ಹೊಸ ಎಂಜಿನ್ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ 2020ರ ಹೋಂಡಾ ಸಿಟಿ

ವಾಹನ ಉತ್ಪಾದನಾ ಕಂಪನಿಯಾದ ಹೋಂಡಾ ತನ್ನ 2020ರ ಸಿಟಿ ಕಾರನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಬಹುನಿರೀಕ್ಷಿತ ಹೊಸ ಹೋಂಡಾ ಸಿಟಿ ಕಾರನಲ್ಲಿ ಹೊಸ ಎಂಜಿನ್ ಆಯ್ಕೆಯನ್ನು ಹೊಂದಿರಲಿದೆ.

ಹೊಸ ಎಂಜಿನ್ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ 2020ರ ಹೋಂಡಾ ಸಿಟಿ

ಭಾರತದಲ್ಲಿ ಕರೋನಾ ಭೀತಿಯಿಂದ ದೇಶಾದ್ಯಂತ ಲಾಕ್‍ಡೌನ್ ಮಾಡಿರುವುದರಿಂದ ಹೊಸ ಹೋಂಡಾ ಸಿಟಿ ಕಾರಿನ ಬಿಡುಗಡೆಯನ್ನು ಮುಂದೂಡಲಾಗಿದೆ. ಈ ಹೋಂಡಾ ಸಿಟಿ ಕಾರಿನ ಬುಕ್ಕಿಂಗ್ ಕೂಡ ಬಿಡುಗಡೆಯ ದಿನ ಪ್ರಾರಂಭವಾಗುವ ಸಾಧ್ಯತೆಗಳಿದೆ.ಹೊಸ ಹೋಂಡಾ ಸಿಟಿ 4,549 ಎಂಎಂ ಉದ್ದ, 1,784 ಎಂಎಂ ಅಗಲ, 1,489 ಎಂಎಂ ಎತ್ತರ ಮತ್ತು 2,600 ಎಂಎಂ ವ್ಹೀಲ್ ಬೇಸ್ ಅನ್ನು ಹೊಂದಿದೆ. ಹೊಸ ಹೋಂಡಾ ಸಿಟಿ ಪ್ರಸ್ತುತ ಮಾದರಿಗಿಂತ ಹೆಚ್ಚು ಉದ್ದ ಮತ್ತು ಅಗಲವನ್ನು ಹೊಂದಿದೆ.

ಹೊಸ ಎಂಜಿನ್ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ 2020ರ ಹೋಂಡಾ ಸಿಟಿ

ಹೋಂಡಾ ಸಿಟಿ ಮಾದರಿಯು ಹೋಂಡಾ ಕಂಪನಿಯ ಸರಣಿಯ ಕಾರುಗಳಲ್ಲಿ ಹಲವು ವರ್ಷಗಳಿಂದ ಹೆಚ್ಚು ಮಾರಾಟವಾಗುವ ಕಾರು ಆಗಿದೆ. ದೇಶಿಯ ಮಾರುಕಟ್ಟೆಯಲ್ಲಿ ಹೋಂಡಾ ಸಿಟಿ, ವರ್ನಾ ಮತ್ತು ಸಿಯಾಜ್ ಒಂದೇ ರೀತಿಯಲ್ಲಿ ಉತ್ತಮವಾಗಿ ಮಾರಾಟವಾಗುತ್ತಿವೆ.

MOST READ: ಲಾಕ್‌ಡೌನ್‌ ನಡುವೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2020ರ ಮಹೀಂದ್ರಾ ಥಾರ್

