ಭಾರತದಲ್ಲಿ 5 ಸಾವಿರ ಯುನಿಟ್ ಮಾರಾಟ ದಾಖಲಿಸಿದ ನ್ಯೂ ಜನರೇಷನ್ ಸಿವಿಕ್

ಕಳೆದ 2019ರ ಮಾರ್ಚ್‌ನಲ್ಲಿ ಹೊಸ ವಿನ್ಯಾಸದೊಂದಿಗೆ ಬಿಡುಗಡೆಯಾಗಿದ್ದ 10ನೇ ತಲೆಮಾರಿನ ಹೋಂಡಾ ಸಿವಿಕ್ ಕಾರು ಇದುವರೆಗೆ 5 ಸಾವಿರ ಯುನಿಟ್ ಮಾರಾಟಗೊಂಡಿದ್ದು, ಬಿಡುಗಡೆಯಾದ ಒಂದು ವರ್ಷದ ಬಳಿಕ 5 ಸಾವಿರ ಯುನಿಟ್ ಮಾರಾಟ ಪ್ರಮಾಣವನ್ನು ದಾಖಲಿಸಿದೆ.

ಭಾರತದಲ್ಲಿ 5 ಸಾವಿರ ಯುನಿಟ್ ಮಾರಾಟ ದಾಖಲಿಸಿದ ನ್ಯೂ ಜನರೇಷನ್ ಸಿವಿಕ್

ಪ್ರಸ್ತುತ ಮಾರುಕಟ್ಟೆಯಲ್ಲಿನ ಸಿ ಸೆಗ್ಮೆಂಟ್ ಸೆಡಾನ್ ಕಾರುಗಳಲ್ಲೇ ಅತಿ ಹೆಚ್ಚು ಪ್ರೀಮಿಯಂ ಫೀಚರ್ಸ್ ಹೊಂದಿರುವ ನ್ಯೂ ಜನರೇಷನ್ ಸಿವಿಕ್ ಕಾರು ಪ್ರತಿಸ್ಪರ್ಧಿ ಮಾದರಿಗಳಾದ ಹ್ಯುಂಡೈ ಎಲಾಂಟ್ರಾ ಮತ್ತು ಟೊಯೊಟಾ ಕರೊಲ್ಲಾ ಸೆಡಾನ್ ಕಾರುಗಳಿಗೆ ಪೈಪೋಟಿಯಾಗಿ ಮಾರಾಟಗೊಳ್ಳುತ್ತಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.17.94 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು ರೂ.21.25 ಲಕ್ಷ ಬೆಲೆ ಹೊಂದಿದೆ.

ಭಾರತದಲ್ಲಿ 5 ಸಾವಿರ ಯುನಿಟ್ ಮಾರಾಟ ದಾಖಲಿಸಿದ ನ್ಯೂ ಜನರೇಷನ್ ಸಿವಿಕ್

ಹೀಗಿದ್ದರೂ ಕೂಡಾ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುವಲ್ಲಿ ಹಿನ್ನಡೆ ಅನುಭವಿಸಿರುವ ಹೊಸ ಸಿವಿಕ್ ಕಾರು ಕಳೆದ ಒಂದು ವರ್ಷದ ಅವಧಿಯಲ್ಲಿ ಕೇವಲ 5 ಸಾವಿರ ಯುನಿಟ್ ಮಾರಾಟವಾಗಿದ್ದು, ಹೊಸ ಕಾರು ಬಿಎಸ್-6 ಎಂಜಿನ್ ಜೊತೆಗೆ ಬಿಡುಗಡೆಯಾಗುವುದು ಅನುಮಾನ ಎನ್ನಲಾಗಿದೆ.

MOST READ: ಕರೋನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಉಚಿತ ಕ್ಯಾಬ್ ಸೌಲಭ್ಯವನ್ನು ಆರಂಭಿಸಿದ ಮಹೀಂದ್ರಾ

ಭಾರತದಲ್ಲಿ 5 ಸಾವಿರ ಯುನಿಟ್ ಮಾರಾಟ ದಾಖಲಿಸಿದ ನ್ಯೂ ಜನರೇಷನ್ ಸಿವಿಕ್

ಇನ್ನು ಹೊಸ ವಾಹನಗಳ ಮಾರಾಟದಲ್ಲಿ ಸತತ ನಷ್ಟ ಅನುಭವಿಸುತ್ತಿರುವ ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ಕನಿಷ್ಠ ಮಟ್ಟದ ವಾಹನಗಳ ಮಾರಾಟಕ್ಕೂ ಪರದಾಟುವಂತಹ ಪರಿಸ್ಥಿತಿ ಎದುರಾಗಿದೆ. ಇದರಲ್ಲಿ ಹೋಂಡಾ ಕಾರ್ಸ್ ಇಂಡಿಯಾ ಭಾರೀ ಹಿನ್ನಡೆ ಅನುಭವಿಸಿದ್ದು, ಕಾರುಗಳ ಮಾರಾಟವನ್ನು ಉತ್ತೇಜಿಸಲು ಭರ್ಜರಿ ಡಿಸ್ಕೌಂಟ್ ನೀಡುತ್ತಿವೆ.

