2021ಕ್ಕೆ ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಆಕ್ಟೀವಿಯಾ ಕಾರು

ಸ್ಕೋಡಾ ಕಂಪನಿಯು ತನ್ನ ಹೊಸ ತಲೆಮಾರಿನ ಆಕ್ಟೀವಿಯಾ ಕಾರನ್ನು ಕಳೆದ ವರ್ಷದ ನವೆಂಬರ್‌ ತಿಂಗಳಲ್ಲಿ ಜಾಗತಿಕವಾಗಿ ಅನಾವರಣಗೊಳಿಸಿತ್ತು. ಇದೀಗ ಸ್ಕೋಡಾ ಇಂಡಿಯಾ ಕಂಪನಿಯು ಹೊಸ ತಲೆಮಾರಿನ ಆಕ್ಟೀವಿಯಾ ಕಾರನ್ನು ಭಾರತದಲ್ಲಿ ಪರಿಚಯಿಸಲು ಸಜ್ಜಾಗುತ್ತಿದೆ.

2021ಕ್ಕೆ ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಆಕ್ಟೀವಿಯಾ ಕಾರು

ಹಿಂದಿನ ತಲೆಮಾರಿನ ಸ್ಕೋಡಾ ಆಕ್ಟೀವಿಯಾ ಕಾರನ್ನು 2013ರಲ್ಲಿ ಭಾರತದಲ್ಲಿ ಬಿಡುಗಡೆಗೊಳಿಸಿದ್ದರು. ಈ ಕಾರು ಉತ್ತಮವಾಗಿ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗಿದೆ. ಆದರೆ ಸ್ಕೋಡಾ ಕಂಪನಿಯು ಈ ಆಕ್ಟೀವಿಯಾ ಕಾರನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗಿಲ್ಲ. ಆದರೆ ಈ ವರ್ಷದ ಕೊನೆಯಲ್ಲಿ ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿ ಆಕ್ಟೀವಿಯಾ ಕಾರನ್ನು ಬಿಡುಗಡೆಗೊಳಿಸಬೇಕಿತ್ತು. ಆದರೆ ಸ್ಕೋಡಾ ಕಂಪನಿಯು ಈ ಕಾರಿನ ಬಿಡುಗಡೆಯನ್ನು ಮುಂದಿನ ವರ್ಷಕ್ಕೆ ಮುಂದೂಡಿದೆ.

2021ಕ್ಕೆ ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಆಕ್ಟೀವಿಯಾ ಕಾರು

ಹೊಸ ಆಕ್ಟೀವಿಯಾ ಕಾರನ್ನು ಮುಂದಿನ ವರ್ಷದ ಮದ್ಯದಲ್ಲಿ ಬಿಡುಗಡೆಗೊಳಿಸಲಿದೆ ಎಂದು ಸ್ಕೋಡಾ ಕಂಪನಿಯು ಹೇಳಿದೆ. ಈ ವರ್ಷ ಸ್ಕೋಡಾ ಕಂಪನಿಯು ವಿಷನ್ ಇನ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಲಿದೆ. ಇನ್ನು ಸ್ಕೋಡಾ ಆಕ್ಟೀವಿಯಾ ಕಾರು ಭಾರತದಲ್ಲಿ ಹಲವು ಬಾರಿ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

2021ಕ್ಕೆ ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಆಕ್ಟೀವಿಯಾ ಕಾರು

ಹೊಸ ಆಕ್ಟೀವಿಯಾ ಕಾರು ಹೊಸ ಎಲ್ಇಡಿ ಹೆಡ್ ಲೈಟ್ ಮತ್ತು ಎಲ್ಇಡಿ ಡಿಆರ್ಎಲ್ ಗಳನ್ನು ಹೊಂದಿದೆ. ಇದರೊಂದಿಗೆ ಎಲ್ಇಡಿ ಪಾಗ್ ಲ್ಯಾಂಪ್ ಅನ್ನು ಸಹ ಹೊಂದಿದೆ. ಇದರೊಂದಿಗೆ ಎಲ್‌ಇಡಿ ಟೈಲ್-ಲೈಟ್ ಮತ್ತು ಹೊಸ 17 ಇಂಚಿನ ‘ರೋಟಾರೆ ಏರೋ' ಅಲಾಯ್ ವ್ಹೀಲ್ ಗಳನ್ನು ಹೊಂದಿದೆ.

