ಬಿಡುಗಡೆಗೆ ಸಿದ್ದವಾದ ನ್ಯೂ ಜನರೇಷನ್ ಮಹೀಂದ್ರಾ ಎಕ್ಸ್‌ಯುವಿ500 ಎಸ್‌ಯುವಿ

ಮಹೀಂದ್ರಾ ಕಂಪನಿಯು ತನ್ನ ಬಹುನೀರಿಕ್ಷಿತ ಎಕ್ಸ್‌ಯುವಿ500 ನ್ಯೂ ಜನರೇಷನ್ ಆವೃತ್ತಿಯನ್ನು ಬಿಡುಗಡೆ ಮಾಡಲು ಅಂತಿಮ ಹಂತದ ಸಿದ್ದತೆಯಲ್ಲಿದ್ದು, ಹೊಸ ಕಾರಿನ ಕಾರ್ಯಕ್ಷಮತೆ ಕುರಿತಂತೆ ಅಂತಿಮ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆ ನಡೆಸಲಾಗುತ್ತಿದೆ.

ಬಿಡುಗಡೆಗೆ ಸಿದ್ದವಾದ ನ್ಯೂ ಜನರೇಷನ್ ಮಹೀಂದ್ರಾ ಎಕ್ಸ್‌ಯುವಿ500 ಎಸ್‌ಯುವಿ

ಹೊಸ ತಲೆಮಾರಿನ ಎಕ್ಸ್‌ಯುವಿ500 ಕಾರು ಮಾದರಿಯು 2021ರ ಏಪ್ರಿಲ್‌ನಲ್ಲಿ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದ್ದು, ಹೊಸ ಕಾರು ಭಾರೀ ಬದಲಾವಣೆಯೊಂದಿಗೆ ರಸ್ತೆಗಿಳಿಯುತ್ತಿದೆ. ಹೊಸ ಕಾರು ಮಧ್ಯಮ ಕ್ರಮಾಂಕದ ಎಸ್‌ಯುವಿ ಮಾದರಿಗಳಲ್ಲೇ ಹಲವು ಹೊಸ ಐಷಾರಾಮಿ ಫೀಚರ್ಸ್‌ಗಳನ್ನು ಪಡೆದುಕೊಳ್ಳಲಿದ್ದು, ಹೊಸ ಕಾರಿನ್ನು ವಿವಿಧ ಹೊಸ ತಾಂತ್ರಿಕ ಅಂಶಗಳೊಂದಿಗೆ ಉತ್ಪಾದನಾ ಮಾದರಿಯ ಮೂಲಕ ರೋಡ್ ಟೆಸ್ಟಿಂಗ್ ಪೂರ್ಣಗೊಳಿಸಲಾಗುತ್ತಿದೆ.

ಬಿಡುಗಡೆಗೆ ಸಿದ್ದವಾದ ನ್ಯೂ ಜನರೇಷನ್ ಮಹೀಂದ್ರಾ ಎಕ್ಸ್‌ಯುವಿ500 ಎಸ್‌ಯುವಿ

ನ್ಯೂ ಜನರೇಷನ್ ಮಾದರಿಯು ಪೆಟ್ರೋಲ್ ಎಂಜಿನ್ ಸೇರಿದಂತೆ ಹಲವು ಹೊಸ ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುವ ಸಿದ್ದತೆಯಲ್ಲಿದ್ದು, ಸದ್ಯಕ್ಕೆ ಬಿಎಸ್-6 ಡೀಸೆಲ್ ಎಂಜಿನ್‌ನೊಂದಿಗೆ ಮಾತ್ರವೇ ಖರೀದಿಗೆ ಲಭ್ಯವಿದೆ.

ಬಿಡುಗಡೆಗೆ ಸಿದ್ದವಾದ ನ್ಯೂ ಜನರೇಷನ್ ಮಹೀಂದ್ರಾ ಎಕ್ಸ್‌ಯುವಿ500 ಎಸ್‌ಯುವಿ

ಹೊಸ ತಲೆಮಾರಿನ ಎಕ್ಸ್‌ಯುವಿ500 ಕಾರಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯನ್ನು ಸಹ ನೀಡಲಾಗಿದ್ದು, ಹೊಸ ಕಾರನ್ನು ಮಹೀಂದ್ರಾ ಕಂಪನಿಯ ಹೊಸ ಮೊನೊಕೊಕ್ ಪ್ಲಾಟ್‌ಫಾರ್ಮ್‌ನ ಅಡಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ.

