2021ಕ್ಕೆ ಬಿಡುಗಡೆಯಾಗಲಿದೆ ಹೋಂಡಾ ಹೊಸ ಕಂಪ್ಯಾಕ್ಟ್ ಎಸ್‌ಯುವಿ
ಭಾರತದಲ್ಲಿ ಹೋಂಡಾ ಕಂಪನಿಯು ಈಗಾಗಲೇ ವಿವಿಧ ಮಾದರಿಯ ಹಲವು ಕಾರುಗಳನ್ನು ಮಾರಾಟ ಮಾಡುವ ಮೂಲಕ ಗ್ರಾಹಕರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆಗೊಳಿಸುವ ಯೋಜನೆಯಲ್ಲಿದೆ.

ಮಾಹಿತಿಗಳ ಪ್ರಕಾರ, ಹೋಂಡಾ ಕಂಪನಿಯು ರೂ.8 ಲಕ್ಷದಿಂದ ರೂ.12 ಲಕ್ಷ ಬೆಲೆ ಅಂತರದಲ್ಲಿ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯೊಂದನ್ನು ಬಿಡುಗಡೆಗೊಳಿಸುವ ಯೋಜನೆಯಲ್ಲಿದ್ದು, ಸದ್ಯ ಮಾರುಕಟ್ಟೆಯಲ್ಲಿ ಜನಪ್ರಿಯವಾಗಿರುವ ಮಾರುತಿ ಸುಜುಕಿ ಬ್ರೆಝಾ, ಹ್ಯುಂಡೈ ವೆನ್ಯೂ ಮತ್ತು ಟಾಟಾ ನೆಕ್ಸಾನ್ ಕಾರುಗಳಿಗೆ ಪೈಪೋಟಿಯಾಗಿ ಬಿಡುಗಡೆ ಮಾಡಲಿದೆ. ಹೊಸ ಕಾರು ಪೆಟ್ರೋಲ್ ಮತ್ತು ಡೀಸೆಲ್ ಎರಡು ಮಾದರಿಯಲ್ಲೂ ಖರೀದಿಗೆ ಲಭ್ಯವಿರಲಿದ್ದು, ಹೊಸ ಕಾರಿನ ಮೂಲಕ ಗ್ರಾಹಕರ ಬೇಡಿಕೆ ಹೆಚ್ಚಿಸುವತ್ತ ಹೋಂಡಾ ಗಮನಹರಿಸಿದೆ.

ಈ ಹಿಂದೆಯೇ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಕುರಿತಂತೆ ಸುಳಿವು ನೀಡಿದ್ದ ಹೋಂಡಾ ಕಂಪನಿಯು ಬಿಎಸ್-6 ಜಾರಿಯಾಗುತ್ತಿದ್ದ ಹಿನ್ನಲೆಯಲ್ಲಿ ಹೊಸ ಯೋಜನೆ ಕೈಬಿಟ್ಟು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಕಾರು ಮಾದರಿಗಳ ಎಂಜಿನ್ ಉನ್ನತೀಕರಣದತ್ತ ಗಮನಹರಿಸಿತ್ತು.

ಇದೀಗ ಬಿಎಸ್-6 ಎಂಜಿನ್ ಹೊಂದಿರುವ ಬಹುತೇಕ ಹೋಂಡಾ ಕಾರು ಮಾದರಿಗಳು ಮಾರುಕಟ್ಟೆ ಪ್ರವೇಶಿಸಿದ್ದು, ಕರೋನಾ ವೈರಸ್ ತಡೆಗಾಗಿ ಹಾಕಲಾಗಿರುವ ಲಾಕ್ ಡೌನ್ ತೆರವುಗೊಳಿಸಿದ ನಂತರ ಬಹುತೇಕ ಹೊಸ ಕಾರುಗಳು ಖರೀದಿಗೆ ಲಭ್ಯವಿರಲಿವೆ.
MOST READ: ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು

ಬಿಎಸ್-6 ಕಾರು ಮಾದರಿಗಳ ಬಿಡುಗಡೆಯ ನಂತರ ಹೊಸ ಕಾರುಗಳ ಬಿಡುಗಡೆಯತ್ತ ಗಮನಹರಿಸಲಿರುವ ಹೋಂಡಾ ಕಂಪನಿಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ವಿವಿಧ ಮಾದರಿಯ ಹೊಸ ಕಾರು ಆವೃತ್ತಿಗಳನ್ನು ಸಿದ್ದಪಡಿಸುತ್ತಿದ್ದು, ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯು ಇದೇ ವರ್ಷಾಂತ್ಯಕ್ಕೆ ಇಲ್ಲವೇ 2021ರ ಆರಂಭದಲ್ಲಿ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದೆ.

