ಹೋಂಡಾ ಡಬ್ಲ್ಯು‍ಆರ್-ವಿ ಫೇಸ್‍‍ಲಿಫ್ಟ್ ಕಾರಿನ ಮೈಲೇಜ್ ಮಾಹಿತಿ ಬಹಿರಂಗ

ಹೋಂಡಾ ಇಂಡಿಯಾ ಕಂಪನಿಯು ಹೊಸ ಡಬ್ಲ್ಯು‍ಆರ್-ವಿ ಫೇಸ್‍‍ಲಿಫ್ಟ್ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಹೊಸ ಡಬ್ಲ್ಯು‍ಆರ್-ವಿ ಫೇಸ್‍‍ಲಿಫ್ಟ್ ಕಾರಿನ ಮೈಲೇಜ್ ಮಾಹಿತಿಯು ಬಹಿರಂಗವಾಗಿದೆ.

ಹೋಂಡಾ ಡಬ್ಲ್ಯು‍ಆರ್-ವಿ ಫೇಸ್‍‍ಲಿಫ್ಟ್ ಕಾರಿನ ಮೈಲೇಜ್ ಮಾಹಿತಿ ಬಹಿರಂಗ

ಹೋಂಡಾ ಕಂಪನಿಯು ತನ್ನ ಹೊಸ ಡಬ್ಲ್ಯು‍ಆರ್-ವಿ ಫೇಸ್‍‍ಲಿಫ್ಟ್ ಆವೃತ್ತಿಯ ಬುಕ್ಕಿಂಗ್ ಅನ್ನು ಇತ್ತೀಚೆಗೆ ಅಧಿಕೃತವಾಗಿ ಸ್ವೀಕರಿಸಲು ಪ್ರಾರಂಭಿಸಿತು. ಶೀಘ್ರದಲ್ಲೇ ಡಬ್ಲ್ಯು‍ಆರ್-ವಿ ಫೇಸ್‍‍ಲಿಫ್ಟ್ ಕಾರಿನ ಬೆಲೆಯನ್ನು ಘೋಷಿಸಬಹುದು. ಹೋಂಡಾ ಕಂಪನಿಯ ಹಿಂದಿನ ಡಬ್ಲ್ಯುಆರ್‍-ವಿ ಮಾದರಿಗೆ ಹೊಸ ಫೇಸ್‍‍ಲಿಫ್ಟ್ ಕಾರನ್ನು ಹೋಲಿಸಿದರೆ ಹಲವಾರು ಬದಲಾವಣೆಗಳಾಗಿರುವುದನ್ನು ಕಾಣಬಹುದು. ಬಿಡುಗಡೆಯ ಮುನ್ನ ಡೀಲರ್ ಬಳಿ ತಲುಪಿರುವ ಹೊಸ ಹೋಂಡಾ ಡಬ್ಲ್ಯು‍ಆರ್-ವಿ ಫೇಸ್‍‍ಲಿಫ್ಟ್ ಕಾರಿನ ಸ್ಪೈ ಚಿತ್ರಗಳು ಇತ್ತೀಚೆಗೆ ಬಹಿರಂಗವಾಗಿತ್ತು.

ಹೋಂಡಾ ಡಬ್ಲ್ಯು‍ಆರ್-ವಿ ಫೇಸ್‍‍ಲಿಫ್ಟ್ ಕಾರಿನ ಮೈಲೇಜ್ ಮಾಹಿತಿ ಬಹಿರಂಗ

ಫೇಸ್‍‍ಲಿಫ್ಟ್ ಆವೃತ್ತಿಯಲ್ಲಿ ಹೊಸ ಬಿ‍ಎಸ್-6 ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್ ಅಳವಡಿಸಲಾಗಿದೆ. ಹೋಂಡಾ ಕಂಪನಿಯು ತನ್ನ ಹೊಸ ಹೋಂಡಾ ಜಾಝ್ ಕಾರನ್ನು ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಮಾತ್ರ ಬಿಡುಗಡೆಗೊಳಿಸಲಿದೆ. ಇನ್ನು 2020ರ ಹೋಂಡಾ ಡಬ್ಲ್ಯುಆರ್-ವಿ ಫೇಸ್‌ಲಿಫ್ಟ್‌ ಹೊಸ ವಿನ್ಯಾಸ ಹಾಗೂ ಫೀಚರ್‍‍ಗಳನ್ನು ಸಹ ನವೀಕರಿಸಲಾಗಿದೆ.