ಬಿಡುಗಡೆಗೆ ಸಿದ್ದವಾದ ನ್ಯೂ ಜನರೇಷನ್ ಮಹೀಂದ್ರಾ ಎಕ್ಸ್‌ಯುವಿ500 ಎಸ್‌ಯುವಿ

ನ್ಯೂ ಜನರೇಷನ್ ಮಾದರಿಯಲ್ಲಿ ನವೀಕರಿಸಲಾದ ಮುಂಭಾಗದ ಗ್ರಿಲ್, ಹೊಸ ವಿನ್ಯಾಸದ ಎಲ್ಇಡಿ ಹೆಡ್‌ಲ್ಯಾಂಪ್ ಮತ್ತು ಹಿಂಭಾಗದಲ್ಲಿ ನವೀಕರಿಸಲಾದ ಬಂಪರ್ ಪ್ರಮುಖ ಆಕರ್ಷಣೆಯಾಗಲಿದ್ದು, ಮಧ್ಯಮ ಗಾತ್ರದ ಎಸ್‌ಯುವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿದೆ. ಹಾಗೆಯೇ ಹೊಸ ಕಾರು ಪ್ರಸ್ತುತ ಮಾದರಿಗಿಂತಲೂ ಭಾರೀ ಬದಲಾವಣೆಯನ್ನು ಪಡೆದುಕೊಂಡಿದ್ದು, ನವೀಕೃತ ಮುಂಭಾಗದ ಗ್ರಿಲ್, ಬ್ಯಾನೆಟ್, ಬಂಪರ್ ಮತ್ತು ಎಲ್ಇಡಿ ಹೆಡ್‌ಲ್ಯಾಂಪ್ ಕ್ಲಸ್ಟರ್, ಹಿಂಭಾಗದ ಬಂಪರ್, ಟೈಲ್‌ಗೆಟ್ ವಿನ್ಯಾಸವು ಆಕರ್ಷಕವಾಗಿರಲಿವೆ.

ಬಿಡುಗಡೆಗೆ ಸಿದ್ದವಾದ ನ್ಯೂ ಜನರೇಷನ್ ಮಹೀಂದ್ರಾ ಎಕ್ಸ್‌ಯುವಿ500 ಎಸ್‌ಯುವಿ

ಹೊಸ ಕಾರಿನ ಒಳಭಾಗದ ತಾಂತ್ರಿಕ ಅಂಶಗಳಲ್ಲೂ ಸಾಕಷ್ಟು ಬದಲಾವಣೆಗೊಳಿಸಲಾಗಿದ್ದು, ವೆಂಟೆಲೆಟೆಡ್ ಆಸನ, ರಿಯಲ್ ಸೀಟ್ ಎಸಿ ವೆಂಟ್ಸ್, ಮೂರನೇ ಸಾಲಿನಲ್ಲಿ 50:50 ಅನುಪಾತದ ಆಸನಗಳು ಸೇರಿದಂತೆ ಹಲವು ಐಷಾರಾಮಿ ಫೀಚರ್ಸ್ ಹೊಸ ಕಾರಿನಲ್ಲಿರಲಿವೆ.

ಬಿಡುಗಡೆಗೆ ಸಿದ್ದವಾದ ನ್ಯೂ ಜನರೇಷನ್ ಮಹೀಂದ್ರಾ ಎಕ್ಸ್‌ಯುವಿ500 ಎಸ್‌ಯುವಿ

50:50 ಅನುಪಾತದ ಆಸನಗಳ ಸೌಲಭ್ಯದಿಂದಾಗಿ ಬೂಟ್ ಸ್ಪೆಸ್ ಸೌಲಭ್ಯವನ್ನು ಅಗತ್ಯ ಸಂದರ್ಭಗಳಲ್ಲಿ ವಿಸ್ತರಣೆ ಮಾಡಿಕೊಳ್ಳಬಹುದಾಗಿದ್ದು, ಗ್ರಾಹಕರು ತಮ್ಮ ಅಗತ್ಯಕ್ಕೆ ಅನುಗುಣವಾಗಿ 6 ಮತ್ತು 7 ಸೀಟುಗಳ ಆಯ್ಕೆ ಪಡೆದುಕೊಳ್ಳಬಹುದು.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಬಿಡುಗಡೆಗೆ ಸಿದ್ದವಾದ ನ್ಯೂ ಜನರೇಷನ್ ಮಹೀಂದ್ರಾ ಎಕ್ಸ್‌ಯುವಿ500 ಎಸ್‌ಯುವಿ