ಹೊಸ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಸದ್ಯ ಮಾರುಕಟ್ಟೆಯಲ್ಲಿರುವ ಅಮೇಜ್ ಹೆಸರಿನಲ್ಲೇ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಹೊಸ ಕಾರು ಕಂಪ್ಯಾಕ್ಟ್ ಎಸ್‌ಯುವಿ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಯಾಗಲಿದೆ.
MOST READ: ಲಾಕ್‌ಡೌನ್ ಸಂಕಷ್ಟ- ಆಟೋ ಚಾಲಕರ ಬ್ಯಾಂಕ್ ಖಾತೆ ಸೇರಿದ ರೂ.5 ಸಾವಿರ ಪರಿಹಾರ..

ಸದ್ಯ ಹೋಂಡಾ ಬಹುಬೇಡಿಕೆಯ ಕಾರು ಮಾದರಿಯಾಗಿರುವ ಅಮೇಜ್ ಕಂಪ್ಯಾಕ್ಟ್ ಸೆಡಾನ್ ಮಾದರಿಯಿಂದಲೇ ಹಲವಾರು ತಾಂತ್ರಿಕ ಅಂಶಗಳನ್ನು ಎರವಲು ಪಡೆದುಕೊಳ್ಳಲಿರುವ ಅಮೇಜ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಬಿಡುಗಡೆಯ ವೇಳೆಗೆ ಹೊಸ ಹೆಸರನ್ನು ಕೂಡಾ ಪಡೆದುಕೊಳ್ಳಬಹುದಾದ ಸಾಧ್ಯತೆಗಳಿಗಳನ್ನು ತಳ್ಳಿಹಾಕುವಂತಿಲ್ಲ.

ಅಮೇಜ್ ಕಂಪ್ಯಾಕ್ಟ್ ಎಸ್‌ಯವಿ ಮಾದರಿಯ ಈಗಾಗಲೇ ಯುರೋಪಿನ ಪ್ರಮುಖ ಮಾರುಕಟ್ಟೆಗಳಲ್ಲಿ ಖರೀದಿಗೆ ಲಭ್ಯವಿದ್ದು, ಭಾರತದಲ್ಲಿ ಬಿಡುಗಡೆಯಾಗಲಿರುವ ಆವೃತ್ತಿಯು ಕೆಲವು ಪ್ರಮುಖ ಬದಲಾವಣೆಗಳೊಂದಿಗೆ ದೇಶಿಯ ಮಾರುಕಟ್ಟೆಯಲ್ಲಿನ ಬೇಡಿಕೆ ಪೂರೈಸಲಿದೆ.
MOST READ: ಲಾಕ್‌ಡೌನ್ ಎಫೆಕ್ಟ್- ವಿನಾಯ್ತಿ ಸಿಕ್ಕರೂ ವಾಹನ ಉತ್ಪಾದನೆಗೆ ಮುಂದಾಗದ ಆಟೋ ಕಂಪನಿಗಳು

ಇದಲ್ಲದೇ ಭಾರತದಲ್ಲಿ ಕೆಲವು ಕಾರಣಾಂತರಗಳಿಂದ ಹೊಸ ಮಾದರಿಯ ಹೆಚ್‌ಆರ್-ವಿ ಎಸ್‌ಯುವಿ ಮಾದರಿಯ ಬಿಡುಗಡೆಯಿಂದ ಹಿಂದೆ ಸರಿದ್ದ ಹೋಂಡಾ ಇಂಡಿಯಾ ಕಂಪನಿಯು ಇದೀಗ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆಗೆ ಆಸಕ್ತಿ ತೊರುತ್ತಿದ್ದು, ಟಾಟಾ ನೆಕ್ಸಾನ್, ಮಾರುತಿ ಬ್ರೆಝಾ, ಹ್ಯುಂಡೈ ವೆನ್ಯೂ ಮತ್ತು ಮಹೀಂದ್ರಾ ಎಕ್ಸ್‌ಯುವಿ300 ಕಾರುಗಳಿಗೆ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.


Click it and Unblock the Notifications