ನಮ್ಮ ಬೆಂಗಳೂರಿನಲ್ಲಿ ರೋಡ್ ಟೆಸ್ಟಿಂಗ್ ನಡೆಸಿದ ನ್ಯೂ ಜನರೇಷನ್ ಎಕ್ಸ್‌ಯುವಿ500

ಮಹೀಂದ್ರಾ ನ್ಯೂ ಜನರೇಷನ್ ಎಕ್ಸ್‌ಯುವಿ500 ಕಾರು ಮಾದರಿಯ ಬಿಡುಗಡೆಯನ್ನು ಕರೋನಾ ವೈರಸ್ ಪರಿಣಾಮ ಮುಂದಿನ ವರ್ಷಕ್ಕೆ ಮುಂದೂಡಿಕೆ ಮಾಡಲಾಗಿದ್ದು, ಸದ್ಯ ಬಿಎಸ್-6 ಎಂಜಿನ್‌ನೊಂದಿಗೆ ಮಾತ್ರವೇ ಖರೀದಿಗೆ ಲಭ್ಯವಿರುವ ಹೊಸ ಕಾರು ನ್ಯೂ ಜನರೇಷನ್ ಮಾದರಿಯೊಂದಿಗೆ ಮತ್ತಷ್ಟು ಬೇಡಿಕೆ ಪಡೆದುಕೊಳ್ಳಲಿದೆ.

ನಮ್ಮ ಬೆಂಗಳೂರಿನಲ್ಲಿ ರೋಡ್ ಟೆಸ್ಟಿಂಗ್ ನಡೆಸಿದ ನ್ಯೂ ಜನರೇಷನ್ ಎಕ್ಸ್‌ಯುವಿ500

ಬಿಎಸ್-6 ಎಕ್ಸ್‌ಯುವಿ500 ಮಾದರಿಯು ಸದ್ಯ ಡೀಸೆಲ್ ಎಂಜಿನ್‌ನೊಂದಿಗೆ ಮಾತ್ರವೇ ಖರೀದಿಗೆ ಲಭ್ಯವಿದ್ದು, ನ್ಯೂ ಜನರೇಷನ್ ಮಾದರಿಯು ಪೆಟ್ರೋಲ್ ಎಂಜಿನ್ ಸೇರಿದಂತೆ ಹಲವು ಹೊಸ ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ. ನ್ಯೂ ಜನರೇಷನ್ ಮಾದರಿಯಲ್ಲಿ ನವೀಕರಿಸಲಾದ ಮುಂಭಾಗದ ಗ್ರಿಲ್, ಹೊಸ ವಿನ್ಯಾಸದ ಎಲ್ಇಡಿ ಹೆಡ್‌ಲ್ಯಾಂಪ್ ಮತ್ತು ಹಿಂಭಾಗದಲ್ಲಿ ನವೀಕರಿಸಲಾದ ಬಂಪರ್ ಪ್ರಮುಖ ಆಕರ್ಷಣೆಯಾಗಲಿದೆ.

ನಮ್ಮ ಬೆಂಗಳೂರಿನಲ್ಲಿ ರೋಡ್ ಟೆಸ್ಟಿಂಗ್ ನಡೆಸಿದ ನ್ಯೂ ಜನರೇಷನ್ ಎಕ್ಸ್‌ಯುವಿ500

ನ್ಯೂ ಜನರೇಷನ್ ಕಾರು ಮಾದರಿಯನ್ನು ಇದೇ ವರ್ಷಾಂತ್ಯಕ್ಕೆ ಬಿಡುಗಡೆ ಮಾಡುವ ತವಕದಲ್ಲಿದ್ದ ಮಹೀಂದ್ರಾ ಯೋಜನೆಗೆ ಕರೋನಾ ವೈರಸ್ ಬ್ರೇಕ್ ಹಾಕಿದ್ದು, 2021ರ ಆರಂಭದಲ್ಲಿ ಎಕ್ಸ್‌ಯುವಿ500 ಸೇರಿದಂತೆ ಸ್ಕಾರ್ಪಿಯೋ ಮಾದರಿಯನ್ನು ನಮ್ಮ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ಕಡೆಗಳಲ್ಲಿ ರೋಡ್ ಟೆಸ್ಟಿಂಗ್ ನಡೆಸಲಾಗುತ್ತಿದೆ.

View this post on Instagram

2021 Mahindra XUV500 Spied on test

A post shared by Gaadiwaadi.com (@gaadiwaadi) on

ಹೊಸ ಕಾರು ಪ್ರಸ್ತುತ ಮಾದರಿಗಿಂತಲೂ ಭಾರೀ ಬದಲಾವಣೆಯನ್ನು ಪಡೆದುಕೊಂಡಿದ್ದು, ನವೀಕೃತ ಮುಂಭಾಗದ ಗ್ರಿಲ್, ಬ್ಯಾನೆಟ್, ಬಂಪರ್ ಮತ್ತು ಎಲ್ಇಡಿ ಹೆಡ್‌ಲ್ಯಾಂಪ್ ಕ್ಲಸ್ಟರ್, ಹಿಂಭಾಗ ಬಂಪರ್, ಟೈಲ್‌ಗೆಟ್ ವಿನ್ಯಾಸವು ಆಕರ್ಷಕವಾಗಿರಲಿವೆ.

