ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ 2021ರ ಮಹೀಂದ್ರಾ ಎಕ್ಸ್‌ಯುವಿ500

ಮಹೀಂದ್ರಾ ಕಂಪನಿಯು ಹೊಸ ತಲೆಮಾರಿನ ಎಕ್ಸ್‌ಯುವಿ500 ಎಸ್‌ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಮಹೀಂದ್ರಾ ಎಕ್ಸ್‌ಯುವಿ500 ಭಾರತೀಯ ಮಾರುಕಟ್ಟೆಯಲ್ಲಿ ಒಂದು ದಶಕಕ್ಕೂ ಹೆಚ್ಚು ಕಾಲ ಮಾರಾಟದಲ್ಲಿರುವ ಜನಪ್ರಿಯ ಎಸ್‍ಯುವಿಯಾಗಿದೆ.

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ 2021ರ ಮಹೀಂದ್ರಾ ಎಕ್ಸ್‌ಯುವಿ500

ಮಹೀಂದ್ರಾ ಕಂಪನಿಯು ಹೊಸ ತಲೆಮಾರಿನ ಸ್ಕಾರ್ಪಿಯೋ ಮತ್ತು ಎಕ್ಸ್‌ಯುವಿ500 ಎಸ್‍ಯುವಿಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಇದೀಗ ಮಹೀಂದ್ರಾ ಕಂಫನಿಯು ತನ್ನ ಎಕ್ಸ್‌ಯುವಿ500 ಎಸ್‍ಯುವಿಯನ್ನು ಭಾರತೀಯ ರಸ್ತೆಗಳಲ್ಲಿ ಹಲವು ಬಾರಿ ಸ್ಪಾಟ್ ಟೆಸ್ಟ್ ನಡೆಸಲಾಗಿದೆ. ಈ ಹೊಸ ಎಕ್ಸ್‌ಯುವಿ500 ಎಸ್‍ಯುವಿಯು ಫನ್‌ಸ್ಟರ್ ಮಾದರಿಯಿಂದ ಎರವಲು ಪಡೆದ ಫುಲ್ ಎಲ್ಇಡಿ ಹೆಡ್ ಲ್ಯಾಂಪ್ ಅನ್ನು ಹೊಂದಿರಲಿದೆ.

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ 2021ರ ಮಹೀಂದ್ರಾ ಎಕ್ಸ್‌ಯುವಿ500

ಇನ್ನು ಹಿಂಭಾಗದಲ್ಲಿ ಎಲ್‌ಇಡಿ ಟೈಲ್ ಲೈಟ್‌ಗಳನ್ನು ಹೊಂದಿರುತ್ತದೆ. ಹೊಸ ಎಸ್‌ಯುವಿಯನ್ನು ಮುಂದಿನ ವರ್ಷದ ಆರಂಭದಲ್ಲಿ ಬಿಡುಗಡೆಗೊಳಿಸುವ ಸಾಧ್ಯತೆಗಳಿದೆ. ಈ ಹೊಸ ತಲೆಮಾರಿನ ಮಹೀಂದ್ರಾ ಎಕ್ಸ್‌ಯುವಿ500 2020ರ ಆಟೋ ಎಕ್ಸ್‌ಪೋದಲ್ಲಿ ಮಾರಾಟವಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಮಹೀಂದ್ರಾ ಕಂಪನಿಯು ಆಟೊ ಎಕ್ಸ್ ಪೋದಲ್ಲಿ ಬಿಡುಗಡೆಗೊಳಿಸಿಲ್ಲ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ 2021ರ ಮಹೀಂದ್ರಾ ಎಕ್ಸ್‌ಯುವಿ500

ಹೊಸ ತಲೆಮಾರಿನ ಎಕ್ಸ್‌ಯುವಿ500 ಎಸ್‍ಯುವಿಯನ್ನು ಮೊನೊಕೊಕ್ ಪ್ಲಾಟ್‌ಫಾರ್ಮ್‌ನ ಅಡಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ. 2021ರ ಮಹೀಂದ್ರಾ ಎಕ್ಸ್‌ಯುವಿ500 ಅದರ ವಿನ್ಯಾಸ ಮತ್ತು ಸ್ಟೈಲಿಂಗ್‌ನಲ್ಲಿ ಗಮನಾರ್ಹ ಬದಲಾವಣೆಗಳ ಜೊತೆಗೆ ಹಲವಾರು ನವೀಕರಣಗಳು ಮತ್ತು ಹೆಚ್ಚುವರಿ ಫೀಚರ್ ಗಳನ್ನು ಸಹ ಹೊಂದಿರುತ್ತದೆ.

