Just In
Don't Miss!
- Education
ECIL Recruitment 2021: 3 ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ
- Movies
ಡಬ್ಬಿಂಗ್ ಸಿನಿಮಾಗಳ ಬಗ್ಗೆ ಹಿರಿಯ ನಟ ದೊಡ್ಡಣ್ಣ ಅಸಮಾಧಾನ
- News
ಕೊರೊನಾ ನಿಯಂತ್ರಣದಲ್ಲಿ ವಿಫಲ: ಇಟಲಿ ಪ್ರಧಾನಿ ಗಿಸೆಪ್ಪೆ ಕಾಂಟೆ ರಾಜೀನಾಮೆ
- Sports
ಐಎಸ್ಎಲ್: ಜೆಮ್ಷೆಡ್ಪುರ ವಿರುದ್ಧ ಕ್ಲೀನ್ ಶೀಟ್ ಗುರಿಯಲ್ಲಿ ಕೇರಳ ಬ್ಲಾಸ್ಟರ್ಸ್
- Finance
ಗಣರಾಜ್ಯೋತ್ಸವಕ್ಕೆ ಬಿಎಸ್ಎನ್ಎಲ್ನಿಂದ ವಿಶೇಷ ಆಫರ್
- Lifestyle
ನೀವು ಬಳಸಬಹುದಾದ ಡೈರಿ ಉತ್ಪನ್ನವಲ್ಲದ ಹಾಲುಗಳ ಬಗ್ಗೆ ಇಲ್ಲಿದೆ ಮಾಹಿತಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ಹಲವು ಪ್ರೀಮಿಯಂ ಫೀಚರ್ಸ್ ಪಡೆದುಕೊಂಡ ಹೊಸ ಎಕ್ಸ್‌ಯುವಿ500
ಕರೋನಾ ವೈರಸ್ ಪರಿಣಾಮ ನ್ಯೂ ಜನರೇಷನ್ ಎಕ್ಸ್‌ಯುವಿ500 ಕಾರು ಮಾದರಿಯ ಬಿಡುಗಡೆಯನ್ನು 2021ಕ್ಕೆ ಮುಂದೂಡಿಕೆ ಮಾಡಿದ್ದ ಮಹೀಂದ್ರಾ ಕಂಪನಿಯು ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಮುಂದುವರಿಸಿದ್ದು, ಹೊಸ ಕಾರು ಮಾದರಿಯು ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ಹಲವಾರು ಪ್ರೀಮಿಯಂ ಫೀಚರ್ಸ್‍ಗಳನ್ನು ಪಡೆದುಕೊಳ್ಳಲಿದೆ.

ಎರಡನೇ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಯಾಗಲಿರುವ ಎಕ್ಸ್‌ಯುವಿ500 ಕಾರು ಮಾದರಿಯು ಭಾರೀ ಬದಲಾವಣೆಯೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದ್ದು, ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದೆ. ಬಿಎಸ್-6 ಎಕ್ಸ್‌ಯುವಿ500 ಮಾದರಿಯು ಸದ್ಯ ಡೀಸೆಲ್ ಎಂಜಿನ್‌ನೊಂದಿಗೆ ಮಾತ್ರವೇ ಖರೀದಿಗೆ ಲಭ್ಯವಿದ್ದು, ನ್ಯೂ ಜನರೇಷನ್ ಮಾದರಿಯು ಪೆಟ್ರೋಲ್ ಎಂಜಿನ್ ಸೇರಿದಂತೆ ಹಲವು ಹೊಸ ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುವ ಸಿದ್ದತೆಯಲ್ಲಿದೆ.

ಹೊಸ ಮಾಹಿತಿಗಳ ಪ್ರಕಾರ ರೋಡ್ ಟೆಸ್ಟಿಂಗ್ ವೇಳೆ ಹೊಸ ಎಕ್ಸ್‌ಯುವಿ500 ಕಾರು ಮಾದರಿಯಲ್ಲಿ ಪೂರ್ಣ ಪ್ರಮಾಣದ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಜೊತೆಗೆ ಕಲರ್ ಟಿಎಫ್‌ಟಿ ಸೌಲಭ್ಯವನ್ನು ನೀಡಲಾಗಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಯಲ್ಲಿನ ಸೆಮಿ ಡಿಜಿಟಲ್ ಯುನಿಟ್‌ಗಿಂತಲೂ ಸಾಕಷ್ಟು ಆಕರ್ಷಕವಾಗಿದೆ.

ಹಾಗೆಯೇ ನ್ಯೂ ಜನರೇಷನ್ ಮಾದರಿಯಲ್ಲಿ ನವೀಕರಿಸಲಾದ ಮುಂಭಾಗದ ಗ್ರಿಲ್, ಹೊಸ ವಿನ್ಯಾಸದ ಎಲ್ಇಡಿ ಹೆಡ್‌ಲ್ಯಾಂಪ್ ಮತ್ತು ಹಿಂಭಾಗದಲ್ಲಿ ನವೀಕರಿಸಲಾದ ಬಂಪರ್ ಪ್ರಮುಖ ಆಕರ್ಷಣೆಯಾಗಲಿದ್ದು, ಮಧ್ಯಮ ಗಾತ್ರದ ಎಸ್‌ಯುವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿದೆ.

