ದೀಪಾವಳಿ ಸಂಭ್ರಮ: ಅಮೇಜ್ ಸ್ಪೆಷಲ್ ಎಡಿಷನ್ ಬಿಡುಗಡೆ ಮಾಡಿದ ಹೋಂಡಾ
ಹೋಂಡಾ ಕಾರ್ಸ್ ಇಂಡಿಯಾ ಕಂಪನಿಯು ತನ್ನ ಜನಪ್ರಿಯ ಕಂಪ್ಯಾಕ್ಟ್ ಸೆಡಾನ್ ಮಾದರಿಯಾದ ಅಮೇಜ್ ಕಾರಿನಲ್ಲಿ ದಸರಾ ಮತ್ತು ದೀಪಾವಳಿ ಸಂಭ್ರಮಕ್ಕಾಗಿ ಸ್ಪೆಷಲ್ ಎಡಿಷನ್ ಬಿಡುಗಡೆ ಮಾಡಿದ್ದು, ಸೀಮಿತ ಅವಧಿಗೆ ಮಾತ್ರ ಖರೀದಿಗೆ ಲಭ್ಯವಿರುವ ಹೊಸ ಕಾರು ಸ್ಟ್ಯಾಂಡರ್ಡ್ ಮಾದರಿಗಿಂತಲೂ ಹಲವು ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದೆ.

ಅಮೇಜ್ ಸ್ಪೆಷಲ್ ಎಡಿಷನ್ ಮಾದರಿಯು ಮಧ್ಯಮ ಕ್ರಮಾಂಕದ ಎಸ್ ವೆರಿಯೆಂಟ್‌ನಲ್ಲಿ ಖರೀದಿಗೆ ಲಭ್ಯವಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 9.10 ಲಕ್ಷ ಬೆಲೆ ಹೊಂದಿದೆ. ಸ್ಪೆಷಲ್ ಎಡಿಷನ್ ಮಾದರಿಯು ಪೆಟ್ರೋಲ್ ಮತ್ತು ಡೀಸೆಲ್ ಎರಡು ಮಾದರಿಯಲ್ಲೂ ಖರೀದಿಗೆ ಲಭ್ಯವಿದ್ದು, ಪ್ರತಿ ಮಾದರಿಯಲ್ಲೂ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಲಭ್ಯವಿದೆ.

ಸೀಮಿತ ಅವಧಿಗೆ ಮಾತ್ರ ಖರೀದಿಗೆ ಲಭ್ಯವಿರುವ ವಿಶೇಷ ಆವೃತ್ತಿಯಲ್ಲಿ 2.0 ಡಿಜಿ ಪ್ಯಾಡ್ ಜೊತೆಗೆ 17.7-ಇಂಚಿನ ಟಚ್‌ಸ್ಕ್ರೀನ್ ಅಡ್ವಾನ್ಸ್ ಡಿಸ್‌ಪ್ಲೇ ಮತ್ತು ಆಡಿಯೋ ಸಿಸ್ಟಂ ಜೋಡಿಸಲಾಗಿದ್ದು, ಬಾಡಿ ಗ್ರಾಫಿಕ್ಸ್ ಡಿಸೈನ್ ಗ್ರಾಹಕರ ಗಮನಸೆಳೆಯಲಿವೆ.

ಜೊತೆಗೆ ಹೊಸ ಕಾರಿನ ಒಳಭಾಗದ ಆಕರ್ಷಣೆಗಾಗಿ ಸ್ಟೈಲಿಶ್ ಡಿಸೈನ್ ಹೊಂದಿರುವ ಆಸನಗಳು, ಸ್ಲೈಡಿಂಗ್ ಆರ್ಮ್ ರೆಸ್ಟ್, ಕಾರಿನ ಪ್ರಮುಖ ಭಾಗಗಳಲ್ಲಿ ಸ್ಪೆಷಲ್ ಎಡಿಷನ್ ಬ್ಯಾಡ್ಜಿಂಗ್ ಸೌಲಭ್ಯಗಳಿದ್ದು, ಸ್ಟ್ಯಾಂಡರ್ಡ್ ಮಾದರಿಗಿಂತ ಸ್ಪೆಷಲ್ ಎಡಿಷನ್ ಮಾದರಿಯು ರೂ. 12 ಸಾವಿರದಷ್ಟು ಹೆಚ್ಚುವರಿ ಬೆಲೆ ಪಡೆದುಕೊಂಡಿದೆ.

