ಬಿಎಸ್-6 ಎಂಜಿನ್ ಪ್ರೇರಿತ ಹೋಂಡಾ ಡಬ್ಲ್ಯುಆರ್-ವಿ ಕಾರು ಬಿಡುಗಡೆ

ಹೋಂಡಾ ಕಾರ್ಸ್ ಇಂಡಿಯಾ ಕಂಪನಿಯು ತನ್ನ ಬಹುನೀರಿಕ್ಷಿತ ಡಬ್ಲ್ಯುಆರ್-ವಿ ಬಿಎಸ್-6 ಕಾರು ಕಂಪ್ಯಾಕ್ಟ್ ಎಸ್‌ಯುವಿ ಆವೃತ್ತಿಯನ್ನು ಬಿಡುಗಡೆ ಮಾಡಿದ್ದು, ಹೊಸ ಕಾರು ಆಕರ್ಷಕ ವಿನ್ಯಾಸದೊಂದಿಗೆ ಎಂಜಿನ್ ಆಯ್ಕೆಯಲ್ಲಿ ಸಾಕಷ್ಟು ಸುಧಾರಣೆ ಕಂಡಿದೆ.

ಬಿಎಸ್-6 ಎಂಜಿನ್ ಪ್ರೇರಿತ ಹೋಂಡಾ ಡಬ್ಲ್ಯುಆರ್-ವಿ ಕಾರು ಬಿಡುಗಡೆ

ಡಬ್ಲ್ಯುಆರ್-ವಿ ಕಾರು ಬಿಎಸ್-6 ಎಂಜಿನ್ ಸೇರಿದಂತೆ ವಿನ್ಯಾಸದಲ್ಲೂ ಸಾಕಷ್ಟು ಬದಲಾಣೆಯನ್ನು ಪಡೆದುಕೊಂಡಿದ್ದು, ಹೊಸ ಕಾರನ್ನು ಗ್ರಾಹಕರ ಬೇಡಿಕೆಯೆಂತೆ ಒಟ್ಟು ನಾಲ್ಕು ವೆರಿಯೆಂಟ್‌ಗಳಲ್ಲಿ ಪರಿಚಯಿಸಲಾಗಿದೆ. ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಡಬ್ಲ್ಯುಆರ್-ವಿ ಕಾರು ಆರಂಭಿಕವಾಗಿ ರೂ. 8.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.10.99 ಲಕ್ಷ ಬೆಲೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಿದೆ.

ಬಿಎಸ್-6 ಎಂಜಿನ್ ಪ್ರೇರಿತ ಹೋಂಡಾ ಡಬ್ಲ್ಯುಆರ್-ವಿ ಕಾರು ಬಿಡುಗಡೆ

ಹೊಸ ಕಾರು ಪೆಟ್ರೋಲ್ ಮಾದರಿಯಲ್ಲಿ ಎರಡು ವೆರಿಯೆಂಟ್‌ಗಳನ್ನು ಮತ್ತು ಡೀಸೆಲ್ ಆವೃತ್ತಿಯಲ್ಲಿ ಎರಡು ವೆರಿಯೆಂಟ್‌ಗಳನ್ನು ಪಡೆದುಕೊಂಡಿದ್ದು, ಹೊಸ ಕಾರಿನಲ್ಲಿ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯನ್ನು ಮಾತ್ರವೇ ನೀಡಲಾಗಿದೆ.

ಬಿಎಸ್-6 ಎಂಜಿನ್ ಪ್ರೇರಿತ ಹೋಂಡಾ ಡಬ್ಲ್ಯುಆರ್-ವಿ ಕಾರು ಬಿಡುಗಡೆ

ಹೊಸ ಡಬ್ಲ್ಯುಆರ್-ವಿ ವೆರಿಯೆಂಟ್‌ಗಳು ಮತ್ತು ಬೆಲೆ(ಎಕ್ಸ್‌ಶೋರೂಂ ಪ್ರಕಾರ)

