ಲಾಕ್‌ಡೌನ್ ಸಂಕಷ್ಟದಲ್ಲೂ ನ್ಯೂ ಜನರೇಷನ್ ಕ್ರೆಟಾ ಖರೀದಿಗಾಗಿ ಭರ್ಜರಿ ಬೇಡಿಕೆ
ಲಾಕ್‌ಡೌನ್ ಸಂಕಷ್ಟದ ನಡುವೆಯೂ ಹ್ಯುಂಡೈ ನಿರ್ಮಾಣದ ನ್ಯೂ ಜನರೇಷನ್ ಕಾರು ಖರೀದಿಗೆ ದಾಖಲಾಗಿರುವ ಬುಕ್ಕಿಂಗ್ ಪ್ರಮಾಣವು ಅಚ್ಚರಿಗೆ ಕಾರಣವಾಗಿದ್ದು, ಹೊಸ ಕಾರು ಬಿಡುಗಡೆಯಾದ ಎರಡು ತಿಂಗಳ ಅವಧಿಯಲ್ಲಿ ಬರೋಬ್ಬರಿ 21 ಸಾವಿರ ಬುಕ್ಕಿಂಗ್ ಪಡೆದುಕೊಂಡಿದೆ.

ಸದ್ಯ ಲಾಕ್‌ಡೌನ್ ಮುಂದುವರಿಸಲಾಗಿದ್ದರೂ ಆಟೋ ಉತ್ಪಾದನಾ ಮತ್ತು ಮಾರಾಟ ಪ್ರಕ್ರಿಯೆ ಚಾಲನೆ ಸಿಕ್ಕಿರುವುದರಿಂದ ಆಟೋ ಕಂಪನಿಗಳು ಗ್ರಾಹಕರನ್ನು ಸೆಳೆಯುತ್ತಿದ್ದು, ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಕ್ರೆಟಾ ಕಾರು ಹೊಸ ತಲೆಮಾರಿನ ಆವೃತ್ತಿಯೊಂದಿಗೆ ಗ್ರಾಹಕರ ಆಕರ್ಷಣೆ ಕಾರಣವಾಗಿದೆ. ಬಹುತೇಕ ಕಾರು ಕಂಪನಿಗಳು ವಿವಿಧ ಕಾರುಗಳ ಮಾರಾಟದಲ್ಲಿ ಬೇಡಿಕೆಯಿಲ್ಲದೆ ಪರದಾಟುತ್ತಿದ್ದು, ಹೊಸ ತಲೆಮಾರಿನ ಕ್ರೆಟಾ ಕಾರು ಮಾತ್ರ ಭರ್ಜರಿ ಬೇಡಿಕೆ ಪಡೆದುಕೊಂಡಿದೆ.

ಕಳೆದ ಮಾರ್ಚ್ 16ರಂದು ಬಿಡುಗಡೆಯಾಗಿದ್ದ ನ್ಯೂ ಜನರೇಷನ್ ಕ್ರೆಟಾ ಕಾರು ಇದುವರೆಗೆ 21 ಸಾವಿರ ಯುನಿಟ್ ಖರೀದಿಗಾಗಿ ಬುಕ್ಕಿಂಗ್ ಪಡೆದುಕೊಂಡಿದ್ದು, ಬುಕ್ಕಿಂಗ್ ಮಾಡಲಾದ ಗ್ರಾಹಕರಿಗೆ ಈಗಾಗಲೇ ವಿತರಣೆಯನ್ನು ಶುರು ಮಾಡಲಾಗಿದೆ.

ಸುರಕ್ಷತೆಯ ದೃಷ್ಠಿಯಿಂದ ಗ್ರಾಹಕರ ಮನೆಬಾಗಿಲಿಗೆ ಹೊಸ ಕಾರು ಉತ್ಪನ್ನಗಳನ್ನು ವಿತರಣೆ ಮಾಡುತ್ತಿರುವ ಹ್ಯುಂಡೈ ಕಂಪನಿಯು ಹಲವಾರು ಸುರಕ್ಷಾ ಕ್ರಮಗಳನ್ನು ಕಡ್ಡಾಯಗೊಳಿಸಿದ್ದು, ಆನ್‌ಲೈನ್ ಕಾರು ಮಾರಾಟಕ್ಕೆ ಹೆಚ್ಚು ಒತ್ತು ನೀಡುತ್ತಿದೆ.

