Just In
- 20 min ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- 40 min ago ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
- 1 hr ago Hero: ಮಧ್ಯಮ ವರ್ಗದವರ ನೆಚ್ಚಿನ ಬೈಕ್.. ರೂ.75 ಸಾವಿರ ಬೆಲೆ.. ಮೈಲೇಜ್ನಲ್ಲಿ ಸರಿ ಸಾಟಿಯಿಲ್ಲ!
- 1 hr ago Hyundai: ಹ್ಯುಂಡೈ ಎಕ್ಸ್ಟರ್ ಮೊದಲ ಅಪಘಾತ: ಮುಗಿಬಿದ್ದು ಖರೀದಿಸಿದವರು ಇದನ್ನೊಮ್ಮೆ ನೋಡಿ
Don't Miss!
- News ಮಳೆ.. ಮಳೆ.. ಭರ್ಜರಿ ಮಳೆ.. ಬೇಸಿಗೆಯಲ್ಲೂ ಮಳೆ!
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Sports ಟಿ20 ವಿಶ್ವಕಪ್ಗೆ 15 ಸದಸ್ಯರ ಭಾರತ ತಂಡದ ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ಸಂಜು, ರಾಹುಲ್ಗೆ ಸ್ಥಾನವಿಲ್ಲ!
- Movies ಮದುವೆ ಆಗದೇ ಗರ್ಭಿಣಿಯಾಗಿದ್ರಾ ಮಾಧುರಿ ದಿಕ್ಷಿತ್? ವಿವಾದಾತ್ಮಕ ಟ್ವೀಟ್ಗೆ ಫ್ಯಾನ್ಸ್ ಆಕ್ರೋಶ!
- Lifestyle 3ನೇ ಬಾರಿ ಬಾಹ್ಯಾಕಾಶಕ್ಕೆ ಹಾರಲು ಮುಂದಾದ ಸುನೀತಾ ವಿಲಿಯಮ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಬಿಎಸ್-6 ಹೋಂಡಾ ಸಿಟಿ ಕಾರು
ಹೋಂಡಾ ಕಂಪನಿಯು ತನ್ನ ಹೊಸ ಸಿಟಿ ಕಾರನ್ನು ಭಾರತದಲ್ಲಿ ಮುಂದಿನ ತಿಂಗಳಲ್ಲಿ ಬಿಡುಗಡೆಗೊಳಿಸಲಿದೆ. ಹೋಂಡಾ ಕಂಪನಿಯು ಕಳೆದ ವರ್ಷದ ನವೆಂಬರ್ ತಿಂಗಳಲ್ಲಿ ಥಾಯ್ಲ್ಯಾಂಡ್ನ 2019ರ ಥಾಯ್ ಮೋಟಾರ್ ಎಕ್ಸ್ ಪೋದಲ್ಲಿ ತನ್ನ ಹೊಸ ಸಿಟಿ ಕಾರನ್ನು ಜಾಗತಿಕವಾಗಿ ಬಿಡುಗಡೆಗೊಳಿಸಿತ್ತು.
ಹೋಂಡಾ ಕಂಪನಿಯು ಭಾರತದಲ್ಲಿ ಇತ್ತೀಚಿಗೆ ತನ್ನ ಸಿಟಿ ಸೆಡಾನ್ ಅನ್ನು ಸ್ಪಾಟ್ ಟೆಸ್ಟ್ ಮಾಡಿದೆ. ಹೋಂಡಾ ಸಿಟಿ ಸ್ಪಾಟ್ ಟೆಸ್ಟ್ ನಲ್ಲಿ ಹಲವಾರು ಪ್ರಮುಖ ಮಾಹಿತಿಗಳು ಬಹಿರಂಗವಾಗಿದೆ. ಹೋಂಡಾ ಸಿಟಿ ಮಾದರಿಯು ಹೋಂಡಾ ಕಂಪನಿಯ ಸರಣಿಯ ಕಾರುಗಳಲ್ಲಿ ಹಲವು ವರ್ಷಗಳಿಂದ ಹೆಚ್ಚು ಮಾರಾಟವಾಗುವ ಕಾರು ಆಗಿದೆ. ದೇಶಿಯ ಮಾರುಕಟ್ಟೆಯಲ್ಲಿ ಹೋಂಡಾ ಸಿಟಿ, ವರ್ನಾ ಮತ್ತು ಸಿಯಾಜ್ ಒಂದೇ ರೀತಿಯಲ್ಲಿ ಉತ್ತಮವಾಗಿ ಮಾರಾಟವಾಗುತ್ತಿವೆ.
