ಬಹುನಿರೀಕ್ಷಿತ ಹಮ್ಮರ್ ಎಲೆಕ್ಟ್ರಿಕ್ ಎಸ್‍ಯುವಿಯ ಚಿತ್ರಗಳನ್ನು ಬಹಿರಂಗಪಡಿಸಿದ ಜಿಎಂಸಿ

ಜನರಲ್ ಮೋಟಾರ್ಸ್ ಸಂಸ್ಥೆಯು ತನ್ನ ಹಮ್ಮರ್ ಇವಿ ಪಿಕಪ್ ಟ್ರಕ್ ಅನ್ನು ಇತ್ತೀಚೆಗೆ ಅನಾವರಣಗೊಳಿಸಿತ್ತು. ಐಕಾನಿಕ್ ಹಮ್ಮರ್ ಎಂಬ ಹೆಸರಿನಲ್ಲಿ ಹೊಸ ಇವಿ ಪಿಕಪ್ ಟ್ರಕ್ ಅನ್ನು ಅನಾವರಣಗೊಳಿಸಿರುವುದರಿಂದ ಆಫ್-ರೋಡ್ ಪ್ರಿಯರಿಗೆ ಕುತೂಹಲ ಮತ್ತಷ್ಟು ಹೆಚ್ಚಾಗಿದೆ.

ಬಹುನಿರೀಕ್ಷಿತ ಹಮ್ಮರ್ ಎಲೆಕ್ಟ್ರಿಕ್ ಎಸ್‍ಯುವಿಯ ಚಿತ್ರಗಳನ್ನು ಬಹಿರಂಗಪಡಿಸಿದ ಜಿಎಂಸಿ

ಇನ್ನು ಇತ್ತೀಚೆಗೆ ಹೂಡಿಕೆದಾರರ ಸಮಾವೇಶದಲ್ಲಿ ಹಮ್ಮರ್ ಎಲೆಕ್ಟ್ರಿಕ್ ಎಸ್‍ಯುವಿಯ ಚಿತ್ರಗಳನ್ನು ಮೊದಲ ಬಾರಿಗೆ ಬಹಿರಂಗಪಡಿಸಿದೆ. ಜಿಎಂಸಿ ಅನಧಿಕೃತವಾಗಿ ಈ ಮೆಗಾ ಪ್ರಾಜೆಕ್ಟ್- ಹಮ್ಮರ್ ಎಲೆಕ್ಟ್ರಿಕ್ ಎಸ್‌ಯುವಿಯ ಚಿತ್ರಗಳನ್ನು ಹಂಚಿಕೊಂಡಿದೆ. ಇನ್ನು ಹಮ್ಮರ್ ಎಲೆಕ್ಟ್ರಿಕ್ ಎಸ್‍ಯುವಿಯ ಚಿತ್ರಗಳಲ್ಲಿರುವುದು ಅಂತಿಮ ಉತ್ಪಾದನೆ-ಸ್ಪೆಕ್ ಮಾದರಿಯಾಗಿದೆ. ಎಸ್‌ಯುವಿ ತನ್ನ ಫ್ರಂಟ್ ಎಂಡ್ ಮತ್ತು ಫೆಂಡರ್‌ಗಳನ್ನು ಪಿಕಪ್ ಟ್ರಕ್ ಮಾದರಿಯೊಂದಿಗೆ ಹಂಚಿಕೊಳ್ಳುತ್ತದೆ.

