ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಹೊಸ ದಾಖಲೆಗೆ ಕಾರಣವಾದ ನ್ಯೂ ಜನರೇಷನ್ ಕ್ರೆಟಾ

ಕಳೆದ ಮಾರ್ಚ್ 16ರಂದು ಮಾರುಕಟ್ಟೆ ಪ್ರವೇಶಿಸಿದ್ದ ಹ್ಯುಂಡೈ ನ್ಯೂ ಜನರೇಷನ್ ಕ್ರೆಟಾ ಕಾರು ಮಾದರಿಯು ಅತಿ ಕಡಿಮೆ ಅವಧಿಯಲ್ಲಿ ಹಲವು ಹೊಸ ದಾಖಲೆಗಳಿಗೆ ಕಾರಣವಾಗಿದ್ದು, ಬಿಡುಗಡೆಯಾಗದ ಮೂರು ತಿಂಗಳ ಅವಧಿಯಲ್ಲಿ ಬರೋಬ್ಬರಿ 30 ಸಾವಿರ ಬುಕ್ಕಿಂಗ್ ಪಡೆದುಕೊಂಡಿದೆ.

ಹೊಸ ದಾಖಲೆಗೆ ಕಾರಣವಾದ ನ್ಯೂ ಜನರೇಷನ್ ಕ್ರೆಟಾ

ಕರೋನಾ ಸಂಕಷ್ಟದ ನಡುವೆಯೂ ಮೇ ತಿಂಗಳ ಕಾರು ಮಾರಾಟದಲ್ಲಿ ಅಗ್ರಸ್ಥಾನಕ್ಕೇರಿರುವ ಹ್ಯುಂಡೈ ಕ್ರೆಟಾ ಕಾರು ಇದೀಗ 30 ಸಾವಿರ ಬುಕ್ಕಿಂಗ್ ಪಡೆದುಕೊಳ್ಳುವ ಮೂಲಕ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಪ್ರತಿಸ್ಪರ್ಧಿ ಕಾರು ಮಾದರಿಗಳಾದ ಕಿಯಾ ಸೆಲ್ಟೊಸ್, ಎಂಜಿ ಹೆಕ್ಟರ್, ಮಾರುತಿ ಸುಜುಕಿ ಬ್ರೆಝಾ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುವ ಮೂಲಕ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾರಾಟದಲ್ಲಿ ಅಗ್ರಸ್ಥಾನಕ್ಕೇರಿದೆ.

ಹೊಸ ದಾಖಲೆಗೆ ಕಾರಣವಾದ ನ್ಯೂ ಜನರೇಷನ್ ಕ್ರೆಟಾ

ಹೊಸ ಕ್ರೆಟಾ ಕಾರು ಗ್ರಾಹಕರ ಬೇಡಿಕೆಯೆಂತೆ ಒಟ್ಟು 5 ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಬಿಎಸ್-6 ವೈಶಿಷ್ಟ್ಯತೆಯ 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಬಿಡುಗಡೆ ಮಾಡಲಾಗಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಹೊಸ ದಾಖಲೆಗೆ ಕಾರಣವಾದ ನ್ಯೂ ಜನರೇಷನ್ ಕ್ರೆಟಾ

ನ್ಯೂ ಜನರೇಷನ್ ಕ್ರೆಟಾ ಕಾರು ದೆಹಲಿ ಎಕ್ಸ್‌ಶೋರೂಂ ಆರಂಭಿಕವಾಗಿ ರೂ. 9.99 ಲಕ್ಷ ಬೆಲೆ ಪಡೆದುಕೊಂಡಿದ್ದು, ಟಾಪ್ ಎಂಡ್ ಮಾದರಿಯು ರೂ. 17.20 ಲಕ್ಷ ಬೆಲೆ ಪಡೆದುಕೊಳ್ಳುವ ಮೂಲಕ ಕಿಯಾ ಸೆಲ್ಟೊಸ್‌ಗೆ ಸರಿಸಮನಾಗಿ ಮಾರುಕಟ್ಟೆ ಪ್ರವೇಶಿಸಿದೆ.

