Just In
- 6 hrs ago ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- 8 hrs ago Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- 9 hrs ago ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
- 10 hrs ago ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
Don't Miss!
- Movies 'KGF-2' ಚಿತ್ರದಿಂದ ಸಿಕ್ಕಿದ್ದು 200 ಕೋಟಿ ರೂ.; 'ಟಾಕ್ಸಿಕ್', 'ರಾಮಾಯಣ'ಕ್ಕೆ ಯಶ್ 50-50 ಡೀಲ್!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನ್ಯೂ ಜನರೇಷನ್ ಹ್ಯುಂಡೈ ಐ20 ಕಾರಿನ ಟೀಸರ್ ಬಿಡುಗಡೆ
ಹ್ಯುಂಡೈ ಕಂಪನಿಯು ತನ್ನ ಮೂರನೇ ತಲೆಮಾರಿನ ಐ20 ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಮುಂದಿನ ತಿಂಗಳ ಆರಂಭದಲ್ಲಿ ಬಿಡುಗಡೆಗೊಳಿಸುವ ಸಾಧ್ಯತೆಗಳಿದೆ. ಇದೀಗ ಹ್ಯುಂಡೈ ಕಂಪನಿಯು ತನ್ನ ಹೊಸ ತಲೆಮಾರಿನ ಐ20 ಕಾರಿನ ಅಧಿಕೃತ ಟೀಸರ್ ಚಿತ್ರಗಳನ್ನು ಬಿಡುಗಡೆಗೊಳಿಸಿದೆ.
ಆಯ್ದ ಹ್ಯುಂಡೈ ಡೀಲರುಗಳೂ ಈಗಗಾಲೇ ಹೊಸ ಐ20 ಕಾರಿಗಾಗಿ ಅನಧಿಕೃತ ಬುಕ್ಕಿಂಗ್ ಸ್ವೀಕರಿಸಲು ಪ್ರಾರಂಭಿಸಿದ್ದಾರೆ. ಹೊಸ ತಲೆಮಾರಿನ ಐ20 ಕಾರು ಭಾರತದಲ್ಲಿ ಹಲವು ಬಾರಿ ಸ್ಪಾಟ್ ಟೆಸ್ಟ್ ನಡೆಸಿದೆ. ವರದಿಗಳ ಪ್ರಕಾರ, ಹೊಸ ಹ್ಯುಂಡೈ ಐ20 ಕಾರು ಮ್ಯಾಗ್ನಾ, ಸ್ಪೋರ್ಟ್ಜ್, ಅಸ್ಟಾ ಮತ್ತು ಅಸ್ಟಾ (ಒ) ಎಂಬ ನಾಲ್ಕು ವೆರಿಯೆಂಟ್ ಗಳಲ್ಲಿ ಲಭ್ಯವಿರಲಿದೆ. ಹೊಸ ಹ್ಯುಂಡೈ ಐ20 ಕಾರು ಈಗಗಾಲೇ ಡೀಲರುಗಳ ಬಳಿ ತಲುಪಲು ಪ್ರಾರಂಭವಾಗಿದೆ.
ಡೀಲರುಗಳ ಬಳಿ ತಲುಪಿದ ಹ್ಯುಂಡೈ ಐ20 ಕಾರು ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿದೆ. ಆದರೆ ಅಂತರರಾಷ್ಟ್ರೀಯ ಮಾದರಿಯಲ್ಲಿ ಲಭ್ಯವಿರುವ ಕಾನ್ಫಿಗರ್ ಮಾಡಬಹುದಾದ ಯುನಿಟ್ ಅಲ್ಲ. 2020 ರ ಹ್ಯುಂಡೈ ವೆರ್ನಾದಲ್ಲಿ ನಾವು ಪಡೆಯುವ ಅದೇ ಕ್ಲಸ್ಟರ್ ಇದಾಗಿದೆ. ಹೋಂಡಾ ಜಾಝ್ ಮಾದರಿಯಲ್ಲಿರುವಂತ ಸನ್ರೂಫ್ ಅನ್ನು ಪಡೆದುಕೊಂಡಿದೆ.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ
ಹೊಸ ಹ್ಯುಂಡೈ ಐ20 ಕಾರಿನ ಮುಂಭಾಗದಲ್ಲಿರು ಕ್ಯಾಸ್ಕೇಡಿಂಗ್ ಗ್ರಿಲ್ ಅನ್ನು ಹೊಂದಿದೆ. ಹಿಂದಿನ ಐ20 ಮಾದರಿಗೆ ಹೋಲಿಸಿದರೆ ಹೆಡ್ ಲ್ಯಾಂಪ್ ಮತ್ತು ಸೈಡ್ ಫ್ರೋಪೈಲ್ ವಿನ್ಯಾಸವನ್ನು ನವೀಕರಿಸಲಾಗಿದೆ ದೊಡ್ಡ ಕ್ರೀಸ್ ಲೈನ್ ಗಳನ್ನು ಒಳಗೊಂಡಿದೆ.