ಭಾರತದಲ್ಲಿ 5 ಸಾವಿರ ಯುನಿಟ್ ಮಾರಾಟ ದಾಖಲಿಸಿದ ನ್ಯೂ ಜನರೇಷನ್ ಸಿವಿಕ್

ಹೊಸ ಎಮಿಷನ ನಿಯಮಗಳ ಜಾರಿಯಿಂದಾಗಿ ಆಟೋ ಉದ್ಯಮದಲ್ಲಿ ಹೊಸ ವಾಹನ ಮಾರಾಟ ಪ್ರಕ್ರಿಯೆಯೂ ಮಂದಗತಿಯಲ್ಲಿ ಸಾಗಿದ್ದು, ಸ್ಟಾಕ್ ಪ್ರಮಾಣವು ಆಟೋ ಕಂಪನಿಗಳಿಗೆ ಆರ್ಥಿಕ ಹೊರೆಯಾಗಿ ಪರಿಣಮಿಸಿದೆ. ಹೀಗಾಗಿ ಗ್ರಾಹಕರನ್ನು ಸೆಳೆಯಲು ಭಾರೀ ಡಿಸ್ಕೌಂಟ್‌ಗಳನ್ನು ಘೋಷಣೆ ಮಾಡುತ್ತಿವೆ. ಕಳೆದ ಐದಾರು ತಿಂಗಳಿನಿಂದ ಹೊಸ ಕಾರು ಮಾರಾಟದಲ್ಲಿ ತೀವ್ರ ನಷ್ಟ ಅನುಭವಿಸುತ್ತಿದ್ದು, ಇದೀಗ ಕರೋನಾ ವೈರಸ್‌ನಿಂದಾಗಿ ವಿಧಿಸಲಾಗಿರುವ ಲಾಕ್‌ಡೌನ್‌ನಿಂದಾಗಿ ಮತ್ತಷ್ಟು ನಷ್ಟ ಅನುಭವಿಸುವಂತಾಗಿದೆ.

MOST READ: ನಟ ವಿಕ್ರಮ್ ಗಾಗಿ ತಯಾರಾಯ್ತು ವಿಶೇಷ ಕಾರವಾನ್

ಭಾರತದಲ್ಲಿ 5 ಸಾವಿರ ಯುನಿಟ್ ಮಾರಾಟ ದಾಖಲಿಸಿದ ನ್ಯೂ ಜನರೇಷನ್ ಸಿವಿಕ್

ಇನ್ನು ಬಿಎಸ್-4 ವಾಹನಗಳು ಆಟೋ ಕಂಪನಿಗಳು ಭಾರೀ ಪ್ರಮಾಣದ ನಷ್ಟ ಉಂಟು ಮಾಡಲಿದ್ದು, ಏಪ್ರಿಲ್ 1ರಿಂದ ಬಿಎಸ್-6 ವಾಹನಗಳ ಮಾರಾಟವು ಕಡ್ಡಾಯವಾಗಿ ಜಾರಿ ಮಾಡಿರುವುದು ವಾಹನ ಉತ್ಪಾದನಾ ಕಂಪನಿಗಳಿಗೆ ಹಳೆಯ ಸ್ಟಾಕ್ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಬಿಎಸ್-4 ವಾಹನಗಳನ್ನು ಬ್ಯಾನ್ ಮಾಡಲಾಗಿದ್ದರೂ ಕೂಡಾ ಪರಿಸ್ಥಿತಿಗೆ ಅನುಗುಣವಾಗಿ ಸದ್ಯಕ್ಕೆ ಕೆಲವು ವಿನಾಯ್ತಿಗಳನ್ನು ನೀಡಿರುವ ಸುಪ್ರೀಂಕೋರ್ಟ್ ಹಲವು ಷರತ್ತುಗಳನ್ನು ವಿಧಿಸಿದೆ.

ಭಾರತದಲ್ಲಿ 5 ಸಾವಿರ ಯುನಿಟ್ ಮಾರಾಟ ದಾಖಲಿಸಿದ ನ್ಯೂ ಜನರೇಷನ್ ಸಿವಿಕ್

2018ರಲ್ಲೇ 2020ರ ಏಪ್ರಿಲ್ 1ರಿಂದ ಬಿಎಸ್-4 ವಾಹನಗಳ ಮಾರಾಟ ಮತ್ತು ನೋಂದಣಿ ಪ್ರಕ್ರಿಯೆಯನ್ನು ಬ್ಯಾನ್ ಮಾಡಿದ್ದ ಸುಪ್ರೀಂಕೋರ್ಟ್ ಕೊನೆಯ ಕ್ಷಣದಲ್ಲಿ ಬ್ಯಾನ್ ಅಸ್ತ್ರವನ್ನು ಸಡಿಲಿಸಿದ್ದು, ಕರೋನಾ ವೈರಸ್ ತಡೆ ಉದ್ದೇಶದಿಂದ ದೇಶಾದ್ಯಂತ ಜಾರಿಗೊಳಿಸಿರುವ ಲಾಕ್‌ಡೌನ್ ಹಿನ್ನಲೆಯಲ್ಲಿ ಆಟೋ ಕಂಪನಿಗಳಿಗೆ ಕೆಲವು ವಿನಾಯ್ತಿಗಳನ್ನು ನೀಡಿದೆ.

