Just In
- 9 hrs ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 9 hrs ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 11 hrs ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 11 hrs ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- Movies Shobha Shetty ; ನಿಶ್ಚಿತಾರ್ಥದ ಬಗ್ಗೆ ಮಾಹಿತಿ ನೀಡಿದ ನಟಿ ಶೋಭಾ ಶೆಟ್ಟಿ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕ್ರ್ಯಾಶ್ ಟೆಸ್ಟ್ ರೇಟಿಂಗ್ ನಂತರ ಹೊಸ ಥಾರ್ ಎಸ್ಯುವಿ ಖರೀದಿಗೆ ಭರ್ಜರಿ ಡಿಮ್ಯಾಂಡ್
ಮಹೀಂದ್ರಾ ಕಂಪನಿಯು ಅಕ್ಟೋಬರ್ ಮೊದಲ ವಾರದಲ್ಲಿ ತನ್ನ ಬಹುನೀರಿಕ್ಷಿತ ಥಾರ್ ಕಾರು ಮಾದರಿಯನ್ನು ಹೊಸ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆ ಮಾಡಿತ್ತು. ಹೊಸ ಕಾರು ಇದುವರೆಗೆ ಬರೋಬ್ಬರಿ 25 ಸಾವಿರಕ್ಕೂ ಹೆಚ್ಚು ಬುಕ್ಕಿಂಗ್ ಪಡೆದುಕೊಂಡಿದ್ದು, ಬುಕ್ಕಿಂಗ್ ಸಂಖ್ಯೆ ಹೆಚ್ಚಿದಂತೆ ಗ್ರಾಹಕರ ಕಾಯುವಿಕೆ ಅವಧಿಯಲ್ಲಿ ಮತ್ತಷ್ಟು ಹೆಚ್ಚಳವಾಗುತ್ತಿದೆ.
ಕ್ರ್ಯಾಶ್ ಟೆಸ್ಟಿಂಗ್ನಲ್ಲಿ 4 ಸ್ಟಾರ್ ರೇಟಿಂಗ್ ಪಡೆದುಕೊಳ್ಳುವ ಸುರಕ್ಷಿತ ಕಾರು ಮಾದರಿಯಾಗಿರುವ ಗುರುತಿಸಿಕೊಂಡ ನಂತರ ಹೊಸ ಥಾರ್ ಕಾರಿಗೆ ಮತ್ತಷ್ಟು ಬೇಡಿಕೆ ಪಡೆದುಕೊಂಡಿರುವ ಮಹೀಂದ್ರಾ ಕಂಪನಿಯು ಬೇಡಿಕೆಗೆ ಪೂರಕವಾಗಿ ಉತ್ಪಾದನಾ ಪ್ರಮಾಣವನ್ನು ಹೆಚ್ಚಳ ಮಾಡಿದೆ. ಆದರೂ ಕೂಡಾ ಉತ್ಪಾದನೆಗಿಂತಲೂ ಭಾರೀ ಬೇಡಿಕೆ ಹರಿದುಬಂದಿರುವುದು ವಿತರಣೆಯಲ್ಲಿ ವಿಳಂಬವಾಗುತ್ತಿದ್ದು, ಬುಕ್ಕಿಂಗ್ ನಂತರ ಹೊಸ ಕಾರು ಪಡೆದುಕೊಳ್ಳಲು ಕನಿಷ್ಠ 6 ರಿಂದ 9 ತಿಂಗಳು ಕಾಯಲೇಬೇಕಿದೆ.
ಕಾಯುವಿಕೆ ಅವಧಿಯು ಥಾರ್ ಕಾರಿನ ವೆರಿಯೆಂಟ್ಗಳಿಗೆ ಅನುಗುಣವಾಗಿ ನಿರ್ಧಾರವಾಗಲಿದ್ದು, ಸಾಫ್ಟ್ ಟಾಪ್ ಮಾದರಿಗಳು ಕಡಿಮೆ ಅವಧಿಯಲ್ಲಿ ವಿತರಣೆಯಾಗಲಿದ್ದರೆ ಹಾರ್ಡ್ ಟಾಪ್ ಮಾದರಿಗಳ ಖರೀದಿಗೆ ಹೆಚ್ಚು ಕಾಯಬೇಕು.
