Just In
Don't Miss!
- Education
ECIL Recruitment 2021: 3 ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ
- Movies
ಡಬ್ಬಿಂಗ್ ಸಿನಿಮಾಗಳ ಬಗ್ಗೆ ಹಿರಿಯ ನಟ ದೊಡ್ಡಣ್ಣ ಅಸಮಾಧಾನ
- News
ಕೊರೊನಾ ನಿಯಂತ್ರಣದಲ್ಲಿ ವಿಫಲ: ಇಟಲಿ ಪ್ರಧಾನಿ ಗಿಸೆಪ್ಪೆ ಕಾಂಟೆ ರಾಜೀನಾಮೆ
- Sports
ಐಎಸ್ಎಲ್: ಜೆಮ್ಷೆಡ್ಪುರ ವಿರುದ್ಧ ಕ್ಲೀನ್ ಶೀಟ್ ಗುರಿಯಲ್ಲಿ ಕೇರಳ ಬ್ಲಾಸ್ಟರ್ಸ್
- Finance
ಗಣರಾಜ್ಯೋತ್ಸವಕ್ಕೆ ಬಿಎಸ್ಎನ್ಎಲ್ನಿಂದ ವಿಶೇಷ ಆಫರ್
- Lifestyle
ನೀವು ಬಳಸಬಹುದಾದ ಡೈರಿ ಉತ್ಪನ್ನವಲ್ಲದ ಹಾಲುಗಳ ಬಗ್ಗೆ ಇಲ್ಲಿದೆ ಮಾಹಿತಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
2021ಕ್ಕೆ ಬಿಡುಗಡೆಯಾಗಲಿದೆ ಹೊಸ ಹೋಂಡಾ ಹೆಚ್ಆರ್-ವಿ ಕ್ರಾಸ್ಒವರ್
ಜನಪ್ರಿಯ ಹೋಂಡಾ ಕಂಪನಿಯು ಹೆಚ್ಆರ್-ವಿ ಕಾಂಪ್ಯಾಕ್ಟ್ ಕ್ರಾಸ್ಒವರ್ ಅನ್ನು 2013ರಲ್ಲಿ ಮೊದಲ ಬಾರಿಗೆ ಜಪಾನ್ನಲ್ಲಿ ಬಿಡುಗಡೆಗೊಳಿಸಿತ್ತು. ಅದೇ ವರ್ಷದಲ್ಲಿ ಈ ಹೆಚ್ಆರ್-ವಿ ಕ್ರಾಸ್ಒವರ್ ಅನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಹೋಂಡಾ ಕಂಪನಿಯು ಯೋಜನೆ ರೂಪಿಸಿತು.

ಆದರೆ ಹೋಂಡಾ ಕಂಪನಿಯು ಹೆಚ್ಆರ್-ವಿ ಮಿಡ್ ಎಸ್ಯುವಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸುವುದು ತುಂಬಾ ದುಬಾರಿ ಎಂದು ಪರಿಗಣಿಸಿದ್ದರು. ಇದೇ ಕಾರಣದಿಂದ ಅಂದು ಹೋಂಡಾ ಕಂಪನಿಯು ಹೆಚ್ಆರ್-ವಿ ಎಸ್ಯುವಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸುವ ನಿರ್ಧಾರದಿಂದ ಹಿಂದೆ ಸರಿದರು. ಆದರೆ ಇಂದು ಭಾರತೀಯ ಮಾರುಕಟ್ಟೆಯು ಭಾರೀ ಬೆಳವಣಿಗೆಯನ್ನು ಕಂಡಿದೆ.

ಭಾರತೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೋಸ್ ನಂತಹ ಕ್ರಾಸ್ಒವರ್ಗಳು ಉತ್ತಮ ಯಶಸ್ವಿಯನ್ನು ಸಾಧಿಸಿದೆ. ಇದರಿಂದ ಹೋಂಡಾ ಕಂಪನಿಯು ಭಾರತದಲ್ಲಿ ಹೊಸ ಹೆಚ್ಆರ್-ವಿ ಎಸ್ಯುವಿಯನ್ನು ಬಿಡುಗಡೆಗೊಳಿಸಲು ಮುಂದಾಗಿದೆ.
MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ಇದೀಗ ಹೋಂಡಾ ಕಂಪನಿಯು ತನ್ನ ಹೊಸ ತಲೆಮಾರಿನ ಹೆಚ್ಆರ್-ವಿ ಮಧ್ಯಮ ಗಾತ್ರದ ಎಸ್ಯುವಿಯನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಹೋಂಡಾ ಕಂಪನಿಯು ಹೆಚ್ಆರ್-ವಿ ಎಸ್ಯುವಿಯ ಬಿಡುಗಡೆಯ ದಿನಾಂಕವನ್ನು ಅಧಿಕೃತವಾಗಿ ಬಹಿರಂಗಪಡಿಸಿಲ್ಲ

