ಕ್ರಾಶ್ ಟೆಸ್ಟ್‌ನಲ್ಲಿ 5 ಸ್ಟಾರ್ ಪಡೆದ 2020ರ ಹೋಂಡಾ ಸಿಟಿ ಕಾರು

ಯುರೋ ನ್ಯೂ ಕಾರ್ ಅಸೆಸ್‍‍ಮೆಂಟ್ ಪ್ರೊಗ್ರಾಂ ಕಾರುಗಳ ಸುರಕ್ಷತೆಯನ್ನು ಪರೀಕ್ಷಿಸಿ ಅವುಗಳಿಗೆ ಪ್ರಮಾಣಪತ್ರವನ್ನು ನೀಡುತ್ತದೆ. ಇದರ ಜೊತೆಗೆ ಈ ಸಂಸ್ಥೆಯು ಕಾರುಗಳ ಪೂರ್ಣ ಗುಣಮಟ್ಟವನ್ನು ಸಹ ಪರೀಕ್ಷಿಸುತ್ತದೆ.

ಕ್ರಾಶ್ ಟೆಸ್ಟ್‌ನಲ್ಲಿ 5 ಸ್ಟಾರ್ ಪಡೆದ 2020ರ ಹೋಂಡಾ ಸಿಟಿ ಕಾರು

ಹೊಸ ಹೋಂಡಾ ಸಿಟಿ ಕಾರಿಗೆ ಎನ್‌ಸಿಎಪಿ ಕ್ರಾಶ್ ಟೆಸ್ಟ್ ನಲ್ಲಿ 5 ಸ್ಟಾರ್ ರೇಟಿಂಗ್ ಅನ್ನು ಪಡೆದುಕೊಂಡಿದೆ. ಮೂರನೇ ಬಾರಿಗೆ ಥೈಲ್ಯಾಂಡ್-ಸ್ಪೆಕ್ ಹೋಂಡಾ ಸಿಟಿ ಕಾರು 5 ಸ್ಟಾರ್ ರೇಟಿಂಗ್ ಅನ್ನು ಪಡೆದಿದೆ. ಹೊಸ ಹೋಂಡಾ ಸಿಟಿ ಕಾರಿನ ಮುಂಭಾಗದ ಆಫ್‌ಸೆಟ್ ಇಂಪ್ಯಾಕ್ಟ್ ಮತ್ತು ಸೈಡ್ ಇಂಪ್ಯಾಕ್ಟ್ ಟೆಸ್ಟ್‌ನಲ್ಲಿ ಗರಿಷ್ಠ 100 ರಲ್ಲಿ 86.54 ಅಂಕ ಗಳಿಸಿದೆ. ಇನ್ನು ಹೋಂಡಾ ಸಿಟಿ ವಯಸ್ಕ ಪ್ರಯಾಣಿಕರ ರಕ್ಷಣೆಗೆ(ಎಒಪಿ) 44.83, ಪ್ರಯಾಣಿಸುವ ಮಕ್ಕಳ ಸುರಕ್ಷತೆಗೆ (ಸಿಒಪಿ) 22.85 ಮತ್ತು ಸುರಕ್ಷತಾ ತಂತ್ರಜ್ಞಾನಕ್ಕೆ (ಎಸ್‌ಎಟಿ) 18.8 ಅಂಕ ಗಳಿಸಿದೆ.

ಕ್ರಾಶ್ ಟೆಸ್ಟ್‌ನಲ್ಲಿ 5 ಸ್ಟಾರ್ ಪಡೆದ 2020ರ ಹೋಂಡಾ ಸಿಟಿ ಕಾರು

ಹೋಂಡಾ ಕಂಪನಿಯು ತನ್ನ 2020ರ ಸಿಟಿ ಕಾರನ್ನು ಭಾರತದಲ್ಲಿ ಇದೇ ತಿಂಗಳ 16ರಂದು ಬಿಡುಗಡೆಗೊಳಿಸಬೇಕಿತ್ತು. ಆದರೆ ಕರೋನಾ ಭೀತಿಯಿಂದಾಗಿ ಹೊಸ ಹೋಂಡಾ ಸಿಟಿ ಕಾರಿನ ಬಿಡುಗಡೆಯನ್ನು ಮುಂದಿನ ತಿಂಗಳಿಗೆ ಮುಂದೂಡಲಾಗಿದೆ.

