ಹೊಸ ಮರ್ಸಿಡಿಸ್ ಬೆಂಝ್ ಜಿಎಲ್ಎಸ್ ಎಸ್‍ಯುವಿಯ ಟೀಸರ್ ಬಿಡುಗಡೆ

ಜರ್ಮನಿಯ ಐಷಾರಾಮಿ ಕಾರು ತಯಾರಕ ಕಂಪನಿ ಮರ್ಸಿಡಿಸ್ ಬೆಂಝ್ ತನ್ನ ಹೊಸ ಜಿಎಲ್ಎಸ್ ಎಸ್‍ಯುವಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಇದೀಗ ಮರ್ಸಿಡಿಸ್ ಬೆಂಝ್ ಕಂಪನಿಯು ಹೊಸ ಜಿಎಲ್ಎಸ್ ಎಸ್‌ಯುವಿಯ ಟೀಸರ್ ಅನ್ನು ಬಿಡುಗಡೆಗೊಳಿಸಿದೆ.

ಹೊಸ ಮರ್ಸಿಡಿಸ್ ಬೆಂಝ್ ಜಿಎಲ್ಎಸ್ ಎಸ್‍ಯುವಿಯ ಟೀಸರ್ ಬಿಡುಗಡೆ

ಮರ್ಸಿಡಿಸ್ ಕಂಪನಿಯು ಬಿಡುಗಡೆಗೊಳಿಸಿದ ಟೀಸರ್ ವೀಡಿಯೋದಲ್ಲಿ ಜಿಎಲ್ಎಸ್ ಎಸ್‌ಯುವಿಯ ವಿನ್ಯಾಸದಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ. ಟೀಸರ್ ವೀಡಿಯೋದಲ್ಲಿ ಈ ಎಸ್‍ಯುವಿಯ ಹೆಡ್ ಲ್ಯಾಂಪ್ ಮತ್ತು ಟೇಲ್ ಲ್ಯಾಂಪ್‍ಗಳ ಆಕರ್ಷಕವಾಗಿದೆ. ಜಿಎಲ್ಎಸ್ ಎಸ್‍ಯುವಿಯ 22 ಇಂಚಿನ ಅಲಾಯ್ ವೀಲ್ ವಿನ್ಯಾಸವನ್ನು ಸಹ ಬಹಿರಂಗಪಡಿಸಿದೆ. ಟೀಸರ್ ವೀಡಿಯೋದಲ್ಲಿ ಈ ಎಸ್‍ಯುವಿಯ ಸೈಡ್ ಲುಕ್ ಅನ್ನು ಪ್ರದರ್ಶಿಸಲಾಗಿದೆ.

ಹೊಸ ಮರ್ಸಿಡಿಸ್ ಬೆಂಝ್ ಜಿಎಲ್ಎಸ್ ಎಸ್‍ಯುವಿಯ ಟೀಸರ್ ಬಿಡುಗಡೆ

ಈ ಎಸ್‍ಯುವಿಯನ್ನು 2019ರ ಏಪ್ರಿಲ್ ತಿಂಗಳಲ್ಲಿ ಅನಾವರಣಗೊಳಿಸಿಸಲಾಗಿತ್ತು. 2020ರ ಮರ್ಸಿಡಿಸ್ ಜಿಎಲ್ಎಸ್ ಕಂಪನಿಯು ಹೊಸ ಎಸ್‍ಯುವಿಯ ಹೊರಭಾಗದಲ್ಲಿ ಕೆಲವು ನವೀಕರಣಗಳನ್ನು ಮಾಡಲಾಗಿದೆ.

ಹೊಸ ಮರ್ಸಿಡಿಸ್ ಬೆಂಝ್ ಜಿಎಲ್ಎಸ್ ಎಸ್‍ಯುವಿಯ ಟೀಸರ್ ಬಿಡುಗಡೆ

ಈ ಎಸ್‍ಯುವಿಯಲ್ಲಿ ಹೊಸ ಎರಡು-ಸ್ಲ್ಯಾಟ್ ಗ್ರಿಲ್, ಮಲ್ಟಿ-ಬೀಮ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಮುಂಭಾಗ ಮತ್ತು ಹಿಂಭಾಗದ ಬಂಪರ್‌ಗಳು, ಹೊಸ ಎಲ್‌ಇಡಿ ಟೈಲ್‌ಲೈಟ್‌ಗಳು ಮತ್ತು ಡ್ಯುಯಲ್ ಎಕ್ಸಾಸ್ಟ್ ಪೋರ್ಟ್‌ಗಳನ್ನು ಅಳವಡಿಸಲಾಗಿದೆ.

ಹೊಸ ಮರ್ಸಿಡಿಸ್ ಬೆಂಝ್ ಜಿಎಲ್ಎಸ್ ಎಸ್‍ಯುವಿಯ ಟೀಸರ್ ಬಿಡುಗಡೆ

ಹೊಸ ಮರ್ಸಿಡಿಸ್ ಬೆಂಝ್ ಜಿಎಲ್ಎಸ್ ಎಸ್‍ಯುವಿಯ ಇಂಟಿರಿಯರ್ ನಲ್ಲಿ ಹೊಸ ಅತ್ಯಾಧುನಿಕ ಫೀಚರ್‍ಗಳನ್ನು ಒಳಗೊಂಡಿದೆ. ಇದರಲ್ಲಿ ಎರಡು 12.3 ಇಂಚಿನ ಡಿಸ್‍ಪ್ಲೇಯನ್ನು ಹೊಂದಿದೆ. ಇದು ಒಂದು ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಮತ್ತು ಇನ್ಫೋಟೇನ್‍ಮೆಂಟ್ ಸಿಸ್ಟಂ ಆಗಿದೆ. ಹಿಂಭಾಗದ ಸೀಟ್‍ ನಲ್ಲಿ ಮನರಂಜನೆಗಾಗಿ 11.6-ಇಂಚಿನ ಟಚ್‌ಸ್ಕ್ರೀನ್‌ಗಳು, ಐದು ಝೋನ್ ಕ್ಲೈಮೆಂಟ್ ಕಂಟ್ರೋಲ್ ಮತ್ತು ವೈರ್‌ಲೆಸ್ ಚಾರ್ಜಿಂಗ್ ಅನ್ನು ಹೊಂದಿದೆ.

