Just In
Don't Miss!
- News
ಪೊಲೀಸ್ ಠಾಣೆಯಲ್ಲಿ ಬಗೆಹರಿದ ಒಂದು ಕೋಣದ ವಿವಾದ!
- Movies
'ದೀಪ್ ಸಿಧು ಜೊತೆ ನನಗೆ ಯಾವುದೇ ಸಂಬಂಧವಿಲ್ಲ': ಸಂಸದ, ನಟ ಸನ್ನಿ ಡಿಯೋಲ್ ಸ್ಪಷ್ಟನೆ
- Finance
ಬಜೆಟ್ 2021: ಸ್ಟ್ಯಾಂಡರ್ಡ್ ಡಿಡಕ್ಷನ್ ರು. 1 ಲಕ್ಷಕ್ಕೆ ಹೆಚ್ಚಳ ನಿರೀಕ್ಷೆ
- Sports
ಬೈರ್ಸ್ಟೋವ್ಗೆ 2 ಪಂದ್ಯಗಳ ವಿಶ್ರಾಂತಿ ನೀಡಿರುವುದನ್ನು ಸಮರ್ಥಿಸಿದ ಇಂಗ್ಲೆಂಡ್ ಕೋಚ್
- Education
WCD Chitradurga Recruitment 2021: ಅಂಗನವಾಡಿಯಲ್ಲಿ 129 ಹುದ್ದೆಗಳಿಗೆ ಅರ್ಜಿ ಆಹ್ವಾನ
- Lifestyle
ಗರ್ಭಾವಸ್ಥೆಯಲ್ಲಿ ಥೈರಾಯ್ಡ್ ಸಮಸ್ಯೆ: ಇದರ ಅಪಾಯಗಳೇನು, ತಡೆಗಟ್ಟುವುದು ಹೇಗೆ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಕೇವಲ 10 ನಿಮಿಷದಲ್ಲಿ ಸೋಲ್ಡ್ ಔಟ್ ಆದ 563 ಕಿ.ಮೀ ಮೈಲೇಜ್ ನೀಡುವ ಜಿಎಂಸಿ ಹಮ್ಮರ್ ಇವಿ
ಜನರಲ್ ಮೋಟಾರ್ಸ್ ಸಂಸ್ಥೆಯು ಕೊನೆಗೂ ತನ್ನ ಹಮ್ಮರ್ ಇವಿ ಪಿಕಪ್ ಟ್ರಕ್ ಅನ್ನು ಇತ್ತೀಚೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಅನಾವರಣಗೊಳಿಸಿತ್ತು. ಈ ಹೊಸ ಜಿಎಂಸಿ ಹಮ್ಮರ್ ಇವಿ ಪಿಕಪ್ ಟ್ರಕ್ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭರ್ಜರಿ ಬೇಡಿಕೆಯನ್ನು ಪಡೆದುಕೊಂಡಿದೆ.

ಈ ಹೊಸ ಹಮ್ಮರ್ ಇವಿ ಪಿಕಪ್ ಟ್ರಕ್ ಗಾಗಿ ಬುಕ್ಕಿಂಗ್ ಆರಂಭಿಸಿದ ಕೇವಲ 10 ನಿಮಿಷಗಳಲ್ಲಿ ಒಂದು ವರ್ಷಕ್ಕೆ ಸೋಲ್ಡ್ ಔಟ್ ಆಗಿದೆ ಎಂದು ಜಿಎಂಸಿ ಸಂಸ್ಥೆ ಹೇಳಿಕೊಂಡಿದೆ. ಈ ಹೊಸ ಹಮ್ಮರ್ ಇವಿ ಪಿಕಪ್ ಟ್ರಕ್ ಮುಂದಿನ ವರ್ಷದಲ್ಲಿ ಬಿಡುಗಡೆಯಾಗಲಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹೊಸ ಹಮ್ಮರ್ ಇವಿ ಪಿಕಪ್ ಟ್ರಕ್ ಆರಂಭಿಕ ಬೆಲೆಯಿ ಭಾರತೀಯ ಕರೆನ್ಸಿಗೆ ಪರಿವರ್ತಿಸಿದಾಗ ರೂ.82.79 ಲಕ್ಷಗಳಾಗಿದೆ. ಈ ಹೊಸ ಎಲೆಕ್ಟ್ರಿಕ್ ವಾಹನವನ್ನು ಡೆಟ್ರಾಯಿಟ್ ಮತ್ತು ಹ್ಯಾಮ್‌ಟ್ರಾಮ್ಕ್‌ನ ಜನರಲ್ ಮೋಟಾರ್ಸ್ ಸಂಸ್ಥೆಯ(ಜಿಎಂಸಿ) ಸ್ಥಾವರದಲ್ಲಿ ಉತ್ಪಾದಿಸಲಾಗುತ್ತದೆ.