ಹೊಸ ದಾಖಲೆಗೆ ಕಾರಣವಾದ ನ್ಯೂ ಜನರೇಷನ್ ಕ್ರೆಟಾ

ಹೊಸ ಎಂಜಿನ್ ಆಯ್ಕೆಯನ್ನು ಸಹೋದರ ಸಂಸ್ಥೆಯಾದ ಕಿಯಾ ಮೋಟಾರ್ಸ್‌ನಿಂದ ಎರವಲು ಪಡೆಯಲಾಗಿದ್ದು, ಸೆಲ್ಟೊಸ್ ಕಾರಿನಂತೆಯೇ ಕ್ರೆಟಾ ಕಾರು ಕೂಡಾ ಬಲಿಷ್ಠ ಎಂಜಿನ್ ಹೊಂದಿರುವ ಕಂಪ್ಯಾಕ್ಟ್ ಎಸ್‌ಯುವಿ ಆವೃತ್ತಿಯಾಗಿದೆ.

MOST READ: ಎಲೆಕ್ಟ್ರಿಕ್ ವಾಹನ ಖರೀದಿಸುವವರಿಗೆ ದೊರೆಯಲಿದೆ 5 ಲಕ್ಷ ಸಬ್ಸಿಡಿ

ಹೊಸ ದಾಖಲೆಗೆ ಕಾರಣವಾದ ನ್ಯೂ ಜನರೇಷನ್ ಕ್ರೆಟಾ

ಇದರಿಂದ ಕ್ರೆಟಾ ಆವೃತ್ತಿಯಲ್ಲಿ ಈ ಹಿಂದೆ ನೀಡಲಾಗುತ್ತಿದ್ದ 1.6-ಲೀಟರ್ ಮತ್ತು 1.4-ಲೀಟರ್ ಡೀಸೆಲ್ ಎಂಜಿನ್ ಅನ್ನು ತೆಗೆದುಹಾಕಲಾಗಿದ್ದು, ಸಾಮಾನ್ಯ ಮಾದರಿಯಲ್ಲಿ 1.5-ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಹಾಗೂ ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಖರೀದಿಸಬಹುದಾಗಿದೆ.

ಹೊಸ ದಾಖಲೆಗೆ ಕಾರಣವಾದ ನ್ಯೂ ಜನರೇಷನ್ ಕ್ರೆಟಾ

1.5-ಲೀಟರ್ ಪೆಟ್ರೋಲ್ ಆವೃತ್ತಿಯು 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 115-ಬಿಎಚ್‌ಪಿ, 144-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.5-ಲೀಟರ್ ಡೀಸೆಲ್ ಮಾದರಿಯು ಸಹ 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 115-ಬಿಎಚ್‌ಪಿ, 250-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

MOST READ: ಲಾಕ್‌ಡೌನ್ ವಿನಾಯ್ತಿ ನಂತರ ಕರ್ನಾಟಕದಲ್ಲೇ ಅತಿ ಹೆಚ್ಚು ಕಾರು ಮಾರಾಟ ದಾಖಲು

ಹೊಸ ದಾಖಲೆಗೆ ಕಾರಣವಾದ ನ್ಯೂ ಜನರೇಷನ್ ಕ್ರೆಟಾ

ಇದರಲ್ಲಿ 1.4-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯು 7-ಸ್ಪೀಡ್ ಡ್ಯುಯಲ್ ಕ್ಲಚ್ ಟ್ರಾನ್ಸ್‌ಮಿಷನ್‌ನೊಂದಿಗೆ 140-ಬಿಎಚ್‌ಪಿ ಉತ್ಪಾದನೆ ಮಾಡಲಿದ್ದು, ಕ್ರೆಟಾ ಆವೃತ್ತಿಯಲ್ಲೇ ಇದು ಹೈ ಎಂಡ್ ಆವೃತ್ತಿಯಾಗಿ ಮಾರಾಟಗೊಳ್ಳಲಿದೆ. ಹಾಗೆಯೇ ಹೊಸ ಕಾರಿನಲ್ಲಿ ಹಲವಾರು ಐಷಾರಾಮಿ ಫೀಚರ್ಸ್‌ಗಳ ಜೊತೆಗೆ ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.

Article Published On: Tuesday, June 16, 2020, 16:18 [IST]
English summary
2020 Hyundai Creta Bookings Crosses 30,0000 Mark. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+