ಅನಾವರಣವಾಗಲಿದೆ ಐಕಾನಿಕ್ ಹಮ್ಮರ್ ಎಲೆಕ್ಟ್ರಿಕ್ ಎಸ್‍ಯುವಿ

ಜನರಲ್ ಮೋಟಾರ್ಸ್ ಸಂಸ್ಥೆಯು ತನ್ನ ಐಕಾನಿಕ್ ಹಮ್ಮರ್ ಎಸ್‍‍ಯುವಿಯನ್ನು ಮತ್ತೊಮ್ಮೆ ಮಾರುಕಟ್ಟೆಗೆ ಪರಿಚಯಿಸಲು ಸಜ್ಜಾಗಿದೆ. ಆದರೆ ಈ ಬಾರಿ ಹಮ್ಮರ್ ಎಸ್‍‍ಯುವಿಯನ್ನು ಎಲೆಕ್ಟ್ರಿಕ್ ಆವೃತ್ತಿಯಲ್ಲಿ ಪರಿಚಯಿಸಲಿದೆ.

ಅನಾವರಣವಾಗಲಿದೆ ಐಕಾನಿಕ್ ಹಮ್ಮರ್ ಎಲೆಕ್ಟ್ರಿಕ್ ಎಸ್‍ಯುವಿ

ಈ ಹೊಸ ಹಮ್ಮರ್ ಎಲೆಕ್ಟ್ರಿಕ್ ಎಸ್‍ಯುವಿಯು ಅಧಿಕೃತವಾಗಿ ಇದೇ ತಿಂಗಳ 20ರಂದು ಅನಾವರಣವಾಗಲಿದೆ. ಜನರಲ್ ಮೋಟಾರ್ಸ್ ಸಂಸ್ಥೆಯು ಹೊಸ ಹಮ್ಮರ್ ಎಲೆಕ್ಟ್ರಿಕ್ ಎಸ್‍ಯುವಿಯ ಟೀಸರ್ ವೀಡಿಯೋವನ್ನು ಇತ್ತೀಚೆಗೆ ಬಿಡುಗಡೆಗೊಳಿಸಿತ್ತು ಈ ಹಮ್ಮರ್ ಎಸ್‍ಯುವಿಯನ್ನು ಬಿಟಿ1 ಪ್ಲಾಟ್‌ಫಾರ್ಮ್ ಅಡಿಯಲ್ಲಿ ತಯಾರಿಸಲಾಗುತ್ತದೆ. ಈ ಹೊಸ ಹಮ್ಮರ್ ಎಲೆಕ್ಟ್ರಿಕ್ ಎಸ್‍ಯುವಿಯ ಟಾಪ್-ಆಫ್-ಲೈನ್ ರೂಪಾಂತರವು 1,014 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುತ್ತದೆ.

ಅನಾವರಣವಾಗಲಿದೆ ಐಕಾನಿಕ್ ಹಮ್ಮರ್ ಎಲೆಕ್ಟ್ರಿಕ್ ಎಸ್‍ಯುವಿ

ಈ ಹಮ್ಮರ್ ಎಲೆಕ್ಟ್ರಿಕ್ ಎಸ್‍ಯುವಿ ಕೇವಲ ಮೂರು ಸೆಕೆಂಡುಗಳಲ್ಲಿ 0 - 96 ಕಿ.ಮೀ ವೇಗವನ್ನು ಕ್ರಮಿಸುತ್ತದೆ. ಈ ಎಸ್‍ಯುವಿಯಲ್ಲಿ ಅಲ್ಟಿಯಮ್ ತಲೆಮಾರಿನ ಲಿಥಿಯಂ ಬ್ಯಾಟರಿಗಳನ್ನು ಬಳಸಲಾಗುತ್ತದೆ. ಹಮ್ಮರ್ ಎಲೆಕ್ಟ್ರಿಕ್ ಆವೃತ್ತಿಯ ಬಗ್ಗೆ ಹೆಚ್ಚಿನ ಮಾಹಿತಿ ಬಹಿರಂಗವಾಗಿಲ್ಲ.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಅನಾವರಣವಾಗಲಿದೆ ಐಕಾನಿಕ್ ಹಮ್ಮರ್ ಎಲೆಕ್ಟ್ರಿಕ್ ಎಸ್‍ಯುವಿ