MOST READ: ವಿವಾಹ ವಾರ್ಷಿಕೋತ್ಸವದ ಸಂಭ್ರಮಕ್ಕಾಗಿ ದುಬಾರಿ ಬೆಲೆಯ ಸರ್ಪ್ರೈಸ್ ಗಿಫ್ಟ್

ಭಾರತದಲ್ಲಿ 5 ಸಾವಿರ ಯುನಿಟ್ ಮಾರಾಟ ದಾಖಲಿಸಿದ ನ್ಯೂ ಜನರೇಷನ್ ಸಿವಿಕ್

ಬಿಎಸ್-6 ಜಾರಿಗೆ ಮುನ್ನ ಕರೋನಾ ವೈರಸ್ ಭೀತಿ ಹೆಚ್ಚಿದ್ದರಿಂದ ಎಲ್ಲಾ ಮಾದರಿಯ ವಾಣಿಜ್ಯ ಚಟುವಟಿಕೆಗಳನ್ನು ಬಂದ್ ಮಾಡಿ ಲಾಕ್ ಡೌನ್ ಹೇರಲಾಗಿತ್ತು. ಕೊನೆಯ ಗಳಿಗೆಯಲ್ಲಿ ಮಾರಾಟವಾಗಬೇಕಿದ್ದ ಲಕ್ಷಾಂತರ ಬಿಎಸ್-4 ವಾಹನಗಳು ಮಾರಾಟವಾಗದೆ ಹಾಗೆಯೇ ಉಳಿದಿವೆ.

ಭಾರತದಲ್ಲಿ 5 ಸಾವಿರ ಯುನಿಟ್ ಮಾರಾಟ ದಾಖಲಿಸಿದ ನ್ಯೂ ಜನರೇಷನ್ ಸಿವಿಕ್

ಇದರಿಂದ ಆಟೋ ಕಂಪನಿಗಳಿಗೆ ವಿನಾಯ್ತಿಯೊಂದಿಗೆ ಕೆಲವು ಷರತ್ತುಗಳನ್ನು ವಿಧಿಸಿ ಮಾರಾಟಕ್ಕೆ ಅವಕಾಶ ನೀಡಿರುವ ಸುಪ್ರೀಂಕೋರ್ಟ್ ಬ್ಯಾನ್ ನಷ್ಟ ತಡೆಗೆ ಸಹಕರಿಸಿದೆ. ಕರೋನಾ ವೈರಸ್ ಹಿನ್ನಲೆಯಲ್ಲಿ ಲಾಕ್ ಡೌನ್ ಮಾಡಿರುವ ವಿಚಾರವನ್ನು ಮುಂದಿಟ್ಟುಕೊಂಡು ವಿನಾಯ್ತಿ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿರುವ ಇಂಡಿಯನ್ ಆಟೋ ಡೀಲರ್ಸ್ ಅಸೋಶಿಯೇಷನ್ ಸಂಸ್ಥೆಗೆ ಸುಪ್ರೀಂಕೋರ್ಟ್ ಹಲವು ಷರತ್ತುಗಳನ್ನು ವಿಧಿಸಿ ಮಾರಾಟ ಅವಧಿಯನ್ನು ವಿಸ್ತರಣೆ ಮಾಡಿದೆ.

MOST READ: ಕರೋನಾ ವೈರಸ್: ವೆಂಟಿಲೆಟರ್ ಉತ್ಪಾದನೆ ಚಾಲನೆ ನೀಡಿದ ಮಾರುತಿ ಸುಜುಕಿ

ಭಾರತದಲ್ಲಿ 5 ಸಾವಿರ ಯುನಿಟ್ ಮಾರಾಟ ದಾಖಲಿಸಿದ ನ್ಯೂ ಜನರೇಷನ್ ಸಿವಿಕ್

ಏಪ್ರಿಲ್ 1ರಿಂದಲೇ ನಿಷೇಧಗೊಳ್ಳಬೇಕಿದ್ದ ಬಿಎಸ್-4 ವಾಹನಗಳ ಮಾರಾಟ ಪ್ರಕ್ರಿಯೆಯನ್ನು ಏಪ್ರಿಲ್ 24ರ ತನಕ ವಿಸ್ತರಣೆ ಮಾಡಲಾಗಿದ್ದು, ಪ್ರತಿ ಆಟೋ ಕಂಪನಿಗಳು ಸ್ಟಾಕ್ ಇರುವ ಶೇ.10 ರಷ್ಟು ಪ್ರಮಾಣದ ಬಿಎಸ್-4 ವಾಹನಗಳನ್ನು ಮಾತ್ರವೇ ಮಾರಾಟ ಮಾಡಬೇಕು ಎಂದಿದೆ.

Most Read Articles

Kannada
Read more on ಹೋಂಡಾ honda
English summary
Honda Civic Sales Cross 5,000 Units: New Milestone Crossed. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X