ಅಧಿಕೃತ ಆಕ್ಸೆಸರಿಸ್‌ಗಳೊಂದಿಗೆ ಮಿಂಚಿದ ಮಹೀಂದ್ರಾ ನ್ಯೂ ಜನರೇಷನ್ ಥಾರ್

ಮಹೀಂದ್ರಾ ಕಂಪನಿಯು ನ್ಯೂ ಜನರೇಷನ್ ಥಾರ್ ಎಸ್‌ಯುವಿ ಮೂಲಕ ಆಫ್ ರೋಡ್ ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಹೊಸ ಕಾರಿನ ತಾಂತ್ರಿಕ ಅಂಶಗಳನ್ನು ಹೆಚ್ಚಿಸಲು ಕಂಪನಿಯೇ ಹೆಚ್ಚುವರಿ ಆಕ್ಸೆಸರಿಸ್‌ಗಳನ್ನು ಬಿಡುಗಡೆ ಮಾಡಿದೆ.

ಅಧಿಕೃತ ಆಕ್ಸೆಸರಿಸ್‌ಗಳೊಂದಿಗೆ ಮಿಂಚಿದ ಮಹೀಂದ್ರಾ ನ್ಯೂ ಜನರೇಷನ್ ಥಾರ್

ಹೊಸ ಥಾರ್ ಕಾರು ಮಾದರಿಯು ಈ ಬಾರಿ ಹಲವಾರು ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದ್ದು, ನ್ಯೂ ಜನರೇಷನ್ ಥಾರ್ ಕಾರು ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಎಎಕ್ಸ್ ಮತ್ತು ಎಲ್ಎಕ್ಸ್ ಎನ್ನುವ ಎರಡು ಮಾದರಿಗಳಲ್ಲಿ ಖರೀದಿಗೆ ಲಭ್ಯವಿದೆ. ಆರಂಭಿಕ ಆವೃತ್ತಿಯು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ರೂ. 9.80 ಲಕ್ಷದಿಂದ ಟಾಪ್ ಮಾದರಿಯು ರೂ. 12.95 ಲಕ್ಷ ಬೆಲೆ ಪಡೆದುಕೊಂಡಿದ್ದು, ಅತ್ಯುತ್ತಮ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ಪಡೆದುಕೊಂಡಿದೆ.

ಅಧಿಕೃತ ಆಕ್ಸೆಸರಿಸ್‌ಗಳೊಂದಿಗೆ ಮಿಂಚಿದ ಮಹೀಂದ್ರಾ ನ್ಯೂ ಜನರೇಷನ್ ಥಾರ್

ಆಸಕ್ತ ಗ್ರಾಹಕರು ಆಫ್ ರೋಡ್ ಎಸ್‌ಯುವಿ ಮಾದರಿಗಾಗಿ ಹೆಚ್ಚುವರಿ ಪ್ಯಾಕೇಜ್‌ನೊಂದಿಗೆ ಮತ್ತಷ್ಟು ಪ್ರೀಮಿಯಂ ಮತ್ತು ಸೆಫ್ಟಿ ಫೀಚರ್ಸ್‌ಗಳನ್ನು ಪಡೆದುಕೊಳ್ಳಬಹುದಾಗಿದ್ದು, ಮಹೀಂದ್ರಾ ಕಂಪನಿಯೇ ಆಫ್ಟರ್ ಮಾರ್ಕೆಟ್ ಆಕ್ಸೆಸರಿಸ್‌ಗಳನ್ನು ಜೋಡಣೆ ಮಾಡಲಿದೆ.

ಅಧಿಕೃತ ಆಕ್ಸೆಸರಿಸ್‌ಗಳೊಂದಿಗೆ ಮಿಂಚಿದ ಮಹೀಂದ್ರಾ ನ್ಯೂ ಜನರೇಷನ್ ಥಾರ್

ಆಫ್ಟರ್ ಮಾರ್ಕೆಟ್ ಆಕ್ಸೆಸರಿಸ್ ಪ್ಯಾಕೇಜ್ ಮೂಲಕ ಮಹೀಂದ್ರಾ ಕಂಪನಿಯು ಥಾರ್ ಮಾಲೀಕತ್ವಕ್ಕೆ ಮತ್ತಷ್ಟು ಮೆರಗು ನೀಡುತ್ತಿದ್ದು, ಹೊಸ ಆಕ್ಸೆಸರಿಸ್ ಪ್ಯಾಕೇಜ್‌ನಲ್ಲಿ ಸ್ಟೈಲಿಷ್, ಕಂಫರ್ಟ್, ಟೆಕ್ನಾಲಜಿ ಮತ್ತು ಸೆಫ್ಟಿ ಫೀಚರ್ಸ್‌ಗಳನ್ನು ನೀಡಲಾಗುತ್ತಿದೆ.