ಅಮೇಜ್ ಕಾರು ಸ್ಪೆಷಲ್ ಎಡಿಷನ್ ಆರಂಭಿಕ ಆವೃತ್ತಿಯಾದ ಎಸ್ ಪೆಟ್ರೋಲ್ ಆವೃತ್ತಿಯು ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಮಾದರಿಯು 1.2-ಲೀಟರ್ ಎಂಜಿನ್ ಹೊಂದಿದ್ದು, 89-ಬಿಎಚ್‌ಪಿ ಮತ್ತು 110-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ. ಎಸ್ ಡೀಸೆಲ್ ಮಾದರಿಯು ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 79-ಬಿಎಚ್‌ಪಿ ಮತ್ತು 160-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದು, ಆಕರ್ಷಕ ಬೆಲೆಯಲ್ಲಿ ಸ್ಪೆಷಲ್ ಎಡಿಷನ್ ಸಿದ್ದಪಡಿಸಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಸ್ಪೆಷಲ್ ಎಡಿಷನ್‌ನಲ್ಲಿ ಕೆಲವು ತಾಂತ್ರಿಕ ಅಂಶಗಳನ್ನು ಹೊರತುಪಡಿಸಿ ಇನ್ನುಳಿದ ಎಂಜಿನ್ ಆಯ್ಕೆಗಳು ಸಾಮಾನ್ಯ ಮಾದರಿಯಲ್ಲಿರುವಂತೆ ನೀಡಲಾಗಿದ್ದು, ಸೀಮಿತ ಸಂಖ್ಯೆಯಲ್ಲಿ ಮಾತ್ರವೇ ಸ್ಪೆಷಲ್ ಎಡಿಷನ್ ಮಾರಾಟಗೊಳ್ಳಲಿದೆ.

ಇನ್ನುಳಿದ ಸ್ಟ್ಯಾಂಡರ್ಡ್ ಮಾದರಿಯು ಇ, ಎಸ್, ವಿ ಮತ್ತು ವಿಎಕ್ಸ್ ವೆರಿಯೆಂಟ್‌ಗಳಲ್ಲಿ ಮಾರಾಟಗೊಳ್ಳಲಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6.19 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.10.01 ಲಕ್ಷ ಬೆಲೆ ಹೊಂದಿದೆ.
MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಹೊಸ ಎಮಿಷನ್ ಅನುಸಾರವಾಗಿ ಬಿಎಸ್-6 ಎಂಜಿನ್ ಆಯ್ಕೆ ಪಡೆದುಕೊಂಡಿರುವ ಅಮೇಜ್ ಕಂಪ್ಯಾಕ್ಟ್ ಸೆಡಾನ್ ಮಾದರಿಯು ಹ್ಯುಂಡೈ ಔರಾ, ಮಾರುತಿ ಸುಜುಕಿ ಡಿಜೈರ್, ಫೋರ್ಡ್ ಆಸ್ಪೈರ್, ಟಾಟಾ ಟಿಗೋರ್ ಕಾರುಗಳಿಗೆ ಉತ್ತಮ ಪೈಪೋಟಿ ನೀಡುತ್ತಿದ್ದು, ಕಂಪ್ಯಾಕ್ಟ್ ಸೆಡಾನ್ ಕಾರು ಮಾರಾಟದಲ್ಲಿ ಮಾರುತಿ ಸುಜುಕಿ ಡಿಜೈರ್ ನಂತರ ಎರಡನೇ ಸ್ಥಾನದಲ್ಲಿದೆ.


Click it and Unblock the Notifications








