ಹಲವಾರು ಹೊಸ ಬದಲಾವಣೆಗಳೊಂದಿಗೆ ಬಿಡುಗಡೆಗೆ ಸಿದ್ದವಾದ ಹೊಸ ತಲೆಮಾರಿನ ಎಕ್ಸ್‌ಯುವಿ500

ಕರೋನಾ ವೈರಸ್ ಪರಿಣಾಮ ನ್ಯೂ ಜನರೇಷನ್ ಎಕ್ಸ್‌ಯುವಿ500 ಕಾರು ಮಾದರಿಯ ಬಿಡುಗಡೆಯನ್ನು ಮುಂದಿನ ವರ್ಷಕ್ಕೆ ಮುಂದೂಡಿಕೆ ಮಾಡಿದ್ದ ಮಹೀಂದ್ರಾ ಕಂಪನಿಯು ಇದೀಗ ಪರಿಸ್ಥಿತಿ ಸುಧಾರಿಸುತ್ತಿರುವ ಹಿನ್ನಲೆಯಲ್ಲಿ ಇದೇ ವರ್ಷಾಂತ್ಯದೊಳಗೆ ಬಿಡುಗಡೆ ಮಾಡುವ ಸುಳಿವು ನೀಡಿದೆ.

ಹಲವಾರು ಹೊಸ ಬದಲಾವಣೆಗಳೊಂದಿಗೆ ಬಿಡುಗಡೆಗೆ ಸಿದ್ದವಾದ ಹೊಸ ತಲೆಮಾರಿನ ಎಕ್ಸ್‌ಯುವಿ500

ಎರಡನೇ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಯಾಗಲಿರುವ ಎಕ್ಸ್‌ಯುವಿ500 ಕಾರು ಮಾದರಿಯು ಭಾರೀ ಬದಲಾವಣೆಯೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದ್ದು, ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದೆ. ಬಿಎಸ್-6 ಎಕ್ಸ್‌ಯುವಿ500 ಮಾದರಿಯು ಸದ್ಯ ಡೀಸೆಲ್ ಎಂಜಿನ್‌ನೊಂದಿಗೆ ಮಾತ್ರವೇ ಖರೀದಿಗೆ ಲಭ್ಯವಿದ್ದು, ನ್ಯೂ ಜನರೇಷನ್ ಮಾದರಿಯು ಪೆಟ್ರೋಲ್ ಎಂಜಿನ್ ಸೇರಿದಂತೆ ಹಲವು ಹೊಸ ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುವ ಸಿದ್ದತೆಯಲ್ಲಿದೆ.

ಹಲವಾರು ಹೊಸ ಬದಲಾವಣೆಗಳೊಂದಿಗೆ ಬಿಡುಗಡೆಗೆ ಸಿದ್ದವಾದ ಹೊಸ ತಲೆಮಾರಿನ ಎಕ್ಸ್‌ಯುವಿ500

ನ್ಯೂ ಜನರೇಷನ್ ಮಾದರಿಯಲ್ಲಿ ನವೀಕರಿಸಲಾದ ಮುಂಭಾಗದ ಗ್ರಿಲ್, ಹೊಸ ವಿನ್ಯಾಸದ ಎಲ್ಇಡಿ ಹೆಡ್‌ಲ್ಯಾಂಪ್ ಮತ್ತು ಹಿಂಭಾಗದಲ್ಲಿ ನವೀಕರಿಸಲಾದ ಬಂಪರ್ ಪ್ರಮುಖ ಆಕರ್ಷಣೆಯಾಗಲಿದ್ದು, ಮಧ್ಯಮ ಗಾತ್ರದ ಎಸ್‌ಯುವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿದೆ.