ಮಹೀಂದ್ರಾ ಡೀಲರ್ಸ್ಗಳ ಮಾಹಿತಿಯೆಂತೆ ಸಾಫ್ಟ್ ಟಾಪ್ ಹೊಂದಿರುವ ಥಾರ್ ಕಾರು ವೆರಿಯೆಂಟ್ಗಳಿಗೆ ಬುಕ್ಕಿಂಗ್ ನಂತರ ಕನಿಷ್ಠ 20 ರಿಂದ 25 ವಾರಗಳ ಕಾಲ ಕಾಯಬೇಕಿದ್ದು, ಕನ್ವರ್ಟಬಲ್ ಮಾದರಿಗೆ 25 ರಿಂದ 30 ವಾರಗಳು ಮತ್ತು ಹಾರ್ಡ್ ಟಾಪ್ ವೆರಿಯೆಂಟ್ಗಳಿಗೆ ಕನಿಷ್ಠ 30 ರಿಂದ 35 ವಾರಗಳ ಕಾಲ ಕಾಯಲೇಬೇಕಿದೆ.
ಆಫ್ ರೋಡಿಂಗ್ ವೈಶಿಷ್ಟ್ಯತೆಯೊಂದಿಗೆ ತನ್ನದೆ ಆದ ಜನಪ್ರಿಯೆತೆ ಹೊಂದಿರುವ ಥಾರ್ ಕಾರು ಮಾದರಿಯು ಸಾಮಾನ್ಯ ಕಾರು ಮಾದರಿಗಳಂತೆ ಬೇಡಿಕೆ ಮುಂಚೂಣಿ ಸಾಧಿಸುತ್ತಿದ್ದು, 2020ರ ಥಾರ್ ಖರೀದಿ ಮಾಡಿರುವ ಗ್ರಾಹಕರಲ್ಲಿ ಬಹುತೇಕರು ಹೊಸದಾಗಿ ಆಫ್ ಕೌಶಲ್ಯದ ಆಸಕ್ತಿಯೊಂದಿಗೆ ಥಾರ್ ಮಾಲೀಕತ್ವ ಪಡೆದುಕೊಂಡವರಾಗಿದ್ದಾರೆ.
ಶೇ.57ರಷ್ಟು ಗ್ರಾಹಕರು ಹೊಸದಾಗಿ ಆಫ್ ರೋಡಿಂಗ್ ಕಾರು ಖರೀದಿ ಮಾಡುತ್ತಿರುವ ಗ್ರಾಹಕರಾಗಿದ್ದು, ಮ್ಯಾನುವಲ್ಗಿಂತಲೂ ಹೆಚ್ಚು ಆಟೋಮ್ಯಾಟಿಕ್ ಮಾದರಿಗಳಿಗೆ ಹೆಚ್ಚು ಬೇಡಿಕೆ ಹರಿದುಬಂದಿದೆ. ಹೊಸ ಥಾರ್ ಕಾರು ಮಾದರಿಯು ಈ ಬಾರಿ ಹಲವಾರು ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದ್ದು, ನ್ಯೂ ಜನರೇಷನ್ ಥಾರ್ ಕಾರು ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಎಎಕ್ಸ್ ಮತ್ತು ಎಲ್ಎಕ್ಸ್ ಎನ್ನುವ ಎರಡು ಮಾದರಿಗಳಲ್ಲಿ ಖರೀದಿಗೆ ಲಭ್ಯವಿದೆ.
ಗ್ರಾಹಕರ ಬೇಡಿಕೆಯೆಂತೆ ಥಾರ್ ಆರಂಭಿಕ ಆವೃತ್ತಿಗಳಾದ ಎಎಕ್ಸ್ ಪೆಟ್ರೋಲ್ ಸ್ಟ್ಯಾಂಡರ್ಡ್ ಸಿಕ್ಸ್ ಸೀಟರ್, ಎಎಕ್ಸ್ ಸಿಕ್ಸ್ ಸೀಟರ್ ಸಾಫ್ಟ್ ಟಾಪ್ ಮತ್ತು ಎಎಕ್ಸ್ ಸಿಕ್ಸ್ ಸೀಟರ್ ಡೀಸೆಲ್ ಸಾಫ್ಟ್ ಟಾಪ್ ಮಾದರಿಗಳನ್ನು ಸ್ಥಗಿತಗೊಳಿಸಿರುವ ಕಂಪನಿಯು ಹೈ ಎಂಡ್ ಮಾದರಿಗಳ ಮಾರಾಟದ ಮೇಲೆ ಹೆಚ್ಚು ಗಮನಹರಿಸಿದೆ.
