Just In
Don't Miss!
- Lifestyle
'ಮಂಗಳವಾರದ ರಾಶಿಫಲ: ಮೇಷ-ಮೀನದವರೆಗಿನ ದಿನ ಭವಿಷ್ಯ '
- News
ಕೋವಿಡ್ ಲಸಿಕೆ ಪಡೆದುಕೊಂಡಿದ್ದ ಆರೋಗ್ಯ ಇಲಾಖೆ ಉದ್ಯೋಗಿ ಹೃದಯಾಘಾತದಿಂದ ಸಾವು
- Sports
ಐಎಸ್ಎಲ್: ಅಂಕ ಹಂಚಿಕೊಂಡ ಈಸ್ಟ್ ಬೆಂಗಾಲ್ ಮತ್ತು ಚೆನ್ನೈಯಿನ್
- Finance
ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ, ಮೆಣಸು, ಕಾಫೀ ಜ. 18ರ ದರ
- Movies
ಶಿವಲಿಂಗಕ್ಕೆ ಅಪಮಾನ: ನಟಿಯ ವಿರುದ್ಧ ಮಾಜಿ ರಾಜ್ಯಪಾಲ ದೂರು
- Education
IIMB Recruitment 2021: ಪ್ರಾಜೆಕ್ಟ್ ಎಕ್ಸಿಕ್ಯುಟಿವ್- ಡೆವಲಪ್ಮೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಆಗಸ್ಟ್ ತಿಂಗಳ ಮಾರಾಟದಲ್ಲಿ ತನ್ನ ಪ್ರತಿಸ್ಪರ್ಧಿಗಳನ್ನು ಹಿಂದಿಕ್ಕಿದ ಹೋಂಡಾ ಸಿಟಿ
ಐದನೇ ತಲೆಮಾರಿನ ಹೋಂಡಾ ಸಿಟಿ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟದಲ್ಲಿ ತನ್ನ ಪ್ರತಿಸ್ಪರ್ಧಿಗಳನ್ನು ಹಿಂದಿಕ್ಕಿ ಮತ್ತೊಮ್ಮೆ ಅಗ್ರಸ್ಥಾನವನ್ನು ಪಡೆದುಕೊಂಡಿದೆ. ಹೋಂಡಾ ಕಂಪನಿಯು ಈ ಸಿಟಿ ಕಾರನ್ನು 2020ರ ಜುಲೈ ತಿಂಗಳಲ್ಲಿ ಭಾರತದಲ್ಲಿ ಬಿಡುಗಡೆಗೊಳಿಸಿತ್ತು.

ಇತ್ತೀಚಿನ ವರದಿಯ ಪ್ರಕಾರ ಹೋಂಡಾ ಸಿಟಿ ತನ್ನ ಸೆಗ್‍ಮೆಂಟ್‍ನಲ್ಲಿ ಹೆಚ್ಚು ಮಾರಾಟವಾದ ಸೆಡಾನ್ ಆಗಿದೆ. ಈ ವರ್ಷದ ಆಗಸ್ಟ್ ತಿಂಗಳ ಮಾರಾಟದಲ್ಲಿ ತನ್ನ ಪ್ರತಿಸ್ಪರ್ಧಿಗಳಾದ ಹ್ಯುಂಡೈ ವೆರ್ನಾ ಮತ್ತು ಮಾರುತಿ ಸುಜುಕಿ ಸಿಯಾಜ್ ಕಾರುಗಳನ್ನು ಹಿಂದಿಕ್ಕಿದೆ. 2020ರ ಆಗಸ್ಟ್ ತಿಂಗಳಲ್ಲಿ ಹೋಂಡಾ ಸಿಟಿ ಮಾದರಿಯ ಒಟ್ಟು 2,299 ಯುನಿಟ್ ಗಳನ್ನು ಮಾರಾಟವಾಗಿವೆ.

ಹೋಂಡಾ ಸಿಟಿ ಯಾವಾಗಲೂ ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಸೆಡಾನ್ ಮಾದರಿಯಾಗಿದೆ. ಇನ್ನು ಐದನೇ ತಲೆಮಾರಿನ ಹೋಂಡಾ ಸಿಟಿ ಹಲವಾರು ನೂತನ ಫೀಚರುಗಳನ್ನು ಹೊಂದಿದೆ. ಹೋಂಡಾ ಸಿಟಿ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಗ್ರಾಹಕರನ್ನು ಸೆಳೆಯುವಲ್ಲಿ ಯಶ್ವಸಿಯಾಗಿದೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಇನ್ನು 2020ರ ಆಗಸ್ಟ್ ತಿಂಗಳಲ್ಲಿ ಪ್ರತಿಸ್ಪರ್ಧಿ ವೆರ್ನಾ ಮಾದರಿಯ 2,015 ಯುನಿಟ್ ಗಳು ಮಾರಾಟವಾಗಿದೆ. ಸಿ-ಸೆಗೆಮೆಂಟ್ ಸೆಡಾನ್ ವಿಭಾಗದ ಮಾರಾಟದಲ್ಲಿ ಹ್ಯುಂಡೈ ವೆರ್ನಾ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ.

