ಹ್ಯುಂಡೈ ಬಹುನೀರಿಕ್ಷಿತ ಗ್ರಾಂಡ್ ಐ10 ನಿಯೊಸ್ ಟರ್ಬೋ ಪೆಟ್ರೋಲ್ ಕಾರಿನ ಬೆಲೆ ಮಾಹಿತಿ ಸೋರಿಕೆ

ಕಳೆದ ವಾರವಷ್ಟೇ 2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಂಡಿದ್ದ ಹ್ಯುಂಡೈ ಗ್ರಾಂಡ್ ಐ10 ನಿಯೊಸ್ ಟರ್ಬೋ ಪೆಟ್ರೋಲ್ ಆವೃತ್ತಿಯು ಇದೇ ತಿಂಗಳಾಂತ್ಯಕ್ಕೆ ಬಿಡುಗಡೆಯಾಗುತ್ತಿದ್ದು, ಹೊಸ ಕಾರು ಅಧಿಕೃತವಾಗಿ ಬಿಡುಗಡೆಯಾಗುವುದಕ್ಕೂ ಮುನ್ನವೇ ಹೊಸ ಕಾರಿನ ಬೆಲೆ ಮಾಹಿತಿ ಬಹಿರಂಗಗೊಂಡಿದೆ.

ಹ್ಯುಂಡೈ ಬಹುನೀರಿಕ್ಷಿತ ಗ್ರಾಂಡ್ ಐ10 ನಿಯೊಸ್ ಟರ್ಬೋ ಪೆಟ್ರೋಲ್ ಕಾರಿನ ಬೆಲೆ ಮಾಹಿತಿ ಸೋರಿಕೆ

ಸಾಮಾನ್ಯ ಪೆಟ್ರೋಲ್ ಆವೃತ್ತಿಗಿಂತಲೂ ಕಡಿಮೆ ಎಂಜಿನ್ ಹೊಂದಿದ್ದರೂ ಪರ್ಫಾಮೆನ್ಸ್ ಪ್ರಿಯರಿಗಾಗಿ ಹೆಚ್ಚಿನ ಮಟ್ಟದ ಬಿಎಚ್‌ಪಿ ಉತ್ಪಾದನಾ ಸಾಮರ್ಥ್ಯ ಹೊಂದಿರುವ ಟರ್ಬೋ ಪೆಟ್ರೋಲ್ ಮಾದರಿಯು 100-ಬಿಎಚ್‌ಪಿ ಉತ್ಪಾದಿಸಲಿದ್ದು, ಹೊಸ ಎಂಜಿನ್ ಜೊತೆಗೆ ಹಲವು ಪ್ರೀಮಿಯಂ ಫೀಚರ್ಸ್ ಪಡೆದುಕೊಂಡಿರಲಿದೆ. ಲಭ್ಯವಾಗಿರುವ ಮಾಹಿತಿಗಳ ಪ್ರಕಾರ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7,68,050 ಮತ್ತು ಟಾಪ್ ಎಂಡ್ ಮಾದರಿಯು ರೂ.7,73,350 ಬೆಲೆ ಹೊಂದಿರಲಿಯೆಂತೆ.

ಹ್ಯುಂಡೈ ಬಹುನೀರಿಕ್ಷಿತ ಗ್ರಾಂಡ್ ಐ10 ನಿಯೊಸ್ ಟರ್ಬೋ ಪೆಟ್ರೋಲ್ ಕಾರಿನ ಬೆಲೆ ಮಾಹಿತಿ ಸೋರಿಕೆ

ಟರ್ಬೋ ಪೆಟ್ರೋಲ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ 5-ಸ್ಪೀಡ್ ಮ್ಯಾನುವಲ್ ಮತ್ತು ಹೈ ಎಂಡ್ ಮಾದರಿಯು 7-ಸ್ಪೀಡ್ ಮ್ಯಾನುವಲ್ ಡ್ಯುಯಲ್ ಕ್ಲಚ್‌ ಆಯ್ಕೆಯನ್ನು ಪಡೆದುಕೊಂಡಿರಲಿದೆ.

ಹ್ಯುಂಡೈ ಬಹುನೀರಿಕ್ಷಿತ ಗ್ರಾಂಡ್ ಐ10 ನಿಯೊಸ್ ಟರ್ಬೋ ಪೆಟ್ರೋಲ್ ಕಾರಿನ ಬೆಲೆ ಮಾಹಿತಿ ಸೋರಿಕೆ

ಇನ್ನುಳಿದಂತೆ 1.2-ಲೀಟರ್ ಸಾಮಾನ್ಯ ಪೆಟ್ರೋಲ್ ಮತ್ತು 1.2-ಲೀಟರ್ ಡೀಸೆಲ್ ಎಂಜಿನ್ ಆವೃತ್ತಿಯ ಈಗಾಗಲೇ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಿದ್ದು, ಬಿಎಸ್-6 ಎಂಜಿನ್ ಹೊಂದಿರುವ ಗ್ರಾಂಡ್ ಐ10 ನಿಯೊಸ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.5,04,990 ರಿಂದ ಟಾಪ್ ಎಂಡ್ ಮಾದರಿಯು ರೂ.8,04,450 ಬೆಲೆ ಹೊಂದಿದೆ.

