Just In
- 54 min ago
ಪೊಲೊ ಹ್ಯಾಚ್ಬ್ಯಾಕ್ ಮತ್ತು ವೆಂಟೊ ಸೆಡಾನ್ ಕಾರುಗಳ ಖರೀದಿ ಮೇಲೆ ಹೊಸ ವರ್ಷದ ಆಫರ್
- 1 hr ago
ದಿಢೀರನೆ ಕೈಕೊಟ್ಟ ಬ್ರೇಕ್, 3 ಕಿ.ಮೀ ರಿವರ್ಸ್ ಗೇರಿನಲ್ಲಿ ಸಾಗಿದ ಟ್ರಕ್ ಚಾಲಕ
- 2 hrs ago
ಕೈಗೆಟುಕುವ ದರದಲ್ಲಿ ಟಿವಿಎಸ್ ಎಕ್ಸ್ಎಲ್100 ವಿನ್ನರ್ ಎಡಿಷನ್ ಬಿಡುಗಡೆ
- 3 hrs ago
ಭಾರತದಲ್ಲಿ ಅತಿದೊಡ್ಡ ಮಲ್ಟಿ ಬ್ರಾಂಡ್ ಕಾರ್ ಸರ್ವಿಸ್ ಸೆಂಟರ್ ತೆರೆದ ಬಾಷ್
Don't Miss!
- News
ಕೊವ್ಯಾಕ್ಸಿನ್ ಬಗ್ಗೆ ಎಚ್ಚರ: ಲಸಿಕೆಯು ಯಾರಿಗೆ ಸೂಕ್ತ, ಯಾರಿಗೆ ಸೂಕ್ತವಲ್ಲ?
- Finance
34,000 ರುಪಾಯಿ ತನಕ ಕಾರುಗಳ ಬೆಲೆ ಏರಿಕೆ ಮಾಡಿದ ಮಾರುತಿ ಸುಜುಕಿ
- Sports
ಭಾರತ vs ಆಸ್ಟ್ರೇಲಿಯಾ: ಧೋನಿ ದಾಖಲೆ ಮುರಿದು 1000 ಟೆಸ್ಟ್ ರನ್ ಗಳಿಸಿದ ರಿಷಭ್ ಪಂತ್
- Lifestyle
ಕೂದಲು ಬೇಗನೆ ಬೆಳ್ಳಗಾಗುವುದು: ಇದು ನಿಮ್ಮ ದೇಹದ ಕುರಿತು ಏನು ಸೂಚಿಸುತ್ತದೆ?
- Education
Indian Forest Service Recruitment 2021: 70 ಡಿಐಜಿಎಫ್/ಎಐಜಿಎಫ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ಚಿತ್ರೀಕರಣ ವೇಳೆ ಅಸ್ವಸ್ಥ: ನಟಿ ಅಲಿಯಾ ಭಟ್ ಆಸ್ಪತ್ರೆಗೆ ದಾಖಲು
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಡಿಸೆಂಬರ್ 1ರಿಂದ ಥಾರ್ ಎಸ್ಯುವಿ ಬೆಲೆ ಹೆಚ್ಚಳಕ್ಕೆ ನಿರ್ಧರಿಸಿದ ಮಹೀಂದ್ರಾ
ಮಹೀಂದ್ರಾ ಕಂಪನಿಯು ಕಳೆದ ಅಕ್ಟೋಬರ್ ಮೊದಲ ವಾರದಲ್ಲಿ ತನ್ನ ಬಹುನೀರಿಕ್ಷಿತ ಥಾರ್ ಕಾರು ಮಾದರಿಯನ್ನು ಹೊಸ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆ ಮಾಡುವ ಮೂಲಕ ಹಲವು ಹೊಸ ದಾಖಲೆಗಳಿಗೆ ಕಾರಣವಾಗಿದ್ದು, ಹೊಸ ಕಾರು ಖರೀದಿಗೆ ಇದುವರೆಗೆ ಸುಮಾರು 25 ಸಾವಿರಕ್ಕೂ ಹೆಚ್ಚು ಬುಕ್ಕಿಂಗ್ ಪಡೆದುಕೊಂಡಿದೆ.

ಕ್ರ್ಯಾಶ್ ಟೆಸ್ಟಿಂಗ್ನಲ್ಲಿ 4 ಸ್ಟಾರ್ ರೇಟಿಂಗ್ ಪಡೆದುಕೊಳ್ಳುವ ಮೂಲಕ ಸುರಕ್ಷಿತ ಕಾರು ಮಾದರಿಯಾಗಿರುವ ಗುರುತಿಸಿಕೊಂಡ ನಂತರ ಹೊಸ ಥಾರ್ ಕಾರಿಗಾಗಿ ಮತ್ತಷ್ಟು ಬೇಡಿಕೆ ಪಡೆದುಕೊಂಡಿರುವ ಮಹೀಂದ್ರಾ ಕಂಪನಿಯು ಬೇಡಿಕೆಗೆ ಪೂರಕವಾಗಿ ಉತ್ಪಾದನಾ ಪ್ರಮಾಣವನ್ನು ಹೆಚ್ಚಳ ಮಾಡಿದೆ. ಥಾರ್ ಕಾರು ಖರೀದಿಗಾಗಿ ಬುಕ್ಕಿಂಗ್ ನಂತರ ಹೊಸ ಕಾರು ಪಡೆದುಕೊಳ್ಳಲು ಕನಿಷ್ಠ 6 ರಿಂದ 9 ತಿಂಗಳು ಕಾಯಲೇಬೇಕಿದ್ದು, ಇದರ ನಡುವೆ ಕಂಪನಿಯು ಗ್ರಾಹಕರಿಗೆ ಬೆಲೆ ಏರಿಕೆಯ ಶಾಕ್ ನೀಡಿದೆ.

