗಳು ಮತ್ತು ಐಷಾರಾಮಿ ವಿನ್ಯಾಸದಿಂದಾಗಿ ಕಾರ್ನಿವಾಲ್ ಕಾರು ಆವೃತ್ತಿಯನ್ನು 'ಲಗ್ಷುರಿ ಎಂಪಿವಿ' ವಿಭಾಗದಲ್ಲಿ ಗುರುತಿಸಲಾಗಿದ್ದು, ಸಿಗ್ನೆಚರ್ ಟೈಗರ್ ನೋಸ್ ಗ್ರಿಲ್ ಮತ್ತು ಸ್ವೆಪ್ಟ್ ಆಫ್ ಕ್ರೋಮ್ , ಸ್ವೆಪ್ಟ್‌ಬ್ಯಾಕ್ ಎಲ್‌ಇಡಿ ಪ್ರೋಜೆಕ್ಟರ್, ಬಂಪರ್ ರಕ್ಷಣೆಗಾಗಿ ಸಿಲ್ವರ್ ಸ್ಕಫ್ ಪ್ಲೇಟ್ ಜೋಡಣೆ ಹೊಂದಿರುವುದು ಪ್ರಮುಖ ಆಕರ್ಷಣೆಯಾಗಿದೆ.

Most Read Articles

Kannada
English summary
Kia Motors have released the first set of images unveiling the 2021 Carnival MPV for the global markets. Read in Kannada.
Story first published: Wednesday, June 24, 2020, 19:19 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X