2021ಕ್ಕೆ ಮುಂದೂಡಿಕೆಯಾದ ನ್ಯೂ ಜನರೇಷನ್ ಸ್ಕಾರ್ಪಿಯೋ ಬಿಡುಗಡೆ

ಆಟೋ ಉದ್ಯಮವು ಮಾಹಾಮಾರಿ ಕರೋನಾ ವೈರಸ್‌ನಿಂದಾಗಿ ಭಾರೀ ಪ್ರಮಾಣದ ನಷ್ಟ ಅನುಭವಿಸುತ್ತಿದ್ದು, ನಿಯಂತ್ರಣಕ್ಕೆ ಬಾರದ ವೈರಸ್ ಅನ್ನು ಮಟ್ಟ ಹಾಕಲು ಇದೀಗ ಮತ್ತೊಮ್ಮೆ ಅನಿವಾರ್ಯವಾಗಿ ದೇಶಾದ್ಯಂತ ಲಾಕ್‌‌ಡೌನ್ ಮಾಡಲಾಗುತ್ತಿರುವುದು ಆಟೋ ಕಂಪನಿಗಳಿಗೆ ಭಾರೀ ಹೊಡೆತ ನೀಡಲಿದೆ.

2021ಕ್ಕೆ ಮುಂದೂಡಿಕೆಯಾದ ನ್ಯೂ ಜನರೇಷನ್ ಸ್ಕಾರ್ಪಿಯೋ ಬಿಡುಗಡೆ

ವೈರಸ್ ಭೀತಿಯು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಪ್ರಸ್ತುತ ಮಾರುಕಟ್ಟೆಯಲ್ಲಿರುವ ವಾಹನ ಮಾದರಿಗಳನ್ನು ಹೊರತುಪಡಿಸಿ ಹೊಸ ವಾಹನಗಳ ಬಿಡುಗಡೆಯನ್ನು ಮುಂದೂಡಿಕೆ ಮಾಡಲಾಗುತ್ತಿದ್ದು, ಕೆಲ ಹೊಸ ವಾಹನ ಮಾದರಿಗಳ ಬಿಡುಗಡೆಯ ಯೋಜನೆಯನ್ನೇ ಕೈಬಿಡಲಾಗುತ್ತಿದೆ. ಮಹೀಂದ್ರಾ ಕೂಡಾ ಲಾಕ್‌ಡೌನ್ ಸಂಕಷ್ಟದಿಂದಾಗಿ ಕೆಲವು ಹೊಸ ವಾಹನಗಳ ಬಿಡುಗಡೆಯನ್ನು ಮುಂದೂಡಿಕೆ ಮಾಡಿದ್ದು, ಇದೇ ವರ್ಷ ಜೂನ್ ಮತ್ತು ಜುಲೈ ಅವಧಿಯಲ್ಲಿ ಬಿಡುಗಡೆಯಾಗಬೇಕಿದ್ದ ನ್ಯೂ ಜನರೇಷನ್ ಸ್ಕಾರ್ಪಿಯೋ, ಥಾರ್ ಮತ್ತು ಎಕ್ಸ್‌ಯುವಿ500 ಕಾರುಗಳ ಬಿಡುಗಡೆಯು ಮುಂದೂಡಿಕೆಯಾಗಿದೆ.

2021ಕ್ಕೆ ಮುಂದೂಡಿಕೆಯಾದ ನ್ಯೂ ಜನರೇಷನ್ ಸ್ಕಾರ್ಪಿಯೋ ಬಿಡುಗಡೆ

ಹೊಸ ಕಾರುಗಳ ಬಿಡುಗಡೆಯನ್ನು ಇದೇ ವರ್ಷದ ಕೊನೆಯಲ್ಲಿ ಇಲ್ಲವೇ 2021ರ ಆರಂಭದಲ್ಲಿ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿರುವ ಮಹೀಂದ್ರಾ ಕಂಪನಿಯು ಸದ್ಯ ಬಿಎಸ್-6 ಕಾರು ಮಾರಾಟ ಮೇಲೆ ಮಾತ್ರವೇ ಗಮನಹರಿಸುತ್ತಿದೆ.

2021ಕ್ಕೆ ಮುಂದೂಡಿಕೆಯಾದ ನ್ಯೂ ಜನರೇಷನ್ ಸ್ಕಾರ್ಪಿಯೋ ಬಿಡುಗಡೆ

ಸದ್ಯಕ್ಕೆ ಎಕ್ಸ್‌ಯುವಿ500, ಸ್ಕಾರ್ಪಿಯೋ ಮತ್ತು ಥಾರ್ ಕಾರುಗಳ 2020ರ ಮಾದರಿಗಳನ್ನು ಬಿಎಸ್-6 ಎಂಜಿನ್‌ನೊಂದಿಗೆ ಮಾತ್ರವೇ ಬಿಡುಗಡೆ ಮಾಡಲಾಗಿದ್ದು, ಹೊಸ ವಿನ್ಯಾಸ ಮತ್ತು ವಿವಿಧ ಎಂಜಿನ್ ಆಯ್ಕೆ ಹೊಂದಿದ್ದ ನ್ಯೂ ಜನರೇಷನ್ ಮಾದರಿಗಳ ಬಿಡುಗಡೆಯನ್ನು ಮುಂದೂಡಲಾಗಿದೆ.

