2020ರ ಹೋಂಡಾ ಜಾಝ್ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಾರು ಬಿಡುಗಡೆ

ಹೋಂಡಾ ಕಾರ್ಸ್ ಇಂಡಿಯಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ತನ್ನ ಜನಪ್ರಿಯ ಹ್ಯಾಚ್‌ಬ್ಯಾಕ್ ಕಾರು ಮಾದರಿಯಾದ ಜಾಝ್ 2020ರ ಆವೃತ್ತಿಯನ್ನು ಬಿಡುಗಡೆ ಮಾಡಿದ್ದು, ಹೊಸ ಕಾರು ಆರಂಭಿಕವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.7.50 ಲಕ್ಷ ಬೆಲೆ ಹೊಂದಿದೆ.

2020ರ ಹೋಂಡಾ ಜಾಝ್ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಾರು ಬಿಡುಗಡೆ

ಎಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿಗೆ ಬಂದಿರುವ ಹೊಸ ಎಮಿಷನ್ ನಿಯಮ ಅನುಸಾರವಾಗಿ ಬಹುತೇಕ ಕಾರು ಮಾದರಿಗಳನ್ನು ಉನ್ನತೀಕರಿಸಿ ಬಿಡುಗಡೆ ಮಾಡಿರುವ ಹೋಂಡಾ ಕಾರ್ಸ್ ಕಂಪನಿಯು ಇದೀಗ ಜಾಝ್ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಮಾದರಿಯನ್ನು ಬಿಡುಗಡೆ ಮಾಡಿದೆ. ಪೆಟ್ರೋಲ್ ಮಾದರಿಯಲ್ಲಿ ಮಾತ್ರವೇ ಖರೀದಿಗೆ ಲಭ್ಯವಿರುವ ಜಾಝ್ ಕಾರು ಒಟ್ಟು ಮೂರು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದೆ.

2020ರ ಹೋಂಡಾ ಜಾಝ್ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಾರು ಬಿಡುಗಡೆ

ಹೊಸ ಜಾಝ್ ಬಿಎಸ್-6 ಮಾದರಿಯು ವಿ, ವಿಎಕ್ಸ್ ಮತ್ತು ಜೆಡ್ಎಕ್ಸ್ ವೆರಿಯೆಂಟ್‌ಗಳೊಂದಿಗೆ ಪ್ರತಿ ವೆರಿಯೆಂಟ್‌ನಲ್ಲೂ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಮಾದರಿಗಳಿದ್ದು, 1.2-ಲೀಟರ್ ಐ-ವಿಟೆಕ್ ಪೆಟ್ರೋಲ್ ಎಂಜಿನ್ ಹೊಂದಿವೆ.

2020ರ ಹೋಂಡಾ ಜಾಝ್ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಾರು ಬಿಡುಗಡೆ

ಜಾಝ್ ಕಾರಿನ ದರ ಪಟ್ಟಿ(ದೆಹಲಿ ಎಕ್ಸ್‌ಶೋರೂಂ ಪ್ರಕಾರ)

ಹೊಸ ಜಾಝ್ ವೆರಿಯೆಂಟ್ ವಿ ವಿಎಕ್ಸ್ ಜೆಡ್ಎಕ್ಸ್
ಮ್ಯಾನುವಲ್ ಆವೃತ್ತಿ ರೂ. 7,49,900 ರೂ. 8,09,900 ರೂ. 8,73,900
ಆಟೋಮ್ಯಾಟಿಕ್ ಆವೃತ್ತಿ ರೂ. 8,49,900 ರೂ. 9,09,900 ರೂ. 9,73,900
2020ರ ಹೋಂಡಾ ಜಾಝ್ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಾರು ಬಿಡುಗಡೆ

ಎಂಜಿನ್ ವೈಶಿಷ್ಟ್ಯತೆ

1.2-ಲೀಟರ್ ಐ-ವಿಟೆಕ್ ಪೆಟ್ರೋಲ್ ಎಂಜಿನ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಮತ್ತು 7-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದು, 89-ಬಿಎಚ್‌ಪಿ ಮತ್ತು 110-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು. ಈ ಮೂಲಕ ಪೆಟ್ರೋಲ್ ಮಾದರಿಯು ಪ್ರತಿ ಲೀಟರ್ ಪೆಟ್ರೋಲ್‌ಗೆ 16.6 ಕಿ.ಮೀ ಮೈಲೇಜ್ ನೀಡಲಿದ್ದರೆ ಆಟೋಮ್ಯಾಟಿಕ್ ಆವೃತ್ತಿಯು 17.1 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

2020ರ ಹೋಂಡಾ ಜಾಝ್ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಾರು ಬಿಡುಗಡೆ

ಇನ್ನು ಆಟೋಮ್ಯಾಟಿಕ್ ಆವೃತ್ತಿಯಲ್ಲಿ ಮೊದಲ ಬಾರಿಗೆ ಸ್ಪೋರ್ಟಿ ಫೆಡಲ್-ಶಿಫ್ಟರ್ ನೀಡಿರುವ ಪ್ರಮುಖ ಆಕರ್ಷಣೆಯಾಗಿದ್ದು, ಇದು ಹ್ಯಾಚ್‌ಬ್ಯಾಕ್ ಕಾರಿಗೆ ಮತ್ತಷ್ಟು ಮೆರಗು ನೀಡುವ ಮೂಲಕ ಪ್ರತಿಸ್ಪರ್ಧಿ ಕಾರುಗಳಿಗೆ ಮತ್ತಷ್ಟು ಪೈಪೋಟಿ ನೀಡಲಿದೆ.