ಹೊಸ ಎಂಜಿನ್ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ 2020ರ ಹೋಂಡಾ ಸಿಟಿ

ಮಾರುಕಟ್ಟೆಯಲ್ಲಿರುವ 1.5-ಲೀಟರ್ ಎಸ್‌ಒಹೆಚ್‌ಸಿ ಎಂಜಿನ್‌ಗಿಂತಲೂ ಇದು ಹೆಚ್ಚು ಪವರ್ ಬ್ಯಾಂಡ್ ಹೊಂದಿರಲಿದೆ. ಹೊಸ ಸಿಟಿ ಕಾರಿನಲ್ಲಿ ಡ್ಯುಯಲ್ ಓವರ್‌ಹೆಡ್ ಕ್ಯಾಮ್ ಸೆಟಪ್‌ನೊಂದಿಗೆ ಹೊಸ 1.5-ಲೀಟರ್ ಪೆಟ್ರೋಲ್ ಎಂಜಿನ್(ಎಲ್ 15 ಬಿ) ನೀಡಲಾಗುತದೆ. ಈ ಹೊಸ ಎಂಜಿನ್ 119 ಬಿಎಚ್‌ಪಿ ಮತ್ತು ಸುಮಾರು 155 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ

ಹೊಸ ಎಂಜಿನ್ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ 2020ರ ಹೋಂಡಾ ಸಿಟಿ

ಇನ್ನು ಸಿಟಿ ಝಡ್ಎಕ್ಸ್ ನಲ್ಲಿ ಹೋಂಡಾ ಲೇನ್ ವಾಚ್ ಕ್ಯಾಮೆರಾ ಸಿಸ್ಟಂ ಅನ್ನು ಅಳವಡಿಸಲಾಗಿದೆ. ಇದನ್ನು ಎಡ ಭಾಗದ ರೇರ್ ವ್ಯೂ ಮಿರರ್‍ ನಲ್ಲಿ ಈ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಹೊಸ ಹೋಂಡಾ ಸಿಟಿ ಕಾರು ದೇಶಿಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಹೋಂಡಾ ಸಿವಿಕ್ ಮಾದರಿಯ ವಿನ್ಯಾಸವನ್ನು ಹೊಂದಿರಲಿದೆ.

MOST READ: ಹೊಸ ಹ್ಯುಂಡೈ ವೆನ್ಯೂ ಪೆಟ್ರೋಲ್ ಆವೃತ್ತಿಯ ಮೈಲೇಜ್ ಮಾಹಿತಿ ಬಹಿರಂಗ

ಹೊಸ ಎಂಜಿನ್ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ 2020ರ ಹೋಂಡಾ ಸಿಟಿ

2020ರ ಹೋಂಡಾ ಸಿಟಿ ಕಾರಿನ ಮುಂಭಾಗ ಮತ್ತು ಹಿಂಭಾಗದಲ್ಲಿ ಎಲ್‍ಇಡಿ ಯು‍‍ನಿ‍ಟ್‍‍ಗಳು, ಹೋಂಡಾ ಸಿಗ್ನೇಚರ್ ಕ್ರೋಮ್ ಬಾರ್, ಕೂಪ್ ಸ್ಟೈಲ್ ಸ್ಲೋಪಿಂಗ್ ರೂಫ್‍‍ಲೈನ್ ಮತ್ತು ದೊಡ್ಡ ಒ‍ಆರ್‍‍ವಿಎಂ‍ಗಳಿವೆ. ಇನ್ನು ಹೊಸ ಹೋಂಡಾ ಕಾರಿನಲ್ಲಿ ಶಾರ್ಕ್ ಫಿನ್ ಆಂಟೆನಾ, ಟೇಲ್ ಸೆಗ್‍ಮೆಂಟ್ ಮತ್ತು ಉತ್ತಮವಾದ ಬೂಟ್ ಲಿ‍ಡ್‍‍‍ಗಳಿವೆ.