ಇದರೊಂದಿಗೆ ಹೊಸ ಕಾರಿನಲ್ಲಿ ರಡಾರ್ ಸೌಲಭ್ಯವನ್ನು ಅಳವಡಿಸಲಾಗಿದ್ದು, ಇದು ಅಗತ್ಯ ಸಂದರ್ಭಗಳಲ್ಲಿ ಅಟೊನೊಮಸ್ ಬ್ರೇಕಿಂಗ್ ಸಿಸ್ಟಂನೊಂದಿಗೆ ರಸ್ತೆ ಗುಂಡಿಗಳ ಬಗೆಗೆ ಚಾಲಕನಿಗೆ ಎಚ್ಚರಿಸಲಿದೆ. ಈ ಮೂಲಕ ರಸ್ತೆ ಮೇಲೆ ನಿಗಾ ಇಡಲಿರುವ ಹೊಸ ತಂತ್ರಜ್ಞಾನ ಸೌಲಭ್ಯವು ವಾಯ್ಸ್ ಮೂಲಕ ಚಾಲಕನಿಗೆ ಎಚ್ಚರಿಕೆಯ ಸಂದೇಶ ರವಾನಿಸಲಿದ್ದು, ರಿವರ್ಸ್ ಸಂದರ್ಭದಲ್ಲಿ 3ಡಿ ಪನೊರಮಿಕ್ ವ್ಯೂ ಸೌಲಭ್ಯ ಒದಗಿಸುತ್ತದೆ.

ಬಿಡುಗಡೆಗೆ ಸಿದ್ದವಾದ ನ್ಯೂ ಜನರೇಷನ್ ಮಹೀಂದ್ರಾ ಎಕ್ಸ್‌ಯುವಿ500 ಎಸ್‌ಯುವಿ

ಈ ಮೂಲಕ ಎಂಜಿ ಹೆಕ್ಟರ್ ಪ್ಲಸ್ ಮತ್ತು ಮುಂಬರುವ ಟಾಟಾ ಗ್ರಾವಿಟಾಸ್ ಎಸ್‍ಯುವಿ ಕಾರುಗಳಿಗೆ ನೇರ ಪೈಪೋಟಿ ನೀಡಲಿರುವ ಹೊಸ ಕಾರು ಮಾದರಿಯು ಹಲವಾರು ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್‌ಗಳೊಂದಿಗೆ ಗ್ರಾಹಕರನ್ನು ಗಮನಸೆಳೆಯಲಿವೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಬಿಡುಗಡೆಗೆ ಸಿದ್ದವಾದ ನ್ಯೂ ಜನರೇಷನ್ ಮಹೀಂದ್ರಾ ಎಕ್ಸ್‌ಯುವಿ500 ಎಸ್‌ಯುವಿ

ಎಂಜಿನ್ ಮತ್ತು ಪರ್ಫಾಮೆನ್ಸ್

ನ್ಯೂ ಜನರೇಷನ್ ಎಕ್ಸ್‌ಯುವಿ500 ಕಾರು ಮಾದರಿಯು 2.2 ಡೀಸೆಲ್ ಎಂಜಿನ್ ಜೊತೆ ಹೊಸ ಥಾರ್‌ನಲ್ಲಿ ನೀಡಲಾಗಿರುವ 2.0-ಲೀಟರ್ ಎಂ-ಸ್ಟಾಲಿನ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಸಹ ಪಡೆದುಕೊಳ್ಳಲಿದ್ದು, ಹೊಸ ಕಾರು ವಿವಿಧ ಎಂಜಿನ್ ಆಯ್ಕೆಯೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 18.50 ಲಕ್ಷ ಬೆಲೆ ಹೊಂದುವ ಸಾಧ್ಯತೆಗಳಿವೆ.

More from DriveSpark

Article Published On: Wednesday, December 30, 2020, 15:19 [IST]
English summary
New-Gen Mahindra XUV500 Spied Testing Again Ahead Of India Launch. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+