MOST READ: ದಾಖಲೆ ಪ್ರಮಾಣದಲ್ಲಿ ಮಾರಾಟವಾಗುತ್ತಿವೆ ಮಾರುತಿ ಸುಜುಕಿ ಎಕ್ಸ್‌ಎಲ್6

ಹೋಂಡಾ ಡಬ್ಲ್ಯು‍ಆರ್-ವಿ ಫೇಸ್‍‍ಲಿಫ್ಟ್ ಕಾರಿನ ಮೈಲೇಜ್ ಮಾಹಿತಿ ಬಹಿರಂಗ

ಡಬ್ಲ್ಯು‍ಆರ್-ವಿ ಫೇಸ್‍‍ಲಿಫ್ಟ್ ಆವೃತ್ತಿಯನ್ನು 1.2 ಲೀಟರಿನ ಪೆಟ್ರೋಲ್ ಹಾಗೂ 1.5 ಲೀಟರಿನ ಡೀಸೆಲ್ ಬಿ‍ಎಸ್ 6 ಎಂಜಿನ್‍‍ನಲ್ಲಿ ಬಿಡುಗಡೆಗೊಳಿಸಲಾಗುವುದು. ಹಳೆಯ ತಲೆಮಾರಿನ ಕಾರಿನಂತೆ ಫೇಸ್‍‍ಲಿಫ್ಟ್ ಕಾರಿನಲ್ಲಿಯೂ ಸಹ 5-ಸ್ಪೀಡ್ ಹಾಗೂ 6-ಸ್ಪೀಡಿನ ಗೇರ್‍‍ಬಾಕ್ಸ್ ಆಯ್ಕೆಗಳನ್ನು ನೀಡಲಾಗುವುದು.

ಹೋಂಡಾ ಡಬ್ಲ್ಯು‍ಆರ್-ವಿ ಫೇಸ್‍‍ಲಿಫ್ಟ್ ಕಾರಿನ ಮೈಲೇಜ್ ಮಾಹಿತಿ ಬಹಿರಂಗ

ಇದರಲ್ಲಿ 1.2 ಪೆಟ್ರೋಲ್ ಎಂಜಿನ್ ಪ್ರತಿ ಲೀಟರ್‌ಗೆ 16.5 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ. ಇನ್ನು 1.5 ಡೀಸೆಲ್ ಎಂಜಿನ್ ಪ್ರತಿ ಲೀಟರ್‌ಗೆ 23.7 ಕಿ,ಮೀ ಮೈಲೇಜ್ ಅನ್ನು ನೀಡುತ್ತದೆ.

MOST READ: ಹೊಸ ವಿನ್ಯಾಸದೊಂದಿಗೆ ಬಿಡುಗಡೆಯಾಗಲಿದೆ ಸ್ಕೋಡಾ ಸೂಪರ್ಬ್ ಫೇಸ್‌ಲಿಫ್ಟ್

ಹೋಂಡಾ ಡಬ್ಲ್ಯು‍ಆರ್-ವಿ ಫೇಸ್‍‍ಲಿಫ್ಟ್ ಕಾರಿನ ಮೈಲೇಜ್ ಮಾಹಿತಿ ಬಹಿರಂಗ

2020ರ ಹೋಂಡಾ ಡಬ್ಲ್ಯುಆರ್-ವಿ ಫೇಸ್‌ಲಿಫ್ಟ್‌ನಲ್ಲಿ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್ ಹೊಂದಿದ್ದು, ಇಂಟಿಗ್ರೇಟೆಡ್ ಡೇಟೈಮ್ ರನ್ನಿಂಗ್ ಲೈಟ್ಸ್ ಮತ್ತು ಪೊಸಿಷನ್ ಲ್ಯಾಂಪ್‌ಗಳಿವೆ. ಹಿಂಭಾಗದಲ್ಲಿ, ಡಬ್ಲ್ಯುಆರ್-ವಿ ಫೇಸ್ ಲಿಫ್ಟ್ ಸುಧಾರಿತ ಸಿ-ಆಕಾರದ ಎಲ್ಇಡಿ ರೇರ್ ಫಾಗ್‍ ಲ್ಯಾಂಪ್‍‍ಗಳನ್ನು ಅಳವಡಿಸಲಾಗಿದೆ.

