ಭಾರತದಲ್ಲಿ ಬಿಡುಗಡೆಯಾಗಲು ಸಜ್ಜಾಗುತ್ತಿದೆ ಹೊಸ ವೊಲ್ವೊ ಎಸ್60 ಕಾರು

ಸ್ವೀಡಿಷ್ ಕಾರು ಉತ್ಪಾದನಾ ಕಂಪನಿಯಾದ ವೊಲ್ವೊ ತನ್ನ ಎಸ್60 ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಸ್ಥಗಿತಗೊಳಿಸಲಾಗಿತ್ತು. ಆದರೆ ಈ ವೊಲ್ವೊ ಎಸ್60 ಕಾರು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯೊಂದಿಗೆ ಮಾರಾಟವಾಗುತ್ತಿದೆ.

ಭಾರತದಲ್ಲಿ ಬಿಡುಗಡೆಯಾಗಲು ಸಜ್ಜಾಗುತ್ತಿದೆ ಹೊಸ ವೊಲ್ವೊ ಎಸ್60 ಕಾರು

ವೊಲ್ವೊ ಕಂಪನಿಯು ಭಾರತಲ್ಲಿ ಮತ್ತೊಮ್ಮೆ ಎಸ್60 ಕಾರನ್ನು ಬಿಡುಗಡೆಗೊಳಿಸಲಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಗ್ರಾಹಕರ ಮೆಚ್ಚುಗೆಯನ್ನು ಪಡೆದುಕೊಂಡ ಈ ಹೊಸ ವೊಲ್ವೊ ಎಸ್60 ಕಾರು ಮುಂದಿನ ವರ್ಷದ ಆರಂಭದಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ವೊಲ್ವೊ ಎಸ್60 ಆಕರ್ಷಕ ವಿನ್ಯಾಸವನ್ನು ಹೊಂದಿರುವ ಸೆಡಾನ್ ಆಗಿದೆ.

ಭಾರತದಲ್ಲಿ ಬಿಡುಗಡೆಯಾಗಲು ಸಜ್ಜಾಗುತ್ತಿದೆ ಹೊಸ ವೊಲ್ವೊ ಎಸ್60 ಕಾರು

ಹೊಸ ತಲೆಮಾರಿನ ವೊಲ್ವೊ ಎಸ್60 ಕಾರಿಗಾಗಿ ಮುಂದಿನ ವರ್ಷದ ಜನವರಿ ತಿಂಗಳಲ್ಲಿ ಭಾರತದಲ್ಲಿ ಬುಕ್ಕಿಂಗ್ ಪ್ರಾರಂಭವಾಗಲಿದೆ. ಜನವರಿಯಲ್ಲಿ ಬುಕ್ಕಿಂಗ್ ಪ್ರಾರಂಭಿಸಿ ಎರಡು ತಿಂಗಳುಗಳ ಬಳಿಕ ಈ ಹೊಸ ವೊಲ್ವೊ ಎಸ್60 ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಭಾರತದಲ್ಲಿ ಬಿಡುಗಡೆಯಾಗಲು ಸಜ್ಜಾಗುತ್ತಿದೆ ಹೊಸ ವೊಲ್ವೊ ಎಸ್60 ಕಾರು

ಹೊಸ ತಲೆಮಾರಿನ ವೊಲ್ವೊ ಎಸ್60 ಕ್ರಿಸ್ಟಲ್ ವೈಟ್ ಪರ್ಲ್, ಓನಿಕ್ಸ್ ಬ್ಲ್ಯಾಕ್, ಮ್ಯಾಪಲ್ ಬ್ರೌನ್, ಡೆನಿಮ್ ಬ್ಲೂ ಮತ್ತು ಫ್ಯೂಷನ್ ರೆಡ್ ಎಂಬ ಐದು ರೀತಿಯ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಿರಲಿದೆ. ಈ ಹೊಸ ವೊಲ್ವೊ ಎಸ್60 4,761 ಎಂಎಂ ಉದ್ದ, 2,040 ಎಂಎಂ ಅಗಲ ಮತ್ತು 1,431 ಎಂಎಂ ಎತ್ತರವನ್ನು ಹೊಂದಿದೆ.

ಭಾರತದಲ್ಲಿ ಬಿಡುಗಡೆಯಾಗಲು ಸಜ್ಜಾಗುತ್ತಿದೆ ಹೊಸ ವೊಲ್ವೊ ಎಸ್60 ಕಾರು

ಈ ಹೊಸ ತಲೆಮಾರಿನ ವೊಲ್ವೊ ಎಸ್60 ಉದ್ದದ 2,872 ಎಂಎಂ ವ್ಹೀಲ್ ಬೇಸ್ ಅನ್ನು ಹೊಂದಿದೆ. ಇನ್ನು ಈ ಹೊಸ ವೊಲ್ವೊ ಎಸ್60 ಸೆಡಾನ್ ಒಳಭಾಗದಲ್ಲಿ ಉತ್ತಮ ಸ್ಪೇಸ್ ಅನ್ನು ಹೊಂದಿದೆ. ಈ ವೊಲ್ವೊ ಎಸ್60 ಕಾರಿನಲ್ಲಿ 19 ಇಂಚಿನ ಅಲಾಯ್ ವ್ಹೀಲ್ ಅನ್ನು ಹೊಂದಿದೆ.

MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ಭಾರತದಲ್ಲಿ ಬಿಡುಗಡೆಯಾಗಲು ಸಜ್ಜಾಗುತ್ತಿದೆ ಹೊಸ ವೊಲ್ವೊ ಎಸ್60 ಕಾರು

ಇನ್ನು ಈ ಹೊಸ ವೊಲ್ವೊ ಎಸ್60 ಕಾರಿನಲ್ಲಿ 2.0-ಲೀಟರ್ ನಾಲ್ಕು ಸಿಲಿಂಡರ್ ಪೆಟ್ರೋಲ್ ಎಂಜಿನ್‌ ಅನ್ನು ಹೊಂದಿದೆ. ಈ ಎಂಜಿನ್ 190 ಬಿಹೆಚ್‍ಪಿ ಪವರ್ ಮತ್ತು 300 ಎನ್‌ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 8-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲು ಸಜ್ಜಾಗುತ್ತಿದೆ ಹೊಸ ವೊಲ್ವೊ ಎಸ್60 ಕಾರು

ಹೊಸ ವೊಲ್ವೊ ಎಸ್60 ಕಾರಿನ ಇಂಟಿರಿಯರ್ ನಲ್ಲಿ ಹಲವಾರು ಐಷಾರಾಮಿ ಫೀಚರ್ ಗಳನ್ನು ಹೊಂದಿವೆ. ಈ ಕಾರಿನ ಇಂಟಿರಿಯರ್ ವೈಟ್ ಮತ್ತು ಗ್ರೇ ಎಂಬ ಡ್ಯುಯಲ್-ಟೋನ್ ಬಣ್ಣಗಳಿಂದ ಕೂಡಿದೆ. ಈ ಕಾರಿನ ಇಂಟಿರಿಯರ್ ಆಕರ್ಷಕವಾಗಿದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಭಾರತದಲ್ಲಿ ಬಿಡುಗಡೆಯಾಗಲು ಸಜ್ಜಾಗುತ್ತಿದೆ ಹೊಸ ವೊಲ್ವೊ ಎಸ್60 ಕಾರು

ಈ ಹೊಸ ಕಾರಿನ ಇಂಟಿರಿಯರ್ ನಲ್ಲಿ ಡಿಜಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಆಟೋಮ್ಯಾಟಿಕ್ ಕ್ಲೈಮೇಂಟ್ ಕಂಟ್ರೋಲ್, ಕೀ ಲೇಸ್ ಎಂಟ್ರಿ, ವೈರ್‌ಲೆಸ್ ಚಾರ್ಜಿಂಗ್ ಮತ್ತು ಹರ್ಮನ್ ಕಾರ್ಡನ್ ಮ್ಯೂಸಿಕ್ ಸಿಸ್ಟಂ ಅನ್ನು ಹೊಂದಿದೆ. ಹಿಂದಿನ ಮಾದರಿಗೆ ಹೋಲಿಸಿದರೆ ಡ್ಯಾಶ್‌ಬೋರ್ಡ್ ಮತ್ತು ಸೆಂಟರ್ ಕನ್ಸೋಲ್ ಅತ್ಯಾಧುನಿಕ ಸ್ಟೈಲಿಂಗ್ ಅನ್ನು ಹೊಂದಿದೆ.

ಭಾರತದಲ್ಲಿ ಬಿಡುಗಡೆಯಾಗಲು ಸಜ್ಜಾಗುತ್ತಿದೆ ಹೊಸ ವೊಲ್ವೊ ಎಸ್60 ಕಾರು

ಹೊಸ ವೊಲ್ವೊ ಎಸ್60 ಭಾರತೀಯ ಮಾರುಕಟ್ಟೆಯಲ್ಲಿ ಬ್ರ್ಯಾಂಡ್‌ನ ಎಂಟ್ರಿ ಲೆವೆಲ್ ಸೆಡಾನ್ ಆಗಿರಲಿದೆ. ಈ ಹೊಸ ವೊಲ್ವೊ ಎಸ್60 ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಮರ್ಸಿಡಿಸ್ ಬೆಂಝ್ ಸಿ-ಕ್ಲಾಸ್, ಬಿಎಂಡಬ್ಲ್ಯು 3 ಸೀರಿಸ್ ಮತ್ತು ಆಡಿ ಎ4 ಕಾರುಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
English summary
New-Gen Volvo S60 India Launch Confirmed For March 2021. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X