ಥಾರ್ ಕಾರಿನ ಬೆಲೆ ಹೆಚ್ಚಳ ಕುರಿತು ಇದುವರೆಗೂ ಅಧಿಕೃತ ಮಾಹಿತಿಯಿಲ್ಲವಾದರೂ ಡೀಲರ್ಸ್ ಮಾಹಿತಿಗಳ ಪ್ರಕಾರ ಥಾರ್ ಕಾರಿನ ಬೆಲೆಯು ಡಿಸೆಂಬರ್ 1ರಿಂದ ಹೆಚ್ಚಳವಾಗುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ವೆರಿಯೆಂಟ್ಗಳಿಗೆ ಅನುಗುಣವಾಗಿ ರೂ. 40 ಸಾವಿರ ತನಕ ಹೆಚ್ಚಳವಾಗುವ ಬಗ್ಗೆ ಮಾಹಿತಿ ನೀಡಿದ್ದಾರೆ.

ಆದರೆ ನಾಳೆ ಪ್ರಕಟವಾಗುವ ಹೊಸ ಬೆಲೆ ಪಟ್ಟಿಯಲ್ಲಿ ಥಾರ್ ಕಾರಿನ ಬೆಲೆ ಹೆಚ್ಚಳ ನಿಖರ ಮಾಹಿತಿ ಲಭ್ಯವಾಗಲಿದ್ದು, ಬೆಲೆ ಹೆಚ್ಚಳವು ಮುಂದಿನ ಸೆಪ್ಟೆಂಬರ್ ಅಥವಾ ಅಕ್ಟೋಬರ್ ಹೊತ್ತಿಗೆ ಕಾರು ಖರೀದಿಸುವ ಗ್ರಾಹಕರಿಗೆ ಅನ್ವಯವಾಗಲಿದೆ.

ಯಾಕೆಂದರೆ ಥಾರ್ ಕಾರು ಖರೀದಿಗಾಗಿ ಈಗಾಗಲೇ ಮುಂದಿನ ಹತ್ತು ತಿಂಗಳಿಗಾಗಿ ಬುಕ್ಕಿಂಗ್ ಭರ್ತಿಯಾಗಿದ್ದು, ಈಗಾಗಲೇ ಬುಕ್ಕಿಂಗ್ ಸಲ್ಲಿಸಿರುವ ಗ್ರಾಹಕರಿಗೆ ಬೆಲೆ ಹೆಚ್ಚಳವು ಅನ್ವಯವಾಗುವುದಿಲ್ಲ ಎನ್ನಲಾಗಿದೆ. ಹೀಗಾಗಿ ಹೊಸದಾಗಿ ಬುಕ್ಕಿಂಗ್ ಸಲ್ಲಿಸುವ ಗ್ರಾಹಕರಿಗೆ ಬೆಲೆ ಹೆಚ್ಚಳದ ಬಿಸಿ ತಟ್ಟಲಿದ್ದು, ನ್ಯೂ ಜನರೇಷನ್ ಥಾರ್ ಕಾರು ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಎಎಕ್ಸ್ ಮತ್ತು ಎಲ್ಎಕ್ಸ್ ಎನ್ನುವ ಎರಡು ಮಾದರಿಗಳಲ್ಲಿ ಖರೀದಿಗೆ ಲಭ್ಯವಿದೆ.

ಗ್ರಾಹಕರ ಬೇಡಿಕೆಯೆಂತೆ ಥಾರ್ ಆರಂಭಿಕ ಆವೃತ್ತಿಗಳಾದ ಎಎಕ್ಸ್ ಪೆಟ್ರೋಲ್ ಸ್ಟ್ಯಾಂಡರ್ಡ್ ಸಿಕ್ಸ್ ಸೀಟರ್, ಎಎಕ್ಸ್ ಸಿಕ್ಸ್ ಸೀಟರ್ ಸಾಫ್ಟ್ ಟಾಪ್ ಮತ್ತು ಎಎಕ್ಸ್ ಸಿಕ್ಸ್ ಸೀಟರ್ ಡೀಸೆಲ್ ಸಾಫ್ಟ್ ಟಾಪ್ ಮಾದರಿಗಳನ್ನು ಸ್ಥಗಿತಗೊಳಿಸಿರುವ ಕಂಪನಿಯು ಹೈ ಎಂಡ್ ಮಾದರಿಗಳ ಮಾರಾಟದ ಮೇಲೆ ಹೆಚ್ಚು ಗಮನಹರಿಸಿದೆ.