ಆದರೆ ಜನರಲ್ ಮೋಟಾರ್ಸ್ ಸಂಸ್ಥೆಯು ಹಮ್ಮರ್ ಇವಿ ಪಿಕಪ್ ಟ್ರಕ್ ಗಾಗಿ ಪಡೆದ ಬುಕ್ಕಿಂಗ್‌ಗಳ ಸಂಖ್ಯೆಯನ್ನು ಬಹಿರಂಗಪಡಿಸಿಲ್ಲ, ಹಮ್ಮರ್ ಇವಿ ಮಾದರಿಯನ್ನು ಎಸ್‍ಯುವಿ ಮಾದರಿಯಲ್ಲಿಯು ಕೂಡ ಬಿಡುಗಡೆಗೊಳಿಸಲಿದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಜಿಎಂಸಿ ಕಂಪನಿಯು ತನ್ನ ಹಮ್ಮರ್ ಮಾದರಿಯನ್ನು ಎಲೆಕ್ಟ್ರಿಕ್ ಆವೃತ್ತಿಯಲ್ಲಿ ಅನಾವರಣಗೊಳಿಸಿದೆ. ಜಿಎಂಸಿ ನಿರ್ಮಿಸಿರುವ ಮೊದಲ ಎಲೆಕ್ಟ್ರಿಕ್ ಸೂಪರ್ ಟ್ರಕ್" ಇದಾಗಿದೆ. ಹೊಸ ಜಿಎಂಸಿ ಹಮ್ಮರ್ ಇವಿ 1,000 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುತ್ತದೆ.

ಹಮ್ಮರ್ ನಲ್ಲಿ 24-ಮಾಡ್ಯೂಲ್, ಡಬಲ್-ಸ್ಟ್ಯಾಕ್ಡ್ ಅಲ್ಟಿಯಮ್ ಬ್ಯಾಟರಿಯನ್ನು ಅಳವಡಿಸಲಾಗಿದೆ. ಇನ್ನು ಹಮ್ಮರ್ ಇವಿ ಸರಿಸುಮಾರು 563 ಕಿ.ಮೀ ಮೈಲೇಜ್ ನೀಡುವ ಸಾಮರ್ಥ್ಯವಿದೆ.
MOST READ: ನವೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಹಮ್ಮರ್ ಇವಿ 800 ವೋಲ್ಟ್ ವೇಗದ ಚಾರ್ಜಿಂಗ್ ವ್ಯವಸ್ಥಯನ್ನು ಹೊಂದಿದೆ. ಈ ವಾಹನವನ್ನು ಕೇವಲ 10 ನಿಮಿಷ ಚಾರ್ಜ್ ಮಾಡಿದರೆ 100 ಕಿ.ಮೀ ನಷ್ಟು ಚಲಿಸುವ ಸಾಮರ್ಥ್ಯವನ್ನು ಹೊಂದಿದೆ. ಹಮ್ಮರ್ ಇವಿ ಉತ್ತಮ ಪರ್ಫಾಮೆನ್ಸ್ ಮಾದರಿಯಾಗಿದೆ. ಕೇವಲ 3 ಸೆಕೆಂಡುಗಳಲ್ಲಿ ಈ ಹಮ್ಮರ್ ಇವಿ 0-60 ಕಿ.ಮೀ ವೇಗವನ್ನು ಕ್ರಮಿಸುತ್ತದೆ. ಈ ವಾಹನದಲ್ಲಿ 35 ಇಂಚಿನ ಟಯರ್ ಗಳೊಂದಿಗೆ ಸ್ಟ್ಯಾಂಡರ್ಡ್ ಆಗಿ 4ಡಬ್ಲ್ಯುಡಿಯನ್ನು ಅಳವಡಿಸಿದ್ದಾರೆ.

ಈ ಹಮ್ಮರ್ ಇವಿಯಲ್ಲಿ ವಿಶಿಷ್ಟವಾದ ಡ್ರೈವಿಂಗ್ ಮೋಡ್ ಅನ್ನು ಸಹ ಹೊಂದಿದೆ. ಇದನ್ನು ‘ಕ್ರ್ಯಾಬ್ ಮೋಡ್' ಎಂದು ಕರೆಯಲಾಗುತ್ತದೆ. ಇದು ಆಫ್-ರೋಡ್ ನಲ್ಲಿ ಹೆಚ್ಚು ಉಪಯೋಗವಾಗುವ ಪೀಚರ್ ಆಗಿದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಹಮ್ಮರ್ ಇವಿಯಲ್ಲಿ 13.4-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಜೊತೆಗೆ 12.3-ಇಂಚಿನ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿರಲಿದೆ. ಇದರಲ್ಲಿ ಕ್ಲೈಮೆಂಟ್ ಕಂಟ್ರೋಲ್ ಫೀಚರ್ ಅನ್ನು ಹೊಂದಿದೆ.