ಕ್ರಾಶ್ ಟೆಸ್ಟ್‌ನಲ್ಲಿ 5 ಸ್ಟಾರ್ ಪಡೆದ 2020ರ ಹೋಂಡಾ ಸಿಟಿ ಕಾರು

ಹೊಸ ಹೋಂಡಾ ಸಿಟಿ 4,549 ಎಂಎಂ ಉದ್ದ, 1,784 ಎಂಎಂ ಅಗಲ, 1,489 ಎಂಎಂ ಎತ್ತರ ಮತ್ತು 2,600 ಎಂಎಂ ವ್ಹೀಲ್ ಬೇಸ್ ಅನ್ನು ಹೊಂದಿದೆ. ಹೊಸ ಹೋಂಡಾ ಸಿಟಿ ಪ್ರಸ್ತುತ ಮಾದರಿಗಿಂತ ಹೆಚ್ಚು ಉದ್ದ ಮತ್ತು ಅಗಲವನ್ನು ಹೊಂದಿದೆ.

ಕ್ರಾಶ್ ಟೆಸ್ಟ್‌ನಲ್ಲಿ 5 ಸ್ಟಾರ್ ಪಡೆದ 2020ರ ಹೋಂಡಾ ಸಿಟಿ ಕಾರು

2020ರ ಹೋಂಡಾ ಸಿಟಿ ಶಾರ್ಪರ್ ಹೆಡ್‍‍ಲ್ಯಾಂಪ್‍‍ಗಳನ್ನು ಹೊಂದಿರಲಿದೆ. ಇನ್ನೂ ಈ ಕಾರಿನ ಮುಂಭಾಗ ಮತ್ತು ಹಿಂಭಾಗದಲ್ಲಿ ಎಲ್‍ಇಡಿ ಯು‍‍ನಿ‍ಟ್‍‍ಗಳು, ಹೋಂಡಾ ಸಿಗ್ನೇಚರ್ ಕ್ರೋಮ್ ಬಾರ್, ಕೂಪ್ ಸ್ಟೈಲ್ ಸ್ಲೋಪಿಂಗ್ ರೂಫ್‍‍ಲೈನ್ ಮತ್ತು ದೊಡ್ಡ ಒ‍ಆರ್‍‍ವಿಎಂ‍ಗಳಿವೆ.

ಕ್ರಾಶ್ ಟೆಸ್ಟ್‌ನಲ್ಲಿ 5 ಸ್ಟಾರ್ ಪಡೆದ 2020ರ ಹೋಂಡಾ ಸಿಟಿ ಕಾರು

ಇನ್ನು ಹೊಸ ಹೋಂಡಾ ಕಾರಿನಲ್ಲಿ ಶಾರ್ಕ್ ಫಿನ್ ಆಂಟೆನಾ, ಟೇಲ್ ಸೆಗ್‍ಮೆಂಟ್ ಮತ್ತು ಉತ್ತಮವಾದ ಬೂಟ್ ಲಿ‍ಡ್‍‍‍ಗಳಿವೆ. ಹೊಸ ಹೋಂಡಾ ಸಿಟಿ ಕಾರಿನ ಇಂಟಿರಿಯರ್‍‍ನಲ್ಲಿ ಡ್ಯುಯಲ್ ಟೋನ್ ಸಿಸ್ಟಂ, ಹೊಂದಾಣಿಕೆ ಮಾಡಬಹುದಾದ ಹಿಂಭಾಗದ ಹೆಡ್‍‍‍ರೆಸ್ಟ್, ಡಿಜಿ‍ಟಲ್ ಇನ್ಸ್ ಟ್ರೂ‍‍ಮೆಂಟ್ ಕನ್ಸೋಲ್, ಹೊಸ ಟಚ್‍‍ಸ್ಕ್ರೀನ್ ಇನ್ಪೋಟೇನ್‍‍ಮೆಂಟ್ ಸಿಸ್ಟಂ ಅನ್ನು ಅಳವಡಿಸಲಾಗಿದೆ.