ವೆರಿಯೆಂಟ್ ಬದಲಾವಣೆ ನಂತರ ಥಾರ್ ಕಾರು ಆರಂಭಿಕ ಆವೃತ್ತಿಯು ಪ್ಯಾನ್ ಇಂಡಿಯಾ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11.90 ಲಕ್ಷದಿಂದ ಟಾಪ್ ಮಾದರಿಯು ರೂ. 12.95 ಲಕ್ಷ ಬೆಲೆ ಪಡೆದುಕೊಂಡಿದ್ದು, ಅತ್ಯುತ್ತಮ ಫೀಚರ್ಸ್ಗಳನ್ನು ಸ್ಟ್ಯಾಂಡರ್ಡ್ ಆಗಿ ಪಡೆದುಕೊಂಡಿದೆ.
MOST READ: ಭಾರತದಲ್ಲಿ ಎರಡು ಹೊಸ ಎಸ್ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ
ಥಾರ್ ಕಾರು ಮಾದರಿಯಲ್ಲಿ ಮೊದಲ ಬಾರಿಗೆ ಡೀಸೆಲ್ ಎಂಜಿನ್ ಜೊತೆಗೆ ಪೆಟ್ರೋಲ್ ಕಾರಿನ ಆಯ್ಕೆಯನ್ನು ಸಹ ನೀಡಿರುವುದು ಆಫ್-ರೋಡ್ ಕಾರು ಮಾದರಿಯ ಮಾರಾಟದಲ್ಲಿ ಮತ್ತೊಂದು ಹಂತದ ಬದಲಾವಣೆಗೆ ಕಾರಣವಾಗಿದ್ದು, ಲ್ಯಾಡರ್-ಫ್ರೇಮ್ ಚಾರ್ಸಿ ಜೊತೆಗೆ ಹೊಸ ಸಸ್ಪೆಂಷನ್ ಸೌಲಭ್ಯವು ಹೊಸ ಥಾರ್ ಕಾರಿನ ಗುಣಮಟ್ಟ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿದೆ.
ಹೊಸ ಕಾರಿನ ಒಳಭಾಗದ ಸೌಲಭ್ಯಗಳು ಪ್ರಸ್ತುತ ಮಾದರಿಗಿಂತಲೂ ಹೆಚ್ಚು ಪ್ರೀಮಿಯಂ ಮತ್ತು ಮಾರ್ಡನ್ ವಿನ್ಯಾಸಗಳನ್ನು ಹೊಂದಿದ್ದು, ಆಕರ್ಷಕ ಡ್ಯಾಶ್ಬೋರ್ಡ್ನೊಂದಿಗೆ ಆ್ಯಪಲ್ ಕಾರ್ಪ್ಲೇ ಮತ್ತು ಅಂಡ್ರಾಯಿಡ್ ಆಟೋಗೆ ಸರ್ಪೋಟ್ ಮಾಡಬಲ್ಲ 7-ಇಂಚಿನ ಟಚ್ಸ್ಕ್ರೀನ್ ಇನ್ಪೋಟೈನ್ಮೆಂಟ್ ಸಿಸ್ಟಂ, ಎಲ್ಲಾ ಮಾದರಿಯ ಹವಾಗುಣವನ್ನು ತಡೆಯಬಲ್ಲ ರೂಫ್ ಮೌಂಟೆಡ್ ಆಡಿಯೋ ಸ್ಪಿಕರ್ಸ್, ಮಲ್ಟಿ ಕಲರ್ ಇನ್ಫಾಮೆಷನ್ ಡಿಸ್ಪ್ಲೇ ಮತ್ತು ಸ್ಟೀರಿಂಗ್ ಮೌಟೆಂಟ್ ಕಂಟ್ರೋಲ್ ಸೌಲಭ್ಯ ನೀಡಲಾಗಿದೆ.
MOST READ: ಪ್ರತಿ ಚಾರ್ಜ್ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್ಯುವಿ..!
ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಹಲವಾರು ಸೆಫ್ಟಿ ಫೀಚರ್ಸ್ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದ್ದು, ಎರಡು ಎಂಜಿನ್ ಆಯ್ಕೆಗಳಲ್ಲೂ 4x4 ಡ್ರೈವ್ ಸಿಸ್ಟಂ, ಕ್ರೂಸ್ ಕಂಟ್ರೋಲ್, 255/65 18-ಇಂಚಿನ ಆಲ್ ಟೆರೆನ್ ಟೈರ್ಸ್, ಡ್ಯುಯಲ್ ಏರ್ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್, ಹಿಲ್ ಸ್ಟಾರ್ಟ್ ಅಸಿಸ್ಟ್, ರೋಲ್ ಓವರ್ ಮಿಟಿಗೆಷನ್, ತ್ರೀ ಪಾಯಿಂಟ್ ಸಿಲ್ಟ್ ಬೆಲ್ಟ್, ರಿಯರ್ ವ್ಯೂ ಕ್ಯಾಮೆರಾ ಜೋಡಿಸಲಾಗಿದೆ.