ಇನ್ನು ಹೊಸ ಕ್ರೆಟಾ ಕಾರು ಗ್ರಾಹಕರ ಬೇಡಿಕೆಯೆಂತೆ ಒಟ್ಟು 5 ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಬಿಎಸ್-6 ವೈಶಿಷ್ಟ್ಯತೆಯ 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಬಿಡುಗಡೆ ಮಾಡಲಾಗಿದೆ.
MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಹೊಸ ಕ್ರೆಟಾ ಕಾರು ದೆಹಲಿ ಎಕ್ಸ್‌ಶೋರೂಂ ಆರಂಭಿಕವಾಗಿ ರೂ. 9.99 ಲಕ್ಷ ಬೆಲೆ ಪಡೆದುಕೊಂಡಿದ್ದು, ಟಾಪ್ ಎಂಡ್ ಮಾದರಿಯು ರೂ. 17.20 ಲಕ್ಷ ಬೆಲೆ ಪಡೆದುಕೊಳ್ಳುವ ಮೂಲಕ ಕಿಯಾ ಸೆಲ್ಟೊಸ್‌ಗೆ ಸರಿಸಮನಾಗಿ ಮಾರುಕಟ್ಟೆ ಪ್ರವೇಶಿಸಿದೆ.

ಹೊಸ ಎಂಜಿನ್ ಆಯ್ಕೆಯನ್ನು ಸಹೋದರ ಸಂಸ್ಥೆಯಾದ ಕಿಯಾ ಮೋಟಾರ್ಸ್‌ನಿಂದ ಎರವಲು ಪಡೆಯಲಾಗಿದ್ದು, ಸೆಲ್ಟೊಸ್ ಕಾರಿನಂತೆಯೇ ಕ್ರೆಟಾ ಬಲಿಷ್ಠ ಎಂಜಿನ್ ಹೊಂದಿರುವ ಕಂಪ್ಯಾಕ್ಟ್ ಎಸ್‌ಯುವಿ ಆವೃತ್ತಿಯಾಗಿದೆ.
MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಇದರಿಂದ ಕ್ರೆಟಾ ಆವೃತ್ತಿಯಲ್ಲಿ ಈ ಹಿಂದೆ ನೀಡಲಾಗುತ್ತಿದ್ದ 1.6-ಲೀಟರ್ ಮತ್ತು 1.4-ಲೀಟರ್ ಡೀಸೆಲ್ ಎಂಜಿನ್ ಅನ್ನು ತೆಗೆದುಹಾಕಲಾಗಿದ್ದು, ಸಾಮಾನ್ಯ ಮಾದರಿಯಲ್ಲಿ 1.5-ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಹಾಗೂ ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಖರೀದಿಸಬಹುದಾಗಿದೆ.

1.5-ಲೀಟರ್ ಪೆಟ್ರೋಲ್ ಆವೃತ್ತಿಯು 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 115-ಬಿಎಚ್‌ಪಿ, 144-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.5-ಲೀಟರ್ ಡೀಸೆಲ್ ಮಾದರಿಯು ಸಹ 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 115-ಬಿಎಚ್‌ಪಿ, 250-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.
MOST READ: ಲಾಕ್‌ಡೌನ್‌ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ

ಇದರಲ್ಲಿ 1.4-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯು 7-ಸ್ಪೀಡ್ ಡ್ಯುಯಲ್ ಕ್ಲಚ್ ಟ್ರಾನ್ಸ್‌ಮಿಷನ್‌ನೊಂದಿಗೆ 140-ಬಿಎಚ್‌ಪಿ ಉತ್ಪಾದನೆ ಮಾಡಲಿದ್ದು, ಕ್ರೆಟಾ ಆವೃತ್ತಿಯಲ್ಲೇ ಇದು ಹೈ ಎಂಡ್ ಆವೃತ್ತಿಯಾಗಿ ಮಾರಾಟಗೊಳ್ಳಲಿದೆ. ಹಾಗೆಯೇ ಹೊಸ ಕಾರಿನಲ್ಲಿ ಹಲವಾರು ಐಷಾರಾಮಿ ಫೀಚರ್ಸ್‌ಗಳ ಜೊತೆಗೆ ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.


Click it and Unblock the Notifications