ಹೊಸ ಎಂಜಿನ್ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ 2020ರ ಹೋಂಡಾ ಸಿಟಿ

ಹೊಸ ಹೋಂಡಾ ಲೋ ಸ್ಪೆಕ್ ಮಾದರಿಯ ಇಂಟಿರಿಯರ್ ಚಿತ್ರವನ್ನು ಬಹಿರಂಗವಾಗಿದೆ. ಈ ಹೊಂಡಾ ಕಾರಿನ ಇಂಟಿರಿಯರ್ ಚಿತ್ರವನ್ನು ಗಾಡಿವಾಡಿ ಬಹಿರಂಗಪಡಿಸಿದೆ. ಹೊಸ ಹೋಂಡಾ ಸಿಟಿ ಕಾರಿನ ಇಂಟಿರಿಯರ್‍‍ನಲ್ಲಿ ಡ್ಯುಯಲ್ ಟೋನ್ ಸಿಸ್ಟಂ, ಹೊಂದಾಣಿಕೆ ಮಾಡಬಹುದಾದ ಹಿಂಭಾಗದ ಹೆಡ್‍‍‍ರೆಸ್ಟ್, ಡಿಜಿ‍ಟಲ್ ಇನ್ಸ್ ಟ್ರೂ‍‍ಮೆಂಟ್ ಕನ್ಸೋಲ್, ಹೊಸ ಟಚ್‍‍ಸ್ಕ್ರೀನ್ ಇನ್ಪೋಟೇನ್‍‍ಮೆಂಟ್ ಸಿಸ್ಟಂ ಅನ್ನು ಅಳವಡಿಸಲಾಗಿದೆ.

MOST READ: ದಾಖಲೆ ಪ್ರಮಾಣದಲ್ಲಿ ಮಾರಾಟವಾಗುತ್ತಿವೆ ಮಾರುತಿ ಸುಜುಕಿ ಎಕ್ಸ್‌ಎಲ್6

ಹೊಸ ಎಂಜಿನ್ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ 2020ರ ಹೋಂಡಾ ಸಿಟಿ

ಟಾಪ್ ವೆರಿಯೆಂಟ್ ಆಗಿರುವ ಹೋಂಡಾ ಸಿಟಿ ಝಡ್ಎಕ್ಸ್ ನಲ್ಲಿ ಹೂಸ ಫೀಚರ್ಸ್‍ಗಳನ್ನು ಅಳವಡಿಸಿದೆ. ಸಿಟಿ ಝಡ್ಎಕ್ಸ್ ವೆರಿಯೆಂಟ್‍ನಲ್ಲಿ ಎಲ್ಇಡಿ ಹೆಡ್‍ ಲೈಟ್, ಎಲ್ಇಡಿ ಟೇಲ್ ಲ್ಯಾಂಪ್, ಆರು ಏರ್‌ಬ್ಯಾಗ್‌ಗಳು, ಟ್ರಾಕ್ಷನ್ ಕಂಟ್ರೋಲ್, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ ಮತ್ತು ಹಿಲ್ ಸ್ಟಾರ್ಟ್ ಅಸಿಸ್ಟ್ ನಂತಹ ಹಲವಾರು ಉನ್ನತ ಫೀಚರ್ ಗಳನ್ನು ಹೊಂದಿದೆ.

ಹೊಸ ಎಂಜಿನ್ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ 2020ರ ಹೋಂಡಾ ಸಿಟಿ

ಎಂಜಿ ಹೆಕ್ಟರ್ ಮತ್ತು ಕಿಯಾ ಸೆಲ್ಟೋಸ್‍‍ನಲ್ಲಿ ಕಂಡುಬರುವ ಕನೆಕ್ಟಿವಿಟಿ ತಂತ್ರಜ್ಞಾನಗಳನ್ನು ಅಳವಡಿಸುವ ಸಾಧ್ಯತೆಗಳಿವೆ. 2020ರ ಹೋಂಡಾ ಸಿಟಿ ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಮಾರುತಿ ಸಿಯಾಜ್, ಟೊಯೊಟಾ ಯಾರಿಸ್ ಮತ್ತು ಹ್ಯುಂಡೈ ವರ್ನಾ ಕಾರುಗಳಿಗೆ ಪೈಪೋಟಿ ನೀಡುತ್ತದೆ.

Article Published On: Friday, May 8, 2020, 19:52 [IST]
English summary
New Honda City to get all-new 1.5 petrol engine. Read in Kannada.
Read more on ಹೋಂಡಾ honda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+