ಇನ್ನು ಮಿಡ್ ಎಸ್‍ಯುವಿಗಳ ಖ್ಯಾತಿಯ ಹೆಚ್ಚಳದಿಂದಾಗಿ ಇತ್ತೀಚಿನ ವರ್ಷಗಳಲ್ಲಿ ಸೆಡಾನ್‌ಗಳ ಸಿ-ವಿಭಾಗವು ಜನಪ್ರಿಯತೆಯಲ್ಲಿ ಭಾರಿ ಕುಸಿತ ಕಂಡಿರುವುದು ಗಮನಿಸಬೇಕಾದ ಅಂಶವಾಗಿದೆ. ಹೋಂಡಾ ಸಿಟಿ, ವೆರ್ನಾ ಮತ್ತು ಸಿಯಾಜ್ ಮಾದರಿಗಳು ಈ ವಿಭಾಗದಲ್ಲಿ ಉತ್ತಮವಾಗಿ ಮಾರಾಟವಾಗಿದೆ. ಆದರೆ ಉಳಿದ ಮಾದರಿಗಳು ಮಾರಾಟದಲ್ಲಿ ದೊಡ್ಡ ಪ್ರಮಾಣದಲ್ಲಿ ಕುಸಿತವಾಗಿದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಇನ್ನು 2020ರ ಆಗಸ್ಟ್ ತಿಂಗಳಲ್ಲಿ ಮಾರುತಿ ಸುಜುಕಿ ಕಂಪನಿಯ ಸಿಯಾಜ್ ಕಾರಿನ 1,223 ಯುನಿಟ್ ಮಾರಾಟವಾಗಿದೆ. ಈ ವಿಭಾಗದಲ್ಲಿ ಮಾರುತಿ ಸುಜುಕಿ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ.
Rank | Model | August 2020 |
1 | Honda City | 2,299 |
2 | Hyundai Verna | 2,015 |
3 | Maruti Ciaz | 1,223 |
4 | Skoda Rapid | 844 |
5 | Toyota Yaris | 438 |
6 | Volkswagen Vento | 172 |

2020ರ ಆಗಸ್ಟ್ ತಿಂಗಳಲ್ಲಿ ರ‍್ಯಾಪಿಡ್ ಕಾರಿನ ಒಟ್ಟು 844 ಯುನಿಟ್ ಗಳು ಮಾರಾಟವಾಗಿವೆ. ಸ್ಕೋಡಾ ಕಂಪನಿಯು ಇತ್ತೀಚೆಗೆ ರ‍್ಯಾಪಿಡ್ ಆಟೋಮ್ಯಾಟಿಕ್ ಆವೃತ್ತಿಯ ಬುಕ್ಕಿಂಗ್ ಅನ್ನು ಪ್ರಾರಂಭಿಸಿದೆ.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಇನ್ನು ಕಳೆದ ತಿಂಗಳಿನಲ್ಲಿ ಟೊಯೊಟಾ ಯಾರೀಸ್ ಕಾರಿನ 438 ಯುನಿಟ್‍ಗಳು ಮಾರಾಟವಾಗಿವೆ. ಯಾರೀಸ್ ಸೆಡಾನ್ ಮಾರಾಟಲ್ಲಿ ಯಾವುದೇ ಬೆಳವಣಿಗೆಯನ್ನು ಕಂಡಿಲ್ಲ. ಯಾರೀಸ್ ಸೆಡಾನ್ ತನ್ನ ಪ್ತ್ರತಿಸ್ಪರ್ಧಿಗಳಿಗೆ ಪ್ರಬಲ ಪೈಪೋಟಿಯನ್ನು ನೀಡುವಲ್ಲಿ ವೈಫಲ್ಯ ಕಾಣುತ್ತಿದೆ.

ಇನ್ನು ಫೋಕ್ಸ್ ವ್ಯಾಗನ್ ವೆಂಟೊ ಕಾರಿನ 172 ಯುನಿಟ್‍ಗಳು ಕಳೆದ ತಿಂಗಳು ಮಾರಾಟವಾಗಿವೆ. ಮುಂದಿನ ವರ್ಷ ಎಂಕ್ಯೂಬಿ ಎಒ ಇನ್ ಪ್ಲಾಟ್‌ಫಾರ್ಮ್ ಅಡಿಯಲ್ಲಿ ಈ ಮಾದರಿಯನ್ನು ಸ್ಥಳೀಯವಾಗಿ ತಯಾರಿಸಬಹುದು.