ಅನಾವರಣವಾಯ್ತು ಹೊಸ ಹೋಂಡಾ ಸಿಟಿ ಹೈಬ್ರಿಡ್ ಆವೃತ್ತಿ
ಹೋಂಡಾ ಕಂಪನಿಯು ಹೊಸ ಸಿಟಿ ಹೈಬ್ರಿಡ್ ಆವೃತ್ತಿಯನ್ನು ಮಲೇಷ್ಯಾದಲ್ಲಿ ಅನಾವರಣಗೊಳಿಸಿದೆ. ಹೋಂಡಾ ಕಂಪನಿಯು ಈ ಹೊಸ ಸಿಟಿ ಹೈಬ್ರಿಡ್ ಆವೃತ್ತಿಯನ್ನು ಭಾರತೀಯ ಮಾರುಕಟ್ಟೆಯಲಿ ಮುಂದಿನ ವರ್ಷದಲ್ಲಿ ಬಿಡುಗಡೆಗೊಳಿಸಬಹುದು.

ಅಂತರರಾಷ್ಟ್ರೀಯ ಮಾರುಕಟ್ಟೆಗಳಿಗೆ ಹೋಂಡಾ ಜಾಝ್ ಹೈಬ್ರಿಡ್ ಆವೃತ್ತಿಯಲ್ಲಿರುವತಹ ಐ-ಎಂಎಂಡಿ ಹೈಬ್ರಿಡ್ ಸಿಸ್ಟಂ ಅನ್ನು ಹೋಂಡಾ ಸಿಟಿ ಹೊಂದಿರುತ್ತದೆ. ಹೊಸ ಹೋಂಡಾ ಸಿಟಿ 1.5 ಲೀಟರ್, ನಾಲ್ಕು ಸಿಲಿಂಡರ್, ಅಟ್ಕಿನ್ಸನ್ ಸೈಕಲ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರುತ್ತದೆ. ಈ ಎಂಜಿನ್ 98 ಹೆಚ್‌ಪಿ ಪವರ್ ಮತ್ತು 127 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಹೊಸ ಸಿಟಿ ಕಾರಿನ ಬಾನೆಟ್ ಅಡಿಯಲ್ಲಿ ಇರುತ್ತದೆ.

ಪೆಟ್ರೋಲ್ ಎಂಜಿನ್‌ನಲ್ಲಿ ಸಂಯೋಜಿಸಲ್ಪಟ್ಟ ಮೊದಲ ಎಲೆಕ್ಟ್ರಿಕ್ ಮೋಟರ್, ಇಂಟಿಗ್ರೇಟೆಡ್ ಸ್ಟಾರ್ಟರ್-ಜನರೇಟರ್ (ಐಎಸ್‌ಜಿ) ಆಗಿ ಕಾರ್ಯನಿರ್ವಹಿಸುತ್ತದೆ, ಆದರೆ ಎರಡನೇ ಎಲೆಕ್ಟ್ರಿಕ್ ಮೋಟರ್ ಚಕ್ರಗಳಿಗೆ ಡ್ರೈವ್ ಕಳುಹಿಸುತ್ತದೆ. ಈ ಎಲೆಕ್ಟ್ರಿಕ್ ಮೋಟಾರ್ 109 ಬಿಹೆಚ್‍ಪಿ ಪವರ್ ಮತ್ತು 253 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
MOST READ: ಭಾರತಕ್ಕೆ ಲಗ್ಗೆ ಇಡಲಿದೆ ಹೊಸ ಹೋಂಡಾ ಹೆಚ್‌ಆರ್-ವಿ ಎಸ್‍ಯುವಿ

ಈ ಹೊಸ ಹೋಂಡಾ ಸಿಟಿಯ ಹೈಬ್ರಿಡ್ ಸೆಟಪ್ ಮೂರು ಡ್ರೈವ್ ಮೋಡ್‌ಗಳನ್ನು ಹೊಂದಿರುವ ಸಾಧ್ಯತೆಗಳಿದೆ. ಈ ಹೊಸ ಹೋಂಡಾ ಸಿಟಿ ಹೈಬ್ರಿಡ್ ಆವೃತ್ತಿಯು ಉತ್ತಮ ಕಾರ್ಯಕ್ಷಮತೆಯನ್ನು ಹೊಂದಿರುತ್ತದೆ.