2021ಕ್ಕೆ ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಆಕ್ಟೀವಿಯಾ ಕಾರು

ಇಂಟಿರಿಯರ್‍‍ನಲ್ಲಿ ಎಲೆಕ್ಟ್ರಾನಿಕ್ ಆಗಿ ಅಡ್ಜಸ್ಟ್ ಮಾಡಬಹುದಾದ ಫ್ರಂಟ್ ಸೀಟ್ ಮುಂಭಾಗದ ಸೀಟ್‍ ಅಲ್ಕಾಂಟರ್ ಲೆದರ್, ಸ್ಟ್ಯಾಂಡರ್ಡ್ ಲ್ಯಾಪ್ ಟೈಮರ್ ಮತ್ತು ಇಂಟರ್‍‍ನೆಟ್ ಕನೆಕ್ಟಿವಿಟಿ ಫೀಚರ್ಸ್‍‍ಗಳೊಂದಿಗೆ 10 ಇಂಚಿನ ಟಚ್‍‍ಸ್ಕ್ರೀನ್ ಇನ್ಫೋಟೇನ್‍ಮೆಂಟ್‍ ಸಿಸ್ಟಂ ಅನ್ನು ಹೊಂದಿದೆ.

MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

2021ಕ್ಕೆ ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಆಕ್ಟೀವಿಯಾ ಕಾರು

ಹೊಸ ಸ್ಕೋಡಾ ಅಕ್ಟೀವಾ ಕ್ರ್ಯಾಶ್ ಟೆಸ್ಟ್ ನಲ್ಲಿ ಉತ್ತಮ ರೇಟಿಂಗ್ ಪಡೆದುಕೊಂಡಿದೆ. 2020ರ ಸ್ಕೋಡಾ ಆಕ್ಟೀವಿಯಾ ಹೊಸ ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿದೆ. ಯುರೋ ಎನ್‍‍‍ಸಿ‍ಎಪಿ ನಡೆಸಿದ ಕ್ರ್ಯಾಶ್ ಟೆಸ್ಟ್ ನಲ್ಲಿ ಸ್ಕೋಡಾ ಆಕ್ಟೀವಾ ಸಂಪೂರ್ಣ 5 ಸ್ಟಾರ್ ರೇಟಿಂಗ್ ಪಡೆದಿದೆ.

2021ಕ್ಕೆ ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಆಕ್ಟೀವಿಯಾ ಕಾರು

ಸೈಡ್ ಬ್ಯಾರಿಯರ್ ಟೆಸ್ಟ್ ನಲ್ಲಿ ಕಾರಿನ ಕ್ರಿಟಿಕಲ್ ಬಾಡಿಯು ಉತ್ತಮ ರಕ್ಷಣೆಯನ್ನು ಹೊಂದಿದೆ ಎಂದು ರೇಟಿಂಗ್ ನೀಡಲಾಗಿದೆ. ಹೊಸ ಸ್ಕೋಡಾ ಅಕ್ಟೀವಿಯಾ ಚಿಲ್ಡ್ ಒಕಿಪ್ಯಾಡ್ ಪ್ರೊಟಕ್ಷನ್ ಟೆಸ್ಟ್ ನಲ್ಲಿ 43.2 ಅಂಕಗಳನ್ನು ಗಳಿಸಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