ಈ ವಾಹನವು ಅಡಾಪ್ಟಿವ್ ಏರ್ ಸಸ್ಪೆಂಕ್ಷನ್ (ಇದು 6 ಇಂಚುಗಳಷ್ಟು ಗ್ರೌಂಡ್ ಕ್ಲಿಯರೆನ್ಸ್ ಹೆಚ್ಚಿಸಬಹುದು), ಇನ್ನು ಆಫ್-ರೋಡಿಂಗ್‌ಗಾಗಿ ಅಂಡರ್‌ಬಾಡಿ ಅರ್ಮರ್ ಮತ್ತು ಕಾರಿನ ಸುತ್ತಲಿನ ದೃಶ್ಯವನ್ನು ಒದಗಿಸಲು 18 ಕ್ಯಾಮೆರಾಗಳನ್ನು ಸಹ ನೀಡುತ್ತದೆ.
MOST READ: ಸ್ಪಾಟ್ ಟೆಸ್ಟ್ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್

ಹಿಂದಿನ ತಕೆಮಾರಿನ ಹಮ್ಮರ್ ಎಸ್‍ಯುವಿ ರೂಪದಲ್ಲಿ ಮಾರಾಟವಾಗುತ್ತಿತ್ತು. ಈ ಆಫ್-ರೋಡ್ ಹಮ್ಮರ್ ಎಸ್‍ಯುವಿಯು ಕಠಿಣವಾದ ಅಡೆತಡೆಗಳಲ್ಲಿ ಸುಲಭವಾಗಿ ಸಾಗುತ್ತದೆ. ಆಫ್ ರೋಡ್ ವಾಹನ ಪ್ರಿಯರ ಮೆಚ್ಚಿನ ಎಸ್‍ಯುವಿಯಾಗಿತ್ತು. ಅಮೆರಿಕಾದ ಸೈನ್ಯ ಯುಎಸ್ ಸೈನ್ಯ, ಯುಎಸ್ ಮೆರೈನ್ ಕಾಪ್ಸ್ ಮತ್ತು ಇತರ ಅರೆಸೈನಿಕ ಪಡೆಗಳಿಗೂ ಇದು ಮೆಚ್ಚಿನ ಎಸ್‍ಯುವಿಯಾಗಿದೆ.

ಅಮೆರಿಕಾದ ಪಡೆಗಳು ಕಾರ್ಯಾಚರಣೆಗಾಗಿ ವಿಶೇಷವಾಗಿ ತಯಾರಿಸಿ ಹಮ್ಮರ್ ಅನ್ನು ಬಳಸುತ್ತಿದ್ದರು. ಹಮ್ಮರ್ ಎಸ್‍ಯುವಿಯನ್ನು ಮೊದಲ ಬಾರಿಗೆ 1992ರಲ್ಲಿ ಬಿಡುಗಡೆ ಮಾಡಿದ್ದರು. ಹಮ್ಮರ್‍ನ ಉತ್ಪಾದನೆಯನ್ನು 2010ರಲ್ಲಿ ಸ್ಥಗಿತಗೊಳಿಸಲಾಗಿತ್ತು.

ಇನ್ನು ಹೊಸ ಹಮ್ಮರ್ ಇವಿ ರೂಫ್ ಪ್ಯಾನೆಲ್ ಗಳನ್ನು ಸಹ ಪಡೆಯುತ್ತದೆ, ಅದು ಮುಂಭಾಗದ ಬೂಟ್‌ನೊಳಗೆ ಹೊಂದಿಕೊಳ್ಳುತ್ತದೆ. ಹೊಸ ಹಮ್ಮರ್ ಇವಿಯಲ್ಲಿ ಆಲ್-ಎಲ್ಇಡಿ ಲೈಟಿಂಗ್ ಅನ್ನು ಅಳವಡಿಸಿದೆ. ಈ ವಾಹನವು ಬಾಕ್ಸಿ-ಲುಕ್ ನೊಂದಿಗೆ ಆಕರ್ಷಕ ವಿನ್ಯಾಸವನ್ನು ಹೊಂದಿದೆ.