ಬಿಡುಗಡೆಯಾಗಲಿದೆ ಹೊಸ ಮಾರುತಿ ಸೆಲೆರಿಯೊ ಕಾರು

ದೇಶದ ಅತಿ ದೊಡ್ಡ ಕಾರು ಉತ್ಪಾದನಾ ಸಂಸ್ಥೆಯಾಗಿರುವ ಮಾರುತಿ ಸುಜುಕಿ ಇತ್ತೀಚೆಗೆ ತನ್ನ ಸೆಲೆರಿಯೊ ಸಿಎನ್‍ಜಿ ಆವೃತ್ತಿಯನ್ನು ಬಿಡುಗಡೆಗೊಳಿಸಿತ್ತು. ಇನ್ನು ಮಾರುತಿ ಸುಜುಕಿ ಸಂಸ್ಥೆಯು ಕಳೆದ ವರ್ಷಗಳಲ್ಲಿ ಬಿಡುಗಡೆಗೊಳಿಸಿದ ಎಸ್-ಪ್ರೆಸ್ಸೊ ಮತ್ತು ಎಕ್ಸ್‌ಎಲ್ 6 ಕಾರುಗಳು ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಯಶಸ್ಸನ್ನು ಕಂಡಿದೆ.

ಬಿಡುಗಡೆಯಾಗಲಿದೆ ಹೊಸ ಮಾರುತಿ ಸೆಲೆರಿಯೊ ಕಾರು

ಮಾರುತಿ ಸುಜುಕಿ ಕಂಪನಿಯು ವಿಟಾರಾ ಬ್ರೇಝಾ ಮತ್ತು ಇಗ್ನೀಸ್ ಫೇಸ್‌ಲಿಫ್ಟ್ ಮಾದರಿಯನ್ನು ಪೆಟ್ರೋಲ್ ಎಂಜಿನ್‌ನೊಂದಿಗೆ ಇತ್ತೀಚೆಗೆ ಬಿಡುಗಡೆಗೊಳಿಸಿದ್ದರು. ಇನ್ನು ಮೂರನೇ ತಲೆಮಾರಿನ ವ್ಯಾಗನ್‍ಆರ್ ಕಾರನ್ನು ಮುಂದಿನ ವರ್ಷ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ. ಇನ್ನು ಮಾರುತಿ ಸುಜುಕಿ ಕಂಪನಿಯು ಐದನೇ ತಲೆಮಾರಿನ ಸೆಲೆರಿಯೊವನ್ನು ಅಭಿವೃದ್ದಿಪಡಿಸಲಿದೆ. ಈ ಹೊಸ ಸೆಲೆರಿಯೊ ಕಾರು ಹರ್ಟೆಕ್ಟ್ ಕೆ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿ ತಯಾರಿಸಬಹುದು.

ಬಿಡುಗಡೆಯಾಗಲಿದೆ ಹೊಸ ಮಾರುತಿ ಸೆಲೆರಿಯೊ ಕಾರು

ಮಾರುತಿ ಸುಜುಕಿ ಸಂಸ್ಥೆಯ ಇತರ ಮಾದರಿಗಳಾದ ಎರ್ಟಿಗಾ, ಎಕ್ಸ್‌ಎಲ್ 6 ಮತ್ತು ವ್ಯಾಗನ್‍ಆರ್ ಕಾರು ಹರ್ಟೆಕ್ಟ್ ಕೆ ಪ್ಲಾಟ್‌ಫಾರ್ಮ್ ಅನ್ನು ಹೊಂದಿದೆ. ಹೊಸ ಸೆಲೆರಿಯೊ 1.0-ಲೀಟರ್ ಕೆ 10 ಬಿ ಮೂರು ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಬಹುದು ಎಂದು ನಿರೀಕ್ಷಿಸಬಹುದು. ಈ ಎಂಜಿನ್ 67 ಬಿಹೆಚ್‍ಪಿ ಪವರ್ ಮತ್ತು 90 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: ಹೊಸ ಬಣ್ಣಗಳ ಆಯ್ಕೆಯನ್ನು ಹೊಂದಿದ ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್

ಬಿಡುಗಡೆಯಾಗಲಿದೆ ಹೊಸ ಮಾರುತಿ ಸೆಲೆರಿಯೊ ಕಾರು

ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಮತ್ತು ಎಎಂಟಿ ಗೇರ್ ಬಾಕ್ಸ್ ಅನ್ನು ಜೋಡಿಸಬಹುದು. ಮಾರುತಿ ಸುಜುಕಿ ಸಂಸ್ಥೆಯು ಹೊಸ 800 ಸಿಸಿ ಎಂಟ್ರಿ-ಲೆವೆಲ್ ಕಾರನ್ನು ಸಿದ್ಧಪಡಿಸುತ್ತಿದೆ ಎಂದು ವರದಿಗಳು ಪ್ರಕಟವಾಗಿದೆ.