ಬಹುನಿರೀಕ್ಷಿತ ಹಮ್ಮರ್ ಎಲೆಕ್ಟ್ರಿಕ್ ಎಸ್‍ಯುವಿಯ ಚಿತ್ರಗಳನ್ನು ಬಹಿರಂಗಪಡಿಸಿದ ಜಿಎಂಸಿ

ಇನ್ನು ಇತ್ತೀಚೆಗೆ ಅನಾವರಣಗೊಳಿಸಿದ ಹಮ್ಮರ್ ಇವಿ ಪಿಕಪ್ ಟ್ರಕ್ ಜಿಎಂಸಿ ನಿರ್ಮಿಸಿರುವ ಮೊದಲ ಎಲೆಕ್ಟ್ರಿಕ್ ಸೂಪರ್ ಟ್ರಕ್" ಆಗಿದೆ. ಹೊಸ ಜಿಎಂಸಿ ಹಮ್ಮರ್ ಇವಿ 1,000 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಹಮ್ಮರ್ ನಲ್ಲಿ 24-ಮಾಡ್ಯೂಲ್, ಡಬಲ್-ಸ್ಟ್ಯಾಕ್ಡ್ ಅಲ್ಟಿಯಮ್ ಬ್ಯಾಟರಿಯನ್ನು ಅಳವಡಿಸಲಾಗಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಬಹುನಿರೀಕ್ಷಿತ ಹಮ್ಮರ್ ಎಲೆಕ್ಟ್ರಿಕ್ ಎಸ್‍ಯುವಿಯ ಚಿತ್ರಗಳನ್ನು ಬಹಿರಂಗಪಡಿಸಿದ ಜಿಎಂಸಿ

ಇನ್ನು ಹಮ್ಮರ್ ಇವಿ 350 ಕಿ.ಮೀ ಗಿಂತಲೂ ಅಧಿಕ ಮೈಲೇಜ್ ಅನ್ನು ನೀಡುತ್ತದೆ. ಅಂದರೆ ಸರಿಸುಮಾರು 560 ಕಿ.ಮೀ ಮೈಲೇಜ್ ನೀಡುವ ಸಾಮರ್ಥ್ಯವಿದೆ. ಹಮ್ಮರ್ ಇವಿ 800 ವೋಲ್ಟ್ ವೇಗದ ಚಾರ್ಜಿಂಗ್ ವ್ಯವಸ್ಥಯನ್ನು ಹೊಂದಿದೆ. ಈ ವಾಹನವನ್ನು ಕೇವಲ 10 ನಿಮಿಷ ಚಾರ್ಜ್ ಮಾಡಿದರೆ 100 ಕಿ.ಮೀ ನಷ್ಟು ಚಲಿಸುವ ಸಾಮರ್ಥ್ಯವನ್ನು ಹೊಂದಿದೆ.

ಬಹುನಿರೀಕ್ಷಿತ ಹಮ್ಮರ್ ಎಲೆಕ್ಟ್ರಿಕ್ ಎಸ್‍ಯುವಿಯ ಚಿತ್ರಗಳನ್ನು ಬಹಿರಂಗಪಡಿಸಿದ ಜಿಎಂಸಿ

ಹಮ್ಮರ್ ಇವಿ ಉತ್ತಮ ಪರ್ಫಾಮೆನ್ಸ್ ಮಾದರಿಯಾಗಿದೆ. ಕೇವಲ 3 ಸೆಕೆಂಡುಗಳಲ್ಲಿ ಈ ಹಮ್ಮರ್ ಇವಿ 0-60 ಕಿ.ಮೀ ವೇಗವನ್ನು ಕ್ರಮಿಸುತ್ತದೆ. ಈ ವಾಹನದಲ್ಲಿ 35 ಇಂಚಿನ ಟಯರ್ ಗಳೊಂದಿಗೆ ಸ್ಟ್ಯಾಂಡರ್ಡ್ ಆಗಿ 4ಡಬ್ಲ್ಯುಡಿಯನ್ನು ಅಳವಡಿಸಿದ್ದಾರೆ.

MOST READ: ಕ್ರ್ಯಾಶ್ ಟೆಸ್ಟ್‌ನಲ್ಲಿ ಶೂನ್ಯ ಸ್ಟಾರ್ ರೇಟಿಂಗ್ ಪಡೆದ ಜನಪ್ರಿಯ ಮಾರುತಿ ಎಸ್-ಪ್ರೆಸ್ಸೊ ಕಾರು

ಬಹುನಿರೀಕ್ಷಿತ ಹಮ್ಮರ್ ಎಲೆಕ್ಟ್ರಿಕ್ ಎಸ್‍ಯುವಿಯ ಚಿತ್ರಗಳನ್ನು ಬಹಿರಂಗಪಡಿಸಿದ ಜಿಎಂಸಿ

ಈ ಹಮ್ಮರ್ ಇವಿಯಲ್ಲಿ ವಿಶಿಷ್ಟವಾದ ಡ್ರೈವಿಂಗ್ ಮೋಡ್ ಅನ್ನು ಸಹ ಹೊಂದಿದೆ. ಇದನ್ನು ‘ಕ್ರಾಬ್ ಮೋಡ್' ಎಂದು ಕರೆಯಲಾಗುತ್ತದೆ. ಇದು ಆಫ್-ರೋಡ್ ನಲ್ಲಿ ಹೆಚ್ಚು ಉಪಯೋಗವಾಗುವ ಪೀಚರ್ ಆಗಿದೆ.