ಥೈಲ್ಯಾಂಡ್ನಲ್ಲಿ ಬಿಡುಗಡೆಗೊಳಿಸಿದ ಕಾರಿನ ಬೆಲೆಯು ರೂ.13.7 ಲಕ್ಷಗಳಾಗಿದೆ. ಹೊಸ ಸಿಟಿ ಕಾರು ಹಿಂದಿನ ತಲೆಮಾರಿನ ಕಾರ್ ಗಿಂತ ದೊಡ್ಡದಾಗಿದೆ. ಈ ಸೆಗ್ಮೆಂಟ್ನಲ್ಲಿ 2020ರ ಸಿಟಿ 4553 ಎಂಎಂ ಉದ್ದವನ್ನು ಹೊಂದಿರುವ ಅತಿ ಉದ್ದದ ಕಾರ್ ಆಗಿದೆ.
ಪ್ರಸುತ ದೇಶಿಯ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿರುವ ಕಾರಗಳಾದ ಸಿಟಿ 4440 ಎಂಎಂ, ವರ್ನಾ 4440 ಎಂಎಂ ಮತ್ತು ಸಿಯಾಜ್ 4490 ಎಂಎಂ ಉದ್ದವನ್ನು ಹೊಂದಿವೆ. ಹೊಸ ಹೋಂಡಾ ಸಿಟಿ ಕಾರು ದೇಶಿಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಹೋಂಡಾ ಸಿವಿಕ್ ಮಾದರಿಯ ವಿನ್ಯಾಸವನ್ನು ಹೊಂದಿರಲಿದೆ.
ಹೊಸ ಹೋಂಡಾ ಸಿಟಿ ಶಾರ್ಪರ್ ಹೆಡ್ಲ್ಯಾಂಪ್ಗಳನ್ನು ಹೊಂದಿರಲಿದೆ. ಇನ್ನೂ ಈ ಕಾರಿನ ಮುಂಭಾಗ ಮತ್ತು ಹಿಂಭಾಗದಲ್ಲಿ ಎಲ್ಇಡಿ ಯುನಿಟ್ಗಳು, ಹೋಂಡಾ ಸಿಗ್ನೇಚರ್ ಕ್ರೋಮ್ ಬಾರ್, ಕೂಪ್ ಸ್ಟೈಲ್ ಸ್ಲೋಪಿಂಗ್ ರೂಫ್ಲೈನ್ ಮತ್ತು ದೊಡ್ಡ ಒಆರ್ವಿಎಂಗಳಿವೆ.
ಇನ್ನೂ ಹೊಸ ಹೋಂಡಾ ಕಾರಿನಲ್ಲಿ ಶಾರ್ಕ್ ಫಿನ್ ಆಂಟೆನಾ, ಟೇಲ್ ಸೆಗ್ಮೆಂಟ್ ಮತ್ತು ಉತ್ತಮವಾದ ಬೂಟ್ ಲಿಡ್ಗಳಿವೆ. ಹೊಸ ಹೋಂಡಾ ಸಿಟಿ ಕಾರಿನ ಇಂಟಿರಿಯರ್ನಲ್ಲಿ ಡ್ಯುಯಲ್ ಟೋನ್ ಸಿಸ್ಟಂ, ಹೊಂದಾಣಿಕೆ ಮಾಡಬಹುದಾದ ಹಿಂಭಾಗದ ಹೆಡ್ರೆಸ್ಟ್, ಡಿಜಿಟಲ್ ಇನ್ಸ್ ಟ್ರೂಮೆಂಟ್ ಕನ್ಸೋಲ್, ಹೊಸ ಟಚ್ಸ್ಕ್ರೀನ್ ಇನ್ಪೋಟೇನ್ಮೆಂಟ್ ಸಿಸ್ಟಂ ಅನ್ನು ಅಳವಡಿಸಲಾಗಿದೆ.
