2020ರ ಥಾರ್ ಕಾರು ಮಾದರಿಗಾಗಿ ಹೊಸ ಆಕ್ಸೆಸರಿಸ್ ಪ್ಯಾಕೇಜ್ ಬಿಡುಗಡೆ ಮಾಡಿದ ಮಹೀಂದ್ರಾ

ಮಹೀಂದ್ರಾ ಕಂಪನಿಯು ನ್ಯೂ ಜನರೇಷನ್ ಥಾರ್ ಎಸ್‌ಯುವಿ ಮೂಲಕ ಆಫ್ ರೋಡ್ ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಹೊಸ ಕಾರಿನ ತಾಂತ್ರಿಕ ಅಂಶಗಳನ್ನು ಹೆಚ್ಚಿಸಲು ಕಂಪನಿಯೇ ಹೆಚ್ಚುವರಿ ಆಕ್ಸೆಸರಿಸ್‌ ಪ್ಯಾಕೇಜ್ ಮಾರಾಟ ಮಾಡುತ್ತಿದೆ.

ಥಾರ್ ಆಕ್ಸೆಸರಿಸ್ ಪ್ಯಾಕೇಜ್ ಬಿಡುಗಡೆ ಮಾಡಿದ ಮಹೀಂದ್ರಾ

ಹೊಸ ಥಾರ್ ಕಾರು ಮಾದರಿಯು ಈ ಬಾರಿ ಹಲವಾರು ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದ್ದು, ನ್ಯೂ ಜನರೇಷನ್ ಥಾರ್ ಕಾರು ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಎಎಕ್ಸ್ ಮತ್ತು ಎಲ್ಎಕ್ಸ್ ಎನ್ನುವ ಎರಡು ಮಾದರಿಗಳಲ್ಲಿ ಖರೀದಿಗೆ ಲಭ್ಯವಿದೆ. ಆಸಕ್ತ ಗ್ರಾಹಕರು ಆಫ್ ರೋಡ್ ಎಸ್‌ಯುವಿ ಮಾದರಿಗಾಗಿ ಹೆಚ್ಚುವರಿ ಪ್ಯಾಕೇಜ್‌ನೊಂದಿಗೆ ಮತ್ತಷ್ಟು ಪ್ರೀಮಿಯಂ ಮತ್ತು ಸೆಫ್ಟಿ ಫೀಚರ್ಸ್‌ಗಳನ್ನು ಪಡೆದುಕೊಳ್ಳಬಹುದಾಗಿದ್ದು, ಮಹೀಂದ್ರಾ ಕಂಪನಿಯೇ ಆಫ್ಟರ್ ಮಾರ್ಕೆಟ್ ಆಕ್ಸೆಸರಿಸ್‌ಗಳನ್ನು ಜೋಡಣೆ ಮಾಡುತ್ತದೆ.

ಥಾರ್ ಆಕ್ಸೆಸರಿಸ್ ಪ್ಯಾಕೇಜ್ ಬಿಡುಗಡೆ ಮಾಡಿದ ಮಹೀಂದ್ರಾ

ಆಫ್ಟರ್ ಮಾರ್ಕೆಟ್ ಆಕ್ಸೆಸರಿಸ್ ಪ್ಯಾಕೇಜ್ ಮೂಲಕ ಮಹೀಂದ್ರಾ ಕಂಪನಿಯು ಥಾರ್ ಮಾಲೀಕತ್ವಕ್ಕೆ ಮತ್ತಷ್ಟು ಮೆರಗು ನೀಡುತ್ತಿದ್ದು, ಹೊಸ ಆಕ್ಸೆಸರಿಸ್ ಪ್ಯಾಕೇಜ್‌ನಲ್ಲಿ ಸ್ಟೈಲಿಷ್, ಕಂಫರ್ಟ್, ಟೆಕ್ನಾಲಜಿ ಮತ್ತು ಸೆಫ್ಟಿ ಫೀಚರ್ಸ್‌‌ಗಳನ್ನು ಆಕರ್ಷಕ ಬೆಲೆಯಲ್ಲಿ ಬಿಡುಗಡೆ ಮಾಡಿದೆ.

ಥಾರ್ ಆಕ್ಸೆಸರಿಸ್ ಪ್ಯಾಕೇಜ್ ಬಿಡುಗಡೆ ಮಾಡಿದ ಮಹೀಂದ್ರಾ

ಆಫ್ಟರ್ ಮಾರ್ಕೆಟ್ ಆಕ್ಸೆಸರಿಸ್ ಹೊರತುಪಡಿಸಿ ಥಾರ್ ಕಾರು ಮಾದರಿಯಲ್ಲಿ ಸೆವೆನ್ ಸ್ಲಾಟ್ ಗ್ರಿಲ್, ವೃತ್ತಾಕಾರವಾದ ಹೆಡ್‌ಲ್ಯಾಂಪ್, 18-ಇಂಚಿನ ಆಕರ್ಷಕ ಅಲಾಯ್ ವೀಲ್ಹ್, ಡ್ಯುಯಲ್ ಟೋನ್ ಬಂಪರ್, ಸ್ಕಫ್ ಪ್ಲೇಟ್, ಬಾಕ್ಸಿ ಮಾದರಿಯಲ್ಲಿರುವ ಟೈಲ್ ಲೈಟ್‌ನೊಂದಿಗೆ ಮಾರ್ಡನ್ ಶೈಲಿ ಪಡೆದುಕೊಂಡಿದೆ.