MOST READ: ಹೋಂಡಾ ಡಬ್ಲ್ಯು‍ಆರ್-ವಿ ಫೇಸ್‍‍ಲಿಫ್ಟ್ ಕಾರಿನ ಖರೀದಿಗೆ ಅಧಿಕೃತ ಬುಕ್ಕಿಂಗ್ ಆರಂಭ

ಕ್ರಾಶ್ ಟೆಸ್ಟ್‌ನಲ್ಲಿ 5 ಸ್ಟಾರ್ ಪಡೆದ 2020ರ ಹೋಂಡಾ ಸಿಟಿ ಕಾರು

ಎಂಜಿ ಹೆಕ್ಟರ್ ಮತ್ತು ಕಿಯಾ ಸೆಲ್ಟೋಸ್‍‍ನಲ್ಲಿ ಕಂಡುಬರುವ ಕನೆಕ್ಟಿವಿಟಿ ತಂತ್ರಜ್ಞಾನಗಳನ್ನು ಅಳವಡಿಸುವ ಸಾಧ್ಯತೆಗಳಿವೆ. ಹೋಂಡಾ ಸಂಸ್ಥೆಯು ಭಾರತ ಸೇರಿದಂತೆ ಯುರೋಪಿನ ಪ್ರಮುಖ ರಾಷ್ಟ್ರಗಳಲ್ಲಿ ತನ್ನ ಜನಪ್ರಿಯ ಸಿಟಿ ಸೆಡಾನ್ ಕಾರ್ ಅನ್ನು ಬಿಡುಗಡೆಗೊಳಿಸಲಿದೆ.

MOST READ: ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು 2020ರ ಹ್ಯುಂಡೈ ವೆರ್ನಾ ಫೇಸ್‌ಲಿಫ್ಟ್ ಕಾರು

ಹೊಸ ಸಿಟಿ ಕಾರು 1.5 ಲೀಟರ್ ಐ-ವಿಟಿಇಸಿ ಬಿಎಸ್ 6 ಪೆಟ್ರೋಲ್ ಎಂಜಿನ್ ಅನ್ನು ಹೊಂದಿರುತ್ತದೆ. ಈ ಎಂಜಿನ್ 119 ಬಿ‍‍ಹೆಚ್‍‍ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 5 ಸ್ಪೀಡ್ ಮ್ಯಾನುವಲ್ ಮತ್ತು ಸಿವಿ‍ಟಿ ಆಟೋಮ್ಯಾಟಿಕ್ ಗೇರ್‍‍‍ಬಾಕ್ಸ್ ಹೊಂದಿರುತ್ತದೆ.

MOST READ: ಡೀಸೆಲ್ ಕಾರುಗಳ ಬದಲಿಗೆ ಪೆಟ್ರೋಲ್ ಕಾರುಗಳತ್ತ ಗ್ರಾಹಕರ ಒಲವು

ಕ್ರಾಶ್ ಟೆಸ್ಟ್‌ನಲ್ಲಿ 5 ಸ್ಟಾರ್ ಪಡೆದ 2020ರ ಹೋಂಡಾ ಸಿಟಿ ಕಾರು

ಹೊಸ ಹೋಂಡಾ ಸಿಟಿ ಕಾರು ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಮಾರುತಿ ಸಿಯಾಜ್, ಟೊಯೊಟಾ ಯಾರಿಸ್ ಮತ್ತು ಹ್ಯುಂಡೈ ವರ್ನಾ ಕಾರುಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
Read more on ಹೋಂಡಾ honda
English summary
New Honda City gets 5-star ASEAN NCAP rating. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X