ಆದರೆ ಇತ್ತೀಚೆಗೆ ಬಿಡುಗಡೆಗೊಳಿಸಿದ ಟೀಸರ್ ವೀಡಿಯೋದಲ್ಲಿ ಹಮ್ಮರ್ ಎಲೆಕ್ಟ್ರಿಕ್ ಎಸ್‍‍ಯುವಿಯ ವಿನ್ಯಾಸವು ಹಿಂದಿನ ಮಾದರಿಗಿಂತ ಆಕರ್ಷಕವಾಗಿದೆ. ಈ ಹೊಸ ಎಸ್‍‍ಯುವಿಯು ಶಾರ್ಪ್ ಲೈನ್ ವಿನ್ಯಾಸವನ್ನು ಹೊಂದಿದೆ. ಹಳೆಯ ಮಾದರಿಯಿಂದ ಹೊಸ ಮಾದರಿಯು ಪ್ರತ್ಯೇಕಿಸುವ ಅಂಶವೆಂದರೆ ಎಲ್‍ಇಡಿ ಲೈಟಿಂಗ್, ಹೆಡ್‍‍ಲ್ಯಾಂಪ್‍, ಗ್ರಿಲ್ ಮತ್ತು ಡೇ ಟೈಮ್ ರನ್ನಿಂಗ್ ಲೈಟ್ ಆಗಿದೆ.

ಅನಾವರಣವಾಗಲಿದೆ ಐಕಾನಿಕ್ ಹಮ್ಮರ್ ಎಲೆಕ್ಟ್ರಿಕ್ ಎಸ್‍ಯುವಿ

ಜನರಲ್ ಮೋಟಾರ್ಸ್ ಸಂಸ್ಥೆಯು ಹೊಸ ಹಮ್ಮರ್ ಎಲೆಕ್ಟ್ರಿಕ್ ಎಸ್‍ಯುವಿಯ ಹಿಂದಿನ ಟೀಸರ್ ವೀಡಿಯೋದಲ್ಲಿ ಅಡ್ರಿನಾಲಿನ್ ಮೋಡ್ ಅನ್ನು ಬಹಿರಂಗಪಡಿಸಿದರೆ, ಹೊಸ ಟೀಸರ್ ವೀಡಿಯೋದಲ್ಲಿ ಕ್ರ್ಯಾಬ್ ವಾಕ್ ಮೋಡ್ ಫೀಚರ್ ಅನ್ನು ಬಹಿರಂಗಪಡಿಸಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಅನಾವರಣವಾಗಲಿದೆ ಐಕಾನಿಕ್ ಹಮ್ಮರ್ ಎಲೆಕ್ಟ್ರಿಕ್ ಎಸ್‍ಯುವಿ

ಈ ಫೀಚರ್ ಇನ್ಪುಟ್ ಆಧರಿಸಿ ಟಯರ್ ಗಳು ಒಂದು ದಿಕ್ಕಿನಲ್ಲಿ ಲಾಕ್ ಆಗುತ್ತವೆ. ಇದರಿಂದ ಕಠಿಣ ಹಾದಿಯಲ್ಲಿ ಈ ಎಸ್‍ಯುವಿಯನು ಇಳಿಸಬಹುದಾಗಿದೆ. ಈ ಫೀಚರ್ ಕಠಿಣವಾದ ರಸ್ತೆಗಳಲ್ಲಿ ಹೆಚ್ಚು ಸಹಕಾರಿಯಾಗಿರಲಿದೆ.

ಅನಾವರಣವಾಗಲಿದೆ ಐಕಾನಿಕ್ ಹಮ್ಮರ್ ಎಲೆಕ್ಟ್ರಿಕ್ ಎಸ್‍ಯುವಿ

ಎಲೆಕ್ಟ್ರಿಕ್ ಹಮ್ಮರ್ ಎಸ್‍ಯುವಿಯ ವಿನ್ಯಾಸ ಮತ್ತು ಸ್ಟೈಲಿಂಗ್ ಬಗ್ಗೆ ಹೆಚ್ಚಿನ ಮಾಹಿತಿ ಬಹಿರಂಗಪಡಿಸಿಲ್ಲ. ಹೊಸ ಹಮ್ಮರ್ ಆಫ್-ರೋಡ್ ಎಸ್‍‍ಯುವಿಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿಯಾಗಿದೆ. ಹಮ್ಮರ್ ಸರಳವಾದ ಆಫ್-ರೋಡ್ ಎಸ್‍‍ಯುವಿಯಾಗಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಅನಾವರಣವಾಗಲಿದೆ ಐಕಾನಿಕ್ ಹಮ್ಮರ್ ಎಲೆಕ್ಟ್ರಿಕ್ ಎಸ್‍ಯುವಿ