ಥಾರ್ ಆಕ್ಸೆಸರಿಸ್ ಪ್ಯಾಕೇಜ್ ಬಿಡುಗಡೆ ಮಾಡಿದ ಮಹೀಂದ್ರಾ

ಲ್ಯಾಡರ್-ಫ್ರೇಮ್ ಚಾರ್ಸಿ ಜೊತೆಗೆ ಹೊಸ ಸಸ್ಪೆಂಷನ್‌ ಸೌಲಭ್ಯವು ಹೊಸ ಥಾರ್ ಕಾರಿನ ಗುಣಮಟ್ಟ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿದ್ದು, ಒಳಭಾಗದ ಸೌಲಭ್ಯಗಳು ಪ್ರಸ್ತುತ ಮಾದರಿಗಿಂತಲೂ ಹೆಚ್ಚು ಪ್ರೀಮಿಯಂ ಮತ್ತು ಮಾರ್ಡನ್ ವಿನ್ಯಾಸಗಳನ್ನು ಹೊಂದಿವೆ. ಆಕರ್ಷಕ ಡ್ಯಾಶ್‌ಬೋರ್ಡ್‌ನೊಂದಿಗೆ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋಗೆ ಸರ್ಪೋಟ್ ಮಾಡಬಲ್ಲ 7-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಎಲ್ಲಾ ಮಾದರಿಯ ಹವಾಗುಣವನ್ನು ತಡೆಯಬಲ್ಲ ರೂಫ್ ಮೌಂಟೆಡ್ ಆಡಿಯೋ ಸ್ಪಿಕರ್ಸ್, ಮಲ್ಟಿ ಕಲರ್ ಇನ್ಫಾಮೆಷನ್ ಡಿಸ್‌ಪ್ಲೇ ಮತ್ತು ಸ್ಟೀರಿಂಗ್ ಮೌಟೆಂಟ್ ಕಂಟ್ರೋಲ್ ಸೌಲಭ್ಯ ನೀಡಲಾಗಿದೆ.

ಥಾರ್ ಆಕ್ಸೆಸರಿಸ್ ಪ್ಯಾಕೇಜ್ ಬಿಡುಗಡೆ ಮಾಡಿದ ಮಹೀಂದ್ರಾ

ಜೊತೆಗೆ 50:50 ಅನುಪಾತದ ರಿಯರ್ ಸೀಟುಗಳಲ್ಲೂ ಮಡಿಕೆ ಮಾಡಬಹುದಾದ ಸೌಲಭ್ಯ ನೀಡಲಾಗಿದ್ದು, ಎಎಕ್ಸ್ ವೆರಿಯೆಂಟ್‌ನಲ್ಲಿ ಡೀಸೆಲ್ ಮ್ಯಾನುವಲ್ ಮತ್ತು ಪೆಟ್ರೋಲ್ ಮ್ಯಾನುವಲ್ ಮಾದರಿಯನ್ನು ಮತ್ತು ಎಲ್ಎಕ್ಸ್ ಮಾದರಿಯಲ್ಲಿ ಆಟೋಮ್ಯಾಟಿಕ್ ಮಾದರಿಗಳೊಂದಿಗೆ ಕನ್ವರ್ಟಿಬಲ್ ಮತ್ತು ಹಾರ್ಡ್ ಟಾಪ್ ಆಯ್ಕೆ ನೀಡಲಾಗಿದೆ.

ಥಾರ್ ಆಕ್ಸೆಸರಿಸ್ ಪ್ಯಾಕೇಜ್ ಬಿಡುಗಡೆ ಮಾಡಿದ ಮಹೀಂದ್ರಾ

ಹೊಸ ಥಾರ್ ಕಾರು ಮಾದರಿಯಲ್ಲಿ ಬಿಎಸ್-6 ಎಂಜಿನ್ ಪ್ರೇರಿತ 2.2-ಲೀಟರ್ ಡೀಸೆಲ್ ಎಂಜಿನ್ ಮತ್ತು ಹೊಸದಾಗಿ ಅಭಿವೃದ್ದಿಗೊಳಿಸಲಾದ 2.0-ಲೀಟರ್ ಎಂ-ಸ್ಟಾಲಿನ್ ಪೆಟ್ರೋಲ್ ಎಂಜಿನ್ ನೀಡಲಾಗಿದ್ದು, ಎರಡು ಎಂಜಿನ್ ಮಾದರಿಗಳಲ್ಲೂ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ನೀಡಲಾಗಿದೆ.