ಬಹುನಿರೀಕ್ಷಿತ ಹಮ್ಮರ್ ಎಲೆಕ್ಟ್ರಿಕ್ ಎಸ್‍ಯುವಿಯ ಚಿತ್ರಗಳನ್ನು ಬಹಿರಂಗಪಡಿಸಿದ ಜಿಎಂಸಿ

ಹಮ್ಮರ್ ಇವಿಯಲ್ಲಿ 13.4-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಜೊತೆಗೆ 12.3-ಇಂಚಿನ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿರಲಿದೆ. ಇದರಲ್ಲಿ ಕ್ಲೈಮೆಂಟ್ ಕಂಟ್ರೋಲ್ ಫೀಚರ್ ಅನ್ನು ಹೊಂದಿದೆ.

ಬಹುನಿರೀಕ್ಷಿತ ಹಮ್ಮರ್ ಎಲೆಕ್ಟ್ರಿಕ್ ಎಸ್‍ಯುವಿಯ ಚಿತ್ರಗಳನ್ನು ಬಹಿರಂಗಪಡಿಸಿದ ಜಿಎಂಸಿ

ಈ ವಾಹನವು ಅಡಾಪ್ಟಿವ್ ಏರ್ ಸಸ್ಪೆಂಕ್ಷನ್ (ಇದು 6 ಇಂಚುಗಳಷ್ಟು ಗ್ರೌಂಡ್ ಕ್ಲಿಯರೆನ್ಸ್ ಹೆಚ್ಚಿಸಬಹುದು), ಇನ್ನು ಆಫ್-ರೋಡಿಂಗ್‌ಗಾಗಿ ಅಂಡರ್‌ಬಾಡಿ ಅರ್ಮರ್ ಮತ್ತು ಕಾರಿನ ಸುತ್ತಲಿನ ದೃಶ್ಯವನ್ನು ಒದಗಿಸಲು 18 ಕ್ಯಾಮೆರಾಗಳನ್ನು ಸಹ ನೀಡುತ್ತದೆ.

ಬಹುನಿರೀಕ್ಷಿತ ಹಮ್ಮರ್ ಎಲೆಕ್ಟ್ರಿಕ್ ಎಸ್‍ಯುವಿಯ ಚಿತ್ರಗಳನ್ನು ಬಹಿರಂಗಪಡಿಸಿದ ಜಿಎಂಸಿ

ಹಮ್ಮರ್ ಇವಿ ರೂಫ್ ಪ್ಯಾನೆಲ್ ಗಳನ್ನು ಸಹ ಪಡೆಯುತ್ತದೆ, ಅದು ಮುಂಭಾಗದ ಬೂಟ್‌ನೊಳಗೆ ಹೊಂದಿಕೊಳ್ಳುತ್ತದೆ. ಹೊಸ ಹಮ್ಮರ್ ಇವಿಯಲ್ಲಿ ಆಲ್-ಎಲ್ಇಡಿ ಲೈಟಿಂಗ್ ಅನ್ನು ಅಳವಡಿಸಿದೆ. ಜಿಎಂಸಿ ಹಮ್ಮರ್ ಇವಿ ಪಿಕಪ್ ಟ್ರಕ್ ಅನ್ನು ಮುಂದಿನ ವರ್ಷ ಬಿಡುಗಡೆಗೊಳಿಸಲಿದೆ. ಇನ್ನು ಈ ಹಮ್ಮರ್ ಎಲೆಕ್ಟ್ರಿಕ್ ಎಸ್‍ಯುವಿಯನ್ನು 2022 ಅಥವಾ 2023ರಲ್ಲಿ ಬಿಡುಗಡೆಗೊಳಿಸಬಹುದು.

Most Read Articles

Kannada
Read more on ಹಮ್ಮರ್ hummer
English summary
Hummer Electric SUV Unofficially Revealed During Investor Meet. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X