ಹೈಬ್ರಿಡ್ ಸಿಸ್ಟಂನೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ಎಲೈಟ್ ಐ20

ಹ್ಯುಂಡೈ ಕಂಪನಿಯು ಹೊಸ ಎಲೈಟ್ ಐ20 ಕಾರಿನಲ್ಲಿರುವ ವಿವರಗಳನ್ನು ಒಂದೊಂದಾಗಿ ಬಿಡುಗಡೆಗೊಳಿಸುತ್ತಿದೆ. ಪ್ರೀಮಿಯಂ ಹ್ಯಾಚ್‍‍ಬ್ಯಾಕ್ ಸೆಗ್‍ಮೆಂಟ್‍‍ನಲ್ಲಿ ಬಿಡುಗಡೆಯಾದ ನಂತರ ಹೊಸ ತಲೆಮಾರಿನ ಈ ಕಾರು ಹೆಚ್ಚಿನ ಜನಪ್ರಿಯತೆಯನ್ನು ಹೊಂದುವ ಸಾಧ್ಯತೆಗಳಿವೆ.

ಹೈಬ್ರಿಡ್ ಸಿಸ್ಟಂನೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ಎಲೈಟ್ ಐ20

ಹೊಸ ಎಲೈಟ್ ಐ20 ಕಾರು, 48 ವೋಲ್ಟ್ ನ ಮೈಲ್ಡ್ ಹೈಬ್ರಿಡ್ ಟೆಕ್ನಾಲಜಿಯನ್ನು ಹೊಂದಿರಲಿದೆ. ಈ ಕಾರಿನ ಪ್ರತಿಸ್ಪರ್ಧಿಯಾಗಿರುವ ಮಾರುತಿ ಸುಜುಕಿ ಕಂಪನಿಯ ಬಲೆನೊ ಕಾರು 12 ವೋಲ್ಟ್ ನ ಮೈಲ್ಡ್ ಹೈಬ್ರಿಡ್ ಸಿಸ್ಟಂ ಅನ್ನು ಹೊಂದಿದೆ.

ಹೈಬ್ರಿಡ್ ಸಿಸ್ಟಂನೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ಎಲೈಟ್ ಐ20

ಮೈಲ್ಡ್ ಹೈಬ್ರಿಡ್ ಸಿಸ್ಟಂ ಎಲೆಕ್ಟ್ರಿಕ್ ಮೋಟರ್ ಹಾಗೂ ಸ್ಟಾರ್ಟರ್ ಜನರೇಟರ್‍‍ಗಳನ್ನು ಹೊಂದಿದೆ. ಈ ಕಾರು ಹೆಚ್ಚಿನ ಪ್ರಮಾಣದ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇದರಿಂದಾಗಿ ಕಡಿಮೆ ಮಾಲಿನ್ಯ ಉಂಟಾಗುವುದರ ಜೊತೆಗೆ ಹೆಚ್ಚು ಫ್ಯೂಯಲ್ ಎಕಾನಾಮಿಯನ್ನು ನೀಡುತ್ತದೆ.

ಹೈಬ್ರಿಡ್ ಸಿಸ್ಟಂನೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ಎಲೈಟ್ ಐ20

ಬಿ‍ಎಸ್ 6 ಮಾಲಿನ್ಯ ನಿಯಮಗಳಿಗೆ ಅನುಸಾರವಾಗಿ ಈ ಹೊಸ ಹ್ಯುಂಡೈ ಎಲೈಟ್ ಐ20 ಕಾರಿನಲ್ಲಿ ಎರಡು ಪೆಟ್ರೋಲ್ ಹಾಗೂ ಒಂದು ಡೀಸೆಲ್ ಎಂಜಿನ್‍‍ಗಳನ್ನು ನೀಡಲಾಗುವುದು. 1.2 ಲೀಟರಿನ ಪೆಟ್ರೋಲ್, 1.0 ಲೀಟರಿನ ಟರ್ಬೊ ಪೆಟ್ರೋಲ್ ಹಾಗೂ 1.5 ಲೀಟರಿನ ಡೀಸೆಲ್ ಎಂಜಿನ್‍‍ಗಳನ್ನು ಅಳವಡಿಸಲಾಗುವುದು.

