ಕೇವಲ 15 ದಿನಗಳಲ್ಲಿ 14 ಸಾವಿರ ಬುಕ್ಕಿಂಗ್ ಪಡೆದುಕೊಂಡ ನ್ಯೂ ಜನರೇಷನ್ ಹ್ಯುಂಡೈ ಕ್ರೆಟಾ

ಇಂದು ಬಿಡುಗಡೆಯಾಗಲಿರುವ ಹ್ಯುಂಡೈ ಹೊಸ ತಲೆಮಾರಿನ ಕ್ರೆಟಾ ಕಂಪ್ಯಾಕ್ಟ್ ಎಸ್‌ಯುವಿ ಆವೃತ್ತಿಯು ಬಿಡುಗಡೆಗೂ ಮುನ್ನವೇ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಂಡಿದ್ದು, ಬುಕ್ಕಿಂಗ್ ಆರಂಭವಾಗ ಕೇವಲ 15ದಿನಗಳಲ್ಲಿ 14 ಸಾವಿರ ಗ್ರಾಹಕರು ರೂ. 50 ಸಾವಿರ ಮುಂಗಡದೊಂದಿಗೆ ಹೊಸ ಕಾರು ಖರೀದಿಗೆ ಹೆಸರು ನೋಂದಾಯಿಸಿದ್ದಾರೆ.

ಕೇವಲ 15 ದಿನಗಳಲ್ಲಿ 14 ಸಾವಿರ ಬುಕ್ಕಿಂಗ್ ಪಡೆದುಕೊಂಡ ನ್ಯೂ ಜನರೇಷನ್ ಹ್ಯುಂಡೈ ಕ್ರೆಟಾ

ಹೊಸ ಕ್ರೆಟಾ ಕಾರು ಆವೃತ್ತಿಯನ್ನು ಬಿಡುಗಡೆಗೊಳಿಸಲು ಈಗಾಗಲೇ ಅಂತಿಮ ಹಂತದ ಸಿದ್ದತೆಗಳನ್ನು ಮಾಡಿಕೊಂಡಿರುವ ಹ್ಯುಂಡೈ ಸಂಸ್ಥೆಯು ಕರೋನಾ ವೈರಸ್ ಭೀತಿ ಹಿನ್ನಲೆಯಲ್ಲಿ ಅತಿ ಸರಳವಾಗಿ ಕಾರು ಬಿಡುಗಡೆಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಕ್ರೆಟಾ ನಂತರ ಟಕ್ಸನ್ ಫೇಸ್‌ಲಿಫ್ಟ್, ವೆರ್ನಾ ಫೇಸ್‌ಲಿಫ್ಟ್ ಮತ್ತು ಎಲಾಂಟ್ರಾ ಫೇಸ್‌ಲಿಫ್ಟ್ ಕಾರುಗಳನ್ನು ಸಹ ಶೀಘ್ರದಲ್ಲೇ ಬಿಡುಗಡೆ ಮಾಡಲು ಸುಳಿವು ನೀಡಿದೆ.

ಕೇವಲ 15 ದಿನಗಳಲ್ಲಿ 14 ಸಾವಿರ ಬುಕ್ಕಿಂಗ್ ಪಡೆದುಕೊಂಡ ನ್ಯೂ ಜನರೇಷನ್ ಹ್ಯುಂಡೈ ಕ್ರೆಟಾ

ಇನ್ನು ದೆಹಲಿ ಎಕ್ಸ್‌ಪೋದಲ್ಲಿ ಮೊದಲ ಬಾರಿಗೆ ಅನಾವರಣಗೊಂಡಿದ್ದ ಕ್ರೆಟಾ ನ್ಯೂ ಜನರೇಷನ್ ಆವೃತ್ತಿಯು ಪ್ರತಿಸ್ಪರ್ಧಿ ಕಾರು ಮಾದರಿಯಾದ ಕಿಯಾ ಸೆಲ್ಟೊಸ್‌ಗೆ ಭರ್ಜರಿ ಪೈಪೋಟಿ ನೀಡುವ ತವಕದಲ್ಲಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿರುವ ಆವೃತ್ತಿಗಿಂತಲೂ ಸಾಕಷ್ಟು ಹೊಸತನದೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದೆ.

