Just In
Don't Miss!
- Movies
KSRTC ಬಸ್ಸಿನಲ್ಲಿ ನಿರ್ಮಾಣವಾದ ವಿಶೇಷ ಸ್ತ್ರೀ ಶೌಚಾಲಯ ಪರಿಶೀಲಿಸಿದ ನಟಿ ಶ್ರುತಿ
- News
ಕಬ್ಬನ್ ಉದ್ಯಾನ ವ್ಯಾಪ್ತಿಯಲ್ಲಿ ನಿಯಮಬಾಹಿರ ಕಟ್ಟಡ ನಿರ್ಮಾಣ: ನೋಟಿಸ್
- Lifestyle
ಚಳಿಗಾಲದಲ್ಲಿ ಚರ್ಮದ ರಕ್ಷಣೆಗೆ ಈ ಆಹಾರಗಳನ್ನು ಸೇವಿಸುವುದನ್ನು ಮರೆಯಬೇಡಿ..
- Sports
ಹೊಸ ಪರೀಕ್ಷೆಗೆ ಒಳಗಾಗಬೇಕು ಕ್ರಿಕೆಟ್ ತಾರೆಯರು: 8.30 ನಿಮಿಷದಲ್ಲಿ 2 ಕಿ.ಮೀ ಗುರಿ
- Finance
ಬಜೆಟ್ 2021: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಜನವರಿ 30ರಂದು ಸರ್ವ ಪಕ್ಷಗಳ ಸಭೆ
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ದಾಖಲೆ ಪ್ರಮಾಣದ ಬುಕ್ಕಿಂಗ್ ಪಡೆದ ಹೊಸ ಹ್ಯುಂಡೈ ಕ್ರೆಟಾ
ಜನಪ್ರಿಯ ಕಾರು ತಯಾರಕ ಕಂಪನಿಯಾದ ಹ್ಯುಂಡೈ ತನ್ನ ಬಿಎಸ್-6 ಕ್ರೆಟಾ ಎಸ್‍ಯುವಿಯನ್ನು ಈ ವರ್ಷದ ಮಾರ್ಚ್ ತಿಂಗಳಲ್ಲಿ ಭಾರತದಲ್ಲಿ ಬಿಡುಗಡೆಗೊಳಿಸಿತ್ತು. ಹ್ಯುಂಡೈ ಇಂಡಿಯಾ ಕಂಪನಿಯು ಈ ಹೊಸ ಕ್ರೆಟಾ ಎಸ್‍ಯುವಿಯನ್ನು 2020ರ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸಲಾಗಿತ್ತು.

ಭಾರತೀಯ ಮಾರುಕಟ್ಟೆಯಲ್ಲಿ 2020ರ ಹ್ಯುಂಡೈ ಕ್ರೆಟಾ ಎಸ್‍ಯುವಿಗಾಗಿ ಭರ್ಜರಿ ಬುಕ್ಕಿಂಗ್ ದಾಖಲಾಗಿದೆ. 2020ರ ಹ್ಯುಂಡೈ ಕ್ರೆಟಾ ಎಸ್‌ಯುವಿಗಾಗಿ 45,000ಕ್ಕೂ ಹೆಚ್ಚು ಬುಕ್ಕಿಂಗ್ ಗಳನ್ನು ಪಡೆಯಲಾಗಿದೆ ಎಂದು ಹದಿನೈದು ದಿನಗಳ ಹಿಂದೆ ವರದಿ ಪ್ರಕಟವಾಗಿತ್ತು. ಇದೀಗ ಹ್ಯುಂಡೈ ಕ್ರೆಟಾ ಬುಕ್ಕಿಂಗ್ ನಲ್ಲಿ ಮತ್ತೊಂದು ದಾಖಲೆಯನ್ನು ನಿರ್ಮಿಸಿದೆ. ಇಲ್ಲಿಯವರೆಗೆ 2020ರ ಹ್ಯುಂಡೈ ಕ್ರೆಟಾ ಎಸ್‌ಯುವಿಗಾಗಿ 55,000ಕ್ಕೂ ಹೆಚ್ಚು ಬುಕ್ಕಿಂಗ್ ಗಳನ್ನು ಪಡೆಯಲಾಗಿದೆ

ಕರೋನಾ ವೈರಸ್ ಸಂಕಷ್ಟದ ಸಮಯದಲ್ಲೂ ಹ್ಯುಂಡೈ ಕ್ರೆಟಾದ 55,000ಕ್ಕೂ ಹೆಚ್ಚು ಯುನಿಟ್‌ಗಳನ್ನು ಬುಕ್ಕಿಂಗ್ ಮಾಡಲಾಗಿದೆ. ಈ ಮಿಡ್ ಎಸ್‍ಯುವಿಯು ಬಿಡುಗಡೆಯಾದ ಕೆಲವೇ ತಿಂಗಳಲ್ಲಿ ಹೊಸ ಮೈಲಿಗಲ್ಲು ಸಾಧಿಸುವಲ್ಲಿ ಯಶ್ವಸಿಯಾಗಿದೆ.
MOST READ: ಭಾರತಕ್ಕೆ ಲಗ್ಗೆ ಇಡಲಿದೆ ಹೊಸ ಹೋಂಡಾ ಹೆಚ್‌ಆರ್-ವಿ ಎಸ್‍ಯುವಿ