ಹೈಬ್ರಿಡ್ ಸಿಸ್ಟಂನೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ಎಲೈಟ್ ಐ20

1.0 ಲೀಟರಿನ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಎರಡು ರೀತಿಯಲ್ಲಿ ಟ್ಯೂನ್ ಮಾಡಲಾದ ನಂತರ, 98 ಬಿ‍‍ಹೆಚ್‍‍ಪಿ ಪವರ್ ಹಾಗೂ 118 ಬಿ‍‍ಹೆಚ್‍‍ಪಿ ಪವರ್ ಉತ್ಪಾದಿಸುತ್ತದೆ. ಈ ಎಂಜಿನ್ 48 ವೋಲ್ಟ್ ನ ಮೈಲ್ಡ್ ಹೈಬ್ರಿಡ್ ಸಿಸ್ಟಂ ಹೊಂದಿರಲಿದೆ.

ಹೈಬ್ರಿಡ್ ಸಿಸ್ಟಂನೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ಎಲೈಟ್ ಐ20

ಈ ಹೈಬ್ರಿಡ್ ಸಿಸ್ಟಂನಿಂದಾಗಿ ಕಾರಿನ ಫ್ಯೂಯಲ್ ಎಕಾನಮಿ 3 ರಿಂದ 4% ಹೆಚ್ಚಾಗಲಿದೆ. 1.0 ಲೀಟರಿನ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಹ್ಯುಂಡೈ ವೆನ್ಯೂ ಕಾರಿನಲ್ಲಿ ಅಳವಡಿಸಲಾಗಿದೆ. ಹೈಬ್ರಿಡ್ ಸಿಸ್ಟಂ ಹೊಂದಿಲ್ಲದ ಈ ಎಂಜಿನ್ 118 ಬಿ‍‍ಹೆಚ್‍‍ಪಿ ಪವರ್ ಉತ್ಪಾದಿಸುತ್ತದೆ.

ಹೈಬ್ರಿಡ್ ಸಿಸ್ಟಂನೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ಎಲೈಟ್ ಐ20

ಮ್ಯಾನುವಲ್ ಗೇರ್‍‍ಬಾಕ್ಸ್ ಹೊಂದಿರುವ ಪೆಟ್ರೋಲ್ ಎಂಜಿನ್ ಪ್ರತಿ ಲೀಟರ್ ಪೆಟ್ರೋಲಿಗೆ 18.15 ಕಿ.ಮೀ ಮೈಲೇಜ್ ನೀಡಿದರೆ, ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಹೊಂದಿರುವ ಎಂಜಿನ್ ಪ್ರತಿ ಲೀಟರ್ ಪೆಟ್ರೋಲಿಗೆ 18.27 ಕಿ.ಮೀ ಮೈಲೇಜ್ ನೀಡುತ್ತದೆ.

ಹೈಬ್ರಿಡ್ ಸಿಸ್ಟಂನೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ಎಲೈಟ್ ಐ20

ಮೈಲ್ಡ್ ಹೈಬ್ರಿಡ್ ಸಿಸ್ಟಂ ಹೊಂದಿರುವ ಈ ಕಾರಿನ ಫ್ಯೂಯಲ್ ಎಕಾನಾಮಿ ಹೆಚ್ಚಾಗಿರಲಿದೆ. ಈ ಹೊಸ ಕಾರು ಸ್ಟಾರ್ಟ್ ಸ್ಟಾಪ್ ಟೆಕ್ನಾಲಜಿಯನ್ನು ಸಹ ಹೊಂದಿರಲಿದೆ. ಹೊಸ ಹ್ಯುಂಡೈ ಎಲೈಟ್ ಐ20 ಕಾರ್ ಅನ್ನು ಈ ವರ್ಷದ ಕೊನೆಗೆ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಾಗುವುದು.

ಹೈಬ್ರಿಡ್ ಸಿಸ್ಟಂನೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ಎಲೈಟ್ ಐ20

ಹೊಸ ಕಾರಿನ ಆರಂಭಿಕ ಬೆಲೆಯು ರೂ.5.70 ಲಕ್ಷಗಳಾಗಿದೆ. ಬಿಡುಗಡೆಯಾದ ನಂತರ ಈ ಕಾರು ಮಾರುತಿ ಸುಜುಕಿ ಕಂಪನಿಯ ಬಲೆನೊ, ಟಾಟಾ ಮೋಟಾರ್ಸ್‍‍ನ ಆಲ್ಟ್ರೋಜ್ ಹಾಗೂ ಹೋಂಡಾ ಕಂಪನಿಯ ಜಾಜ್ ಕಾರುಗಳಿಗೆ ಪೈಪೋಟಿ ನೀಡಲಿದೆ.

Most Read Articles

Kannada
English summary
New Hyundai elite i20 to get 48v mild hybrid tech in India. Read in Kannada.
Story first published: Thursday, February 20, 2020, 14:30 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X