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ 2021ರ ಮಹೀಂದ್ರಾ ಎಕ್ಸ್‌ಯುವಿ500

ಹೊಸ ತಲೆಮಾರಿನ ಎಕ್ಸ್‌ಯುವಿ500 ಎಸ್‍ಯುವಿಯಲ್ಲಿ ಹೊಸ ಕ್ಯಾಬಿನ್ ಅನ್ನು ಹೊಂದಿರುತ್ತದೆ. ಹೊಸ ಎಕ್ಸ್‌ಯುವಿ500 ಎಸ್‍ಯುವಿಯಲ್ಲಿ 6 ಮತ್ತು 7 ಸೀಟುಗಳ ಆಯ್ಕೆಗಳನ್ನು ಹೊಂದಿರಲಿದೆ. ಇದು ಎಂಜಿ ಹೆಕ್ಟರ್ ಪ್ಲಸ್ 6-ಸೀಟರ್ ಮತ್ತು ಮುಂಬರುವ ಟಾಟಾ ಗ್ರಾವಿಟಾಸ್ ಎಸ್‍ಯುವಿಗಳಿಗೆ ನೇರವಾಗಿ ಪೈಪೋಟಿ ನೀಡುತ್ತದೆ.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ 2021ರ ಮಹೀಂದ್ರಾ ಎಕ್ಸ್‌ಯುವಿ500

ಹೊಸ ತಲೆಮಾರಿನ ಮಹೀಂದ್ರಾ ಎಕ್ಸ್‌ಯುವಿ500 ಎಸ್‍ಯುವಿಯಲ್ಲಿ ಡೀಸೆಲ್ ಎಂಜಿನ್ ಅನ್ನು ಸಹ ಅಳವಡಿಸುವ ಸಾಧ್ಯತೆಗಳಿದೆ. ಈ ಹೊಸ ಎಸ್‍ಯುವಿಯಲ್ಲಿ 2.0-ಲೀಟರ್ ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್ ಅನ್ನು ಅಳವಡಿಸಬಹುದು.

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ 2021ರ ಮಹೀಂದ್ರಾ ಎಕ್ಸ್‌ಯುವಿ500

2021ರ ಮಹೀಂದ್ರಾ ಎಕ್ಸ್‌ಯುವಿ500 ಎಸ್‍ಯುವಿನಲ್ಲಿ ಹೊಸ 2.0-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ಅನ್ನು ಹೊಂದಿರಬಹುದು ಎಂದು ವರದಿಗಳಾಗಿದೆ. ಎರಡು ಎಂಜಿನ್ ಗಳಿಗೆ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಹೊಂದಿರುತ್ತದೆ. ಹೊಸ ಎಸ್‍ಯುವಿಯು ಎಡಬ್ಲ್ಯೂಡಿ ಸಿಸ್ಟಂ ಸಹ ಹೊಂದಿರಲಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ 2021ರ ಮಹೀಂದ್ರಾ ಎಕ್ಸ್‌ಯುವಿ500

ಮಹೀಂದ್ರಾ ಕಂಪನಿಯು ತನ್ನ ಪ್ರಸ್ತುತ ತಲೆಮಾರಿನ ಬಿಎಸ್-6 ಎಕ್ಸ್‌ಯುವಿ500 ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಈ ಹೊಸ ಮಹೀಂದ್ರಾ ಎಕ್ಸ್‌ಯುವಿ500 ಎಸ್‍ಯುವಿಯ ಆರಂಭಿಕ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.13.20 ಲಕ್ಷಗಳಾಗಿದೆ.

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ 2021ರ ಮಹೀಂದ್ರಾ ಎಕ್ಸ್‌ಯುವಿ500

ಹೊಸ ಮಹೀಂದ್ರಾ ಎಕ್ಸ್‌ಯುವಿ500 ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಕಿಯಾ ಸೆಲ್ಟೋಸ್, ಟಾಟಾ ಹ್ಯಾರಿಯರ್, ಎಂಜಿ ಹೆಕ್ಟರ್, ಹ್ಯುಂಡೈ ಕ್ರೆಟಾ, ಜೀಪ್ ಕಂಪಾಸ್ ಮತ್ತು ಫೋಕ್ಸ್ ವ್ಯಾಗನ್ ಟಿ-ರಾಕ್ ಎಸ್‍ಯುವಿಯುಗಳಿಗೆ ಪೈಪೋಟಿ ನೀಡುತ್ತದೆ.

Article Published On: Saturday, October 10, 2020, 19:27 [IST]
English summary
New-Gen Mahindra XUV500 To Be Offered With 6 and 7-Seat Options. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+