ಕೇವಲ 15 ದಿನಗಳಲ್ಲಿ 14 ಸಾವಿರ ಬುಕ್ಕಿಂಗ್ ಪಡೆದುಕೊಂಡ ನ್ಯೂ ಜನರೇಷನ್ ಹ್ಯುಂಡೈ ಕ್ರೆಟಾ

ಹೊಸ ಕಾರು ಖರೀದಿಗೆ ಅಧಿಕೃತ ಬುಕ್ಕಿಂಗ್ ಆರಂಭವಾದ ಕೇವಲ ಒಂದೇ ವಾರದಲ್ಲಿ 12 ಸಾವಿರಕ್ಕೂ ಹೆಚ್ಚು ಗ್ರಾಹಕರು ರೂ.50 ಸಾವಿರ ಮುಂಗಡದೊಂದಿಗೆ ಬುಕ್ಕಿಂಗ್ ಸಲ್ಲಿಸಿದ್ದು, ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರು ಈ ಬಾರಿ ಒಟ್ಟು 3 ಎಂಜಿನ್‌ನೊಂದಿಗೆ 14 ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದೆ.

ಕೇವಲ 15 ದಿನಗಳಲ್ಲಿ 14 ಸಾವಿರ ಬುಕ್ಕಿಂಗ್ ಪಡೆದುಕೊಂಡ ನ್ಯೂ ಜನರೇಷನ್ ಹ್ಯುಂಡೈ ಕ್ರೆಟಾ

ಬಿಎಸ್-6 ಎಂಜಿನ್ ಹೊಂದಿರುವ ಹೊಸ ಕಾರಿನಲ್ಲಿ ಈ ಬಾರಿ ಸಾಕಷ್ಟು ಬದಲಾವಣೆಗೊಳಿಸಲಾಗಿದ್ದು, ಹೊಸದಾಗಿ ಬಿಡುಗಡೆಯಾಗಿರುವ ಕಿಯಾ ಸೆಲ್ಟೊಸ್‌ನಿಂದ 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು 1.4-ಲೀಟರ್ ಪೆಟ್ರೋಲ್ ಟರ್ಬೋ ಎಂಜಿನ್ ಪಡೆದುಕೊಳ್ಳಲಿದೆ. ಸ್ಟ್ಯಾಂಡರ್ಡ್ ವೆರಿಯೆಂಟ್‌ಗಳಲ್ಲಿ 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಖರೀದಿಗೆ ಲಭ್ಯವಿದ್ದಲ್ಲಿ, ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ನೀಡಲಾಗುತ್ತಿದೆ.

ಕೇವಲ 15 ದಿನಗಳಲ್ಲಿ 14 ಸಾವಿರ ಬುಕ್ಕಿಂಗ್ ಪಡೆದುಕೊಂಡ ನ್ಯೂ ಜನರೇಷನ್ ಹ್ಯುಂಡೈ ಕ್ರೆಟಾ

1.5-ಲೀಟರ್ ಪೆಟ್ರೋಲ್ ಮಾದರಿಯು 115-ಬಿಎಚ್‌ಪಿ, 144-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದಲ್ಲಿ 1.5-ಲೀಟರ್ ಡೀಸೆಲ್ ಮಾದರಿಯು 115-ಬಿಎಚ್‌ಪಿ, 250-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದು, 1.4-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯು 140-ಬಿಎಚ್‌ಪಿ, 242-ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಕೇವಲ 15 ದಿನಗಳಲ್ಲಿ 14 ಸಾವಿರ ಬುಕ್ಕಿಂಗ್ ಪಡೆದುಕೊಂಡ ನ್ಯೂ ಜನರೇಷನ್ ಹ್ಯುಂಡೈ ಕ್ರೆಟಾ