ನಮ್ಮ ಬೆಂಗಳೂರಿನಲ್ಲಿ ರೋಡ್ ಟೆಸ್ಟಿಂಗ್ ನಡೆಸಿದ ನ್ಯೂ ಜನರೇಷನ್ ಎಕ್ಸ್‌ಯುವಿ500

ಜೊತೆಗೆ ನ್ಯೂ ಜನರೇಷನ್ ಕಾರು ಮಾದರಿಯಲ್ಲಿ ಥಾರ್ ಮಾದರಿಯಲ್ಲಿ 2.0-ಲೀಟರ್ ಎಂಸ್ಟಾಲಿನ್ ಪೆಟ್ರೋಲ್ ಎಂಜಿನ್ ಪಡೆದುಕೊಳ್ಳಲಿದ್ದು, ಹಲವಾರು ಪ್ರೀಮಿಯಂ ಫೀಚರ್ಸ್ ಜೊತೆಗೆ ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್‌ಗಳು ಗ್ರಾಹಕರ ಗಮನಸೆಳೆಯಲಿವೆ.

ನಮ್ಮ ಬೆಂಗಳೂರಿನಲ್ಲಿ ರೋಡ್ ಟೆಸ್ಟಿಂಗ್ ನಡೆಸಿದ ನ್ಯೂ ಜನರೇಷನ್ ಎಕ್ಸ್‌ಯುವಿ500

ಸದ್ಯ ಮಾರುಕಟ್ಟೆಯಲ್ಲಿರುವ ಎಕ್ಸ್‌ಯುವಿ500 ಕಾರು ಮಾದರಿಯು ಪ್ರಮುಖ ನಾಲ್ಕು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, 2.2-ಲೀಟರ್ ಡೀಸೆಲ್ ಎಂಜಿನ್‌ನೊಂದಿಗೆ ಮಾರಾಟಕ್ಕೆ ಲಭ್ಯವಿದ್ದು, 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಿದೆ. ಈ ಮೂಲಕ 153-ಬಿಎಚ್‌ಪಿ ಮತ್ತು 360-ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಇಂಧನ ದಕ್ಷತೆಯಲ್ಲೂ ಗ್ರಾಹಕರನ್ನು ಗಮನಸೆಳೆಯಲಿದೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ನಮ್ಮ ಬೆಂಗಳೂರಿನಲ್ಲಿ ರೋಡ್ ಟೆಸ್ಟಿಂಗ್ ನಡೆಸಿದ ನ್ಯೂ ಜನರೇಷನ್ ಎಕ್ಸ್‌ಯುವಿ500

ಆಟೋಮ್ಯಾಟಿಕ್ ಆವೃತ್ತಿಯಾ ಡಬ್ಲ್ಯು7 ಆಟೋಮ್ಯಾಟಿಕ್ ಆವೃತ್ತಿಯು ಪುಣೆ ಎಕ್ಸ್‌ಶೋರೂಂ ಪ್ರಕಾರ ರೂ. 15.65 ಲಕ್ಷಕ್ಕೆ, ಡಬ್ಲ್ಯು9 ಆಟೋಮ್ಯಾಟಿಕ್ ಮಾದರಿಯು ರೂ. 17.36 ಲಕ್ಷ ಮತ್ತು ಡಬ್ಲ್ಯು9(ಆಪ್ಷನ್) ಆಟೋಮ್ಯಾಟಿಕ್ ಆವೃತ್ತಿಯು ರೂ. 18.88 ಲಕ್ಷ ಬೆಲೆ ಹೊಂದಿದೆ.

ನಮ್ಮ ಬೆಂಗಳೂರಿನಲ್ಲಿ ರೋಡ್ ಟೆಸ್ಟಿಂಗ್ ನಡೆಸಿದ ನ್ಯೂ ಜನರೇಷನ್ ಎಕ್ಸ್‌ಯುವಿ500

ಎಕ್ಸ್‌ಯುವಿ500 ಡೀಸೆಲ್ ಮ್ಯಾನುವಲ್ ಆವೃತ್ತಿಯು ಎಕ್ಸ್‌ಶೋರೂಂ ಪ್ರಕಾರ ರೂ. 13.18 ಲಕ್ಷ ಬೆಲೆ ಹೊಂದಿದ್ದು, ಟಾಪ್ ಎಂಡ್ ಮಾದರಿಯು ರೂ. 17.68 ಲಕ್ಷ ಬೆಲೆ ಹೊಂದಿದೆ. ಬಿಎಸ್-4 ಮಾದರಿಗಿಂತ ಬಿಎಸ್-6 ಮಾದರಿಯು ವಿವಿಧ ಆವೃತ್ತಿಗಳಿಗೆ ಅನುಗುಣವಾಗಿ ರೂ.80 ಸಾವಿರದಿಂದ ರೂ. 1.21 ಲಕ್ಷದಷ್ಟು ದುಬಾರಿಯಾಗಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ನಮ್ಮ ಬೆಂಗಳೂರಿನಲ್ಲಿ ರೋಡ್ ಟೆಸ್ಟಿಂಗ್ ನಡೆಸಿದ ನ್ಯೂ ಜನರೇಷನ್ ಎಕ್ಸ್‌ಯುವಿ500

ಹೊಸ ತಲೆಮಾರಿನ ಮಹೀಂದ್ರಾ ಎಕ್ಸ್‌ಯುವಿ500 ಕಾರು ಕರೋನಾ ವೈರಸ್ ಪರಿಣಾಮ ಮುಂದಿನ ವರ್ಷ ಮಾರುಕಟ್ಟೆಗೆ ಪ್ರವೇಶಿಸಲಿದ್ದು, ಸದ್ಯಕ್ಕೆ ಬಿಎಸ್-6 ಎಂಜಿನ್‌ನೊಂದಿಗೆ ಮಾತ್ರವೇ ಖರೀದಿಗೆ ಲಭ್ಯವಿರುತ್ತದೆ.

Most Read Articles

Kannada
English summary
New Mahindra XUV500 Spotted Testing. Read in Kannada.
Story first published: Saturday, September 5, 2020, 17:05 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X