ಅಧಿಕೃತ ಆಕ್ಸೆಸರಿಸ್‌ಗಳೊಂದಿಗೆ ಮಿಂಚಿದ ಮಹೀಂದ್ರಾ ನ್ಯೂ ಜನರೇಷನ್ ಥಾರ್

ಆಫ್ಟರ್ ಮಾರ್ಕೆಟ್ ಆಕ್ಸೆಸರಿಸ್ ಹೊರತುಪಡಿಸಿ ಥಾರ್ ಕಾರು ಮಾದರಿಯಲ್ಲಿ ಸೆವೆನ್ ಸ್ಲಾಟ್ ಗ್ರಿಲ್, ವೃತ್ತಾಕಾರವಾದ ಹೆಡ್‌ಲ್ಯಾಂಪ್, 18-ಇಂಚಿನ ಆಕರ್ಷಕ ಅಲಾಯ್ ವೀಲ್ಹ್, ಡ್ಯುಯಲ್ ಟೋನ್ ಬಂಪರ್, ಸ್ಕಫ್ ಪ್ಲೇಟ್, ಬಾಕ್ಸಿ ಮಾದರಿಯಲ್ಲಿರುವ ಟೈಲ್ ಲೈಟ್‌ನೊಂದಿಗೆ ಮಾರ್ಡನ್ ಶೈಲಿ ಪಡೆದುಕೊಂಡಿದೆ.

ಅಧಿಕೃತ ಆಕ್ಸೆಸರಿಸ್‌ಗಳೊಂದಿಗೆ ಮಿಂಚಿದ ಮಹೀಂದ್ರಾ ನ್ಯೂ ಜನರೇಷನ್ ಥಾರ್

ಲ್ಯಾಡರ್-ಫ್ರೇಮ್ ಚಾರ್ಸಿ ಜೊತೆಗೆ ಹೊಸ ಸಸ್ಪೆಂಷನ್‌ ಸೌಲಭ್ಯವು ಹೊಸ ಥಾರ್ ಕಾರಿನ ಗುಣಮಟ್ಟ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿದ್ದು, ಒಳಭಾಗದ ಸೌಲಭ್ಯಗಳು ಪ್ರಸ್ತುತ ಮಾದರಿಗಿಂತಲೂ ಹೆಚ್ಚು ಪ್ರೀಮಿಯಂ ಮತ್ತು ಮಾರ್ಡನ್ ವಿನ್ಯಾಸಗಳನ್ನು ಹೊಂದಿವೆ.

ಆಕರ್ಷಕ ಡ್ಯಾಶ್‌ಬೋರ್ಡ್‌ನೊಂದಿಗೆ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋಗೆ ಸರ್ಪೋಟ್ ಮಾಡಬಲ್ಲ 7-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಎಲ್ಲಾ ಮಾದರಿಯ ಹವಾಗುಣವನ್ನು ತಡೆಯಬಲ್ಲ ರೂಫ್ ಮೌಂಟೆಡ್ ಆಡಿಯೋ ಸ್ಪಿಕರ್ಸ್, ಮಲ್ಟಿ ಕಲರ್ ಇನ್ಫಾಮೆಷನ್ ಡಿಸ್‌ಪ್ಲೇ ಮತ್ತು ಸ್ಟೀರಿಂಗ್ ಮೌಟೆಂಟ್ ಕಂಟ್ರೋಲ್ ಸೌಲಭ್ಯ ನೀಡಲಾಗಿದೆ.