ಹಮ್ಮರ್ ಎಸ್‍‍ಯುವಿಯು ಕಠಿಣವಾದ ಅಡೆತಡೆಗಳಲ್ಲಿ ಸುಲಭವಾಗಿ ಸಾಗುತ್ತದೆ. ಆಫ್-ರೋಡ್ ವಾಹನ ಪ್ರಿಯರ ಮೆಚ್ಚಿನ ಎಸ್‍‍ಯುವಿಯಾಗಿದೆ. ಅಮೆರಿಕಾದ ಸೈನ್ಯ, ಯುಎಸ್ ಮೆರೈನ್ ಕಾಪ್ಸ್ ಮತ್ತು ಇತರ ಅರೆಸೈನಿಕ ಪಡೆಗಳಿಗೂ ಇದು ಮೆಚ್ಚಿನ ಎಸ್‍ಯುವಿಯಾಗಿದೆ.

ಅನಾವರಣವಾಗಲಿದೆ ಐಕಾನಿಕ್ ಹಮ್ಮರ್ ಎಲೆಕ್ಟ್ರಿಕ್ ಎಸ್‍ಯುವಿ

ಅಮೆರಿಕಾದ ಪಡೆಗಳು ಕಾರ್ಯಾಚರಣೆಗಾಗಿ ವಿಶೇಷವಾಗಿ ತಯಾರಿಸಿ ಹಮ್ಮರ್ ಅನ್ನು ಬಳಸುತ್ತಿದ್ದರು. ಹಮ್ಮರ್ ಎಸ್‍‍ಯುವಿಯನ್ನು ಮೊದಲ ಬಾರಿಗೆ 1992ರಲ್ಲಿ ಬಿಡುಗಡೆ ಗೊಳಿಸಿದ್ದರು. ಹಮ್ಮರ್‍‍ನ ಉತ್ಪಾದನೆಯನ್ನು 2010ರಲ್ಲಿ ಸ್ಥಗಿತಗೊಳಿಸಲಾಗಿತ್ತು.

ಅನಾವರಣವಾಗಲಿದೆ ಐಕಾನಿಕ್ ಹಮ್ಮರ್ ಎಲೆಕ್ಟ್ರಿಕ್ ಎಸ್‍ಯುವಿ

ಈ ಎಂಜಿನ್ ಅಪಾರ ಪ್ರಮಾಣದ ಮಾಲಿನ್ಯವನ್ನು ಉಂಟುಮಾಡುತ್ತದೆ. ಇದನ್ನು ಪರಿಸರವಾದಿಗಳು ತೀವ್ರವಾಗಿ ಟೀಕಿಸಿದರು. ಈ ಟೀಕೆಗಳಿಂದ ಹೊರಗೆ ಬರಲು ಹಮ್ಮರ್ ಎಲೆಕ್ಟ್ರಿಕ್ ಆವೃತ್ತಿಯಲ್ಲಿ ಬಿಡುಗಡೆ ಮಾಡಲು ಮುಂದಾಗಿದೆ. ಜಿ‍ಎಂಸಿ ಕಂಪನಿಯು ಹಮ್ಮರ್ ಎಲೆಕ್ಟ್ರಿಕ್ ಎಸ್‍‍ಯುವಿಯನ್ನು ಅಭಿವೃದ್ದಿಪಡಿಸಲಾಗಿದೆ.

ಅನಾವರಣವಾಗಲಿದೆ ಐಕಾನಿಕ್ ಹಮ್ಮರ್ ಎಲೆಕ್ಟ್ರಿಕ್ ಎಸ್‍ಯುವಿ

ಪವರ್‍‍ಫುಲ್ ಹಮ್ಮರ್ ಎಸ್‍‍ಯುವಿ ಮುಂದಿನ ದಿನಗಳಲ್ಲಿ ಎಲೆಕ್ಟ್ರಿಕ್ ರೂಪದಲ್ಲಿ ಬಿಡುಗಡೆಯಾಗುವ ಮೂಲಕ ಪರಿಸರ ಸ್ನೇಹಿಯಾಗಿರಲಿದೆ. ಹಮ್ಮರ್‍ ಎಸ್‍‍ಯುವಿಯು ಹೆಚ್ಚು ತೂಕ , ಇಂಧನ ದಕ್ಷತೆ ಅಂಕಿ ಅಂಶಗಳು, ಪವರ್ ಮತ್ತು ಟಾರ್ಕ್ ಉತ್ಪಾದನೆಯು ಅಂಕಿ ಅಂಶಗಳು ಹೆಚ್ಚಾಗಿದೆ.

Most Read Articles

Kannada
Read more on ಹಮ್ಮರ್ hummer
English summary
GMC Hummer Electric To Be Officially Unveiled On October 20. Read In Kannada.
Story first published: Friday, October 9, 2020, 19:14 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X