2021ಕ್ಕೆ ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಆಕ್ಟೀವಿಯಾ ಕಾರು

ಅಲ್ಲದೇ ಹೊಸ ಆಕ್ಟೀವಿಯಾ ಕಾಂಬಿ ವರ್ಷನ್ ಟೆಸ್ಟ್ ನಲ್ಲಿ 48ಕ್ಕೆ 35.3 ಅಂಕಗಳು, ಪೆಡಸ್ಟ್ರೈನ್ ಸುರಕ್ಷತಾ ಟೆಸ್ಟ್ ನಲ್ಲಿ 13ಕ್ಕೆ 10.3 ಅಂಕಗಳನ್ನು ಪಡೆದಿದೆ. ಕಂಪನಿಯ ಜನಪ್ರಿಯ ಮಾದರಿ ಹೊಸ ಆಕ್ಟೀವಿಯಾ 4,690 ಎಂಎಂ ಉದ್ದ, 1,829 ಎಂಎಂ ಅಗಲ ಮತ್ತು 1,470 ಎಂಎಂ ಎತ್ತರವನ್ನು ಹೊಂದಿದೆ.

2021ಕ್ಕೆ ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಆಕ್ಟೀವಿಯಾ ಕಾರು

ಈ ಕಾರು 2,686 ಎಂಎಂ ವ್ಹೀಲ್‍‍ಬೇಸ್ ಹೊಂದಿದೆ. ಹೊಸ ಆಕ್ಟೀವಿಯಾದ ಬೂಟ್ ಸ್ಪೇಸ್ 600 ಲೀಟರ್‍ ಆಗಿದ್ದು, ಹಿಂದಿನ ಕಾರಿಗೆ ಹೋಲಿಸಿದರೆ 30 ಲೀಟರ್‍‍ನಷ್ಟು ಹೆಚ್ಚಾಗಿದೆ. ಹೊಸ ಕಾರಿನಲ್ಲಿ ಇಂಟಿಗ್ರೇಟೆಡ್ ಡೇಟೈಮ್ ರನ್ನಿಂಗ್ ಲೈಟ್, ಟ್ರೆಪೆಜ್ ಆಕರಾದ ಎಕ್ಸಾಸ್ಟ್ ಟಿಪ್ಸ್ ಮತ್ತು ಮುಂಭಾಗದ ಬ್ಲ್ಯಾಕ್ ಗ್ರಿಲ್‍‍ನಲ್ಲಿ ಡ್ಯುಯಲ್ ಸ್ಪ್ಲಿಟ್ ಹೆಡ್‍‍ಲ್ಯಾಂಪ್‍‍ಗಳನ್ನು ಹೊಂದಿರಲಿದೆ.

2021ಕ್ಕೆ ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಆಕ್ಟೀವಿಯಾ ಕಾರು

ಇನ್ನು ಹೊಸ ಸ್ಕೋಡಾ ಆಕ್ಟೀವಿಯಾ ಕಾರಿನಲ್ಲಿ 1.5-ಲೀಟರ್ ಟಿಎಸ್ಐ ಎಂಜಿನ್ ಮತ್ತು ಲೀಟರ್ ಟಿಎಸ್‌ಐ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಬಹುದು. ಇದು ಉತ್ತಮ ಕಾರ್ಯಕ್ಷಮತೆಯನ್ನು ಹೊಂದಿರುವ ಸೆಡಾನ್ ಆಗಿರಲಿದೆ. ಹೊಸ ಸ್ಕೋಡಾ ಆಕ್ಟೀವಿಯಾ ಕಾರು ಎಂಕ್ಯೂವಿ ಪ್ಲಾಟ್‌ಫಾರ್ಮ್‌ನಡಿಯಲ್ಲಿ ಅಭಿವೃದ್ದಿಪಡಿಸಲಾಗುತ್ತದೆ.

Most Read Articles

Kannada
Read more on ಸ್ಕೋಡಾ skoda
English summary
New-gen Skoda Octavia India Lunch Details. Read In Kannada.
Story first published: Thursday, November 26, 2020, 20:46 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X