2020ರ ಹೋಂಡಾ ಜಾಝ್ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಾರು ಬಿಡುಗಡೆ

ಇದಲ್ಲದೆ ಹೊಸ ಕಾರಿನಲ್ಲಿ ಈ ಬಾರಿ ಮರುವಿನ್ಯಾಸಗೊಳಿಸಲಾದ ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಡಿಆರ್‌ಎಲ್ಎಸ್, ಹೊಸದಾದ ಫಾಗ್ ಲ್ಯಾಂಪ್, ಎಲ್ಇಡಿ ಟೈಲ್‌ಲೈಟ್, ಮರುವಿನ್ಯಾಸಗೊಳಿಸಲಾದ ಫ್ರಂಟ್ ಮತ್ತು ರಿಯಲ್ ಬಂಪರ್ ಆಕರ್ಷಕವಾಗಿವೆ.

2020ರ ಹೋಂಡಾ ಜಾಝ್ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಾರು ಬಿಡುಗಡೆ

ಪ್ರೀಮಿಯಂ ಫೀಚರ್ಸ್ ಒನ್ ಟಚ್ ಎಲೆಕ್ಟ್ರಿಕ್ ಸನ್‌ರೂಫ್, ಹೊಸದಾದ ಕ್ರೊಮ್ ಆಕ್ಸೆಂಟ್, ಹೈ ಗ್ಲ್ಯಾಸ್ ಬ್ಲ್ಯಾಕ್ ಗ್ರಿಲ್, ಸಾಫ್ಟ್ ಟಚ್ ಡ್ಯಾಶ್‌ಬೋರ್ಡ್, ಎಸಿ ಕಂಟ್ರೋಲ್ ಮಾಡಲು ಟಚ್‌ಸ್ಕ್ರೀನ್ ಪ್ಯಾನೆಲ್, 7-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಅಂಡ್ರಾಯಿಡ್ ಆಟೋ, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್ ಸೇರಿದಂತೆ ಹಲವಾರು ತಾಂತ್ರಿಕ ಸೌಲಭ್ಯಗಳಿವೆ.

2020ರ ಹೋಂಡಾ ಜಾಝ್ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಾರು ಬಿಡುಗಡೆ

ಸುರಕ್ಷತೆಗಾಗಿ ಹೊಸ ಕಾರಿನಲ್ಲಿ ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ರಿಯರ್ ವ್ಯೂ ಕ್ಯಾಮೆರಾ, ರಿಯರ್ ಪಾರ್ಕಿಂಗ್ ಸೆನ್ಸಾರ್, ಫ್ರಂಟ್ ಹೆಡ್‌ರೆಸ್ಟ್, ಆ್ಯಂಟಿ ಥೆಫ್ಟ್ ಸಿಸ್ಟಂ ಮತ್ತು ಚಾಲಕನ ಭಾಗದಲ್ಲಿ ಒನ್ ಟಚ್ ಪಿಂಚ್ ಗಾರ್ಡ್ ನೀಡಲಾಗಿದೆ.

2020ರ ಹೋಂಡಾ ಜಾಝ್ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಾರು ಬಿಡುಗಡೆ

ಖರೀದಿಗೆ ಲಭ್ಯವಿರುವ ಬಣ್ಣ ಮತ್ತು ಬುಕ್ಕಿಂಗ್ ಪ್ರಕ್ರಿಯೆ

ಹೊಸ ಜಾಝ್ ಕಾರು ಮಾದರಿಯು ಗ್ರಾಹಕರ ಬೇಡಿಕೆಯೆಂತೆ ರೆಡಿಯೆಂಟ್ ರೆಡ್ ಮೆಟಾಲಿಕ್, ಪ್ಲ್ಯಾಟಿನಂ ವೈಟ್ ಪರ್ಲ್, ಲೂನಾರ್ ಸಿಲ್ವರ್ ಮೆಟಾಲಿಕ್, ಗೋಲ್ಡನ್ ಬ್ರೌನ್ ಮೆಟಾಲಿಕ್ ಮತ್ತು ಮಾರ್ಡನ್ ಸ್ಟ್ರೀಲ್ ಮೆಟಾಲಿಕ್ ಬಣ್ಣಗಳನ್ನು ಪಡೆದುಕೊಂಡಿದ್ದು, ರೂ.11 ಸಾವಿರ ಮುಂಗಡದೊಂದಿಗೆ ಅಧಿಕೃತವಾಗಿ ಬುಕ್ಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.

Most Read Articles

Kannada
English summary
New (2020) Honda Jazz Premium Hatchback Launched In India. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X