ಎಂಜಿ ಹೆಕ್ಟರ್ ಮತ್ತು ಕಿಯಾ ಸೆಲ್ಟೋಸ್ನಲ್ಲಿ ಕಂಡುಬರುವ ಕನೆಕ್ಟಿವಿಟಿ ತಂತ್ರಜ್ಞಾನಗಳನ್ನು ಅಳವಡಿಸುವ ಸಾಧ್ಯತೆಗಳಿವೆ. ಹೋಂಡಾ ಸಂಸ್ಥೆಯು ಭಾರತ ಸೇರಿದಂತೆ ಯುರೋಪಿನ ಪ್ರಮುಖ ರಾಷ್ಟ್ರಗಳಲ್ಲಿ ತನ್ನ ಜನಪ್ರಿಯ ಸಿಟಿ ಸೆಡಾನ್ ಕಾರ್ ಅನ್ನು ಬಿಡುಗಡೆಗೊಳಿಸಲಿದೆ.
ಥೈಲ್ಯಾಂಡ್ನಲ್ಲಿರುವ ಹೋಂಡಾ ಕಾರು ಉತ್ಪಾದನಾ ಘಟಕವು ಏಷ್ಯಾದ ಅತಿದೊಡ್ಡ ಕಾರು ಉತ್ಪಾದನಾ ಘಟಕ ಎಂಬ ಹೆಗ್ಗಳಿಕೆ ಹೊಂದಿದ್ದು, ಇಲ್ಲಿಂದಲೇ ಹೊಸ ಸಿಟಿ ಸೆಡಾನ್ ಕಾರಿಗೆ ಅಂತಿಮ ರೂಪ ನೀಡಿ ಭಾರತಕ್ಕೆ ತರಲಾಗುತ್ತದೆ.
2020ರ ಹೋಂಡಾ ಸಿಟಿ ಕಾರು 1 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರಲಿದೆ. ಈ ಎಂಜಿನ್ 122 ಬಿಹೆಚ್ಪಿ ಪವರ್ ಮತ್ತು 173 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
ಹೊಸ ಸಿಟಿ ಕಾರು 1.5 ಲೀಟರ್ ಐ-ವಿಟಿಇಸಿ ಬಿಎಸ್ 6 ಪೆಟ್ರೋಲ್ ಎಂಜಿನ್ ಅನ್ನು ಹೊಂದಿರುತ್ತದೆ. ಈ ಎಂಜಿನ್ 100 ಬಿಹೆಚ್ಪಿ ಪವರ್ ಮತ್ತು 200 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಜೊತೆಗೆ 1.5 ಲೀಟರ್ ಡೀಸೆಲ್ ಎಂಜಿನ್ ಅನ್ನು ಹೊಂದಿರುತ್ತದೆ. ಈ ಎಂಜಿನ್ 117 ಬಿಹೆಚ್ಪಿ ಪವರ್ ಮತ್ತು 145 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ಗಳೊಂದಿಗೆ 6 ಸ್ಪೀಡ್ ಮ್ಯಾನುವಲ್ ಮತ್ತು ಸಿವಿಟಿ ಆಟೋಮ್ಯಾಟಿಕ್ ಗೇರ್ಬಾಕ್ಸ್ ಹೊಂದಿರುತ್ತದೆ.
ಹೊಸ ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ಈ ಕಾರಿನ ಎಂಜಿನ್ ಅನ್ನು ಅಭಿವೃದ್ಧಿಪಡಿಸಲಾಗಿದೆ. ಹೋಂಡಾ ಸಿಟಿ ಕಾರು ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಮಾರುತಿ ಸಿಯಾಜ್, ಟೊಯೊಟಾ ಯಾರಿಸ್ ಮತ್ತು ಹ್ಯುಂಡೈ ವರ್ನಾ ಕಾರುಗಳಿಗೆ ಪೈಪೋಟಿ ನೀಡುತ್ತದೆ.