ಇದಲ್ಲದೇ ಹೊಸ ಕಾರಿನ ಮುಂಭಾಗದ ವಿನ್ಯಾಸದಲ್ಲಿ ಸಾಕಷ್ಟು ಬದಲಾವಣೆಗಳನ್ನು ಪರಿಚಯಿಸಲಾಗಿದ್ದು, ಕಾರಿನ ಉದ್ದಳತೆಯಲ್ಲೂ ಹೆಚ್ಚಳ ಮಾಡಲಾಗಿದೆ. ಹೊಸ ಕಾರು ಈ ಬಾರಿ 4,300-ಎಂಎಂ ಉದ್ದ, 1,790-ಎಂಎಂ ಅಗಲ, 1,622-ಎಂಎಂ ಅಗಲ, 2,610-ಎಂಎಂ ವೀಲ್ಹ್ ಬೆಸ್‌ನೊಂದಿಗೆ 17-ಇಂಚಿನ ಚಕ್ರಗಳನ್ನು ಪಡೆದುಕೊಂಡಿದೆ.

ಕೇವಲ 15 ದಿನಗಳಲ್ಲಿ 14 ಸಾವಿರ ಬುಕ್ಕಿಂಗ್ ಪಡೆದುಕೊಂಡ ನ್ಯೂ ಜನರೇಷನ್ ಹ್ಯುಂಡೈ ಕ್ರೆಟಾ

ಈ ಮೂಲಕ ಹೊಸ ಕಾರಿನಲ್ಲಿ ಸಾಕಷ್ಟು ಸ್ಥಳಾವಕಾಶ ಕಲ್ಪಿಸಿರುವ ಹ್ಯುಂಡೈ ಸಂಸ್ಥೆಯು ಸುಧಾರಿತ ಮಾದರಿಯು ಇಂಟಿರಿಯರ್ ಫೀಚರ್ಸ್‌ಗಳನ್ನು ನೀಡಿದ್ದು, 35ಕ್ಕೂ ಹೆಚ್ಚು ಸೆಫ್ಟಿ ಫೀಚರ್ಸ್‌ಗಳನ್ನು ಒಳಗೊಂಡಿರುವ ಬ್ಯೂ ಲಿಂಕ್ ಟೆಕ್ನಾಲಜಿ, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೇರಿದಂತೆ ಹಲವಾರು ಹೊಸ ಸೌಲಭ್ಯಗಳನ್ನು ನೀಡಲಾಗಿದೆ.

ಕೇವಲ 15 ದಿನಗಳಲ್ಲಿ 14 ಸಾವಿರ ಬುಕ್ಕಿಂಗ್ ಪಡೆದುಕೊಂಡ ನ್ಯೂ ಜನರೇಷನ್ ಹ್ಯುಂಡೈ ಕ್ರೆಟಾ

ಜೊತೆಗೆ ಹೊಸ ಕಾರಿನಲ್ಲಿ ಬಿಎಸ್-6 ಎಂಜಿನ್ ಜೋಡಣೆ ಮಾಡಿರುವ ಇಂಧನ ದಕ್ಷತೆ ಹೆಚ್ಚಳವಾಗಿರುವುದಲ್ಲದೆ ಮಾಲಿನ್ಯ ಹೊರಸೂಸುವಿಕೆ ಸಾಕಷ್ಟು ಸುಧಾರಣೆ ಕಂಡಿದ್ದು, ಕಾರಿನ ನೀಡಲಾಗಿರುವ ತಾಂತ್ರಿಕ ಸೌಲಭ್ಯಗಳಿಗೆ ಅನುಗುಣವಾಗಿ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 10.50 ಲಕ್ಷದಿಂದ ಟಾಪ್ ಎಂಡ್ ಆವೃತ್ತಿಯು ರೂ.15.50 ಲಕ್ಷ ಪಡೆದುಕೊಂಡಿರಬಹುದೆಂದು ಅಂದಾಜಿಸಲಾಗಿದೆ.

Most Read Articles

Kannada
English summary
Hyundai Motors has received 14,000 bookings for the all new Creta in India since its bookings started earlier this month. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X