ಹಲವಾರು ಹೊಸ ಬದಲಾವಣೆಗಳೊಂದಿಗೆ ಬಿಡುಗಡೆಗೆ ಸಿದ್ದವಾದ ಹೊಸ ತಲೆಮಾರಿನ ಎಕ್ಸ್‌ಯುವಿ500

ಎಕ್ಸ್‌ಯುವಿ500 ನ್ಯೂ ಜನರೇಷನ್ ಕಾರು ಮಾದರಿಯನ್ನು ಇದೇ ವರ್ಷ ಸೆಪ್ಟೆಂಬರ್ ಅಥವಾ ಅಕ್ಟೋಬರ್‌ನಲ್ಲಿ ಬಿಡುಗಡೆ ಮಾಡುವ ತವಕದಲ್ಲಿದ್ದ ಮಹೀಂದ್ರಾ ಯೋಜನೆಗೆ ಕರೋನಾ ವೈರಸ್ ಮಾಹಾಮಾರಿಯು ಬ್ರೇಕ್ ಹಾಕಿದ್ದು, ಇದೇ ವರ್ಷಾಂತ್ಯದೊಳಗೆ ಬಿಡುಗಡೆ ಮಾಡುವ ಸಂಬಂಧ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ತೀವ್ರಗೊಳಿಸಲಾಗಿದೆ.

ಹಲವಾರು ಹೊಸ ಬದಲಾವಣೆಗಳೊಂದಿಗೆ ಬಿಡುಗಡೆಗೆ ಸಿದ್ದವಾದ ಹೊಸ ತಲೆಮಾರಿನ ಎಕ್ಸ್‌ಯುವಿ500

ಹೊಸ ಕಾರು ಪ್ರಸ್ತುತ ಮಾದರಿಗಿಂತಲೂ ಭಾರೀ ಬದಲಾವಣೆಯನ್ನು ಪಡೆದುಕೊಂಡಿದ್ದು, ನವೀಕೃತ ಮುಂಭಾಗದ ಗ್ರಿಲ್, ಬ್ಯಾನೆಟ್, ಬಂಪರ್ ಮತ್ತು ಎಲ್ಇಡಿ ಹೆಡ್‌ಲ್ಯಾಂಪ್ ಕ್ಲಸ್ಟರ್, ಹಿಂಭಾಗ ಬಂಪರ್, ಟೈಲ್‌ಗೆಟ್ ವಿನ್ಯಾಸವು ಆಕರ್ಷಕವಾಗಿರಲಿವೆ. ಹಾಗೆಯೇ ಕಾರಿನ ಒಳಭಾಗದ ತಾಂತ್ರಿಕ ಅಂಶಗಳಲ್ಲೂ ಸಾಕಷ್ಟು ಬದಲಾವಣೆಗೊಳಿಸಲಾಗಿದ್ದು, ವೆಂಟೆಲೆಟೆಡ್ ಆಸನ ಸೇರಿದಂತೆ ಹಲವು ಐಷಾರಾಮಿ ಫೀಚರ್ಸ್ ಹೊಸ ಕಾರಿನಲ್ಲಿರಲಿವೆ.

ಹಲವಾರು ಹೊಸ ಬದಲಾವಣೆಗಳೊಂದಿಗೆ ಬಿಡುಗಡೆಗೆ ಸಿದ್ದವಾದ ಹೊಸ ತಲೆಮಾರಿನ ಎಕ್ಸ್‌ಯುವಿ500

ಜೊತೆಗೆ ನ್ಯೂ ಜನರೇಷನ್ ಎಕ್ಸ್‌ಯುವಿ500 ಕಾರು ಮಾದರಿಯು 2.2 ಡೀಸೆಲ್ ಎಂಜಿನ್ ಜೊತೆ ಹೊಸ ಥಾರ್‌ನಲ್ಲಿ ನೀಡಲಾಗಿರುವ 2.0-ಲೀಟರ್ ಎಂ-ಸ್ಟಾಲಿನ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಸಹ ಪಡೆದುಕೊಳ್ಳಲಿದ್ದು, ಹಲವಾರು ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್‌ಗಳೊಂದಿಗೆ ಗ್ರಾಹಕರನ್ನು ಗಮನಸೆಳೆಯಲಿವೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಹಲವಾರು ಹೊಸ ಬದಲಾವಣೆಗಳೊಂದಿಗೆ ಬಿಡುಗಡೆಗೆ ಸಿದ್ದವಾದ ಹೊಸ ತಲೆಮಾರಿನ ಎಕ್ಸ್‌ಯುವಿ500