ಹೊಸ ಮರ್ಸಿಡಿಸ್ ಬೆಂಝ್ ಜಿಎಲ್ಎಸ್ ಎಸ್‍ಯುವಿಯ ಟೀಸರ್ ಬಿಡುಗಡೆ

ಈ ಎಸ್‍ಯುವಿಯಲ್ಲಿ ಫೀಚರ್‍‍ಗಳನ್ನು ಕಂಟ್ರೋಲ್ ಮಾಡಲು ಕನ್ಸೋಲ್‍ ನಲ್ಲಿ ಏಳು ಇಂಚಿನ ಟ್ಯಾಬ್ಲೆಟ್ ಅನ್ನು ನೀಡಿದೆ. ಜಿಎಲ್‌ಎಸ್ ಕಂಪನಿಯ ಇತ್ತೀಚಿನ ಎಂಬಿಯುಎಕ್ಸ್ ಕನೆಕ್ಟಿವಿಟಿ ತಂತ್ರಜ್ಞಾನ ಮತ್ತು ಆರ್ಟಿಫೀಶಿಯಲ್ ಇಂಟೆಲಿಜನ್ಸ್ ಅಸಿಸ್ಟ್ (ಎಐ) ಅನ್ನು ಹೊಂದಿದೆ,

ಹೊಸ ಮರ್ಸಿಡಿಸ್ ಬೆಂಝ್ ಜಿಎಲ್ಎಸ್ ಎಸ್‍ಯುವಿಯ ಟೀಸರ್ ಬಿಡುಗಡೆ

ಹೊಸ ಮರ್ಸಿಡಿಸ್ ಬೆಂಝ್ ಜಿಎಲ್ಎಸ್ ಎಸ್‍ಯುವಿಯಲ್ಲಿ ಐಷಾರಾಮಿ ಫೀಚರ್‍‍ಗಳೊಂದಿಗೆ ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದ್ದಾರೆ. ಇದರಲ್ಲಿ 360 ಡಿಗ್ರಿ ಕ್ಯಾಮೆರಾ, ಹೆಡ್ಸ್-ಅಪ್ ಡಿಸ್ಪ್ಲೇ(ಹೆಚ್‍ಯುಡಿ), ಎಬಿಎಸ್, ಮಲ್ಟಿಪಲ್ ಏರ್‌ಬ್ಯಾಗ್, ಟ್ರ್ಯಾಕ್ಷನ್ ಕಂಟ್ರೋಲ್, ಸ್ಟ್ಯಾಬಿಲಿಟಿ ಕಂಟ್ರೋಲ್ ಮತ್ತು ಹಿಲ್ ಹೋಲ್ಡ್ ಮುಂತಾದ ಸುರಕ್ಷತಾ ಪೀಚರ್‍ಗಳನ್ನು ಒಳಗೊಂಡಿದೆ.

ಹೊಸ ಮರ್ಸಿಡಿಸ್ ಬೆಂಝ್ ಜಿಎಲ್ಎಸ್ ಎಸ್‍ಯುವಿಯಲ್ಲಿ 3.0-ಲೀಟರ್ ಆರು ಸಿಲಿಂಡರ್ ಡೀಸೆಲ್ ಎಂಜಿನ್‌ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 326 ಬಿಹೆಚ್‌ಪಿ ಮತ್ತು 700 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 9 ಸ್ಪೀಡಿನ ಜಿ-ಟ್ರೋನಿಕ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ ಅನ್ನು ಅಳವಡಿಸಲಾಗಿದೆ.

ಹೊಸ ಮರ್ಸಿಡಿಸ್ ಬೆಂಝ್ ಜಿಎಲ್ಎಸ್ ಎಸ್‍ಯುವಿಯ ಟೀಸರ್ ಬಿಡುಗಡೆ

ಹೊಸ ಮರ್ಸಿಡಿಸ್ ಬೆಂಝ್ ಜಿಎಲ್‌ಎಸ್ ಎಸ್‍ಯುವಿಯಲ್ಲಿ ಪ್ರೀಮಿಯಂ ಲೆದರ್, ಬೆಸ್ಟ್-ಇನ್-ಕ್ಲಾಸ್ ಫೀಚರ್‍‍ಗಳೊಂದಿಗೆ ಸ್ಟ್ಯಾಂಡರ್ಡ್ ಸರೌಂಡ್ ಸೌಂಡ್ ಸಿಸ್ಟಂ ಅನ್ನು ಅಳವಡಿಸಲಾಗಿದೆ. ಭಾರತದಲ್ಲಿ ಶೀಘ್ರದಲ್ಲೇ ಈ ಐಷಾರಾಮಿ ಮರ್ಸಿಡಿಸ್ ಬೆಂಝ್ ಜಿಎಲ್‌ಎಸ್ ಎಸ್‍ಯುವಿಯು ಬಿಡುಗಡೆಯಾಗಲಿದೆ.

More from DriveSpark

Article Published On: Tuesday, April 7, 2020, 11:16 [IST]
English summary
Mercedes Benz GLS Teased Ahead Of India Launch. Read in Kannda.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+