ಹ್ಯುಂಡೈ ಬಹುನೀರಿಕ್ಷಿತ ಗ್ರಾಂಡ್ ಐ10 ನಿಯೊಸ್ ಟರ್ಬೋ ಪೆಟ್ರೋಲ್ ಕಾರಿನ ಬೆಲೆ ಮಾಹಿತಿ ಸೋರಿಕೆ

ಇದೀಗ ಬಿಡುಗಡೆಯಾಗುತ್ತಿರುವ 1.0-ಲೀಟರ್ ಟರ್ಬೋ ಎಂಜಿನ್ ಮಾದರಿಯು ಗ್ರಾಂಡ್ ಐ10 ನಿಯೊಸ್ ಪೆಟ್ರೋಲ್ ಮಾದರಿಯಲ್ಲೇ ಹೈ ಎಂಡ್ ಆವೃತ್ತಿಯಾಗಿ ಮಾರಾಟವಾಗಲಿದ್ದು, ಸಾಮಾನ್ಯ ಗ್ರಾಂಡ್ ಐ10 ಮತ್ತು ಎಲೈಟ್ ಐ20 ನಡುವಿನ ಸ್ಥಾನ ಗಿಟ್ಟಿಸಿಕೊಂಡಿರುವ ಗ್ರಾಂಡ್ ಐ10 ನಿಯೋಸ್ ಆವೃತ್ತಿಯು ಇತರೆ ಹ್ಯಾಚ್‌ಬ್ಯಾಕ್ ಆವೃತ್ತಿಗಳಿಂತಲೂ ವಿಶೇಷ ಎನ್ನಿಸಲಿದೆ.

ಹ್ಯುಂಡೈ ಬಹುನೀರಿಕ್ಷಿತ ಗ್ರಾಂಡ್ ಐ10 ನಿಯೊಸ್ ಟರ್ಬೋ ಪೆಟ್ರೋಲ್ ಕಾರಿನ ಬೆಲೆ ಮಾಹಿತಿ ಸೋರಿಕೆ

ಗ್ರಾಂಡ್ ಐ10 ನಿಯೋಸ್ ಕಾರು ಎರಾ, ಮ್ಯಾಗ್ನಾ, ಸ್ಪೋರ್ಟ್ಜ್ ಮತ್ತು ಆಸ್ಟಾ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಎರಡು ಮಾದರಿಗಳಲ್ಲೂ ಖರೀದಿಗೆ ಲಭ್ಯವಿರುವ ಗ್ರಾಂಡ್ ಐ10 ನಿಯೋಸ್ ಕಾರು ಹಳೆಯ ಆವೃತ್ತಿಗಿಂತಲೂ ಹೆಚ್ಚು ಸ್ಪೋರ್ಟಿ ಲುಕ್‌ನೊಂದಿಗೆ ಮುಂಭಾಗದ ಗ್ರಿಲ್ ಡಿಸೈನ್ ಹೊಸ ಕಾರಿಗೆ ಹೆಚ್ಚಿನ ಮಟ್ಟದ ಪ್ರೀಮಿಯಂ ಲುಕ್ ನೀಡಿದೆ.

ಹ್ಯುಂಡೈ ಬಹುನೀರಿಕ್ಷಿತ ಗ್ರಾಂಡ್ ಐ10 ನಿಯೊಸ್ ಟರ್ಬೋ ಪೆಟ್ರೋಲ್ ಕಾರಿನ ಬೆಲೆ ಮಾಹಿತಿ ಸೋರಿಕೆ

ಹ್ಯುಂಡೈ ಸಂಸ್ಥೆಯು ಇದೇ ಮೊದಲ ಬಾರಿಗೆ ಗ್ರಾಂಡ್ ಐ10 ನಿಯೋಸ್ ಮೂಲಕ ತನ್ನ ನವೀಕೃತ ಕಾರುಗಳ ಮಾದರಿಗಳಲ್ಲಿ ಬಿಎಸ್- 6 ಎಂಜಿನ್ ಜೋಡಣೆಗೆ ಚಾಲನೆ ನೀಡಿದ್ದು, ಇದೀಗ ಬಿಡುಗಡೆಯಾಗಲಿರುವ ಟರ್ಬೋ ಪೆಟ್ರೋಲ್ ಕೂಡಾ ಬಿಎಸ್-6 ವೈಶಿಷ್ಟ್ಯತೆ ಹೊಂದಿರಲಿದೆ.