ಸದ್ಯ ಮಾರುಕಟ್ಟೆಯಲ್ಲಿರುವ ಎಕ್ಸ್‌ಯುವಿ500 ಕಾರು ಮಾದರಿಯು ಪ್ರಮುಖ ನಾಲ್ಕು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, 2.2-ಲೀಟರ್ ಡೀಸೆಲ್ ಎಂಜಿನ್‌ನೊಂದಿಗೆ ಮಾರಾಟಕ್ಕೆ ಲಭ್ಯವಿದ್ದು, 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಿದೆ. ಈ ಮೂಲಕ 153-ಬಿಎಚ್‌ಪಿ ಮತ್ತು 360-ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಇಂಧನ ದಕ್ಷತೆಯಲ್ಲೂ ಗ್ರಾಹಕರನ್ನು ಗಮನಸೆಳೆಯಲಿದೆ.

ಹಲವಾರು ಹೊಸ ಬದಲಾವಣೆಗಳೊಂದಿಗೆ ಬಿಡುಗಡೆಗೆ ಸಿದ್ದವಾದ ಹೊಸ ತಲೆಮಾರಿನ ಎಕ್ಸ್‌ಯುವಿ500

ಆಟೋಮ್ಯಾಟಿಕ್ ಆವೃತ್ತಿಯಾ ಡಬ್ಲ್ಯು7 ಆಟೋಮ್ಯಾಟಿಕ್ ಆವೃತ್ತಿಯು ಪುಣೆ ಎಕ್ಸ್‌ಶೋರೂಂ ಪ್ರಕಾರ ರೂ. 15.65 ಲಕ್ಷಕ್ಕೆ, ಡಬ್ಲ್ಯು9 ಆಟೋಮ್ಯಾಟಿಕ್ ಮಾದರಿಯು ರೂ. 17.36 ಲಕ್ಷ ಮತ್ತು ಡಬ್ಲ್ಯು9(ಆಪ್ಷನ್) ಆಟೋಮ್ಯಾಟಿಕ್ ಆವೃತ್ತಿಯು ರೂ. 18.88 ಲಕ್ಷ ಬೆಲೆ ಹೊಂದಿದೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಹಲವಾರು ಹೊಸ ಬದಲಾವಣೆಗಳೊಂದಿಗೆ ಬಿಡುಗಡೆಗೆ ಸಿದ್ದವಾದ ಹೊಸ ತಲೆಮಾರಿನ ಎಕ್ಸ್‌ಯುವಿ500

ಎಕ್ಸ್‌ಯುವಿ500 ಡೀಸೆಲ್ ಮ್ಯಾನುವಲ್ ಆವೃತ್ತಿಯು ಎಕ್ಸ್‌ಶೋರೂಂ ಪ್ರಕಾರ ರೂ. 13.18 ಲಕ್ಷ ಬೆಲೆ ಹೊಂದಿದ್ದು, ಟಾಪ್ ಎಂಡ್ ಮಾದರಿಯು ರೂ. 17.68 ಲಕ್ಷ ಬೆಲೆ ಹೊಂದಿದೆ. ಬಿಎಸ್-4 ಮಾದರಿಗಿಂತಲೂ ಬಿಎಸ್-6 ಮಾದರಿಯು ವಿವಿಧ ಆವೃತ್ತಿಗಳಿಗೆ ಅನುಗುಣವಾಗಿ ರೂ.80 ಸಾವಿರದಿಂದ ರೂ. 1.21 ಲಕ್ಷದಷ್ಟು ದುಬಾರಿಯಾಗಿದೆ.

Source: Team BHP

Article Published On: Monday, October 5, 2020, 16:02 [IST]
English summary
Second Generation XUV500 Spotted Testing Once Again In India. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+