Just In
- 9 hrs ago
ಡಕಾರ್ ರ್ಯಾಲಿ 2021: 43ನೇ ಆವೃತ್ತಿಯನ್ನು ಗೆದ್ದ ಹೋಂಡಾ ರೈಡರ್ ಕೆವಿನ್ ಬೆನೆವಿಡೆಸ್
- 11 hrs ago
ಸಿವಿ ವಾಹನ ಮಾದರಿಗಳಿಗಾಗಿ ಹೊಸ ಮಾದರಿಯ ಟೈರ್ ಬಿಡುಗಡೆ ಮಾಡಿದ ಬ್ರಿಡ್ಜ್ಸ್ಟೋನ್
- 11 hrs ago
ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್ಯುವಿ
- 12 hrs ago
ಎರಡನೇ ಬಾರಿ ರೋಲ್ಸ್ ರಾಯ್ಸ್ ಕುಲಿನನ್ ಕಾರು ಖರೀದಿಸಿದ ಮುಖೇಶ್ ಅಂಬಾನಿ
Don't Miss!
- Movies
ಪ್ರತಿಷ್ಟಿತ ಗೋವಾ ಅಂತರರಾಷ್ಟ್ರೀಯ ಸಿನಿಮೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಕನ್ನಡದ ಸ್ಟಾರ್ ನಟ
- News
ರೈತರ ಪ್ರತಿಭಟನೆ: ಜನವರಿ 19ಕ್ಕೆ ಕೇಂದ್ರ ಮತ್ತು ರೈತ ಸಂಘಟನೆಗಳ ನಡುವೆ ಮತ್ತೊಂದು ಸುತ್ತಿನ ಸಭೆ
- Lifestyle
ಶನಿವಾರದ ಭವಿಷ್ಯ: ಮಕರ ರಾಶಿಯವರೇ ಆರ್ಥಿಕ ದೃಷ್ಟಿಯಿಂದ ಒಳ್ಳೆಯದು
- Sports
ಭಾರತ vs ಆಸ್ಟ್ರೇಲಿಯಾ, 4ನೇ ಟೆಸ್ಟ್ ಪಂದ್ಯ, 2ನೇ ದಿನ, Live ಸ್ಕೋರ್
- Education
ECIL Recruitment 2021: ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ವಾಕ್ ಇನ್ ಇಂಟರ್ವ್ಯೂ
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 15ರ ಚಿನ್ನ, ಬೆಳ್ಳಿ ದರ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸ್ಪಾಟ್ ಟೆಸ್ಟ್ನಲ್ಲಿ ಕಾಣಿಸಿಕೊಂಡ ಹೊಸ ಮಾರುತಿ ಸೆಲೆರಿಯೊ ಕಾರು
ದೇಶದ ಅತಿ ದೊಡ್ಡ ಕಾರು ಉತ್ಪಾದನಾ ಸಂಸ್ಥೆಯಾಗಿರುವ ಮಾರುತಿ ಸುಜುಕಿ ತನ್ನ ಹೊಸ ತಲೆಮಾರಿನ ಸೆಲೆರಿಯೊ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಇದರ ಭಾಗವಾಗಿ ಹೊಸ ತಲೆಮಾರಿನ ಸೆಲೆರಿಯೊ ಕಾರಿನ ಸ್ಪಾಟ್ ಟೆಸ್ಟ್ ಅನ್ನು ಪ್ರಾರಂಭಿಸಿದೆ.

ಈ ಹೊಸ ತಲೆಮಾರಿನ ಸೆಲಿರಿಯೊ ಕಾರನ್ನು ಈ ವರ್ಷದ ಅಂತ್ಯದಲ್ಲಿ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ. ಭಾರತದಲಿ ಸೆಲಿರಿಯೊ ಹ್ಯಾಚ್ಬ್ಯಾಕ್ ಅನ್ನು ಮೊದಲ ಬಾರಿಗೆ 2014ರಲ್ಲಿ ಬಿಡುಗಡೆಗೊಳಿಸಿದರು. ಆದರೆ ಇತರ ಮಾದರಿಗಳ ಮಾದರಿಯಂತೆ ದೊಡ್ಡ ಯಶ್ವಸಿಯನ್ನು ಪಡೆದುಕೊಳ್ಳಲು ಸಾಧ್ಯವಾಗಿಲ್ಲ. ಆದರೆ ಸಧ್ಯ ಭಾರತೀಯ ಮಾರುಕಟ್ಟೆಯಲ್ಲಿ ಕರೋನಾ ಸೋಂಕಿನಿಂದ ಸಣ್ಣ ಕಾರುಗಳ ಮಾರಾಟ ಹೆಚ್ಚಾಗಿದೆ.

ಕರೋನಾ ಸೋಂಕಿನ ಭೀತಿಯಿಂದ ಜನರು ಸಾರ್ವಜನಿಕ ವಾಹನಗಳಲ್ಲಿ ಓಡಾಡುವುದು ಅಷ್ಟು ಸುರಕ್ಷಿತವಲ್ಲವೆಂದು ಸಣ್ಣ ಕಾರುಗಳ ಮೊರೆ ಹೋಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಮಾರುತಿ ಸುಜುಕಿ ಕಂಪನಿಯು ಸಣ್ಣ ಕಾರುಗಳನ್ನು ಬಿಡುಗಡೆಗೊಳಿಸಿದರೆ ಮಾರಾಟವನ್ನು ಹೆಚ್ಚಿಸಲು ಸಹಾಯವಾಗುತ್ತದೆ.
MOST READ: ಸ್ಪಾಟ್ ಟೆಸ್ಟ್ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್ಲಿಫ್ಟ್

ಇದೇ ಕಾರಣದಿಂದ ಸೆಲೆರಿಯೊ ಕಾರನ್ನು ಶೀಘ್ರದಲ್ಲೇ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ. ಹೊಸ ಮಾರುತಿ ಸೆಲೆರಿಯೊ ಸ್ಪಾಟ್ ಟೆಸ್ಟ್ ನಡೆಸಿರುವುದರ ಬಗ್ಗೆ ವರದಿಗಳು ಪ್ರಕಟವಾಗಿದೆ. ಮಾರುತಿ ಸುಜುಕಿ ಕಂಪನಿಯು ಹಾರ್ಟ್ಟೆಕ್ಟ್ ಪ್ಲಾಟ್ಫಾರ್ಮ್ ಅನ್ನು ಆಧರಿಸಿ ಹೊಸ ಸೆಲೆರಿಯೊ ಕಾರನ್ನು ಅಭಿವೃದ್ದಿಪಡಿಸಲಾಗುತ್ತದೆ.

ಹೊಸ ತಲೆಮಾರಿನ ಸೆಲೆರಿಯೊ ಹ್ಯಾಚ್ಬ್ಯಾಕ್ ಸ್ವಲ್ಪ ಭಿನ್ನವಾದ ವಿನ್ಯಾಸವನ್ನು ಹೊಂದಿದೆ. ಈ ಸೆಲೆರಿಯೊ ಕಾರು ಕ್ರಾಸ್ಒವರ್ನಂತೆ ವಿನ್ಯಾಸವಿರುತ್ತದೆ. ಎಸ್-ಪ್ರೆಸ್ಸೊ, ವ್ಯಾಗನ್ಆರ್, ಸ್ವಿಫ್ಟ್ ಮತ್ತು ಬಲೆನೊಗಳಂತಹ ಇತರ ಮಾರುತಿ ಕಾರುಗಳೊಂದಿಗೆ ಪ್ಲಾಟ್ಫಾರ್ಮ್ ಹಂಚಿಕೊಳ್ಳುವ ಹೊಸ ಸೆಲೆರಿಯೊವನ್ನು ಕ್ರಾಸ್ಒವರ್ ಆಗಿ ಮಾರಾಟ ಮಾಡಲಾಗುವುದು.
MOST READ: ಸ್ಥಗಿತಗೊಂಡಿಲ್ಲ ಫೋಕ್ಸ್ವ್ಯಾಗನ್ ಕಾರಿನ ಈ ಮಾದರಿಗಳು

ಹೊಸ ಸೆಲೆರಿಯೊ ಕಾರಿನಲ್ಲಿ ಎಲ್ಇಡಿ ಡಿಆರ್ಎಲ್, ಪ್ರೊಜೆಕ್ಟರ್ ಹೆಡ್ಲೈಟ್, ಸ್ಟೈಲಿಶ್ ಅಲಾಯ್ ವ್ಹೀಲ್ ಗಳು, ಎಲ್ಇಡಿ ಟೈಲ್ ಲೈಟ್ಗಳು, ರಿಯರ್ ವೈಪರ್, ಚಂಕಿಯರ್ ಬಂಪರ್ ಗಳೂ, ಹೆಚ್ಚಿನ ಗ್ರೌಂಡ್ ಕ್ಲಿಯರೆನ್ಸ್, ಎಲ್ಇಡಿ ಟರ್ನ್ ಇಂಡಿಕೇಟರ್ಗಳನ್ನು ಹೊಂದಿರುವ ಒಆರ್ವಿಎಂಗಳು ಮುಂತಾದ ಫೀಚರುಗಳನ್ನು ಹೊಂದಿರಲಿದೆ.

ಪ್ರಸ್ತುತ ಸೆಲೆರಿಯೊ 1.0 ಲೀಟರ್ 3 ಸಿಲಿಂಡರ್ ಪೆಟ್ರೋಲ್ ಬಿಎಸ್ 6 ಎಂಜಿನ್ ಆಯ್ಕೆಯೊಂದಿಗೆ ನೀಡಲಾಗುತ್ತಿದೆ. ಹೊಸ ತಲೆಮಾರಿನ ಸೆಲೆರಿಯೊದಲ್ಲಿ ಅದೇ ಎಂಜಿನ್ ಆಯ್ಜೆಯನ್ನು ಹೊಂದಿರಲಿದೆ. ಈ ಎಂಜಿನ್ 67 ಬಿಹೆಚ್ಪಿ ಪವರ್ ಮತ್ತು 90 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಇನ್ನು ಹೊಸ ಸೆಲೆರಿಯೊ ಕಾರಿನ ಇಂಟಿರಿಯರ್ ನಲ್ಲಿ ಮೌಂಟಡ್ ಟಚ್ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ ಅನ್ನು ಹೊಂದಿರಲಿದೆ. ಇದರಲ್ಲಿ ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಒಳಗೊಂಡಿರುತ್ತದೆ. ಇನ್ನು ಈ ಹೊಸ ಕಾರಿನಲ್ಲಿ ಫ್ಯಾಬ್ರಿಕ್ ಸೀಟುಗಳು, ಕಪ್ ಹೋಲ್ಡರ್ಗಳು, ಆಟೋಮ್ಯಾಟಿಕ್ ಎಸಿ, ಸ್ಟೀಯರಿಂಗ್ ಮೌಂಟೆಡ್ ಕಂಟ್ರೋಲ್ಗಳೊಂದಿಗೆ ಇತರ ಫೀಚರುಗಳನ್ನು ಹೊಂದಿರುತ್ತದೆ.
MOST READ: ಗ್ಲೋಬಲ್ ಎನ್ಸಿಎಪಿಯ ಸುರಕ್ಷತಾ ಟೆಸ್ಟ್ನಲ್ಲಿ ಅಗ್ರಸ್ಥಾನಗಳಿಸಿದ ಮಹೀಂದ್ರಾ ಕಾರು

ಇನ್ನು ಹೊಸ ಸೆಲೆರಿಯೊ ಕಾರಿನಲ್ಲಿ ಸುರಕ್ಷತೆಗಾಗಿ ಮುಂಭಾಗದಲ್ಲಿ ಡ್ಯುಯಲ್ ಫ್ರಂಟ್ ಏರ್ಬ್ಯಾಗ್ಗಳನ್ನುಸ್ಟ್ಯಾಂಡರ್ಡ್ ಆಗಿ ಪಡೆಯುತ್ತದೆ, ಇನ್ನು ಪಾರ್ಕಿಂಗ್ ಕ್ಯಾಮೆರಾ ಅಸಿಸ್ಟ್, ಸ್ಪೀಡ್ ಸೆನ್ಸರ್, ಸೀಟ್ಬೆಲ್ಟ್, ಎಬಿಎಸ್ ಮತ್ತು ಇಬಿಡಿ ಅನ್ನು ಹೊಂದಿರುತ್ತದೆ.