ಹ್ಯುಂಡೈ ಬಹುನೀರಿಕ್ಷಿತ ಗ್ರಾಂಡ್ ಐ10 ನಿಯೊಸ್ ಟರ್ಬೋ ಪೆಟ್ರೋಲ್ ಕಾರಿನ ಬೆಲೆ ಮಾಹಿತಿ ಸೋರಿಕೆ

ಎಂಜಿನ್ ಸಾಮಾರ್ಥ್ಯ

ಗ್ರಾಂಡ್ ಐ10 ನಿಯೋಸ್ ಕಾರು 1.2-ಲೀಟರ್ ಕಪ್ಪಾ ಪೆಟ್ರೋಲ್ ಎಂಜಿನ್ ಮೂಲಕ 81-ಬಿಎಚ್‌ಪಿ, 114-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.2-ಲೀಟರ್ ಸಿಆರ್‌ಡಿಐ ಡೀಸೆಲ್ ಎಂಜಿನ್ ಮೂಲಕ 76-ಬಿಎಚ್‌ಪಿ, 190-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ.

ಹ್ಯುಂಡೈ ಬಹುನೀರಿಕ್ಷಿತ ಗ್ರಾಂಡ್ ಐ10 ನಿಯೊಸ್ ಟರ್ಬೋ ಪೆಟ್ರೋಲ್ ಕಾರಿನ ಬೆಲೆ ಮಾಹಿತಿ ಸೋರಿಕೆ

ಹೊಸದಾಗಿ ಬಿಡುಗಡೆಗೆ ಸಿದ್ದವಾಗಿರುವ ಟರ್ಬೋ ಎಂಜಿನ್ ಮಾದರಿಯು 100-ಬಿಎಚ್‌ಪಿ ಪ್ರೇರಿತ 1.0-ಲೀಟರ್ ಪೆಟ್ರೋಲ್ ಎಂಜಿನ್ ಪಡೆದಿದ್ದು, ಬೆಲೆಯಲ್ಲೂ ಕೂಡಾ ತುಸು ದುಬಾರಿಯಾಗಿದೆ.

ಹ್ಯುಂಡೈ ಬಹುನೀರಿಕ್ಷಿತ ಗ್ರಾಂಡ್ ಐ10 ನಿಯೊಸ್ ಟರ್ಬೋ ಪೆಟ್ರೋಲ್ ಕಾರಿನ ಬೆಲೆ ಮಾಹಿತಿ ಸೋರಿಕೆ

ಹೊಸ ಕಾರಿನಲ್ಲಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಒಟ್ಟು 10 ವೆರಿಯೆಂಟ್‌ಗಳು ಆಯ್ಕೆಗೆ ಲಭ್ಯವಿದ್ದು, 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಮೂಲಕ ಅತ್ಯುತ್ತಮ ಎಂಜಿನ್ ಕಾರ್ಯಕ್ಷಮತೆಯನ್ನು ಹೊಂದಿದೆ.

ಹ್ಯುಂಡೈ ಬಹುನೀರಿಕ್ಷಿತ ಗ್ರಾಂಡ್ ಐ10 ನಿಯೊಸ್ ಟರ್ಬೋ ಪೆಟ್ರೋಲ್ ಕಾರಿನ ಬೆಲೆ ಮಾಹಿತಿ ಸೋರಿಕೆ

ಈ ಮೂಲಕ ಹ್ಯಾಚ್‌ಬ್ಯಾಕ್ ಮಾದರಿಗಳಲ್ಲೇ ಹೆಚ್ಚಿನ ಮಟ್ಟದ ಪ್ರೀಮಿಯಂ ಸೌಲಭ್ಯಗಳನ್ನು ಹೊಂದಿರುವ ಅತ್ಯುತ್ತಮ ಕಾರು ಮಾದರಿ ಇದಾಗಿದ್ದು, ಬಿಡುಗಡೆಯಾಗಲಿರುವ ಟರ್ಬೋ ಪೆಟ್ರೋಲ್ ಕಾರು ಹೊಸ ತಲೆಮಾರಿನ ಮಾರುತಿ ಸುಜುಕಿ ಸ್ವಿಫ್ಟ್ ಕಾರಿಗೆ ಮತ್ತಷ್ಟು ಪೈಪೋಟಿಯಾಗಲಿದೆ ಎನ್ನಬಹುದು.

Via - Rushlane

Article Published On: Thursday, February 13, 2020, 17:46 [IST]
English summary
New Hyundai Grand i10 NIOS Turbo petrol model prices leaked online today and it will be available prices starting at Rs.7.68 lakh (Ex-Showroom). Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+