ಅಧಿಕೃತ ಆಕ್ಸೆಸರಿಸ್‌ಗಳೊಂದಿಗೆ ಮಿಂಚಿದ ಮಹೀಂದ್ರಾ ನ್ಯೂ ಜನರೇಷನ್ ಥಾರ್

ಜೊತೆಗೆ 50:50 ಅನುಪಾತದ ರಿಯರ್ ಸೀಟುಗಳಲ್ಲೂ ಮಡಿಕೆ ಮಾಡಬಹುದಾದ ಸೌಲಭ್ಯ ನೀಡಲಾಗಿದ್ದು, ಎಎಕ್ಸ್ ವೆರಿಯೆಂಟ್‌ನಲ್ಲಿ ಡೀಸೆಲ್ ಮ್ಯಾನುವಲ್ ಮತ್ತು ಪೆಟ್ರೋಲ್ ಮ್ಯಾನುವಲ್ ಮಾದರಿಯನ್ನು ಮತ್ತು ಎಲ್ಎಕ್ಸ್ ಮಾದರಿಯಲ್ಲಿ ಆಟೋಮ್ಯಾಟಿಕ್ ಮಾದರಿಗಳೊಂದಿಗೆ ಕನ್ವರ್ಟಿಬಲ್ ಮತ್ತು ಹಾರ್ಡ್ ಟಾಪ್ ಆಯ್ಕೆ ನೀಡಲಾಗಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಅಧಿಕೃತ ಆಕ್ಸೆಸರಿಸ್‌ಗಳೊಂದಿಗೆ ಮಿಂಚಿದ ಮಹೀಂದ್ರಾ ನ್ಯೂ ಜನರೇಷನ್ ಥಾರ್

ಹೊಸ ಥಾರ್ ಕಾರು ಮಾದರಿಯಲ್ಲಿ ಬಿಎಸ್-6 ಎಂಜಿನ್ ಪ್ರೇರಿತ 2.2-ಲೀಟರ್ ಡೀಸೆಲ್ ಎಂಜಿನ್ ಮತ್ತು ಹೊಸದಾಗಿ ಅಭಿವೃದ್ದಿಗೊಳಿಸಲಾದ 2.0-ಲೀಟರ್ ಎಂ-ಸ್ಟಾಲಿನ್ ಪೆಟ್ರೋಲ್ ಎಂಜಿನ್ ನೀಡಲಾಗಿದ್ದು, ಎರಡು ಎಂಜಿನ್ ಮಾದರಿಗಳಲ್ಲೂ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ನೀಡಲಾಗಿದೆ.

ಅಧಿಕೃತ ಆಕ್ಸೆಸರಿಸ್‌ಗಳೊಂದಿಗೆ ಮಿಂಚಿದ ಮಹೀಂದ್ರಾ ನ್ಯೂ ಜನರೇಷನ್ ಥಾರ್

ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಹಲವಾರು ಸೆಫ್ಟಿ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದ್ದು, ಎರಡು ಎಂಜಿನ್ ಆಯ್ಕೆಗಳಲ್ಲೂ 4x4 ಡ್ರೈವ್ ಸಿಸ್ಟಂ, ಕ್ರೂಸ್ ಕಂಟ್ರೋಲ್, 255/65 18-ಇಂಚಿನ ಆಲ್ ಟೆರೆನ್ ಟೈರ್ಸ್, ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್, ಹಿಲ್ ಸ್ಟಾರ್ಟ್ ಅಸಿಸ್ಟ್, ರೋಲ್ ಓವರ್ ಮಿಟಿಗೆಷನ್, ತ್ರೀ ಪಾಯಿಂಟ್ ಸಿಲ್ಟ್ ಬೆಲ್ಟ್, ರಿಯರ್ ವ್ಯೂ ಕ್ಯಾಮೆರಾ ಜೋಡಿಸಲಾಗಿದೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಅಧಿಕೃತ ಆಕ್ಸೆಸರಿಸ್‌ಗಳೊಂದಿಗೆ ಮಿಂಚಿದ ಮಹೀಂದ್ರಾ ನ್ಯೂ ಜನರೇಷನ್ ಥಾರ್

ಹಾಗೆಯೇ ಎಲ್ಇಡಿ ಡಿಆರ್‌ಎಲ್ ಫಾಗ್ ಲ್ಯಾಂಪ್ಸ್, ಎಂಟು ಹಂತಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ಆಟೋ ಎಸಿ, ಇಎಸ್‌ಪಿ ಮತ್ತು 226-ಎಂಎಂ ಗ್ರೌಂಡ್ ಕ್ಲಿಯೆರೆನ್ಸ್‌ನೊಂದಿಗೆ ಆಫ್ ರೋಡ್‌ನಲ್ಲಿ ಮತ್ತಷ್ಟು ಗಮನಸೆಳೆಯಲಿದೆ.

Most Read Articles

Kannada
English summary
Mahindra Thar Customised With Official Accessories. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X