2020ರ ಹ್ಯುಂಡೈ ಕ್ರೆಟಾ ಎಸ್‍ಯುವಿಯ ಮುಂಭಾಗದಲ್ಲಿರುವ ಹ್ಯುಂಡೈನ ಕ್ಯಾಸ್ಕೇಡಿಂಗ್ ಗ್ರಿಲ್ ಹೆಚ್ಚು ಗಮನ ಸೆಳೆದರೂ, ಹೆಡ್‍ಲೈಟ್ ಮತ್ತಷ್ಟು ಗಮನ ಸೆಳೆಯುತ್ತದೆ. ಸ್ಪ್ಲಿಟ್ ಹೆಡ್‍ಲೈಟ್ ಸ್ಲಿಟ್ ರೀತಿಯ ಎಲ್ಇಡಿ ಡಿಆರ್‍ಎಲ್ ಅನ್ನು ಹೊಂದಿದೆ. ಈ ಎಸ್‍ಯುವಿಯ ಹೆಡ್‌ಲೈಟ್ ಕ್ಲಸ್ಟರ್ ಕೆಳಗೆ ಹೊಸ ಲುಕ್‍ನ ಫಾಗ್ ಲ್ಯಾಂಪ್‍ಗಳಿವೆ.

ಇನ್ನು ಬಂಪರ್‍ನ ಕೆಳಗೆ ಸ್ಕಫ್ ಪ್ಲೇಟ್‍ಗಳಿವೆ. ಸ್ಕ್ವೇರ್ ಶೇಪಿನ ವ್ಹೀಲ್ ಆರ್ಕ್‍ಗಳು ಕ್ರೆಟಾಗೆ ಹೆಚ್ಚಿನ ಲುಕ್ ನೀಡುತ್ತವೆ. ಹೊಸ ಕ್ರೆಟಾ ಎಸ್‍ಯುವಿಗೆ ಭಾರತೀಯ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.9.99 ಲಕ್ಷ ಬೆಲೆ ಆದರೆ ಟಾಪ್ ಎಂಡ್ ಮಾದರಿಗೆ ರೂ.17.20 ಲಕ್ಷ ಗಳಾಗಿದೆ.
MOST READ: ಜನಪ್ರಿಯ ಮಾರುತಿ ಸುಜುಕಿ ಕಾರುಗಳ ಮೇಲೆ ಭರ್ಜರಿ ರಿಯಾಯಿತಿ

ಹೊಸ ತಲೆಮಾರಿನ ಹ್ಯುಂಡೈ ಕ್ರೆಟಾ ಎಸ್‍ಯುವಿಯಲ್ಲಿ ಹೊಸ ಇನ್ಫೋಟೇನ್‍ಮೆಂಟ್ ಸಿಸ್ಟಂ ಅಳವಡಿಸಲಾಗಿದೆ. ಈ ಸಿಸ್ಟಂನಲ್ಲಿ ವಾಯ್ಸ್ ಕಮಾಂಡ್ ಹಾಗೂ ಬ್ಲೂಲಿಂಕ್ ಕನೆಕ್ಟಿವಿಟಿ ಫೀಚರ್‍ಗಳಿರಲಿವೆ.

ಈ ಎಸ್‍ಯುವಿಯಲ್ಲಿರುವ ಸನ್‍ರೂಫ್ ವಾಯ್ಸ್ ಕಮಾಂಡ್‍ನಿಂದ ಚಲಿಸಲಿದೆ. ಆಟೋಮ್ಯಾಟಿಕ್ ಮಾದರಿಗಳಲ್ಲಿ ಪ್ಯಾಡಲ್ ಶಿಫ್ಟ್, ಡ್ಯುಯಲ್ ಹೋಸ್ ಚಿಮ್ನಿ, ರಿಮೋಟ್ ಎಂಜಿನ್ ಸ್ಟಾರ್ಟ್ ಅಪ್, ಕ್ರೂಸ್ ಕಂಟ್ರೋಲ್, ಏರ್ ಪ್ಯೂರಿಫೈಯರ್ ಹಾಗೂ ವೈರ್‍ಲೆಸ್ ಚಾರ್ಜರ್‍ಗಳಿರಲಿವೆ.
MOST READ: ಸ್ಥಗಿತಗೊಂಡಿಲ್ಲ ಫೋಕ್ಸ್‌ವ್ಯಾಗನ್ ಕಾರಿನ ಈ ಮಾದರಿಗಳು

ಇದರೊಂದಿಗೆ ಹೊಸ ಕ್ರೆಟಾ ಎಸ್‍ಯುವಿಯು ಮೂರು ವಿಭಿನ್ನ ಟ್ರಾಕ್ಷನ್ ಕಂಟ್ರೋಲ್ ಮತ್ತು ಟಿಯರಿಯನ್ ಮೋಡ್‌ಗಳನ್ನು ಹೊಂದಲಿದೆ. ಈ ಹೊಸ ತಾಂತ್ರಕ ಸೌಲಭ್ಯದಿಂದಾಗಿ ಹೆಚ್ಚಿನ ಗ್ರಾಹಕರನ್ನು ಸೆಳೆದಿದೆ.

ಈ ಜನಪ್ರಿಯ ಬಿಎಸ್-6 ಹ್ಯುಂಡೈ ಕ್ರೆಟಾ ಭಾರತೀಯ ಮಾರುಕಟ್ಟೆಯಲ್ಲಿ ಕಿಯಾ ಸೆಲ್ಟೋಸ್, ರೆನಾಲ್ಟ್ ಡಸ್ಟರ್, ಎಂಜಿ ಹೆಕ್ಟರ್ ಹಾಗೂ ಟಾಟಾ ಹ್ಯಾರಿಯರ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ.