ಇದೇ ವರ್ಷಾಂತ್ಯಕ್ಕೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಸೆಲೆರಿಯೊ ಹ್ಯಾಚ್‌ಬ್ಯಾಕ್

ದೇಶದ ನಂ.1 ಕಾರು ಮಾರಾಟ ಕಂಪನಿ ಮಾರುತಿ ಸುಜುಕಿಯು ಈಗಾಗಲೇ ತನ್ನ ಪ್ರಮುಖ ಕಾರು ಮಾದರಿಯನ್ನು ಬಿಎಸ್-6 ಎಂಜಿನ್‌ನೊಂದಿಗೆ ಬಿಡುಗಡೆಗೊಳಿಸಿದ್ದು, ಮುಂಬರುವ ದಿನಗಳಲ್ಲಿ ಸೆಲೆರಿಯೊ ಸೇರಿದಂತೆ ವಿವಿಧ ಕಾರು ಮಾದರಿಗಳ ನ್ಯೂ ಜನರೇಷನ್ ಆವೃತ್ತಿಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಇದೇ ವರ್ಷಾಂತ್ಯಕ್ಕೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಸೆಲೆರಿಯೊ ಹ್ಯಾಚ್‌ಬ್ಯಾಕ್

ಸೆಲೆರಿಯೊ ಹ್ಯಾಚ್‌ಬ್ಯಾಕ್ ಕಾರು ಮಾದರಿಯು ಈಗಾಗಲೇ ಬಿಎಸ್-6 ಎಂಜಿನ್‌ನೊಂದಿಗೆ ಖರೀದಿಗೆ ಲಭ್ಯವಿದ್ದು, ಶೀಘ್ರದಲ್ಲೇ ಹೊಸ ವಿನ್ಯಾಸ ಹೊಂದಿರುವ ನ್ಯೂ ಜನರೇಷನ್ ಆವೃತ್ತಿಯು ಕೂಡಾ ಬಿಡುಗಡೆಯ ಸಿದ್ದತೆಯಲ್ಲಿದೆ. ಸದ್ಯ ಹೊಸ ಕಾರನ್ನು ರೋಡ್ ಟೆಸ್ಟಿಂಗ್ ನಡೆಸಲಾಗುತ್ತಿದ್ದು, ಬಿಎಸ್-6 ಎಂಜಿನ್ ಸೇರಿದಂತೆ ಹಲವಾರು ಪ್ರೀಮಿಯಂ ಫೀಚರ್ಸ್ ಪಡೆದುಕೊಂಡು ಮಾರುಕಟ್ಟೆ ಪ್ರವೇಶಿಸಲಿದೆ.

ಇದೇ ವರ್ಷಾಂತ್ಯಕ್ಕೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಸೆಲೆರಿಯೊ ಹ್ಯಾಚ್‌ಬ್ಯಾಕ್

ಸದ್ಯ ಮಾರುಕಟ್ಟೆಯಲ್ಲಿ ಟಾಪ್ 10 ಕಾರುಗಳ ಮಾರಾಟದಲ್ಲಿ ಬರೋಬ್ಬರಿ ಏಳು ಕಾರು ಮಾದರಿಗಳು ಮಾರುತಿ ಸುಜುಕಿ ನಿರ್ಮಾಣದ ಕಾರುಗಳಾಗಿದ್ದು, ಬಿಡುಗಡೆಯಾಗಲಿರುವ ಎರಡು ಕಾರುಗಳಲ್ಲಿ ಸೆಲೆರಿಯೊ ನ್ಯೂ ಜನರೇಷನ್ ಮಾದರಿ ಸಹ ಒಂದಾಗಿದೆ.

ಇದೇ ವರ್ಷಾಂತ್ಯಕ್ಕೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಸೆಲೆರಿಯೊ ಹ್ಯಾಚ್‌ಬ್ಯಾಕ್

ಹೊಸ ಕಾರುಗಳು ರೂ.5 ಲಕ್ಷದಿಂದ ರೂ.8 ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿದ್ದು, ಪೆಟ್ರೋಲ್ ಮಾದರಿಯಲ್ಲಿ ಮಾತ್ರವೇ ಮಾರಾಟಗೊಳ್ಳಲಿವೆ. ಆದರೆ ಹೊಸ ಕಾರುಗಳ ತಾಂತ್ರಿಕ ಮಾಹಿತಿ ಕುರಿತಂತೆ ಯಾವುದೇ ಮಾಹಿತಿ ನೀಡದ ಮಾರುತಿ ಸುಜುಕಿಯು ಮುಂದಿನ ದೀಪಾವಳಿ ಹೊತ್ತಿಗೆ ಬಿಡುಗಡೆ ಮಾಡುವ ಸಾಧ್ಯತೆಗಳಿವೆ.

ಇದೇ ವರ್ಷಾಂತ್ಯಕ್ಕೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಸೆಲೆರಿಯೊ ಹ್ಯಾಚ್‌ಬ್ಯಾಕ್

ಇನ್ನು ಏಪ್ರಿಲ್ 1ರಿಂದ ಜಾರಿಗೆ ಬಂದಿರುವ ಬಿಎಸ್-6 ಹೊಸ ಎಮಿಷನ್ ಪ್ರಕಾರ ಡೀಸೆಲ್ ಕಾರುಗಳ ಮಾರಾಟದಲ್ಲಿ ಮಹತ್ವದ ಬದಲಾವಣೆ ತಂದಿರುವ ಮಾರುತಿ ಸುಜುಕಿ ಕಂಪನಿಯು ಕಡಿಮೆ ಸಾಮರ್ಥ್ಯದ ಡೀಸೆಲ್ ಕಾರುಗಳಿಗೆ ಗುಡ್‌ಬೈ ಹೇಳಿದ್ದು, ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್ ಮತ್ತು ಸಿಎನ್‌ಜಿ ಕಾರುಗಳ ಮೇಲೆ ಹೆಚ್ಚು ಒತ್ತು ನೀಡುತ್ತಿದೆ.

MOST READ: ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು

ಇದೇ ವರ್ಷಾಂತ್ಯಕ್ಕೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಸೆಲೆರಿಯೊ ಹ್ಯಾಚ್‌ಬ್ಯಾಕ್

ಮಾಲಿನ್ಯ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರವು ಕೆಲವು ಕಠಿಣ ನಿಯಮಗಳನ್ನು ಜಾರಿಗೆ ತಂದಿದ್ದು, ಇದು ಸಣ್ಣ ಗಾತ್ರದ ಕಾರುಗಳಲ್ಲಿನ ಡೀಸೆಲ್ ಎಂಜಿನ್ ಮಾರಾಟದಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಿದೆ.

ಇದೇ ವರ್ಷಾಂತ್ಯಕ್ಕೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಸೆಲೆರಿಯೊ ಹ್ಯಾಚ್‌ಬ್ಯಾಕ್

ಇದರಿಂದ ಮಾರುತಿ ಸುಜುಕಿ ಸೇರಿದಂತೆ ಬಹುತೇಕ ಕಾರು ಉತ್ಪಾದನಾ ಕಂಪನಿಗಳು ಎಂಟ್ರಿ ಲೆವಲ್ ಕಾರು ಮಾದರಿಗಳಲ್ಲಿ ಡೀಸೆಲ್ ಕಾರುಗಳ ಮಾರಾಟವನ್ನು ಸ್ಥಗಿತಗೊಳಿಸಿದ್ದು, ಡೀಸೆಲ್ ಎಂಜಿನ್‌ಗೆ ಪರ್ಯಾಯವಾಗಿ ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್ ಮತ್ತು ಸಿಎನ್‌ಜಿ ಆಯ್ಕೆಯನ್ನು ಹೆಚ್ಚಿಸುತ್ತಿದೆ.

MOST READ: ಕರೋನಾ ಕಾರಣಕ್ಕೆ ಕಾರಿನಲ್ಲೇ ತಂಗುತ್ತಿರುವ ವೈದ್ಯ..!

ಇದೇ ವರ್ಷಾಂತ್ಯಕ್ಕೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಸೆಲೆರಿಯೊ ಹ್ಯಾಚ್‌ಬ್ಯಾಕ್

ಇದಕ್ಕೆ ಕಾರಣ, ಬಿಎಸ್-6 ಉನ್ನತೀಕರಣವು ಕಾರುಗಳ ಬೆಲೆಯಲ್ಲಿ ಸಾಕಷ್ಟು ದುಬಾರಿಯಾಗಲಿದ್ದು, ಇದಕ್ಕಾಗಿಯೇ ಮಾರುತಿ ಸುಜುಕಿಯು ರೂ.10 ಲಕ್ಷದೊಳಗಿನ ಕಾರುಗಳಲ್ಲಿ ಡೀಸೆಲ್ ಎಂಜಿನ್ ಆಯ್ಕೆಯ ಬಗೆಗೆ ಹೆಚ್ಚು ತೆಲೆಕೆಡಿಸಿಕೊಳ್ಳುತ್ತಿಲ್ಲ.

ಇದೇ ವರ್ಷಾಂತ್ಯಕ್ಕೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಸೆಲೆರಿಯೊ ಹ್ಯಾಚ್‌ಬ್ಯಾಕ್

ಮಾಹಿತಿಗಳ ಪ್ರಕಾರ, ಮಾರುತಿ ಸುಜುಕಿ ಸಂಸ್ಥೆಯು ಹೈ ಎಂಡ್ ಮಾದರಿಗಳಲ್ಲಿ ಮಾತ್ರವೇ ಹೊಸದಾಗಿ 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ನೀಡಲಿದ್ದು, ಇನ್ನುಳಿದಂತೆ ಕಡಿಮೆ ಎಂಜಿನ್ ಸಾಮಾರ್ಥ್ಯದ ಕಾರುಗಳಲ್ಲಿ ಪೆಟ್ರೋಲ್ ಮತ್ತು ಪೆಟ್ರೋಲ್ ಹೈಬ್ರಿಡ್ ಎಂಜಿನ್ ಆಯ್ಕೆಗಳು ಮುಂದುವರಿಯಲಿವೆ.

MOST READ: ಕರೋನಾ ವೈರಸ್ ವಿರುದ್ದದ ಹೋರಾಟಕ್ಕಾಗಿ ರೂ.100 ಕೋಟಿ ದೇಣಿಗೆ ನೀಡಿದ ಬಜಾಜ್ ಗ್ರೂಪ್

ಇದೇ ವರ್ಷಾಂತ್ಯಕ್ಕೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಸೆಲೆರಿಯೊ ಹ್ಯಾಚ್‌ಬ್ಯಾಕ್

ಹೀಗಾಗಿ ಮುಂಬರುವ ಮಾರುತಿ ಸುಜುಕಿ ಹೊಸ ಕಾರುಗಳಲ್ಲೂ ಪೆಟ್ರೋಲ್, ಸ್ಮಾರ್ಟ್ ಹೈಬ್ರಿಡ್ ತಂತ್ರಜ್ಞಾನ ಪ್ರೇರಿತ ಪೆಟ್ರೋಲ್ ಮತ್ತು ಸಿಎನ್‌ಜಿ ಆಯ್ಕೆಗಳು ಮಾತ್ರ ಖರೀದಿಗೆ ಲಭ್ಯವಿರಲಿದ್ದು, ಇದು ಮಾಲಿನ್ಯ ತಗ್ಗಿಸುವಲ್ಲಿ ಪ್ರಮುಖ ಪಾತ್ರವಹಿಸಲಿದೆ.

Most Read Articles

Kannada
English summary
New-Gen Maruti Celerio To Launch This Year. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X