ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್
ಜಪಾನ್ ಮೂಲದ ವಾಹನ ತಯಾರಕ ಕಂಪನಿಯಾದ ಟೊಯೊಟಾ ತನ್ನ ಹೊಸ ತಲೆಮಾರಿನ ಲ್ಯಾಂಡ್ ಕ್ರೂಸರ್ ಅನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ. ಟೊಯೊಟಾ ಲ್ಯಾಂಡ್ ಕ್ರೂಸರ್ ಹಲವಾರು ದಶಕಗಳಿಂದ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಮಾದರಿಯಾಗಿದೆ.

ಬಹುದೀರ್ಘ ಕಾಲದಿಂದಲೂ ಟೊಯೊಟಾ ಲ್ಯಾಂಡ್ ಕ್ರೂಸರ್ ಜನಪ್ರಿಯ ಎಸ್‍ಯುವಿಯಾಗಿದೆ, ಲ್ಯಾಂಡ್ ಕ್ರೂಸರ್ ಎಸ್‍ಯುವಿಯನ್ನು 1951ರಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ ಲ್ಯಾಂಡ್ ಕ್ರೂಸರ್ ಸುಮಾರು 12ವರ್ಷಗಳಿಂದ ಲಭ್ಯವಿರುವ ಮಾದರಿಯಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯ ಜನಪ್ರಿಯತೆ ಮತ್ತು ಬೇಡಿಕೆಯು ಕಡಿಮೆಯಾಗಿದೆ. ಟೊಯೊಟಾ ಲ್ಯಾಂಡ್ ಕ್ರೂಸರ್ ಒಂದು ಕಾಲದಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಪಾರುಪತ್ಯ ಸಾಧಿಸಿದ ಎಸ್‍ಯುವಿಯಾಗಿದೆ.

ಹೊಸ ತಲೆಮಾರಿನ್ ಎಸ್‍ಯುವಿಯನ್ನು 3.5-ಲೀಟರ್ ವಿ 6 ಪೆಟ್ರೋಲ್ ಎಂಜಿನ್ ಅನ್ನು ಒಳಗೊಂಡಿರುವ ಹೈಬ್ರಿಡ್ ಸೆಟಪ್ನಿಂದ ನಿಯಂತ್ರಿಸಲ್ಪಡುತ್ತದೆ ಮತ್ತು ಎಲೆಕ್ಟ್ರಿಕ್ ಮೋಟರ್ ಅನ್ನು ಹೊಂದಿರುತ್ತದೆ.

ಈ ಹೈಬ್ರಿಡ್ ಎಂಜಿನ್ 295 ಬಿಹೆಚ್‍ಪಿ ಪವರ್ ಮತ್ತು 356 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಪ್ರಸ್ತುತ ಜನರೇಷನ್ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿನಲ್ಲಿ ಇರುವ 8-ಸ್ಪೀಡ್ ಆಟೋಮ್ಯಾಟಿಕ್ ಗೇರ್‍ಬಾಕ್ಸ್ ಬದಲಾಯಿಸುತ್ತದೆ. ಹೊಸ ಜನರೇಷನ್ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿನಲ್ಲಿ 10 ಸ್ಪೀಡ್ ಆಟೋಮ್ಯಾಟಿಕ್ ಗೇರ್‍ಬಾಕ್ಸ್ ಅನ್ನು ಅಳವಡಿಸಲಾಗುತ್ತದೆ.

ಇನ್ನು ಜಾಗತಿಕ ಮಾರುಕಟ್ಟೆಯಲ್ಲಿರುವ ಮಾದರಿಯಲ್ಲಿ 4.6-ಲೀಟರ್ ವಿ 8 ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 313 ಬಿಹೆಚ್‍ಪಿ ಪವರ್ ಮತ್ತು 460 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಇನ್ನು ಅಮೆರಿಕಾ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿನಲ್ಲಿ 5.7-ಲೀಟರ್ ವಿ 8 ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 381 ಬಿಹೆಚ್‍ಪಿ ಪವರ್ ಮತ್ತು 544 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ

ಹೊಸ ತಲೆಮಾರಿನ ಟೊಯೋಟಾ ಲ್ಯಾಂಡ್ ಕ್ರೂಸರ್ ಅನ್ನು ಕಂಪನಿಯ ಟಿಎನ್‌ಜಿಎ ಮಾಡ್ಯುಲರ್ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ. ಹೊಸ ಲ್ಯಾಂಡ್ ರೋವರ್ ಲ್ಯಾಡರ್-ಆನ್-ಫ್ರೇಮ್ ಚಾಸಿಸ್ ಅನ್ನು ಹೊಂದಿದೆ.

ಹೊಸ ಪ್ಲಾಟ್‌ಫಾರ್ಮ್‌ನಲ್ಲಿ ಅಭಿವೃದ್ದಿಪಡಿಸುತ್ತಿರುವ ಲ್ಯಾಂಡ್ ಕ್ರೂಸರ್ ಎಸ್‍ಯುವಿಯ ತೂಕದಲ್ಲಿ ಗಮನಾರ್ಹವಾಗಿ ಇಳಿಕೆಯಾಗಬಹುದು. ಇನ್ನು ಪವರ್ ಮತ್ತು ಟಾರ್ಕ್ ಅಂಕಿ ಅಂಶದಲ್ಲಿ ಕೂಡ್ ಇಳಿಕೆಯಾಗುತ್ತದೆ.

2020ರ ಟೊಯೋಟಾ ಲ್ಯಾಂಡ್ ಕ್ರೂಸರ್ ಹೊಸ ವಿನ್ಯಾಸವನ್ನು ಹೊಂದಿರುತ್ತದೆ. ಈ ಎಸ್‍ಯುವಿಯಲ್ಲಿ ಹೊಸ ಟ್ರೆಪೆಜಾಯಿಡಲ್ ಗ್ರಿಲ್ ಅನ್ನು ಅಳವಡಿಸಬಹುದು. ಇನ್ನು ಇಂಟಿರಿಯರ್ ನಲ್ಲಿ ಹೊಸ ಫೀಚರ್ಸ್‍ಗಳನ್ನು ಅಳವಡಿಸಬಹುದು ಎಂದು ನಿರೀಕ್ಷಿಸುತ್ತೇವೆ. ಟೊಯೊಟಾ ಕಂಪನಿಯು ಈ ಎಸ್‍ಯುವಿಯನ್ನು ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಗೊಳಿಸಲಿದೆ.


Click it and Unblock the Notifications