2021ಕ್ಕೆ ಮುಂದೂಡಿಕೆಯಾದ ನ್ಯೂ ಜನರೇಷನ್ ಸ್ಕಾರ್ಪಿಯೋ ಬಿಡುಗಡೆ

ಮಹೀಂದ್ರಾ ನ್ಯೂ ಜನರೇಷನ್ ಕಾರು ಮಾದರಿಗಳು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಬಿಎಸ್-6 ಆವೃತ್ತಿಗಳಿಂತಲೂ ಭಾರೀ ಬದಲಾವಣೆಯೊಂದಿಗೆ ರಸ್ತೆಗಿಳಿಯುತ್ತಿದ್ದು, ಎಂಜಿನ್ ಆಯ್ಕೆಯಲ್ಲೂ ಸಾಕಷ್ಟು ಬದಲಾವಣೆಗಳನ್ನು ಪಡೆದುಕೊಂಡಿರಲಿವೆ.

2021ಕ್ಕೆ ಮುಂದೂಡಿಕೆಯಾದ ನ್ಯೂ ಜನರೇಷನ್ ಸ್ಕಾರ್ಪಿಯೋ ಬಿಡುಗಡೆ

ಹೊಸ ಸ್ಕಾರ್ಪಿಯೋ ಕೂಡಾ ಈ ಬಾರಿ ಹೆಚ್ಚಿನ ಮಟ್ಟದ ಪರ್ಫಾಮೆನ್ಸ್‌ಗೆ ಪೂರಕವಾಗ 2.0-ಲೀಟರ್ ಟರ್ಬೋ ಡೀಸೆಲ್ ಎಂಜಿನ್ ಪಡೆದುಕೊಳ್ಳಲಿದ್ದು, ಮ್ಯಾನುವಲ್ ಜೊತೆಗೆ ಹೊಸದಾಗಿ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ ಆಲ್ ವೀಲ್ಹ್ ಡ್ರೈವ್ ಸಿಸ್ಟಂ ಹೊಂದಿರಲಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

2021ಕ್ಕೆ ಮುಂದೂಡಿಕೆಯಾದ ನ್ಯೂ ಜನರೇಷನ್ ಸ್ಕಾರ್ಪಿಯೋ ಬಿಡುಗಡೆ

ಜೊತೆಗೆ ಬಿಎಸ್-6 ವೈಶಿಷ್ಟ್ಯತೆಗಳಿಂದಾಗಿ ಮಹೀಂದ್ರಾ ನ್ಯೂ ಜನರೇಷನ್ ಕಾರುಗಳಲ್ಲಿ ಈ ಬಾರಿ ಹಲವಾರು ಬದಲಾವಣೆಗಳಾಗಿದ್ದು, ಹಲವಾರು ಹೊಸ ಸುರಕ್ಷಾ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.

2021ಕ್ಕೆ ಮುಂದೂಡಿಕೆಯಾದ ನ್ಯೂ ಜನರೇಷನ್ ಸ್ಕಾರ್ಪಿಯೋ ಬಿಡುಗಡೆ

ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು(ಟಾಪ್ ಎಂಡ್‌ಗಳಲ್ಲಿ), ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಆಯ್ದ ವೆರಿಯೆಂಟ್‌ಗಳಲ್ಲಿ ಕ್ರೂಸ್ ಕಂಟ್ರೋಲ್, ಸನ್‌ರೂಫ್, ರೂಫ್ ರೈಲ್ಸ್, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಫಾಗ್ ಲ್ಯಾಂಪ್, ಟರ್ನ್ ಇಂಡಿಕೇಟಕ್ ಲೈಟ್, ಸಿಲ್ವರ್ ಸ್ಕೀಡ್ ಪ್ಲೇಟ್ ಸೌಲಭ್ಯವಿದೆ.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ

2021ಕ್ಕೆ ಮುಂದೂಡಿಕೆಯಾದ ನ್ಯೂ ಜನರೇಷನ್ ಸ್ಕಾರ್ಪಿಯೋ ಬಿಡುಗಡೆ

ಇದಲ್ಲದೆ ರಿಯರ್ ಎಸಿ ವೆಂಟ್ಸ್, ಲೆದರ್ ಸೀಟುಗಳು, 6 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟು ಮತ್ತು ಒಂದೇ ಸೂರಿನಡಿ ವಿವಿಧ ಮಾಹಿತಿಗಳನ್ನು ನೀಡಬಲ್ಲ ಟಚ್ ಸ್ಕ್ರಿನ್ ಇನ್ಪೋಟೈನ್‌ಟೆಂಟ್ ಸಿಸ್ಟಂ ಜೋಡಣೆ ಮಾಡಲಾಗಿದೆ.

Article Published On: Saturday, July 18, 2020, 11:36 [IST]
English summary
Next-gen Mahindra Scorpio Launching 2021. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+