ಮಲೇಷ್ಯಾದ ಹೋಂಡಾ ಸಿಟಿ ಇ:ಹೆಚ್ಇವಿ ಎಂದು ಕರೆಯುವ ಹೈಬ್ರಿಡ್ ಆವೃತ್ತಿಯು ಸಿಟಿ ಆರ್ಎಸ್ ಮಾದರಿಯಂತೆ ಕಾಣುತ್ತದೆ. ಇದು ಈಗಾಗಲೇ ಕೆಲವು ಮಾರುಕಟ್ಟೆಗಳಲ್ಲಿ ಮಾರಾಟದಲ್ಲಿದೆ, ಹೊಸ ಹೈಬ್ರಿಡ್ ಆವೃತ್ತಿಯು ಇ:ಹೆಚ್ಇವಿ ಬ್ರ್ಯಾಡ್ಜ್ ನೊಂದಿಗೆ ಬೂಟ್ ನಲ್ಲಿ ಸ್ಟ್ಯಾಂಡರ್ಡ್ ಸಿಟಿ ಆರ್ಎಸ್ ಮಾದರಿಯಂತೆ ಬ್ಲ್ಯಾಕ್ ಥೀ ಅನ್ನು ಹೊಂದಿರುತ್ತದೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಭಾರತೀಯ ಮಾರುಕಟ್ಟೆಯಲ್ಲಿ 2018ರ ಅಕ್ಟೋಬರ್‌ನಲ್ಲಿ ಹೋಂಡಾ ಕಂಪನಿಯು ಹೈಬ್ರಿಡ್ ಆವೃತ್ತಿಯನ್ನು ಅಭಿವೃದ್ದಿ ಪಡಿಸುತ್ತಿದೆ. ಇನ್ನು ಹೊಸ ಹೋಂಡಾ ಸಿಟಿ ಹೈಬ್ರಿಡ್ ಆವೃತ್ತಿಯು ಮುಂದಿನ ವರ್ಷದಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಈ ಕಾರು ಬಿಡುಗಡೆಯಾದ ಬಳಿಕ ಮಾರುತಿ ಸಿಯಾಜ್ ಹೈಬ್ರಿಡ್ ಆವೃತ್ತಿಗೆ ಪೈಪೋಟಿಯನ್ನು ನೀಡಬಹುದು.

ಐದನೇ ತಲೆಮಾರಿನ ಹೋಂಡಾ ಸಿಟಿ ಕಾರಿನ ಪ್ರಾರಂಭಿಕ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.10.90 ಲಕ್ಷಗಳಾಗಿದೆ. ಹೊಸ ತಲೆಮಾರಿನ ಸಿಟಿ ಕಾರು ವಿ, ವಿಎಕ್ಸ್, ಝೆಡ್ಎಕ್ಸ್ ಎಂಬ ಮೂರು ರೂಪಾಂತರಗಳಲ್ಲಿ ಲಭ್ಯವಿದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

2020ರ ಸಿಟಿ ಕಾರು ಪೆಟ್ರೋಲ್ ಮತ್ತು ಡೀಸೆಲ್ ಎರಡು ಮಾದರಿಯಲ್ಲೂ ಲಭ್ಯವಿದೆ. ಇದರಲ್ಲಿ 1.5-ಲೀಟರ್ ಐ-ವಿಟಿಇಸಿ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಐ-ಡಿಟಿಇಸಿ ಡೀಸೆಲ್ ಎಂಜಿನ್ ಅನ್ನು ಹೊಂದಿದೆ.

ಐದನೇ ತಲೆಮಾರಿನ ಹೋಂಡಾ ಸಿಟಿ ಕಾರನ್ನು ಈಗಾಗಲೇ ಮಿಡ್ ಸೆಡಾನ್ ವಿಭಾಗದಲ್ಲಿ ದುಬಾರಿ ಕಾರು ಎಂದು ಪರಿಗಣಿಸಿದೆ. ಈ ಹೋಂಡಾ ಸಿಟಿ ಹೈಬ್ರಿಡ್ ಆವೃತ್ತಿಯನ್ನು ಸುಮಾರು ರೂ.15 ಲಕ್ಷ ಬೆಲೆಯಲ್ಲಿ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೆವೆ.


Click it and Unblock the Notifications