ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್ ತಲುಪಿದ ನ್ಯೂ ಜನರೇಷನ್ ಹೋಂಡಾ ಸಿಟಿ

ಹೋಂಡಾ ಕಾರ್ಸ್ ಇಂಡಿಯಾ ಕಂಪನಿಯು ತನ್ನ ಬಹುತೇಕ ಕಾರು ಮಾದರಿಗಳನ್ನು ಬಿಎಸ್-6 ಎಂಜಿನ್‌ನೊಂದಿಗೆ ಉನ್ನತೀಕರಿಸಿ ಬಿಡುಗಡೆಗೊಳಿಸಿದ್ದು, ಇದೀಗ ನ್ಯೂ ಜನರೇಷನ್ ಸಿಟಿ ಸೆಡಾನ್ ಮಾದರಿಯನ್ನು ಸಹ ಭಾರೀ ಬದಲಾವಣೆಯೊಂದಿಗೆ ಬಿಡುಗಡೆ ಮಾಡುತ್ತಿದೆ.

ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್ ತಲುಪಿದ ನ್ಯೂ ಜನರೇಷನ್ ಹೋಂಡಾ ಸಿಟಿ

ಮಾಹಿತಿಗಳ ಪ್ರಕಾರ ಹೊಸ ಸಿಟಿ ಸೆಡಾನ್ ಕಾರು ಇದೇ ತಿಂಗಳು ಎರಡನೇ ವಾರದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್‌ಗಳಲ್ಲಿ ಹೊಸ ಕಾರನ್ನು ಸ್ಟಾಕ್ ಮಾಡಲಾಗುತ್ತಿದೆ. ಹೊಸ ಕಾರು ಖರೀದಿಗಾಗಿ ಈಗಾಗಲೇ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆಗೂ ಚಾಲನೆ ನೀಡಲಾಗಿದ್ದು, ವೈರಸ್ ಭೀತಿ ಹಿನ್ನಲೆಯಲ್ಲಿ ಹೊಸ ಬುಕ್ಕಿಂಗ್ ಪ್ರಕ್ರಿಯೆ ಮತ್ತು ಮಾರಾಟ ಪ್ರಕ್ರಿಯೆಗಾಗಿ ಸಂಪೂರ್ಣ ಆನ್‌ಲೈನ್ ಪ್ಲಾಟ್‌ಫಾರ್ಮ್‌ ಅನ್ನೇ ಬಳಕೆ ಮಾಡಿಕೊಳ್ಳಲಾಗುತ್ತಿದೆ.

ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್ ತಲುಪಿದ ನ್ಯೂ ಜನರೇಷನ್ ಹೋಂಡಾ ಸಿಟಿ

ಸಿ ಸೆಗ್ಮೆಂಟ್ ಸೆಡಾನ್ ಕಾರುಗಳಲ್ಲೇ ಭಾರೀ ಜನಪ್ರಿಯತೆ ಹೊಂದಿರುವ ಹೋಂಡಾ ಸಿಟಿ ಕಾರು ಕಾಲಕ್ಕೆ ತಕ್ಕಂತೆ ಹಲವಾರು ಬದಲಾವಣೆಯೊಂದಿಗೆ ಕಾರು ಖರೀದಿದಾರರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಇದೀಗ ನ್ಯೂ ಜನರೇಷನ್ ಮಾದರಿಯೊಂದಿಗೆ ಮತ್ತೊಮ್ಮೆ ಸದ್ದು ಮಾಡುವ ನೀರಿಕ್ಷೆಯಲ್ಲಿದೆ.

ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್ ತಲುಪಿದ ನ್ಯೂ ಜನರೇಷನ್ ಹೋಂಡಾ ಸಿಟಿ

5ನೇ ತಲೆಮಾರಿನ ಸಿಟಿ ಸೆಡಾನ್ ಕಾರನ್ನು ಈಗಾಗಲೇ ಥೈಲ್ಯಾಂಡ್ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿರುವ ಹೋಂಡಾ ಕಂಪನಿಯು ಇದೀಗ ಭಾರತದಲ್ಲಿ ಬಿಡುಗಡೆ ಮಾಡುತ್ತಿದ್ದು, ಹೊಸ ಕಾರು 4,549 ಎಂಎಂ ಉದ್ದ, 1,748 ಎಂಎಂ ಅಗಲ, 1,489 ಎಂಎಂ ಎತ್ತರ ಮತ್ತು 2,600 ಎಂಎಂ ವ್ಹೀಲ್ ಬೇಸ್ ಮೂಲಕ ಮಧ್ಯಮ ಕ್ರಮಾಂಕದ ಸೆಡಾನ್ ಮಾದರಿಗಳಲ್ಲೇ ಆಕರ್ಷಕ ಲುಕ್ ಹೊಂದಿದೆ.

ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್ ತಲುಪಿದ ನ್ಯೂ ಜನರೇಷನ್ ಹೋಂಡಾ ಸಿಟಿ

ಹೊಸ ಕಾರಿನಲ್ಲಿ ಕಟಿಂಗ್ ಎಡ್ಜ್ ಎಲ್ಇಡಿ ಹೆಡ್‍‌ಲ್ಯಾಂಪ್, ಎಲ್ಇಡಿ ಟೈಲ್ ಲ್ಯಾಂಪ್, ಎಲ್‌ಇಡಿ ಡಿಆರ್‌ಎಲ್, ಎಲ್ ಶೇಪ್ಡ್ ಎಲ್ಇಡಿ ಟರ್ನ್ ಸಿಗ್ನಲ್, ಡೈನಾಮಿಕ್ ಇಂಡಿಕೇಟರ್ ನೀಡಲಾಗಿದ್ದು, ಹೊಸ ಕಾರು 10ನೇ ತಲೆಮಾರಿನ ಸಿವಿಕ್ ಸೆಡಾನ್ ಮಾದರಿಯಿಂದಲೂ ಹಲವಾರು ಫೀಚರ್ಸ್‌ಗಳನ್ನು ಎರವಲು ಪಡೆದುಕೊಂಡಿದೆ.

ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್ ತಲುಪಿದ ನ್ಯೂ ಜನರೇಷನ್ ಹೋಂಡಾ ಸಿಟಿ

ಹೊಸ ಸಿಟಿ ಕಾರಿನ ಇಂಟಿರಿಯರ್‍ ಈ ಸಾಕಷ್ಟು ಹೊಸತನದೊಂದಿಗೆ ಅಭಿವೃದ್ದಿಗೊಂಡಿದ್ದು, ಸಾಫ್ಟ್ ಟಚ್ ಮಟಿರಿಯಲ್‌ನೊಂದಿಗೆ ಸಾಫ್ಟ್ ಟಚ್ ಡ್ಯುಯಲ್ ಟೋನ್ ಡ್ಯಾಶ್‌ಬೋರ್ಡ್, ಇನ್‌ಟೈನ್‌ಮೆಂಟ್ ಸಿಸ್ಟಂ, ಹೊಂದಾಣಿಕೆ ಮಾಡಬಹುದಾದ ಹಿಂಭಾಗದ ಹೆಡ್‍‍‍ರೆಸ್ಟ್, ಡಿಜಿ‍ಟಲ್ ಇನ್ಸ್ ಟ್ರೂ‍‍ಮೆಂಟ್ ಕನ್ಸೋಲ್, ಹೊಸ ಟಚ್‍‍ಸ್ಕ್ರೀನ್ ಇನ್ಪೋಟೈನ್‍‍ಮೆಂಟ್ ಸಿಸ್ಟಂ ಅನ್ನು ಅಳವಡಿಸಲಾಗಿದೆ.

ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್ ತಲುಪಿದ ನ್ಯೂ ಜನರೇಷನ್ ಹೋಂಡಾ ಸಿಟಿ

ಜೊತೆಗೆ ಸ್ಪೋರ್ಟಿ ವಿನ್ಯಾಸದ ಲೆದರ್ ಸೀಟುಗಳು, ಮ್ಯಾನುವಲ್ ಸನ್‌ರೂಫ್, ಹಿಂಭಾಗದ ಎಸಿ ವೆಂಟ್ಸ್, ಹಿಂಭಾಗದ ಆಸನದಲ್ಲೂ ಸೆಂಟರ್ ಆರ್ಮ್ ರೆಸ್ಟ್‌ನೊಂದಿಗೆ ಕಪ್ ಹೋಲ್ಡರ್ ನೀಡಲಾಗಿದ್ದು, ಹೊಸ ಕಾರು ಹಲವಾರು ಕನೆಕ್ವಿಟಿ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದೆ.

MOST READ: ಹೊಸ ಪೊಲೊ ಕಾರು ವಿತರಣೆ ಮಾಡಿದ ಎರಡೇ ನಿಮಿಷದಲ್ಲಿ ನಡೆಯಿತು ಅಪಘಾತ..!

ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್ ತಲುಪಿದ ನ್ಯೂ ಜನರೇಷನ್ ಹೋಂಡಾ ಸಿಟಿ

ಎಂಜಿನ್ ಮತ್ತು ಪರ್ಫಾಮೆನ್ಸ್

ಹೊಸ ಸಿಟಿ ಕಾರಿನಲ್ಲಿ ಈ ಬಾರಿ ಡಬಲ್ ಓವರ್‌ಹೆಡ್ ಕ್ಯಾಮ್ ಸೆಟಪ್‌ನೊಂದಿಗೆ ಹೊಸದಾಗಿ 1.5-ಲೀಟರ್ ಪೆಟ್ರೋಲ್ ಎಂಜಿನ್(ಎಲ್15ಬಿ) ನೀಡಲಾಗುತ್ತಿದ್ದು, ಈ ಹೊಸ ಎಂಜಿನ್ 120-ಬಿಎಚ್‌ಪಿ ಮತ್ತು 145-ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ.

ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್ ತಲುಪಿದ ನ್ಯೂ ಜನರೇಷನ್ ಹೋಂಡಾ ಸಿಟಿ

ಹಾಗೆಯೇ ಡೀಸೆಲ್ ಮಾದರಿಯು 1.5-ಲೀಟರ್ 100-ಬಿಎಚ್‌ಪಿ, 200-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದು, ಸ್ಟ್ಯಾಂಡರ್ಡ್ ಆಗಿ ಎರಡು ಮಾದರಿಯಲ್ಲೂ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ನೀಡಲಾಗಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್ ತಲುಪಿದ ನ್ಯೂ ಜನರೇಷನ್ ಹೋಂಡಾ ಸಿಟಿ

ಜೊತೆಗೆ ಪರ್ಫಾಮೆನ್ಸ್ ಪ್ರಿಯರಿಗಾಗಿ ಪೆಟ್ರೋಲ್ ಹೈ ಎಂಡ್ ಮಾದರಿಯಲ್ಲಿ ಮಾತ್ರವೇ 7-ಸ್ಪೀಡ್ ಸಿವಿಟಿ ಗೇರ್‌ಬಾಕ್ಸ್ ಆಯ್ಕೆ ನೀಡಲಾಗಿದ್ದು, ಪೆಟ್ರೋಲ್ ಮಾದರಿಯು ಪ್ರತಿ ಲೀಟರ್‌ಗೆ 17ರಿಂದ 18 ಕಿ.ಮೀ ಮತ್ತು ಡೀಸೆಲ್ ಮಾದರಿಯು ಪ್ರತಿ ಲೀಟರ್‌ಗೆ 22ರಿಂದ 23 ಕಿ.ಮೀ ಇಂಧನ ದಕ್ಷತೆಯನ್ನು ಹೊಂದಿರಲಿದೆ.

ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್ ತಲುಪಿದ ನ್ಯೂ ಜನರೇಷನ್ ಹೋಂಡಾ ಸಿಟಿ

ಸುರಕ್ಷಾ ಸೌಲಭ್ಯಗಳು

ಸಿ-ಸೆಗ್ಮೆಂಟ್ ಸೆಡಾನ್ ಕಾರಿನಲ್ಲೇ ಅತಿಹೆಚ್ಚು ಸುರಕ್ಷಾ ಸೌಲಭ್ಯಗಳನ್ನು ಹೊಂದಿರುವ ಸಿಟಿ ಕಾರಿನಲ್ಲಿ ಈ ಬಾರಿ ಮತ್ತಷ್ಟು ಸುಧಾರಿತ ಸುರಕ್ಷಾ ಅಂಶಗಳನ್ನು ಹೊಂದಿದ್ದು, ಹೊಸ ಕಾರಿನಲ್ಲಿ ಹ್ಯಾಂಡ್‌ಲಿಂಗ್ ಅಸಿಸ್ಟ್, ಹಿಲ್ ಸ್ಟಾರ್ಟ್, 6-ಏರ್‌ಬ್ಯಾಗ್‌ಗಳು, ಎಬಿಎಸ್ ಜೊತೆಗೆ ಇಬಿಡಿ, ವೆಹಿಕಲ್ ಸ್ಟ್ಯಾಬಿಲಿಟಿ ಅಸಿಸ್ಟ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ಫ್ರಂಟ್ ಆ್ಯಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್, ರಿಯರ್ ವ್ಯೂ ಕ್ಯಾಮೆರಾ ಮತ್ತು 16-ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್ಹ್ ಸೇರಿದಂತೆ ಹಲವಾರು ಹೊಸ ಸೌಲಭ್ಯಗಳಿವೆ.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್ ತಲುಪಿದ ನ್ಯೂ ಜನರೇಷನ್ ಹೋಂಡಾ ಸಿಟಿ

ಹೈ ಎಂಡ್ ಮಾದರಿಯಾದ ಸಿಟಿ ಝೆಡ್ಎಕ್ಸ್ ನಲ್ಲಿ ಲೇನ್ ವಾಚ್ ಕ್ಯಾಮೆರಾ ಸಿಸ್ಟಂ ಇದ್ದು, ಇದನ್ನು ಎಡ ಭಾಗದ ರಿಯರ್ ವ್ಯೂ ಮಿರರ್‌‌ನಲ್ಲಿ ಅಳವಡಿಸಲಾಗಿರುವ‌ ಕ್ಯಾಮೆರಾ ಮೂಲಕ ಗರಿಷ್ಠ ಸುರಕ್ಷತೆ ಪಡೆದುಕೊಳ್ಳಬಹುದಾಗಿದೆ.

Source: Team BHP

Most Read Articles

Kannada
Read more on ಹೋಂಡಾ honda
English summary
2020 Honda City Reaches Dealerships Ahead Of Launch. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X