ಹೊಸ ಹುಂಡೈ ಐ20 ಕಾರಿನ ಪಿಲ್ಲರ್ಗಳು ಬ್ಲ್ಯಾಕ್ ಬಣ್ಣವನ್ನು ಹೊಂದಿದೆ. ವಿಡಬ್ಲ್ಯೂ ಟೈಗನ್ನಲ್ಲಿ ಇರುವಂತಹ ಕೆಂಪು ಇಲ್ಇಡಿ ಡಿಆರ್ಎಲ್ ಸ್ಟಾಪ್ ಲೈಟ್ ಹಿಂಭಾಗದಲ್ಲಿ ಇಲ್ಇಡಿ ಟೇಲ್ಲೈಟ್ ಹೊಂದಿದೆ. ಇನ್ನು ಹೊಸ ಹ್ಯುಂಡೈ ಕಾರಿನ ಇಂಟಿರಿಯರ್ನಲ್ಲಿ 4 ಸ್ಫೋಕ್ ಸ್ಟೀಟಿಯರಿಂಗ್ ವ್ಹೀಲ್ ಅನ್ನು ಅಳವಡಿಸಲಾಗಿದೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು
ಈ ಕಾರಿನ ಇಂಟಿರಿಯರ್ನಲ್ಲಿರುವ ಡಿಜಿಟಲ್ ಕ್ಲಸ್ಟರ್ ನಲ್ಲಿ ಆ್ಯಪಲ್ ಕಾರ್ಪ್ಲೇ ಮತ್ತು ಆಂಡ್ರಾಯ್ಡ್ ಆಟೋ, ಹ್ಯುಂಡೈನ ಕನೆಕ್ಟಿವಿಟಿ ಸೂಟ್ ಮತ್ತು ಇತರ ಹಲವಾರು ಫೀಚರ್ಗಳನ್ನು ಹೊಂದಿದೆ. ಯುಎಸ್ಬಿ ಪೋರ್ಟ್ ಮತ್ತು ವೈರ್ಲೆಸ್ ಚಾರ್ಜಿಂಗ್ ಪ್ಯಾಡ್ ಅನ್ನು ಸಹ ಹೊಂದಿರಲಿದೆ.
ಹೊಸ ಹ್ಯುಂಡೈ ಐ20 ಕಾರು ಮೂರು ಎಂಜಿನ್ ಆಯ್ಕೆಗಳನ್ನು ಹೊಂದಿರಲಿದೆ. ಇದರಲ್ಲಿ 1.2ಎಲ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರುತ್ತದೆ. ಈ ಎಂಜಿನ್ 82 ಬಿಹೆಚ್ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಅನ್ನು ಹೊಂದಿರುತ್ತದೆ.
MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ
ಇದರೊಂದಿಗೆ 1.0ಎಲ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರಲಿದೆ. ಈ ಎಂಜಿನ್ 99 ಬಿಹೆಚ್ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಸ್ಪೀಡ್ ಡ್ಯುಯಲ್-ಕ್ಲಚ್ ಆಟೋಮ್ಯಾಟಿಕ್ ಮತ್ತು ಐಎಂಟಿ (ಇಂಟೆಲಿಜೆಂಟ್ ಮ್ಯಾನುಯಲ್ ಗೇರ್ ಬಾಕ್ಸ್ ಅನ್ನು ಹೊಂದಿರಲಿದೆ.
ಇನ್ನು 1.5ಎಲ್ ಡೀಸೆಲ್ ಎಂಜಿನ್ ಅನ್ನು ಹೊಂದಿರುತ್ತದೆ. ಈ ಎಂಜಿನ್ 99 ಬಿಹೆಚ್ಪಿ ಪವರ್ ಅನ್ನು ಉತ್ಪಾದಿಸಬಹುದು. ಈ ಎಂಜಿನ್ ನೊಂದಿಗೆ ಮ್ಯಾನುವಲ್ ಗೇರ್ ಬಾಕ್ಸ್ ಅನ್ನು ಅಳವಡಿಸಬಹುದು ಎಂದು ನಿರೀಕ್ಷಿಸುತ್ತೇವೆ. ಇದರೊಂದಿಗೆ 1.2 ಲೀಟರ್ ಯುನಿಟ್ ಅನ್ನು ಹೊಂದಿರಲಿದೆ.
ಹೊಸ ಹ್ಯುಂಡೈ ಐ20 ಕಾರಿನಲ್ಲಿ ಹೊಸ 16 ಡ್ಯುಯಲ್ ಟೋನ್ ಅಲಾಯ್ ವ್ಹೀಲ್ಗಳು, ಇಂಟಿಗ್ರೇಟೆಡ್ ಟರ್ನ್ ಇಂಡಿಕೇಟರ್ಗಳೊಂದಿಗೆ ಸ್ಲಿಕ್ ಒಆರ್ವಿಎಂಗಳು ಮತ್ತು ಶಾರ್ಕ್ ಫಿನ್ ಆಂಟೆನಾವನ್ನು ಕೂಡ ಆಳವಡಿಸಲಾಗಿದೆ