ಹೊಸ ಕಾರು ಪ್ರಸ್ತುತ ಮಾದರಿಗಿಂತಲೂ ಭಾರೀ ಬದಲಾವಣೆಯನ್ನು ಪಡೆದುಕೊಂಡಿದ್ದು, ನವೀಕೃತ ಮುಂಭಾಗದ ಗ್ರಿಲ್, ಬ್ಯಾನೆಟ್, ಬಂಪರ್ ಮತ್ತು ಎಲ್ಇಡಿ ಹೆಡ್‌ಲ್ಯಾಂಪ್ ಕ್ಲಸ್ಟರ್, ಹಿಂಭಾಗ ಬಂಪರ್, ಟೈಲ್‌ಗೆಟ್ ವಿನ್ಯಾಸವು ಆಕರ್ಷಕವಾಗಿರಲಿವೆ. ಹಾಗೆಯೇ ಕಾರಿನ ಒಳಭಾಗದ ತಾಂತ್ರಿಕ ಅಂಶಗಳಲ್ಲೂ ಸಾಕಷ್ಟು ಬದಲಾವಣೆಗೊಳಿಸಲಾಗಿದ್ದು, ವೆಂಟೆಲೆಟೆಡ್ ಆಸನ ಸೇರಿದಂತೆ ಹಲವು ಐಷಾರಾಮಿ ಫೀಚರ್ಸ್ ಹೊಸ ಕಾರಿನಲ್ಲಿರಲಿವೆ.

ಜೊತೆಗೆ ನ್ಯೂ ಜನರೇಷನ್ ಎಕ್ಸ್‌ಯುವಿ500 ಕಾರು ಮಾದರಿಯು 2.2 ಡೀಸೆಲ್ ಎಂಜಿನ್ ಜೊತೆ ಹೊಸ ಥಾರ್‌ನಲ್ಲಿ ನೀಡಲಾಗಿರುವ 2.0-ಲೀಟರ್ ಎಂ-ಸ್ಟಾಲಿನ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಸಹ ಪಡೆದುಕೊಳ್ಳಲಿದ್ದು, ಹಲವಾರು ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್‌ಗಳೊಂದಿಗೆ ಗ್ರಾಹಕರನ್ನು ಗಮನಸೆಳೆಯಲಿವೆ.

ಸದ್ಯ ಮಾರುಕಟ್ಟೆಯಲ್ಲಿರುವ ಎಕ್ಸ್‌ಯುವಿ500 ಕಾರು ಮಾದರಿಯು ಪ್ರಮುಖ ನಾಲ್ಕು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, 2.2-ಲೀಟರ್ ಡೀಸೆಲ್ ಎಂಜಿನ್‌ನೊಂದಿಗೆ ಮಾರಾಟಕ್ಕೆ ಲಭ್ಯವಿದ್ದು, 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಿದೆ. ಈ ಮೂಲಕ 153-ಬಿಎಚ್‌ಪಿ ಮತ್ತು 360-ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಇಂಧನ ದಕ್ಷತೆಯಲ್ಲೂ ಗ್ರಾಹಕರನ್ನು ಗಮನಸೆಳೆಯಲಿದೆ.

ಆಟೋಮ್ಯಾಟಿಕ್ ಆವೃತ್ತಿಯಾದ ಡಬ್ಲ್ಯು7 ಆಟೋಮ್ಯಾಟಿಕ್ ಮಾದರಿಯು ಪುಣೆ ಎಕ್ಸ್‌ಶೋರೂಂ ಪ್ರಕಾರ ರೂ. 15.65 ಲಕ್ಷಕ್ಕೆ, ಡಬ್ಲ್ಯು9 ಆಟೋಮ್ಯಾಟಿಕ್ ಮಾದರಿಯು ರೂ. 17.36 ಲಕ್ಷ ಮತ್ತು ಡಬ್ಲ್ಯು9(ಆಪ್ಷನ್) ಆಟೋಮ್ಯಾಟಿಕ್ ಆವೃತ್ತಿಯು ರೂ. 18.88 ಲಕ್ಷ ಬೆಲೆ ಹೊಂದಿದೆ.

ಎಕ್ಸ್‌ಯುವಿ500 ಡೀಸೆಲ್ ಮ್ಯಾನುವಲ್ ಆವೃತ್ತಿಯು ಎಕ್ಸ್‌ಶೋರೂಂ ಪ್ರಕಾರ ರೂ. 13.18 ಲಕ್ಷ ಬೆಲೆ ಹೊಂದಿದ್ದು, ಟಾಪ್ ಎಂಡ್ ಮಾದರಿಯು ರೂ. 17.68 ಲಕ್ಷ ಬೆಲೆ ಹೊಂದಿದೆ. ಬಿಎಸ್-4 ಮಾದರಿಗಿಂತಲೂ ಬಿಎಸ್-6 ಮಾದರಿಯು ವಿವಿಧ ಆವೃತ್ತಿಗಳಿಗೆ ಅನುಗುಣವಾಗಿ ರೂ.80 ಸಾವಿರದಿಂದ ರೂ. 1.21 ಲಕ್ಷದಷ್ಟು ದುಬಾರಿಯಾಗಿದೆ.