ಎಸ್‌ವಿ ಎಂಟಿ(ಪೆಟ್ರೋಲ್)- ರೂ. 8,49,900

ವಿಎಕ್ಸ್ ಎಂಟಿ(ಪೆಟ್ರೋಲ್)- ರೂ. 9,69,900

ಎಸ್‌ವಿ ಎಂಟಿ(ಡೀಸೆಲ್)- ರೂ. 9,79,900

ವಿಎಕ್ಸ್ ಎಂಟಿ(ಡೀಸೆಲ್)- ರೂ. 10,99,900

ಬಿಎಸ್-6 ಎಂಜಿನ್ ಪ್ರೇರಿತ ಹೋಂಡಾ ಡಬ್ಲ್ಯುಆರ್-ವಿ ಕಾರು ಬಿಡುಗಡೆ

ಬಿಎಸ್-6 ಎಮಿಷನ್ ಕಡ್ಡಾಯವಾದ ನಂತರ ಹೊಸ ಕಾರಿನ ಎಂಜಿನ್‌ನಲ್ಲಿ ಸಾಕಷ್ಟು ಸುಧಾರಣೆಗಳನ್ನು ತರಲಾಗಿದ್ದು, ಹೊಸದಾಗಿ ಉನ್ನತೀಕರಣಗೊಂಡಿರುವ 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯು ಡಬ್ಲ್ಯುಆರ್-ವಿ ಕಾರಿಗೆ ಮತ್ತಷ್ಟು ಬಲತುಂಬಿವೆ.

ಬಿಎಸ್-6 ಎಂಜಿನ್ ಪ್ರೇರಿತ ಹೋಂಡಾ ಡಬ್ಲ್ಯುಆರ್-ವಿ ಕಾರು ಬಿಡುಗಡೆ

1.2-ಲೀಟರ್ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 90-ಬಿಎಚ್‌ಪಿ ಮತ್ತು 110-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದು, 1.5-ಲೀಟರ್ ಡೀಸೆಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 100-ಬಿಎಚ್‌ಪಿ ಮತ್ತು 200-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

MOST READ: ಹೊಸ ಪೊಲೊ ಕಾರು ವಿತರಣೆ ಮಾಡಿದ ಎರಡೇ ನಿಮಿಷದಲ್ಲಿ ನಡೆಯಿತು ಅಪಘಾತ..!

ಬಿಎಸ್-6 ಎಂಜಿನ್ ಪ್ರೇರಿತ ಹೋಂಡಾ ಡಬ್ಲ್ಯುಆರ್-ವಿ ಕಾರು ಬಿಡುಗಡೆ

ಹೊಸ ಎಂಜಿನ್‌ಗಳು ಬಿಎಸ್-6 ವೈಶಿಷ್ಟ್ಯತೆಯಿಂದಾಗಿ ಮಾಲಿನ್ಯ ಹೊರಸೂಸುವಿಕೆಯಲ್ಲಿ ಸಾಕಷ್ಟು ಸುಧಾರಣೆ ಕಂಡಿದ್ದು, ಕಾರಿನ ಮೈಲೇಜ್ ಪ್ರಮಾಣವು ಕೂಡಾ ತುಸು ಹೆಚ್ಚಳವಾಗಿದೆ. ಡಬ್ಲ್ಯುಆರ್-ವಿ ಕಾರಿನ ಪೆಟ್ರೋಲ್ ಮಾದರಿಯು ಪ್ರತಿ ಲೀಟರ್‌ಗೆ 16.5 ಕಿ.ಮೀ ಮತ್ತು ಡೀಸೆಲ್ ಮಾದರಿಯು ಪ್ರತಿ ಲೀಟರ್‌ಗೆ 23.7 ಕಿ.ಮೀ ಮೈಲೇಜ್ ಹಿಂದಿರುಗಿಸುವುದಾಗಿ ಎಆರ್‌ಎಐ ಸಂಸ್ಥೆಯು ಪ್ರಮಾಣಿಕರಿಸಿದೆ.

ಬಿಎಸ್-6 ಎಂಜಿನ್ ಪ್ರೇರಿತ ಹೋಂಡಾ ಡಬ್ಲ್ಯುಆರ್-ವಿ ಕಾರು ಬಿಡುಗಡೆ

ಇನ್ನು ಹೊಸ ಕಾರಿನ ವಿನ್ಯಾಸದ ಕುರಿತು ಹೇಳುವುದಾದರೇ, ಮುಂಭಾಗದಲ್ಲಿ ಬಲಿಷ್ಠವಾದ ವಿಂಗ್ ಕ್ರೋಮ್ ಗ್ರೀಲ್, ಸುಧಾರಿತ ತಂತ್ರಜ್ಞಾನ ಪ್ರೇರಿತ ಎಲ್ಇಡಿ ಪ್ರೋಜೆಕ್ಟರ್ ಹೆಡ್‌ಲ್ಯಾಂಪ್ ಜೊತೆ ಡಿಆರ್‌ಎಲ್ಎಸ್, ಪೊಸಿಷನ್ ಲ್ಯಾಂಪ್, ಎಲ್ಇಡಿ ಫಾಗ್ ಲ್ಯಾಂಪ್, ಶಾರ್ಕ್ ಫಿನ್ ಆಂಟೆನಾ ಮತ್ತು 16-ಇಂಚಿನ ಡ್ಯುಯಲ್ ಟೋನ್ ಡೈಮಂಡ್ ಕಟ್ ಅಲಾಯ್ ವೀಲ್ಹ್ ಜೋಡಣೆ ಮಾಡಲಾಗಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಬಿಎಸ್-6 ಎಂಜಿನ್ ಪ್ರೇರಿತ ಹೋಂಡಾ ಡಬ್ಲ್ಯುಆರ್-ವಿ ಕಾರು ಬಿಡುಗಡೆ