ಹೋಂಡಾ ಡಬ್ಲ್ಯು‍ಆರ್-ವಿ ಫೇಸ್‍‍ಲಿಫ್ಟ್ ಕಾರಿನ ಮೈಲೇಜ್ ಮಾಹಿತಿ ಬಹಿರಂಗ

ಹೊಸ ಹೋಂಡಾ ಡಬ್ಲ್ಯುಆರ್-ವಿ ಫೇಸ್‌ಲಿಫ್ಟ್‌ ಕಾರಿನಲ್ಲಿ ಕ್ರಾಸ್ಒವರ್ ಕ್ರೂಸ್ ಕಂಟ್ರೋಲ್ ಮತ್ತು ಒನ್-ಟಚ್ ಎಲೆಕ್ಟ್ರಿಕ್ ಸನ್ರೂಫ್ ಅನ್ನು ಸಹ ಹೊಂದಿದೆ. ಹೊಸ ಕಾರಿನ ಗ್ರಿಲ್ ಹಾಗೂ ಬಂಪರ್‍‍ಗಳು ಹೊಸ ಲುಕ್ ಅನ್ನು ಹೊಂದಿದೆ. ಹೊಸ ಕಾರಿನ ಫಾಗ್ ಲ್ಯಾಂಪ್ ಹೌಸಿಂಗ್‍‍ಗಳು ಕಪ್ಪು ಬಣ್ಣವನ್ನು ಹೊಂದಿವೆ. ಇಂಟಿರಿಯರ್ ಬಗ್ಗೆ ಹೆಚ್ಚಿನ ಮಾಹಿತಿಗಳು ಲಭ್ಯವಾಗದೇ ಇದ್ದರೂ ಫೇಸ್‍‍ಲಿಫ್ಟ್ ಆವೃತ್ತಿಯಲ್ಲಿ ಹೊಸ ಫ್ಯಾಬ್ರಿಕ್ ಸೀಟುಗಳನ್ನು ಅಳವಡಿಸಲಾಗುವುದು.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಹೋಂಡಾ ಡಬ್ಲ್ಯು‍ಆರ್-ವಿ ಫೇಸ್‍‍ಲಿಫ್ಟ್ ಕಾರಿನ ಮೈಲೇಜ್ ಮಾಹಿತಿ ಬಹಿರಂಗ

ಟಚ್‍‍ಸ್ಕ್ರೀನ್ ಇನ್ಫೋಟೆನ್‍‍ಮೆಂಟ್ ಸಿಸ್ಟಂ ಹಾಗೂ ಡಿಜಿಟಲ್ ಇನ್ಸ್ ಟ್ರೂಮೆಂಟ್‍‍‍ಗಳನ್ನು ನೀಡಲಾಗುವುದು. ಮಾರುಕಟ್ಟೆಯಲ್ಲಿರುವ ಹಳೆಯ ತಲೆಮಾರಿನ ಹೋಂಡಾ ಡಬ್ಲ್ಯು‍ಆರ್-ವಿಯಲ್ಲಿರುವ ಎಲೆಕ್ಟ್ರಾನಿಕ್ ಸನ್‍‍ರೂಫ್ ಹಾಗೂ ಕ್ರೂಸ್ ಕಂಟ್ರೋಲ್‍‍ಗಳನ್ನು ಫೇಸ್‍‍ಲಿಫ್ಟ್ ಆವೃತ್ತಿಯಲ್ಲಿಯೂ ಸಹ ನೀಡಲಾಗುವುದು.

ಹೋಂಡಾ ಡಬ್ಲ್ಯು‍ಆರ್-ವಿ ಫೇಸ್‍‍ಲಿಫ್ಟ್ ಕಾರಿನ ಮೈಲೇಜ್ ಮಾಹಿತಿ ಬಹಿರಂಗ

ಹೊಸ ಡಬ್ಲ್ಯು‍ಆರ್-ವಿ ಫೇಸ್‍‍ಲಿಫ್ಟ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಹೊಸ ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ 300, ಫೋರ್ಡ್ ಇಕೋಸ್ಪೋರ್ಟ್ ಮತ್ತು ಹ್ಯುಂಡೈ ವೆನ್ಯೂ ಕಾರುಗಳಿಗೆ ಪೈಪೋಟಿಯನ್ನು ನೀಡುತ್ತದೆ.

More from DriveSpark

Article Published On: Tuesday, May 26, 2020, 14:41 [IST]
English summary
Honda WR-V facelift BS6 diesel rated at 23.7kpl. Read in Kannada.
Read more on ಹೋಂಡಾ honda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+