ಬಿಡುಗಡೆಯಾಗಲಿದೆ ಹೊಸ ಮಾರುತಿ ಸೆಲೆರಿಯೊ ಕಾರು

ಹೊಸ ಮಾರುತಿ ಸುಜುಕಿ ಸೆಲೆರಿಯೊ ಕಾರಿನಲ್ಲಿ ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿ ಹೊಂದಿರುವ ಸ್ಮಾರ್ಟ್ ಪ್ಲೇ ಸ್ಟುಡಿಯೋ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಹೂಂದಿರಬಹುದು ಎಂದು ನಿರೀಕ್ಷಿಸುತ್ತೇವೆ.

MOST READ: ಭರ್ಜರಿಯಾಗಿ ಮಾರಾಟವಾಯ್ತು ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ

ಬಿಡುಗಡೆಯಾಗಲಿದೆ ಹೊಸ ಮಾರುತಿ ಸೆಲೆರಿಯೊ ಕಾರು

ಇನ್ನು ಈ ಹೊಸ ಕಾರಿನಲ್ಲಿ ಪ್ರಯಾಣಿಕರ ಸುರಕ್ಷೆತೆಗಾಗಿ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, ಇಬಿಡಿಯೊಂದಿಗೆ ಎಬಿಎಸ್, ರಿವರ್ಸ್ ಪಾರ್ಕಿಂಗ್ ಸೆನ್ಸರ್‌ಗಳು, ಸ್ಪೀಡ್ ಅಲರ್ಟ್ ಮತ್ತು ಸೀಟ್ ಬೆಲ್ಟ್ ರಿಮೈಂಡರ್ ಅನ್ನು ಹೊಂದಿರಬಹುದು.

ಬಿಡುಗಡೆಯಾಗಲಿದೆ ಹೊಸ ಮಾರುತಿ ಸೆಲೆರಿಯೊ ಕಾರು

ಹೊಸ ಸೆಲೆರಿಯೊ ಕಾರಿನಲ್ಲಿ ನಾಲ್ಕು ಪವರ್ ವಿಂಡೋಗಳು, ಎಸಿ, ಯುಎಸ್‌ಬಿ, ಬ್ಲೂಟೂತ್ ಕನೆಕ್ಟಿವಿಟಿಯೊಂದಿಗೆ ಮ್ಯೂಸಿಕ್ ಸಿಸ್ಟಂ ಸ್ಟೀಯರಿಂಗ್ ಮೌಂಟಡ್ ಕಂಟ್ರೋಲ್, ಎಲೆಕ್ಟ್ರಿಕ್ ಆಗಿ ಹೋಂದಾಣಿಕ ಮಾಡಬಹುದಾದ ರೇರ್ ವ್ಯೂ ಮಿರರ್, ಕೀ ಲೆಸ್ ಎಂಟ್ರಿ ಮತ್ತು ಸೆಮಿ ಡಿಜಿಟಲ್ ಇನ್ಸ್ ಟ್ರೂಮೆಂಟ್ ಪ್ಯಾನೆಲ್ ಅನ್ನು ಅಳವಡಿಸಬಹುದು.

MOST READ: ಕರೋನಾ ಭೀತಿಯಿಂದ ಪಾತಾಳಕ್ಕೆ ಕುಸಿತ ಮಾರುತಿ ಸುಜುಕಿ ಕಾರುಗಳ ಮಾರಾಟ

ಬಿಡುಗಡೆಯಾಗಲಿದೆ ಹೊಸ ಮಾರುತಿ ಸೆಲೆರಿಯೊ ಕಾರು

ಮಾರುತಿ ಸುಜುಕಿ ಕಂಪನಿಯು ತನ್ನ ಹೊಸ ಎಸ್-ಪ್ರೆಸ್ಸೊ ಸಿಎನ್‍ಜಿ ಆವೃತ್ತಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಈ ಹೊಸ ಎಸ್-ಪ್ರೆಸ್ಸೊ ಸಿಎನ್‍ಜಿ ಆವೃತ್ತಿಯ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.4.84 ಲಕ್ಷಗಳಾಗಿದೆ.

ಬಿಡುಗಡೆಯಾಗಲಿದೆ ಹೊಸ ಮಾರುತಿ ಸೆಲೆರಿಯೊ ಕಾರು

ಮಾರುತಿ ಸುಜುಕಿ ಕಂಪನಿಯು ತನ್ನ ಎಲ್ಲಾ ಜನಪ್ರಿಯ ಮಾದರಿಗಳನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೂಳಿಸಲಾಗಿದೆ. ಮಾರುತಿ ಸುಜುಕಿ ಕಂಪನಿಯು ಡೀಸೆಲ್ ಎಸ್-ಕ್ರಾಸ್ ಮತ್ತು ಆಲ್ಟೋ ಕೆ10 ಮಾದರಿಯನ್ನು ಸ್ಥಗಿತಗೊಳಿಸಲಾಗಿದೆ.

Most Read Articles

Kannada
English summary
New-Gen Maruti Celerio Likely To Be Based On Heartect K Platform. Read In Kannada.
Story first published: Friday, June 26, 2020, 10:40 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X