ಥಾರ್ ಆಕ್ಸೆಸರಿಸ್ ಪ್ಯಾಕೇಜ್ ಬಿಡುಗಡೆ ಮಾಡಿದ ಮಹೀಂದ್ರಾ

ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಹಲವಾರು ಸೆಫ್ಟಿ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದ್ದು, ಎರಡು ಎಂಜಿನ್ ಆಯ್ಕೆಗಳಲ್ಲೂ 4x4 ಡ್ರೈವ್ ಸಿಸ್ಟಂ, ಕ್ರೂಸ್ ಕಂಟ್ರೋಲ್, 255/65 18-ಇಂಚಿನ ಆಲ್ ಟೆರೆನ್ ಟೈರ್ಸ್, ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್, ಹಿಲ್ ಸ್ಟಾರ್ಟ್ ಅಸಿಸ್ಟ್, ರೋಲ್ ಓವರ್ ಮಿಟಿಗೆಷನ್, ತ್ರೀ ಪಾಯಿಂಟ್ ಸಿಲ್ಟ್ ಬೆಲ್ಟ್, ರಿಯರ್ ವ್ಯೂ ಕ್ಯಾಮೆರಾ ಜೋಡಿಸಲಾಗಿದೆ.

MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಥಾರ್ ಆಕ್ಸೆಸರಿಸ್ ಪ್ಯಾಕೇಜ್ ಬಿಡುಗಡೆ ಮಾಡಿದ ಮಹೀಂದ್ರಾ

ಹಾಗೆಯೇ ಎಲ್ಇಡಿ ಡಿಆರ್‌ಎಲ್ ಫಾಗ್ ಲ್ಯಾಂಪ್ಸ್, ಎಂಟು ಹಂತಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ಆಟೋ ಎಸಿ, ಇಎಸ್‌ಪಿ ಮತ್ತು 226-ಎಂಎಂ ಗ್ರೌಂಡ್ ಕ್ಲಿಯೆರೆನ್ಸ್‌ನೊಂದಿಗೆ ಆಫ್ ರೋಡ್‌ನಲ್ಲಿ ಮತ್ತಷ್ಟು ಗಮನಸೆಳೆಯಲಿದೆ.

ಥಾರ್ ಆಕ್ಸೆಸರಿಸ್ ಪ್ಯಾಕೇಜ್ ಬಿಡುಗಡೆ ಮಾಡಿದ ಮಹೀಂದ್ರಾ

ಇನ್ನು ಗ್ರಾಹಕರ ಬೇಡಿಕೆಯೆಂತೆ ಥಾರ್ ಆರಂಭಿಕ ಆವೃತ್ತಿಗಳಾದ ಎಎಕ್ಸ್ ಪೆಟ್ರೋಲ್ ಸ್ಟ್ಯಾಂಡರ್ಡ್ ಸಿಕ್ಸ್ ಸೀಟರ್, ಎಎಕ್ಸ್ ಸಿಕ್ಸ್ ಸೀಟರ್ ಸಾಫ್ಟ್ ಟಾಪ್ ಮತ್ತು ಎಎಕ್ಸ್ ಸಿಕ್ಸ್ ಸೀಟರ್ ಡೀಸೆಲ್ ಸಾಫ್ಟ್ ಟಾಪ್ ಮಾದರಿಗಳನ್ನು ಸ್ಥಗಿತಗೊಳಿಸಿರುವ ಕಂಪನಿಯು ಹೈ ಎಂಡ್ ಮಾದರಿಗಳ ಮಾರಾಟದ ಮೇಲೆ ಹೆಚ್ಚು ಗಮನಹರಿಸಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಥಾರ್ ಆಕ್ಸೆಸರಿಸ್ ಪ್ಯಾಕೇಜ್ ಬಿಡುಗಡೆ ಮಾಡಿದ ಮಹೀಂದ್ರಾ

ವೆರಿಯೆಂಟ್ ಬದಲಾವಣೆ ನಂತರ ಥಾರ್ ಕಾರು ಆರಂಭಿಕ ಆವೃತ್ತಿಯು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11.90 ಲಕ್ಷದಿಂದ ಟಾಪ್ ಮಾದರಿಯು ರೂ. 12.95 ಲಕ್ಷ ಬೆಲೆ ಪಡೆದುಕೊಂಡಿದೆ.

Article Published On: Tuesday, December 15, 2020, 19:27 [IST]
English summary
2020 Mahindra Thar Gets New List Of Official Accessories. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+