ಆದರೆ ಹೋಂಡಾ ಕಂಪನಿಯು ಹೊಸ ಹೆಚ್ಆರ್-ವಿ ಎಸ್ಯುವಿಯನ್ನು ಮುಂದಿನ ವರ್ಷದ ಆರಂಭದಲ್ಲಿ ಬಿಡುಗಡೆಗೊಳಿಸಲು ನಿರ್ಧರಿಸಿದ್ದರು. ಇದೀಗ ಈ ಎಸ್ಯುವಿಯ ಬಿಡುಗಡೆಯನ್ನು ಮುಂದಿನ ವರ್ಷದ ಮೇ ತಿಂಗಳಿಗೆ ಮುಂದೂಡಲಾಗಿದೆ ಎಂದು ವರದಿಗಳು ಪ್ರಕಟವಾಗಿದೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಅದೇ ರೀತಿ ಹೊಸ ತಲೆಮಾರಿನ ಹೋಂಡಾ ಹೆಚ್ಆರ್-ವಿ ಕ್ರಾಸ್ಒವರ್ ಜಪಾನ್ ನಲ್ಲಿ 2021ರ ಮಾರ್ಚ್ ತಿಂಗಳಲ್ಲಿ ಬಿಡುಗಡೆಯಾಗಲಿದೆ. ಈ ಹೊಸ ಹೆಚ್ಆರ್-ವಿ ಎಸ್ಯುವಿಯು 4,400 ಎಂಎಂ ಉದ್ದ, 1,790 ಎಂಎಂ ಅಗಲ ಮತ್ತು 1,590 ಎಂಎಂ ಎತ್ತರವನ್ನು ಹೊಂದಿದೆ. ಇನ್ನು 2,610 ಎಂಎಂ ವ್ಹೀಲ್ ಬೇಸ್ ಅನ್ನು ಹೊಂದಿದೆ.

ಹೊಸ ಹೆಚ್ಆರ್-ವಿ ಎಸ್ಯುವಿ 1.0-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರಲಿದೆ. ಇದರೊಂದಿಗೆ ಮೈಲ್ಡ್ -ಹೈಬ್ರಿಡ್ ತಂತ್ರಜ್ಞಾನದ ಆಯ್ಕೆಯನ್ನು ನೀಡಲಾಗಿದೆ. ಹೋಂಡಾ ಕಾರುಗಳ ಸರಣಿಯಲ್ಲಿ ಹೆಚ್ಆರ್-ವಿ ಎಸ್ಯುವಿಯು ಸಿಆರ್-ವಿ ಗಿಂತ ಕೆಳಗಿನ ಸ್ಥಾನದಲ್ಲಿರುತ್ತದೆ.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಈ ಎಸ್ಯುವಿಯನು ಜಪಾನ್ ಮಾರುಕಟ್ಟೆಯಲ್ಲಿ ವೆಝೆಲ್ ಎನ್ನುವ ಹೆಸರಿನಲ್ಲಿ ಮಾರಾಟವಾಗುತ್ತಿದೆ. ಭಾರತೀಯ ಮಾರುಕಟ್ಟೆಗಾಗಿ ಹೆಸರು ಬದಲಾಯಿಸಿರುವ ಹೋಂಡಾ ಸಂಸ್ಥೆಯು ಜಾಝ್ ಕಾರಿನ ಪ್ಲಾಟ್ಫಾರ್ಮ್ನಲ್ಲೇ ಹೊಸ ಎಸ್ಯುವಿಯನ್ನು ಅಭಿವೃದ್ದಿಗೊಳಿಸಿ ಹೆಚ್ಆರ್-ವಿ ಹೆಸರಿನಲ್ಲಿ ಬಿಡುಗಡೆಗೊಳಿಸಬಹುದು.

ಹಲವಾರು ಪ್ರೀಮಿಯಂ ಫೀಚರುಗಳನ್ನು ಹೊಂದಿರುವ ಹೋಂಡಾ ಹೆಚ್ಆರ್-ವಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್, ರೆನಾಲ್ಟ್ ಕ್ಯಾಪ್ಚರ್ ಮತ್ತು ಜೀಪ್ ಕಂಪಾಸ್ ಎಸ್ಯುವಿಗಳಿಗೆ ಪೈಪೋಟಿ ನೀಡುತ್ತದೆ.