ವೆರಿಯೆಂಟ್ ಬದಲಾವಣೆ ನಂತರ ಥಾರ್ ಕಾರು ಆರಂಭಿಕ ಆವೃತ್ತಿಯು ಪ್ಯಾನ್ ಇಂಡಿಯಾ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11.90 ಲಕ್ಷದಿಂದ ಟಾಪ್ ಮಾದರಿಯು ರೂ. 12.95 ಲಕ್ಷ ಬೆಲೆ ಪಡೆದುಕೊಂಡಿದ್ದು, ಬೆಲೆ ಬದಲಾವಣೆಯ ನಂತರ ಆರಂಭಿಕ ಕಾರು ಮಾದರಿಯು ಮತ್ತಷ್ಟು ದುಬಾರಿಯಾಗಲಿದೆ.
MOST READ: ಪ್ರತಿ ಚಾರ್ಜ್ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್ಯುವಿ..!

ಇನ್ನು ಥಾರ್ ಕಾರು ಮಾದರಿಯಲ್ಲಿ ಮೊದಲ ಬಾರಿಗೆ ಡೀಸೆಲ್ ಎಂಜಿನ್ ಜೊತೆಗೆ ಪೆಟ್ರೋಲ್ ಕಾರಿನ ಆಯ್ಕೆಯನ್ನು ಸಹ ನೀಡಿರುವುದು ಆಫ್-ರೋಡ್ ಕಾರು ಮಾದರಿಯ ಮಾರಾಟದಲ್ಲಿ ಮತ್ತೊಂದು ಹಂತದ ಬದಲಾವಣೆಗೆ ಕಾರಣವಾಗಿದ್ದು, ಲ್ಯಾಡರ್-ಫ್ರೇಮ್ ಚಾರ್ಸಿ ಜೊತೆಗೆ ಹೊಸ ಸಸ್ಪೆಂಷನ್ ಸೌಲಭ್ಯವು ಹೊಸ ಥಾರ್ ಕಾರಿನ ಗುಣಮಟ್ಟ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿದೆ.

ಹೊಸ ಕಾರಿನ ಒಳಭಾಗದ ಸೌಲಭ್ಯಗಳು ಪ್ರಸ್ತುತ ಮಾದರಿಗಿಂತಲೂ ಹೆಚ್ಚು ಪ್ರೀಮಿಯಂ ಮತ್ತು ಮಾರ್ಡನ್ ವಿನ್ಯಾಸಗಳನ್ನು ಹೊಂದಿದ್ದು, ಆಕರ್ಷಕ ಡ್ಯಾಶ್ಬೋರ್ಡ್ನೊಂದಿಗೆ ಆ್ಯಪಲ್ ಕಾರ್ಪ್ಲೇ ಮತ್ತು ಅಂಡ್ರಾಯಿಡ್ ಆಟೋಗೆ ಸರ್ಪೋಟ್ ಮಾಡಬಲ್ಲ 7-ಇಂಚಿನ ಟಚ್ಸ್ಕ್ರೀನ್ ಇನ್ಪೋಟೈನ್ಮೆಂಟ್ ಸಿಸ್ಟಂ, ಎಲ್ಲಾ ಮಾದರಿಯ ಹವಾಗುಣವನ್ನು ತಡೆಯಬಲ್ಲ ರೂಫ್ ಮೌಂಟೆಡ್ ಆಡಿಯೋ ಸ್ಪಿಕರ್ಸ್, ಮಲ್ಟಿ ಕಲರ್ ಇನ್ಫಾಮೆಷನ್ ಡಿಸ್ಪ್ಲೇ ಮತ್ತು ಸ್ಟೀರಿಂಗ್ ಮೌಟೆಂಟ್ ಕಂಟ್ರೋಲ್ ಸೌಲಭ್ಯ ನೀಡಲಾಗಿದೆ.
MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಹಲವಾರು ಸೆಫ್ಟಿ ಫೀಚರ್ಸ್ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದ್ದು, ಎರಡು ಎಂಜಿನ್ ಆಯ್ಕೆಗಳಲ್ಲೂ 4x4 ಡ್ರೈವ್ ಸಿಸ್ಟಂ, ಕ್ರೂಸ್ ಕಂಟ್ರೋಲ್, 255/65 18-ಇಂಚಿನ ಆಲ್ ಟೆರೆನ್ ಟೈರ್ಸ್, ಡ್ಯುಯಲ್ ಏರ್ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್, ಹಿಲ್ ಸ್ಟಾರ್ಟ್ ಅಸಿಸ್ಟ್, ರೋಲ್ ಓವರ್ ಮಿಟಿಗೆಷನ್, ತ್ರೀ ಪಾಯಿಂಟ್ ಸಿಲ್ಟ್ ಬೆಲ್ಟ್, ರಿಯರ್ ವ್ಯೂ ಕ್ಯಾಮೆರಾ ಜೋಡಿಸಲಾಗಿದೆ.