ಹಾಗೆಯೇ ಹೊಸ ಕಾರಿನ ಇಂಟಿರಿಯರ್ ಕೂಡಾ ಆಕರ್ಷಕವಾಗಿದ್ದು, ಸ್ಪೋರ್ಟಿ ಲುಕ್ ನೀಡುವುದಕ್ಕಾಗಿ ಕ್ರೋಮ್ ಆಕ್ಸೆಂಟ್, ಪ್ರೀಮಿಯಂ ಆಸನ ಸೌಲಭ್ಯ, 2.0-ಇಂಚಿನ ಡಿಜಿಪ್ಯಾಡ್, 17-ಇಂಚಿನ ಟಚ್‌ಸ್ಕೀನ್ ಇನ್ಪೋಟೈನ್‌ಮೆಂಟ್, ಆಂಡ್ರಾಯಿಡ್ ಆಟೋ, ಕಾರ್ ಪ್ಲೇ ಮತ್ತು ನ್ಯಾವಿಗೇಷನ್ ಸೌಲಭ್ಯಕ್ಕಾಗಿ ಎಸ್‌ಡಿ ಕಾರ್ಡ್ ಸೇರಿಸಬಹುದಾಗಿದೆ.

ಬಿಎಸ್-6 ಎಂಜಿನ್ ಪ್ರೇರಿತ ಹೋಂಡಾ ಡಬ್ಲ್ಯುಆರ್-ವಿ ಕಾರು ಬಿಡುಗಡೆ

ಹೊಸ ಕಾರಿನಲ್ಲಿ ಪ್ರೀಮಿಯಂ ಸೌಲಭ್ಯಗಳ ಜೊತೆಗೆ ಸುರಕ್ಷಾ ಫೀಚರ್ಸ್‌ಗಳಾದ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ ಜೊತೆಗೆ ಇಬಿಡಿ, ಮಲ್ಟಿ ವ್ಯೂ ರಿಯರ್ ಕ್ಯಾಮೆರಾ, ರಿಯರ್ ಪಾರ್ಕಿಂಗ್ ಸೆನ್ಸಾರ್, ರಿಯರ್ ವೀಂಡ್‌ಶಿಲ್ಡ್ ಡಿಫಾಗರ್, ಆಟೋ ಮ್ಯಾಟಿಕ್ ಕ್ಲೈಮೆಟ್ ಕಂಟ್ರೊಲ್ ಸೌಲಭ್ಯಗಳನ್ನು ನೀಡಲಾಗಿದ್ದು, ಹೈ ಎಂಡ್ ವೆರಿಯೆಂಟ್‌ನಲ್ಲಿ ಪ್ಯಾನರೊಮಿಕ್ ಸನ್‌ರೂಫ್ ನೀಡಲಾಗಿದೆ.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಬಿಎಸ್-6 ಎಂಜಿನ್ ಪ್ರೇರಿತ ಹೋಂಡಾ ಡಬ್ಲ್ಯುಆರ್-ವಿ ಕಾರು ಬಿಡುಗಡೆ

ಖರೀದಿಗೆ ಲಭ್ಯವಿರುವ ಬಣ್ಣಗಳು

ಡಬ್ಲ್ಯುಆರ್-ವಿ ಕಾರು ಪ್ರಮುಖ ಆರು ಬಣ್ಣಗಳ ಆಯ್ಕೆ ಹೊಂದಿದ್ದು, ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ ಪ್ರೀಮಿಯಂ ಆ್ಯಂಬರ್ ಮೆಟಾಲಿಕ್, ಲೂನಾರ್ ಸಿಲ್ವರ್ ಮೆಟಾಲಿಕ್, ಮಾರ್ಡನ್ ಸ್ಟೀಲ್ ಮೆಟಾಲಿಕ್, ಗೋಲ್ಡನ್ ಬ್ರೌನ್ ಮೆಟಾಲಿಕ್, ರೆಡಿಯೆಂಟ್ ರೆಡ್ ಮೆಟಾಲಿಕ್ ಮತ್ತು ಪ್ಲಾಟಿನಂ ವೈಟ್ ಪರ್ಲ್‌ನಲ್ಲಿ ಖರೀದಿಸಬಹುದಾಗಿದೆ.

Article Published On: Thursday, July 2, 2020, 15:07 [IST]
English summary
New Honda WR-V BS6 Models Launched In India. Read in Kannada.
Read more on ಹೋಂಡಾ honda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+